ವೇಗವಾಗಿ ಬಂದು ಬೊಲೆರೋಗೆ ಡಿಕ್ಕಿ ಹೊಡೆದ ಕೆಎಸ್ಆರ್ಟಿಸಿ ಬಸ್; ಸಿಸಿ ಕ್ಯಾಮೆರಾ ವೀಡಿಯೋ ಇಲ್ಲಿದೆ ನೋಡಿ
ಜಿಲ್ಲೆಯ ಚಿಕ್ಕೋಡಿ ಪಟ್ಟಣದ ಇಂದಿರಾನಗರದ ಬಳಿ ಕೆಎಸ್ಆರ್ಟಿಸಿ ಬಸ್ ಮತ್ತು ಬೊಲೆರೋ ವಾಹನದ ನಡುವೆ ಅಪಘಾತ ಸಂಭವಿಸಿದೆ. ಚಿಕ್ಕೋಡಿಯಿಂದ ಯಡೂರಿಗೆ ತೆರಳುತ್ತಿದ್ದ ಸರ್ಕಾರಿ ಬಸ್, ವೇಗವಾಗಿ ಬಂದು ಬೊಲೆರೋ ವಾಹನಕ್ಕೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಈ ಅಪಘಾತದ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸ್ಪಷ್ಟವಾಗಿ ಸೆರೆಯಾಗಿವೆ. ಅಪಘಾತದಲ್ಲಿ ಬಸ್ ಮತ್ತು ಬೊಲೆರೋ ವಾಹನಗಳಲ್ಲಿದ್ದ ಪ್ರಯಾಣಿಕರಿಗೆ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ. ಕೆಎಸ್ಆರ್ಟಿಸಿ ಬಸ್ ಚಾಲಕನ ಅತಿವೇಗವೇ ಅಪಘಾತಕ್ಕೆ ಕಾರಣ ಎಂದು ಹೇಳಲಾಗುತ್ತಿದ್ದು, ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳಗಾವಿ, ನವೆಂಬರ್ 27: ಜಿಲ್ಲೆಯ ಚಿಕ್ಕೋಡಿ ಪಟ್ಟಣದ ಇಂದಿರಾನಗರದ ಬಳಿ ಕೆಎಸ್ಆರ್ಟಿಸಿ ಬಸ್ ಮತ್ತು ಬೊಲೆರೋ ವಾಹನದ ನಡುವೆ ಅಪಘಾತ ಸಂಭವಿಸಿದೆ. ಚಿಕ್ಕೋಡಿಯಿಂದ ಯಡೂರಿಗೆ ತೆರಳುತ್ತಿದ್ದ ಸರ್ಕಾರಿ ಬಸ್, ವೇಗವಾಗಿ ಬಂದು ಬೊಲೆರೋ ವಾಹನಕ್ಕೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಅಪಘಾತದ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸ್ಪಷ್ಟವಾಗಿ ಸೆರೆಯಾಗಿದ್ದು, ಬಸ್ ಮತ್ತು ಬೊಲೆರೋ ವಾಹನಗಳಲ್ಲಿದ್ದ ಪ್ರಯಾಣಿಕರಿಗೆ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ. ಈ ಕುರಿತು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
