ಮಹಾರಾಷ್ಟ್ರ, ಪಶ್ಚಿಮ ಘಟ್ಟ ಪ್ರದೇಶದಲ್ಲಿ ಮಳೆಯ ಅಬ್ಬರ; ಕೃಷ್ಣಾ ನದಿ ನೀರಿನ ಹರಿವಿನಲ್ಲಿ ಭಾರಿ ಪ್ರಮಾಣದ ಏರಿಕೆ

ಕೊಡಗು ಜಿಲ್ಲೆಯಲ್ಲೂ ವರುಣನ ಆರ್ಭಟ ಮುಂದುವರಿದಿದೆ. ಕಾವೇರಿ ನದಿಯಲ್ಲಿ ಒಂದೇ ದಿನ 3 ಅಡಿ ನೀರು ಹೆಚ್ಚಳವಾಗಿದೆ. ಭಾರೀ ಗಾಳಿಗೆ ಮರಗಳು ಧರೆಗುರುಳಿದ್ದು, ಜನಜೀವನ ಅಸ್ತವ್ಯಸ್ಥವಾಗಿದೆ. ಇನ್ನು ಚಿಕ್ಕಮಗಳೂರಿನಲ್ಲೂ ಭಾರಿ ಮಳೆ ಹಿನ್ನೆಲೆ ಜನಜೀವನ ಸಂಪೂರ್ಣ ಅಸ್ತವ್ಯಸ್ಥವಾಗಿದೆ.

ಮಹಾರಾಷ್ಟ್ರ, ಪಶ್ಚಿಮ ಘಟ್ಟ ಪ್ರದೇಶದಲ್ಲಿ ಮಳೆಯ ಅಬ್ಬರ; ಕೃಷ್ಣಾ ನದಿ ನೀರಿನ ಹರಿವಿನಲ್ಲಿ ಭಾರಿ ಪ್ರಮಾಣದ ಏರಿಕೆ
ತುಂಬಿ ಹರಿಯುತ್ತಿರುವ ಕೃಷ್ಣಾ ನದಿ, ಚಿಕ್ಕಮಗಳೂರಿನಲ್ಲೂ ಭಾರಿ ಮಳೆ
Follow us
| Updated By: sandhya thejappa

Updated on: Jul 22, 2021 | 9:30 AM

ಬೆಳಗಾವಿ: ಮಹಾರಾಷ್ಟ್ರ ಮತ್ತು ಪಶ್ಚಿಮ ಘಟ್ಟ ಪ್ರದೇಶದಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಕೃಷ್ಣಾ ನದಿ ನೀರಿನ ಹರಿವಿನಲ್ಲಿ ಭಾರಿ ಪ್ರಮಾಣದ ಏರಿಕೆಯಾಗಿದೆ. ದೂಧಗಂಗಾ, ವೇದಗಂಗಾ, ಹಿರಣ್ಯಕೇಶಿ ನದಿಗಳು ಮೈದುಂಬಿ ಹರಿಯುತ್ತಿವೆ. ಅಲ್ಲದೇ ಚಿಕ್ಕೋಡಿ, ನಿಪ್ಪಾಣಿ, ಹುಕ್ಕೇರಿ ತಾಲೂಕಿನ ಸುಮಾರು 8 ಸೇತುವೆಗಳು ಜಲಾವೃತವಾಗಿವೆ. ಸೇತುವೆ ಮುಳುಗಡೆಯಿಂದ 16 ಗ್ರಾಮಗಳಿಗೆ ರಸ್ತೆ ಸಂಪರ್ಕ ಸ್ಥಗಿತವಾಗಿದೆ.

ಕೃಷ್ಣಾ ನದಿಗೆ ನಿರ್ಮಿಸಿರುವ ಯಡೂರು-ಕಲ್ಲೋಳ ಸೇತುವೆ, ದೂಧಗಂಗಾ, ವೇದಗಂಗಾ, ಹಿರಣ್ಯಕೇಶಿ ನದಿಗಳಿಗಿರುವ ಸೇತುವೆ, ಜತ್ರಾಟ-ಭೀವಶಿ, ಭೋಜ-ಕಾರದಗಾ, ಅಕ್ಕೋಳ-ಸಿದ್ನಾಳ, ನಾಗನೂರು-ಗೋಟೂರ, ಹುನ್ನರಗಿ-ಮಮದಾಪುರ, ಭೋಜವಾಡಿ-ಕುನ್ನೂರ, ಮಲ್ಲೆಕವಾಡ-ದತ್ತವಾಡ ಸೇತುವೆಗಳು ಮುಳುಗಡೆಯಾಗಿವೆ. ಸುಮಾರು 16 ಗ್ರಾಮಗಳ ಗ್ರಾಮಸ್ಥರು ಪರ್ಯಾಯ ಮಾರ್ಗಗಳ ಮೂಲಕ ಸಂಚಾರ ಮಾಡುತ್ತಿದ್ದಾರೆ. ನದಿ ತೀರಕ್ಕೆ ತೆರಳದಂತೆ ಬೆಳಗಾವಿ ಜಿಲ್ಲಾಡಳಿತದಿಂದ ಎಚ್ಚರಿಕೆ ನೀಡಿದೆ.

ಕೊಡಗು ಜಿಲ್ಲೆಯಲ್ಲೂ ವರುಣನ ಆರ್ಭಟ ಮುಂದುವರಿದಿದೆ. ಕಾವೇರಿ ನದಿಯಲ್ಲಿ ಒಂದೇ ದಿನ 3 ಅಡಿ ನೀರು ಹೆಚ್ಚಳವಾಗಿದೆ. ಭಾರೀ ಗಾಳಿಗೆ ಮರಗಳು ಧರೆಗುರುಳಿದ್ದು, ಜನಜೀವನ ಅಸ್ತವ್ಯಸ್ಥವಾಗಿದೆ. ಇನ್ನು ಚಿಕ್ಕಮಗಳೂರಿನಲ್ಲೂ ಭಾರಿ ಮಳೆ ಹಿನ್ನೆಲೆ ಜನಜೀವನ ಸಂಪೂರ್ಣ ಅಸ್ತವ್ಯಸ್ಥವಾಗಿದೆ. ಜಿಲ್ಲೆಯ ಮೂಡಿಗೆರೆ, ಕಳಸ, ಶೃಂಗೇರಿ, ಕೊಪ್ಪ, ಎನ್.ಆರ್.ಪುರ ತಾಲೂಕಿನಲ್ಲಿ ಭಾರಿ ಮಳೆಯಿಂದ ತುಂಗ-ಭದ್ರಾ, ಹೇಮಾವತಿ ನದಿ ಮೈದುಂಬಿ ಹರಿಯುತ್ತಿವೆ.

ಹಾಸನ ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆ ಅಬ್ಬರ ಹೆಚ್ಚಾಗಿದೆ. ಸಕಲೇಶಪುರ ತಾಲೂಕಿನ ದೋಣಿಗಲ್ ಸಮೀಪದ ರಾಷ್ಟ್ರೀಯ ಹೆದ್ದಾರಿ 75 ಕುಸಿದಿದೆ. ರಸ್ತೆ ದುರಸ್ತಿಗಾಗಿ ಮಣ್ಣು ಸುರಿಯಲಾಗಿದ್ದ ಪ್ರದೇಶದಲ್ಲಿ ಭೂ ಕುಸಿತವಾಗಿದೆ. ರಸ್ತೆಯ ಅರ್ಧದವರೆಗೂ ಬಿರುಕು ಬಿಟ್ಟಿದೆ. ಹೆತ್ತೂರು ಹೋಬಳಿಯಲ್ಲಿ 24 ಗಂಟೆ ಅವಧಿಯಲ್ಲಿ 126 ಮಿಮಿ ಮಳೆಯಾಗಿದೆ.

ಇದನ್ನೂ ಓದಿ

Karnataka Dams Water Level: ಮುಂದುವರಿದ ಮುಂಗಾರು ಮಳೆ, ಕರ್ನಾಟಕದ 12 ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಹೀಗಿದೆ

ಕಾಳಿಂಗ ಸರ್ಪಗಳು ದುರ್ಬಲ ಹಾವುಗಳನ್ನೇ ತಮ್ಮ ಆಹಾರ ಮಾಡಿಕೊಂಡಿರುವುದು ನಿಮಗೆ ಗೊತ್ತಾ?

(Krishna River water levels have increased due to heavy rains at belagavi)