Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಂಭಮೇಳ ಕಾಲ್ತುಳಿತದಲ್ಲಿ ಮೃತಪಟ್ಟ ಬೆಳಗಾವಿಯವರ ಕುಟುಂಬಕ್ಕೆ ಉತ್ತರ ಪ್ರದೇಶ ಸರ್ಕಾರದಿಂದ ತಲಾ 25 ಲಕ್ಷ ರೂ. ವರ್ಗಾವಣೆ

ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆದ ಕುಂಭಮೇಳದ ಕಾಲ್ತುಳಿತದಲ್ಲಿ ಮೃತಪಟ್ಟ ಬೆಳಗಾವಿಯ ನಾಲ್ವರ ಕುಟುಂಬಗಳಿಗೆ ಉತ್ತರ ಪ್ರದೇಶ ಸರ್ಕಾರ ತಲಾ 25 ಲಕ್ಷ ರೂ. ಪರಿಹಾರ ನೀಡಿದೆ. ಆರ್‌ಟಿಜಿಎಸ್ ಮೂಲಕ ಹಣ ಜಮೆ ಮಾಡಲಾಗಿದೆ. ಘಟನೆ ಸಂಭವಿಸಿದ 40 ದಿನಗಳ ನಂತರ ಪರಿಹಾರದ ಹಣ ವಿತರಣೆಯಾಗಿದೆ. ಕರ್ನಾಟಕ ಸರ್ಕಾರದಿಂದಲೂ ಪರಿಹಾರ ನಿರೀಕ್ಷಿಸಲಾಗಿದೆ.

ಕುಂಭಮೇಳ ಕಾಲ್ತುಳಿತದಲ್ಲಿ ಮೃತಪಟ್ಟ ಬೆಳಗಾವಿಯವರ ಕುಟುಂಬಕ್ಕೆ  ಉತ್ತರ ಪ್ರದೇಶ ಸರ್ಕಾರದಿಂದ ತಲಾ 25 ಲಕ್ಷ ರೂ. ವರ್ಗಾವಣೆ
ಕುಂಭಮೇಳ ಕಾಲ್ತುಳಿತದಲ್ಲಿ ಮೃತಪಟ್ಟ ಅರುಣ್, ಜ್ಯೋತಿ, ಮೇಘಾ (ಸಂಗ್ರಹ ಚಿತ್ರ)
Follow us
Sahadev Mane
| Updated By: Ganapathi Sharma

Updated on:Mar 13, 2025 | 8:57 AM

ಬೆಳಗಾವಿ, ಮಾರ್ಚ್ 13: ಉತ್ತರ ಪ್ರದೇಶದ ಪ್ರಯಾಗ್​ರಾಜ್​ನಲ್ಲಿ (Prayagraj) ನಡೆದಿದ್ದ ಮಹಾ ಕುಂಭಮೇಳದ (Maha Kumbh Mela) ಸಂದರ್ಭ ಉಂಟಾದ ಕಾಲ್ತುಳಿತದಲ್ಲಿ ಮೃತಪಟ್ಟ ಬೆಳಗಾವಿಯ (Belagavi) ನಾಲ್ವರ ಕುಟುಂಬದವರಿಗೆ ಉತ್ತರ ಪ್ರದೇಶ ಸರ್ಕಾರ ತಲಾ 25 ಲಕ್ಷ ರೂ. ಪರಿಹಾರ ವಿತರಿಸಿದೆ. ಮೃತಪಟ್ಟವರ ಕುಟುಂಬಸ್ಥರ ಬ್ಯಾಂಕ್ ಖಾತೆಗೆ ಆರ್​ಟಿಜಿಎಸ್ ಮೂಲಕ ಪರಿಹಾರ ಮೊತ್ತ ಜಮೆ ಮಾಡಲಾಗಿದೆ. ಬೆಳಗಾವಿ ಮೂಲದ ಜ್ಯೋತಿ‌ ಹತ್ತರವಾಠ, ಮೇಘಾ ಹತ್ತರವಾಠ, ಅರುಣ ಕೋಪರ್ಡೆ ಹಾಗೂ ಮಹಾದೇವಿ ಬಾವನೂರ ಕುಂಭಮೇಳದಲ್ಲಿ ಸಂಭವಿಸಿದ್ದ ಕಾಲ್ತುಳಿತದಲ್ಲಿ ಮೃತಪಟ್ಟಿದ್ದರು. ಘಟನೆ ಸಂಭವಿಸಿದ 40 ದಿನಗಳ ಬಳಿಕ ಉತ್ತರ ಪ್ರದೇಶ ಸರ್ಕಾರದಿಂದ ಪರಿಹಾರದ ಹಣ ವಿತರಣೆ ಮಾಡಲಾಗಿದೆ.

ಇತ್ತ ಕರ್ನಾಟಕ ಸರ್ಕಾರದಿಂದಲೂ ಪರಿಹಾರ ನೀಡುವಂತೆ ವರದಿ ರವಾನೆ ಮಾಡಲಾಗಿದೆ ಎಂದು ಬೆಳಗಾವಿ ಡಿಸಿ ಮೊಹಮ್ಮದ್‌ ರೋಷನ್ ತಿಳಿಸಿದ್ದಾರೆ.

ಬೆಳಗಾವಿಯಿಂದ ಜನವರಿ 26ರಂದು ಮಹಾ ಕುಂಭಮೇಳಕ್ಕೆ ಒಟ್ಟು 13 ಜನ ಹೋಗಿದ್ದರು. ಅವರು ಕುಂಭಮೇಳ ತಲುಪಿದ್ದ ಸಂದರ್ಭದಲ್ಲೇ ಕಾಲ್ತುಳಿತ ಸಂಭವಿಸಿತ್ತು. ಆರಂಭದಲ್ಲಿ ಬೆಳಗಾವಿಯ ಇಬ್ಬರು ಕಾಲ್ತುಳಿತದಲ್ಲಿ ಮೃತಪಟ್ಟಿದ್ದಾರೆ. ಬೆಳಗಾವಿಯ ವಡಗಾವಿ ನಿವಾಸಿ ಜ್ಯೋತಿ ಹತ್ತರವಾಠ ಮತ್ತು ಅವರ ಪುತ್ರಿ ಮೇಘಾ ಹತ್ತರವಾಠ್‌ ನಾಪತ್ತೆಯಾಗಿದ್ದರು ಎನ್ನಲಾಗಿತ್ತು. ಆದರೆ, ನಂತರ ಇವರಿಬ್ಬರೂ ಮೃತಪಟ್ಟಿರುವುದು ದೃಢಪಟ್ಟಿತ್ತು.

ಇದನ್ನೂ ಓದಿ
Image
ಬಿಜೆಪಿ ಮುಖಂಡನ ವಿಡಿಯೋ: 20 ಲಕ್ಷಕ್ಕೆ ಡಿಮ್ಯಾಂಡ್‌, ಮಾಯಾಂಗನೆ ಲಾಕ್
Image
ಕೆಟ್ಟು ಹೋದ ಸಾರಿಗೆ ಬಸ್​ ವೈಪರ್: ಮಳೆಯಲ್ಲಿ ಚಲಾಯಿಸಲು ಪರದಾಡಿದ ಚಾಲಕ
Image
ಬಿರು ಬೇಸಿಗೆಗಯಲ್ಲಿ ಕಾಡು ಪ್ರಾಣಿಗಳು ದಣಿಯದಂತೆ ಮಾಸ್ಟರ್ ಪ್ಲ್ಯಾನ್
Image
ನಟಿ ರನ್ಯಾ ರಾವ್​ ಕೇಸ್‌: ಸಿಐಡಿ ತನಿಖೆ ಆದೇಶ ಹಿಂಪಡೆದ ರಾಜ್ಯ ಸರ್ಕಾರ!

ಜನವರಿ 29 ರಂದು, ಪ್ರಯಾಗ್​ರಾಜ್​ನಲ್ಲಿ ಕಾಲ್ತುಳಿತ ಸಂಭವಿಸಿ ಕನಿಷ್ಠ 30 ಜನರು ಮೃತಪಟ್ಟಿದ್ದರು ಮತ್ತು ನೂರಾರು ಮಂದಿ ಗಾಯಗೊಂಡಿದ್ದರು. ಮೌನಿ ಅಮಾವಾಸ್ಯಾ ದಿನದಂದು ಗಂಗಾ, ಯಮುನಾ ಮತ್ತು ಸರಸ್ವತಿ ನದಿಗಳ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಲು ಹೆಚ್ಚಿನ ಸಂಖ್ಯೆಯ ಯಾತ್ರಿಕರು ಪ್ರಯಾಗ್​ರಾಜ್​ಗೆ ಬಂದಿದ್ದರು. ಆ ಸಂದರ್ಭದಲ್ಲಿ ಕಾಲ್ತುಳಿತ ಸಂಭವಿಸಿತ್ತು. ಪ್ರತ್ಯಕ್ಷದರ್ಶಿಗಳ ಪ್ರಕಾರ, ಜನರು ಬ್ಯಾರಿಕೇಡ್‌ ತಡೆಗಳನ್ನು ಧಿಕ್ಕರಿಸಿ ನದಿಯ ಕಡೆಗೆ ಹೋಗಲು ಪ್ರಯತ್ನಿಸಿದ್ದರು, ಇದರಿಂದಾಗಿ ಕಾಲ್ತುಳಿತ ಸಂಭವಿಸಿತ್ತು.

ಇದನ್ನೂ ಓದಿ: ಕುಂಭಮೇಳದಲ್ಲಿ ಕಾಲ್ತುಳಿತ: ತಾಯಿ-ಮಗಳು ಸೇರಿದಂತೆ ಬೆಳಗಾವಿಯ ನಾಲ್ವರು ದುರಂತ ಸಾವು

ದುರಂತದಲ್ಲಿ ಸಾವನ್ನಪ್ಪಿದ ಪ್ರತಿಯೊಬ್ಬರ ಕುಟುಂಬಗಳಿಗೆ ರಾಜ್ಯ ಸರ್ಕಾರದ ಪರವಾಗಿ ನಾವು ತಲಾ 25 ಲಕ್ಷ ರೂ.ಗಳ ಆರ್ಥಿಕ ಸಹಾಯವನ್ನು ನೀಡಲಿದ್ದೇವೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಘೋಷಣೆ ಮಾಡಿದ್ದರು. ನ್ಯಾಯಾಂಗ ಆಯೋಗವು ಪ್ರಕರಣದ ತನಿಖೆ ನಡೆಸಲಿದ್ದು, ವರದಿ ಸಲ್ಲಿದಲಿದೆಎಂದು ಯೋಗಿ ಆದಿತ್ಯನಾಥ್ ಹೇಳಿದ್ದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:56 am, Thu, 13 March 25

ಪತಿಯೊಂದಿಗೆ ಜಗಳವಾಡಿ ಬೆಂಕಿ ಹಚ್ಚಿಕೊಂಡು ಹೆಂಡತಿ ಆತ್ಮಹತ್ಯೆ
ಪತಿಯೊಂದಿಗೆ ಜಗಳವಾಡಿ ಬೆಂಕಿ ಹಚ್ಚಿಕೊಂಡು ಹೆಂಡತಿ ಆತ್ಮಹತ್ಯೆ
ಕರ್ನಾಟಕ ಬಂದ್​: ಫಿಲಂ ಚೇಂಬರ್ ತೆಗೆದುಕೊಂಡ ನಿರ್ಣಯಗಳು ಹೀಗಿವೆ
ಕರ್ನಾಟಕ ಬಂದ್​: ಫಿಲಂ ಚೇಂಬರ್ ತೆಗೆದುಕೊಂಡ ನಿರ್ಣಯಗಳು ಹೀಗಿವೆ
ವಿಧಾನಸಭೆಯಲ್ಲಿ ಮೊಬೈಲ್ ಬಳಸಿದ್ದಕ್ಕೆ ಕೋಪಗೊಂಡ ಬಿಹಾರ ಸಿಎಂ ನಿತೀಶ್ ಕುಮಾರ್
ವಿಧಾನಸಭೆಯಲ್ಲಿ ಮೊಬೈಲ್ ಬಳಸಿದ್ದಕ್ಕೆ ಕೋಪಗೊಂಡ ಬಿಹಾರ ಸಿಎಂ ನಿತೀಶ್ ಕುಮಾರ್
ಗೊತ್ತಿರದ ವಿಷಯದ ಬಗ್ಗೆ ಮಾತಾಡುವ ಜಾಯಮಾನ ನನ್ನದಲ್ಲ: ಪಾಟೀಲ್
ಗೊತ್ತಿರದ ವಿಷಯದ ಬಗ್ಗೆ ಮಾತಾಡುವ ಜಾಯಮಾನ ನನ್ನದಲ್ಲ: ಪಾಟೀಲ್
ಹರಪನಹಳ್ಳಿಯಲ್ಲಿ ಆಲಿಕಲ್ಲು ಸಹಿತ ಮಳೆ: ವರ್ಷದ ಮೊದಲ ಮಳೆಗೆ ಜನರು ಖುಷ್
ಹರಪನಹಳ್ಳಿಯಲ್ಲಿ ಆಲಿಕಲ್ಲು ಸಹಿತ ಮಳೆ: ವರ್ಷದ ಮೊದಲ ಮಳೆಗೆ ಜನರು ಖುಷ್
ಯತ್ನಾಳ್​ರನ್ನು ದೇಶದ್ರೋಹಿ ಎಂದು ಜರಿದ ಕಾಂಗ್ರೆಸ್ ಶಾಸಕ ರಿಜ್ವಾನ್ ಅರ್ಷದ್
ಯತ್ನಾಳ್​ರನ್ನು ದೇಶದ್ರೋಹಿ ಎಂದು ಜರಿದ ಕಾಂಗ್ರೆಸ್ ಶಾಸಕ ರಿಜ್ವಾನ್ ಅರ್ಷದ್
ಹನಿಟ್ರ್ಯಾಪ್​ ಕೇಸ್: ಡಿಕೆಶಿ ವಿರುದ್ಧ ಹೊಸ ಬಾಂಬ್ ಸಿಡಿಸಿದ ಬಿಜೆಪಿ ಶಾಸಕ
ಹನಿಟ್ರ್ಯಾಪ್​ ಕೇಸ್: ಡಿಕೆಶಿ ವಿರುದ್ಧ ಹೊಸ ಬಾಂಬ್ ಸಿಡಿಸಿದ ಬಿಜೆಪಿ ಶಾಸಕ
ಸದನದಲ್ಲಿ ರೋಷಾವೇಶದಿಂದ ಕೂಗಾಡಿದ ಶಾಸಕ ಮುನಿರತ್ನ ನಾಯ್ಡು
ಸದನದಲ್ಲಿ ರೋಷಾವೇಶದಿಂದ ಕೂಗಾಡಿದ ಶಾಸಕ ಮುನಿರತ್ನ ನಾಯ್ಡು
ರಾಜಣ್ಣಗೆ ಮಾತ್ರವಲ್ಲ ಪುತ್ರನಿಗೂ ಹನಿಟ್ರ್ಯಾಪ್​​​​​ ಬಲೆಗೆ ಬೀಳಿಸುವ ಸಂಚು!
ರಾಜಣ್ಣಗೆ ಮಾತ್ರವಲ್ಲ ಪುತ್ರನಿಗೂ ಹನಿಟ್ರ್ಯಾಪ್​​​​​ ಬಲೆಗೆ ಬೀಳಿಸುವ ಸಂಚು!
ಹನಿಟ್ರ್ಯಾಪ್ ಕೇಸ್ ಉನ್ನತ ಮಟ್ಟದ ತನಿಖೆಗೆ: ಸದನದಲ್ಲೇ ಘೋಷಿಸಿದ ಗೃಹ ಸಚಿವ
ಹನಿಟ್ರ್ಯಾಪ್ ಕೇಸ್ ಉನ್ನತ ಮಟ್ಟದ ತನಿಖೆಗೆ: ಸದನದಲ್ಲೇ ಘೋಷಿಸಿದ ಗೃಹ ಸಚಿವ