ಧರ್ಮವೀರ ಸಂಭಾಜಿ ಮಹಾರಾಜರಿಗೆ ಧರ್ಮವೀರ ಹೆಸರು ಬಂದ ಬಗ್ಗೆ ಶಂಕೆ ವ್ಯಕ್ತಪಡಿಸಿದ ಸತೀಶ್ ಜಾರಕಿಹೊಳಿ
ನಿಪ್ಪಾಣಿಯಲ್ಲಿ ಮಾನವ ಬಂಧುತ್ವ ವೇದಿಕೆಯ ಕಾರ್ಯಕ್ರಮದಲ್ಲಿ ಸತೀಶ್ ಜಾರಕಿಹೊಳಿ ಮತ್ತೊಂದು ಎಡವಟ್ಟು ಮಾಡಿದ್ದಾರೆ. ಧರ್ಮವೀರ ಸಂಭಾಜಿ ಮಹಾರಾಜರನ್ನ ಬ್ರಿಟಿಷರು ಹಿಡಿದು ಹತ್ಯೆ ಮಾಡಿದರು ಎಂದಿರುವ ಜಾರಕಿಹೊಳಿ ವಿಡಿಯೋ ವೈರಲ್ ಆಗುತ್ತಿದೆ.
ಬೆಳಗಾವಿ: ನಿಪ್ಪಾಣಿಯಲ್ಲಿ ನಡೆದ ಮಾನವ ಬಂಧುತ್ವ ವೇದಿಕೆಯ ಕಾರ್ಯಕ್ರಮದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ (Sathish Jarakiholi) ನೀಡಿದ ಮತ್ತೊಂದು ಹೇಳಿಕೆ ಇದೀಗ ವಿವಾದಕ್ಕೆ ಕಾರಣವಾಗಿದ್ದು, ಹೇಳಿಕೆಯ ವಿಡಿಯೋ ವೈರಲ್ (Video viral) ಆಗುತ್ತಿದೆ. ಧರ್ಮವೀರ ಸಂಭಾಜಿ ಮಹಾರಾಜರಿಗೆ ಧರ್ಮವೀರ ಹೆಸರು ಬಂದ ಬಗ್ಗೆ ಶಂಕೆ ವ್ಯಕ್ತಪಡಿಸಿದ ಆರೋಪಿಸಿ ಸತೀಶ ಜಾರಕಿಹೊಳಿ ವಿಡಿಯೋವನ್ನು ಮಹಾರಾಷ್ಟ್ರದ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ (Devendra Fadnavis) ಅವರು ಟ್ವಿಟರ್‌ನಲ್ಲಿ ಹಂಚಿಕೊಂಡು ಈ ರೀತಿಯ ಹೇಳಿಕೆಯನ್ನು ನೀವು ಒಪ್ಪುತ್ತೀರಾ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ (Rahul Gandhi) ಅವರನ್ನು ಪ್ರಶ್ನಿಸಿದ್ದಾರೆ.
ನಿಪ್ಪಾಣಿಯಲ್ಲಿ ನವೆಂಬರ್ 6ರಂದು ನಡೆದ ಮಾನವ ಬಂಧುತ್ವ ವೇದಿಕೆಯ ಕಾರ್ಯಕ್ರಮದಲ್ಲಿ ಮಾತನಾಡಿದ ಸತೀಶ್ ಜಾರಕಿಹೊಳಿ, ಧರ್ಮವೀರ ಸಂಭಾಜಿ ಮಹಾರಾಜರನ್ನ ಬ್ರಿಟಿಷರು ಹಿಡಿದು ಹತ್ಯೆ ಮಾಡಿದರು ಎಂದಿದ್ದಾರೆ. ಸಂಭಾಜಿ ಮಹಾರಾಜರನ್ನು ಬ್ರಿಟಿಷರು ಯಾಕೆ ಹತ್ಯೆ ಮಾಡಿದರು? ಯಾವಾಗ ಶಿವಾಜಿ ಮಹಾರಾಜರ ಊಟದಲ್ಲಿ ವಿಷ ಹಾಕಲಾಗಿತ್ತು ಅವರನ್ನು ಸಂಭಾಜಿ ಮಹಾರಾಜರು ಹಿಡಿದಿದ್ದರು. ಈ ಸಿಟ್ಟಿನಲ್ಲಿ ಅವರನ್ನು ಬ್ರಿಟಿಷರ ವಶಕ್ಕೆ ನೀಡಲಾಯಿತು. ಬಳಿಕ ಅವರಿಗೆ ಧರ್ಮವೀರ ಸಂಭಾಜಿ ಮಹಾರಾಜ ಹೆಸರಿಟ್ಟರು ಎಂಬುದು ಅದೊಂದು ಇತಿಹಾಸ. ಈ ದೇಶದ ಇತಿಹಾಸ ಬಹಳ ವಿಚಿತ್ರವಾಗಿದೆ. ಇಂತಹ ಇತಿಹಾಸ ತಿಳಿಯಲು ಬಹಳ ಸಮಯ ಬೇಕು. ಈ ಬಗ್ಗೆ ಬಹಳ ಅಧ್ಯಯನ ಮಾಡಬೇಕಿದೆ ಎಂದು ಹೇಳಿಕೆ ನೀಡಿದ್ದಾರೆ.
ಸದ್ಯ ಸತೀಶ್ ಜಾರಕಿಹೊಳಿ ನೀಡಿದ ವಿವಾದಾತ್ಮಕ ಹೇಳಿಕೆಯ 42 ಸೆಕೆಂಡ್ಗಳುಳ್ಳ ಈ ವಿಡಿಯೋ ವೈರಲ್ ಆಗುತ್ತಿದೆ. ಭಾಷಣದ ವಿಡಿಯೋವನ್ನು ಟ್ವಿಟರ್‌ನಲ್ಲಿ ಹಂಚಿಕೊಂಡ ಮಹಾರಾಷ್ಟ್ರ ಡಿಸಿಎಂ ದೇವೇಂದ್ರ ಫಡ್ನವಿಸ್ ಅವರು ಈ ರೀತಿಯ ಹೇಳಿಕೆಯನ್ನು ನೀವು ಒಪ್ಪುತ್ತೀರಾ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಪ್ರಶ್ನೆ ಮಾಡಿದ್ದಾರೆ. ಕಾಂಗ್ರೆಸ್‌ನ ಎಂಎಲ್‌ಎ ಒಬ್ಬರು ಈ ರೀತಿ ಮಹಾನ್ ನಾಯಕ ಸಂಭಾಜಿ ಮಹಾರಾಜರ ಬಗ್ಗೆ ಹೇಳುವುದನ್ನು ನೀವು ಒಪ್ಪುತ್ತೀರಾ? ಸಂಭಾಜಿ ಮಹಾರಾಜರ ಬಗ್ಗೆ ತಪ್ಪು ಮಾಹಿತಿ ನೀಡುವ, ದಾರಿ ತಪ್ಪಿಸುವ, ಅವಮಾನ ಮಾಡುವ ಹೇಳಿಕೆ ಇದು ಎಂದು ಟ್ವೀಟ್ ಮಾಡಿದ್ದಾರೆ. ಅಲ್ಲದೆ ಇದು ನಿಮ್ಮ ಕಾಂಗ್ರೆಸ್ ಪಕ್ಷದ ಅಧಿಕೃತ ಹೇಳಿಕೆಯೇ ಮಿಸ್ಟರ್ ರಾಹುಲ್ ಎಂದು ಪ್ರಶ್ನಿಸಿದ್ದಾರೆ. ಮಹಾರಾಷ್ಟ್ರವು ಇದನ್ನು ಒಪ್ಪುವುದಿಲ್ಲ ಎಂದೂ ಹೇಳಿದ್ದಾರೆ.
Mr @RahulGandhi,Do you agree with this non sensical, misleading, insulting lie spewed out by your party’s MLA, about the great Chhatrapati Sambhaji Maharaj ? Is this your Congress Party’s official statement ? Maharashtra will not tolerate this ! pic.twitter.com/mmxjK3PsNU
— Devendra Fadnavis (@Dev_Fadnavis) November 10, 2022
ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 10:09 am, Fri, 11 November 22