Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ: ಬಸ್​ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಕೆಎಸ್​ಆರ್​ಟಿಸಿ ನೌಕರ

ಬೆಳಗಾವಿಯ ಕೆಎಸ್‌ಆರ್‌ಟಿಸಿ ಡಿಪೋ-1 ರಲ್ಲಿ ಮೆಕ್ಯಾನಿಕ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ 57 ವರ್ಷದ ಕೇಶವ ಕಮಡೊಳಿ ಅವರು ಡ್ಯೂಟಿ ಬದಲಾವಣೆಯಿಂದಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಬೆನ್ನು ನೋವಿದ್ದರೂ ಪಂಚರ್ ಕೆಲಸಕ್ಕೆ ಬದಲಾಯಿಸಲಾಗಿತ್ತು ಎಂದು ಆರೋಪಿಸಲಾಗಿದೆ.ಅಧಿಕಾರಿಗಳಿಗೆ ಮನವಿ ಮಾಡಿದ್ದರೂ ಡ್ಯೂಟಿ ಬದಲಾಯಿಸಲಾಗಿದೆ ಎಂದು ಕುಟುಂಬಸ್ಥರು ಆರೋಪಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಬೆಳಗಾವಿ: ಬಸ್​ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಕೆಎಸ್​ಆರ್​ಟಿಸಿ ನೌಕರ
ಮೃತ ಕೇಶವ
Follow us
Sahadev Mane
| Updated By: ವಿವೇಕ ಬಿರಾದಾರ

Updated on:Mar 08, 2025 | 7:30 AM

ಬೆಳಗಾವಿ, ಮಾರ್ಚ್​ 08: ಕೆಎಸ್​​ಆರ್​ಟಿಸಿ (NWRTC) ಬೆಳಗಾವಿ(Belagavi) ಡಿಪೋ 1ರ ಮೆಕ್ಯಾನಿಕ್​ ಬಸ್​ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಸ್​​ ಮೆಕ್ಯಾನಿಕ್ ಕೇಶವ ಕಮಡೊಳಿ (57) ಮೃತ ದುರ್ದೈವಿ. ಮೃತ ಕೇಶವ ಕಮಡೊಳಿ ಬೆಳಗಾವಿಯ ಹಳೇ ಗಾಂಧಿನಗರದ ನಿವಾಸಿಯಾಗಿದ್ದು, ಕೆಎಸ್​​ಆರ್​ಟಿಸಿ ಬಸ್​ ವಾಶಿಂಗ್​ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು. ಕೇಶವ್ ಅವರಿಗೆ ಬೆನ್ನು ನೋವಿದ್ದರೂ ಅಧಿಕಾರಿಗಳು ಪಂಚರ್​​ ಕೆಲಸಕ್ಕೆ ಬದಲಾಯಿದ್ದರು ಎನ್ನಲಾಗಿದೆ.

ಕೇಶವ ಅವರ ಡ್ಯೂಟಿ ಬದಲಿಸದಂತೆ ಡಿಪೋ ಮ್ಯಾನೇಜರ್​​ ಲಿಂಗರಾಜ ಲಾಠಿ ಅವರು ಸಹಾಯಕ ಕಾರ್ಯ ಅಧೀಕ್ಷಕ ಅನಿಲ್​​​ ಬಾಂದೇಕರ್​ ಅವರಿಗೆ ಮನವಿ ಮಾಡಿದ್ದರು. ಆದರೂ, ಕೂಡ ಡ್ಯೂಟಿ ಬದಲಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಡ್ಯೂಟಿ ಬದಲಿಸಿದ್ದಕ್ಕೆ ಮತ್ತು ಕೆಲಸದ ಒತ್ತಡ ತಡೆದುಕೊಳ್ಳಲು ಆಗದೆ ಕೇಶವ ಕಮಡೊಳಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ವಿಚಾರ ತಿಳಿದು ಸ್ಥಳಕ್ಕೆ ಬೆಳಗಾವಿ ಮಾರ್ಕೆಟ್ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಾರ್ಕೆಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇನ್ನು, ಅಧಿಕಾರಿಗಳ ವಿರುದ್ಧ ಮೃತ ಕೇಶವ ಕುಟುಂಬಸ್ಥರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೇಶವ್​ರನ್ನು ಮಾನಸಿಕ ಅಸ್ವಸ್ಥ ಎಂದ ಅಧಿಕಾರಿಗಳನ್ನು ಕುಟುಂಬಸ್ಥರು ತರಾಟೆ ತೆಗೆದುಕೊಂಡಿದ್ದಾರೆ. ಯಾವ ಆಧಾರದಲ್ಲಿ ಮಾನಸಿಕ ಅಸ್ವಸ್ಥ ಎಂದು ಹೇಳುತ್ತಿದ್ದೀರಿ? ಹುಷಾರಿಲ್ಲ ಡ್ಯೂಟಿ ಬದಲಿಸಬೇಡಿ ಎಂದು ಮನವಿ ಮಾಡಿದ್ವಿ. ಆದರೆ, ಈಗ ಮಾನಸಿಕ ಅಸ್ವಸ್ಥ ಅಂತ ಸುಳ್ಳು ಹೇಳ್ತಿದ್ದೀರಿ. ನ್ಯಾಯ ಸಿಗುವವರೆಗೂ ಶವ ತೆಗೆದುಕೊಂಡು ಹೋಗುವುದಿಲ್ಲ ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ
Image
ಬೆಳಗಾವಿ: ಮೂವರು ಮಕ್ಕಳೊಂದಿಗೆ ಕೃಷ್ಣಾ ನದಿಗೆ ಹಾರಿ ತಾಯಿ ಆತ್ಮಹತ್ಯೆ
Image
ಪ್ರೇಯಸಿಯ ಕತ್ತು ಸೀಳಿ ಬಳಿಕ ಅದೇ ಚಾಕುವಿನಿಂದ ಕತ್ತು ಕೊಯ್ದುಕೊಂಡ ಪ್ರಿಯಕರ
Image
ರಿಯಲ್ ಎಸ್ಟೇಟ್ ಉದ್ಯಮಿ ಅಪಹರಣ: ಸತೀಶ್ ಜಾರಕಿಹೊಳಿ‌ ಆಪ್ತೆಯ ಬಂಧನ
Image
ನಿರ್ವಾಹಕನ ಮೇಲೆ ಹಲ್ಲೆ: ನಾಲಿಗೆ ಹರಿಬಿಟ್ಟ MES​ ಮುಖಂಡನ ವಿರುದ್ಧ FIR

ಕೆಎಸ್​ಆರ್​ಟಿಸಿ ಬಸ್​ ನಿರ್ವಾಹಕನ ಮೇಲೆ ಹಲ್ಲೆ

ಕಳೆದ ತಿಂಗಳು ಫೆಬ್ರವರಿ 21 ರಂದು ಮಧ್ಯಾಹ್ನ 12.30ರ ವೇಳೆಗೆ ಬೆಳಗಾವಿ ಸಿಬಿಟಿಯಿಂದ ಸುಳೇಬಾವಿಗೆ ಹೊರಟಿದ್ದ ಬಸ್‌ನಲ್ಲಿ ಓರ್ವ ಯುವಕ, ಯುವತಿ ಪ್ರಯಾಣಿಸುತ್ತಿದ್ದರು. ಟಿಕೆಟ್‌ ಪಡೆಯಲು ನಿರ್ವಾಹಕ ಹೇಳಿದಾಗ, ಮರಾಠಿ ಭಾಷೆಯಲ್ಲಿ ಯುವಕ ಉತ್ತರಿಸಿದ್ದಾನೆ. ಮರಾಠಿ ಭಾಷೆ ಅರ್ಥವಾಗುತ್ತಿಲ್ಲ. ಕನ್ನಡದಲ್ಲಿ ಮಾತನಾಡಿ ಎಂದು ಕಂಡಕ್ಟರ್‌ ಹೇಳಿದ್ದಾರೆ. ಈ ಕಾರಣಕ್ಕೆ ಯುವಕ-ಯುವತಿ ಇಬ್ಬರೂ ನಿರ್ವಾಹಕ ಮಹಾದೇವ ಅವರ ಮೇಲೆ ಮುಗಿಬಿದ್ದಿದ್ದಾರೆ. ಬಸ್‌ ಸುಳೇಬಾವಿ ಗ್ರಾಮ ಪ್ರವೇಶಿಸುತ್ತಿದ್ದಂತೆ ತಮ್ಮೂರಿನ ನಾಲ್ವರು ಯುವಕರನ್ನು ಕರೆಯಿಸಿಕೊಂಡು ನಿರ್ವಾಹಕನ ಮೇಲೆ ಹಲ್ಲೆ ಮಾಡಿದ್ದಾರೆ,’ ಎಂದು ಡಿಸಿಪಿ ರೋಹನ್‌ ಜಗದೀಶ ಘಟನೆಯ ವಿವರ ನೀಡಿದ್ದರು.

ಇದನ್ನೂ ಓದಿ: ಬೆಳಗಾವಿ ಕಂಡಕ್ಟರ್​​ ವಿರುದ್ಧ ಪೋಕ್ಸೋ ಕೇಸ್​ ವಾಪಸ್​ ಪಡೆದಿದ್ದೇವೆ: ಸಂತ್ರಸ್ತ ಬಾಲಕಿಯ ತಾಯಿ

ಕೆಎಸ್​ಆರ್​ಟಿಸಿ ಬಸ್ ನಿರ್ವಾಹಕನ ಮೇಲೆ ಪ್ರಕರಣ ರಾಜ್ಯಾದ್ಯಂತ ಸದ್ದು ಮಾಡಿತ್ತು. ನಿರ್ವಾಹಕನ ಮೇಲೆ ಹಲ್ಲೆ ಭಾಷಾ ವಿವಾದ ರೂಪಾಂತರ ಪಡೆದುಕೊಂಡಿತ್ತು. ನಿರ್ವಾಹಕನ ಮೇಲೆ ಹಲ್ಲೆ ಮಾಡಿದ್ದವರು ಮರಾಠಿಗರು ಎಂಬ ಆರೋಪ ಕೇಳಿಬಂದಿತ್ತು. ನಿರ್ವಾಹಕನ ಮೇಲೆ ಹಲ್ಲೆ ಖಂಡಿಸಿ ಕನ್ನಡ ಪರ ಸಂಘಟನೆಗಳು ವಾಟಾಳ್​ ನಾಗರಾಜ್​ ನೇತೃತ್ವದಲ್ಲಿ ಮಾರ್ಚ್​ 22 ರಂದು ಕರ್ನಾಟಕ ಬಂದ್​ಗೆ ಕರೆ ನೀಡಿವೆ.  ​

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:29 am, Sat, 8 March 25