ಬೆಳಗಾವಿ: ಮುಂಬರುವ ಡಿಸೆಂಬರ್ 10 ರಂದು ಕರ್ನಾಟಕದ 25 ಪರಿಷತ್ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಬೆಳಗಾವಿ ಪಕ್ಷೇತರ ಅಭ್ಯರ್ಥಿಯಾಗಿ ಲಖನ್ ಜಾರಕಿಹೊಳಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಅಪಾರ ಬೆಂಬಲಿಗರ ಜೊತೆ ಆಗಮಿಸಿ ಲಖನ್ ನಾಮಪತ್ರ ಸಲ್ಲಿಸಿದ್ದಾರೆ. ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಕೆ ಮಾಡಲಾಗಿದೆ. ಹಾಲಿ ಪಕ್ಷೇತರ ಎಂಎಲ್‌ಸಿ ವಿವೇಕರಾವ್ ಪಾಟೀಲ್, ರಮೇಶ್ ಜಾರಕಿಹೊಳಿ ಪುತ್ರ ಅಮರನಾಥ ಜಾರಕಿಹೊಳಿ ಹಾಗೂ ರಮೇಶ್ ಜಾರಕಿಹೊಳಿ ಅಳಿಯ ಅಂಬಿರಾವ್ ಈ ವೇಳೆ ಉಪಸ್ಥಿತಿ ವಹಿಸಿದ್ದಾರೆ.
ಸಹೋದರರು ಟಿಕೆಟ್ ವಿಚಾರದ ಅನಿಸಿಕೆಯನ್ನ ಹೇಳಿದ್ದರು. ನಮ್ಮ ಬೆಂಬಲಿಗರು, ಕಾರ್ಯಕರ್ತರು ಹೇಳಿದ್ದಕ್ಕೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಲು ಮುಂದಾಗಿದ್ದೇನೆ. ಈ ಚುನಾವಣೆಯಲ್ಲಿ ನಮಗೆ ಕಾಂಪಿಟೇಟರ್ ಯಾರೂ ಇಲ್ಲ. ಅವರ ಬಗ್ಗೆ ವಿಚಾರ ಮಾಡುವುದಿಲ್ಲ. ಸಹೋದರರು ಪಕ್ಷದ ಪರವಾಗಿ ಕೆಲಸ ಮಾಡುತ್ತಾರೆ. ಸತೀಶ್ ಜಾರಕಿಹೊಳಿ ಏನೇ ಹೇಳಿದರು ಅವರು ನಮ್ಮ ಅಣ್ಣ. ಪಂಚಾಯಿತಿ ಅಭಿವೃದ್ಧಿಗೋಸ್ಕರ ಚುನಾವಣೆಗೆ ಸ್ಪರ್ಧೆ ಮಾಡುತ್ತೇನೆ. ಇವತ್ತು ಶಕ್ತಿ ಪ್ರದರ್ಶನ ಅಲ್ಲ. ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಕೂಡಿದ್ದಾರೆ ಅಷ್ಟೆ ಎಂದು ಬೆಳಗಾವಿಯಲ್ಲಿ ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ ಹೇಳಿಕೆ ನೀಡಿದ್ದಾರೆ.
ಲಖನ್ ಜಾರಕಿಹೊಳಿ ನಾಮಪತ್ರ ಸಲ್ಲಿಕೆ ಬಳಿಕ ನಾಮಪತ್ರ ವಾಪಸ್ ಪಡೆಯುತ್ತಾರೆ ಎಂಬ ಸತೀಶ್ ಜಾರಕಿಹೊಳಿ ಹೇಳಿಕೆ ವಿಚಾರವಾಗಿ ಅವರು ಪ್ರತಿಕ್ರಿಯೆ ನೀಡಿದ್ದಾರೆ. ನಾನು ನಾಮಪತ್ರ ವಾಪಾಸ್ ತೆಗೆದುಕೊಳ್ಳುವ ಸಾಧ್ಯತೆಯೇ ಇಲ್ಲ. ಸತೀಶ್ ಜಾರಕಿಹೊಳಿ ಸುತ್ತಮುತ್ತ ಇದ್ದವರು ಊಹಾಪೋಹಗಳನ್ನ ಎಬ್ಬಿಸುತ್ತಿದ್ದಾರೆ ಎಂದು ಬೆಳಗಾವಿಯಲ್ಲಿ ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ ಸ್ಪಷ್ಟನೆ ನೀಡಿದ್ದಾರೆ.
ಇದನ್ನೂ ಓದಿ: ಪರಿಷತ್ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ; ಸಿದ್ದರಾಮಯ್ಯ ಆಪ್ತನಿಗೆ ಒಲಿದ ಟಿಕೆಟ್
ಇದನ್ನೂ ಓದಿ: ಎಸ್ಆರ್ ಪಾಟೀಲ್ಗೆ ತಪ್ಪಿದ ಪರಿಷತ್ ಚುನಾವಣೆ ಟಿಕೆಟ್; ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ