ಕಾಲೇಜ್ ಬಸ್‌ಗೆ ಹಿಂಬದಿಯಿಂದ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ: ವಿದ್ಯಾರ್ಥಿಗಳು ಸೇರಿದಂತೆ 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ
ಕೆಟ್ಟುನಿಂತಿದ್ದ ಲಾರಿಗೆ ಮತ್ತೊಂದು ಲಾರಿ ಡಿಕ್ಕಿಯಾದ ಪರಿಣಾಮ ಲಾರಿ ಸಂಪೂರ್ಣ ಭಸ್ಮವಾಗಿರುವಂತಹ ಘಟನೆ ನಗರದ ಬಟವಾಡಿ ಸಮೀಪದ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಮಧ್ಯರಾತ್ರಿ ಘಟನೆ ನಡೆದಿದೆ.
ಬೆಳಗಾವಿ: ಕಾಲೇಜು ಬಸ್‌ಗೆ ಹಿಂಬದಿಯಿಂದ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿದ್ದು, ವಿದ್ಯಾರ್ಥಿಗಳು ಸೇರಿದಂತೆ 20ಕ್ಕೂ ಹೆಚ್ಚು ಜನರಿಗೆ ಗಾಯವಾದಂತಹ ಘಟನೆ ಗುರ್ಲಪೂರ ಗ್ರಾಮದ ಬಳಿ ಜತ್ತನ ಜಾಂಬೋಟಿ ಹೆದ್ದಾರಿಯಲ್ಲಿ ನಡೆದಿದೆ. ಮೂಡಲಗಿ ಪಟ್ಟಣದಲ್ಲಿರುವ ಖಾಸಗಿ ಕಾಲೇಜಿಗೆ ತೆರಳುತ್ತಿದ್ದ ಕಾಲೇಜು ಬಸ್‌ಗೆ ಕೆಎಸ್ಆರ್ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಹಿಂಬದಿಯಿಂದ ಡಿಕ್ಕಿಯಾಗಿದೆ. ಕಾಲೇಜು ಬಸ್‌ನಲ್ಲಿದ್ದ 10, ಸರ್ಕಾರಿ ಬಸ್‌ನಲ್ಲಿದ್ದ 10ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯವಾಗಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ. ವಿದ್ಯಾರ್ಥಿಗಳನ್ನ ಹತ್ತಿಸುಕೊಳ್ಳಲು ರಸ್ತೆ ಬದಿ ಕಾಲೇಜು ಬಸ್ ನಿಂತಿದೆ. ಈ ವೇಳೆ ಸರ್ಕಾರಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಡಿಕ್ಕಿಯಾಗಿದೆ. ಗಾಯಗಳನ್ನ ಸ್ಥಳೀಯ ಆಸ್ಪತ್ರೆ ದಾಖಲು ಮಾಡಲಾಗಿದೆ. ಮೂಡಲಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ದಾಖಲಾಗಿದೆ.
ಕೆಟ್ಟುನಿಂತಿದ್ದ ಲಾರಿಗೆ ಮತ್ತೊಂದು ಲಾರಿ ಡಿಕ್ಕಿ
ತುಮಕೂರು: ಕೆಟ್ಟುನಿಂತಿದ್ದ ಲಾರಿಗೆ ಮತ್ತೊಂದು ಲಾರಿ ಡಿಕ್ಕಿಯಾದ ಪರಿಣಾಮ ಲಾರಿ ಸಂಪೂರ್ಣ ಭಸ್ಮವಾಗಿರುವಂತಹ ಘಟನೆ ನಗರದ ಬಟವಾಡಿ ಸಮೀಪದ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಮಧ್ಯರಾತ್ರಿ ಘಟನೆ ನಡೆದಿದೆ. ಪೂನಾದಿಂದ ಬೆಂಗಳೂರಿಗೆ ಮೈದಾ ತುಂಬಿಕೊಂಡು ಹೋಗುತ್ತಿದ್ದ ಲಾರಿ, ಬಟವಾಡಿ ಸಮೀಪ ರಸ್ತೆ ಪಕ್ಕದಲ್ಲಿ ಕೆಟ್ಟು ನಿಂತಿದ್ದ ಕಬ್ಬಿಣ ತುಂಬಿದ್ದ ಇನ್ನೊಂದು ಲಾರಿಗೆ ಡಿಕ್ಕಿಯಾಗಿದೆ. ಪರಿಣಾಮ ಮೈದಾ ಹಿಟ್ಟು ತುಂಬಿಕೊಂಡು ಹೋಗುತ್ತಿದ್ದ ಲಾರಿ ಭಸ್ಮವಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಪಾಯವಾಗಿಲ್ಲ. ಅಗ್ನಿ ಶಾಮಕ ದಳ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪೂರ್ವ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ; Purushottama Kanagal Death: ಚಿತ್ರಸಾಹಿತಿ ಪುರುಷೋತ್ತಮ ಕಣಗಾಲ್ ನಿಧನ
ಅಜಾಗರೂಕತೆ ಹಾಗೂ ವೇಗವಾಗಿ ಬಸ್ ಚಾಲನೆ ಮಾಡಿದ ಚಾಲಕನಿಗೆ ಗ್ರಹಚಾರ ಬಿಡಿಸಿದ ಪ್ರಯಾಣಿಕರು
ಕೋಲಾರ: ಅಜಾಗರೂಕತೆ ಹಾಗೂ ವೇಗವಾಗಿ ಬಸ್ ಚಾಲನೆ ಮಾಡಿದ ಚಾಲಕನಿಗೆ ಪ್ರಯಾಣಿಕರು ಗ್ರಹಚಾರ ಬಿಡಿಸಿದ್ದಾರೆ. ಕೆಜಿಎಫ್ನಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್, ಚಾಲಕ ಅತಿವೇಗ ಹಾಗೂ ಅಜಾಗರುಕತೆಯಿಂದ ಬಸ್ ಚಾಲನೆಗೆ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಅತಿ ವೇಗವಾಗಿ ಬಸ್ ಚಾಲನೆ ಮಾಡಿ ಅಪಘಾತವಾಗುವ ಸಾಧ್ಯತೆ ಹಿನ್ನೆಲೆ, ಚಾಲಕ ಹಾಗೂ ನಿರ್ವಾಹಕನನ್ನ ಪ್ರಯಾಣಿಕರು ತರಾಟೆ ತೆಗೆದುಕೊಂಡರು. ಖಾಸಗಿ ಬಸ್ ಮಾಲೀಕನಿಗೂ ದೂರವಾಣಿ ಮೂಲಕ ತರಾಟೆ ತೆಗೆದುಕೊಂಡಿದ್ದು, ಪ್ರಯಾಣಿಕರ ಜೀವದ ಜೊತೆ ಚೆಲ್ಲಾಟವಾಡುವ ಖಾಸಗಿ ಬಸ್ ವಿರುದ್ದ ಆರ್ಟಿಓ ಅಧಿಕಾರಿಗಳು ಕೂಡಲೆ ಕ್ರಮ ಕೈಗೊಳ್ಳುವಂತೆ ಒತ್ತಾಯ ಮಾಡಲಾಗಿದೆ.
ಕೌಟುಂಬಿಕ ಕಲಹ ಹಿನ್ನೆಲೆ ಮನೆಯಲ್ಲೇ ನೇಣು ಬಿಗಿದುಕೊಂಡು ವ್ಯಕ್ತಿ ಸಾವು
ರಾಯಚೂರು: ಕೌಟುಂಬಿಕ ಕಲಹ ಹಿನ್ನೆಲೆ ಮನೆಯಲ್ಲೇ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಜಿಲ್ಲೆಯ ಲಿಂಗಸುಗೂರು ತಾಲ್ಲೂಕಿನ ಕನ್ನಾಪೂರುಹಟ್ಟಿಯಲ್ಲಿ ನಡೆದಿದೆ. ಹುಲಗಪ್ಪ(35)ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಮುದಗಲ್ ಪೊಲೀಸ್ ಠಾಣಾ ವ್ಯಾಪ್ತಿ ಪ್ರಕರಣ ದಾಖಲಾಗಿದೆ.
ಇನ್ನಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.