AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Belagavi Session: ಎರಡು ಮನೆಗಳಲ್ಲೂ ಭೂಕಂದಾಯ 2ನೇ ತಿದ್ದುಪಡಿ ವಿಧೇಯಕ ಅಂಗಿಕಾರ: ಕಾಯ್ದೆಯಾಗಲು ಇನ್ನೊಂದೆಜ್ಜೆ ಬಾಕಿ

ಭೂಕಂದಾಯ 2ನೇ ತಿದ್ದುಪಡಿ ವಿಧೇಯಕ ಇಂದು (ಡಿ. 26) ಮೇಲ್ಮನೆ ವಿಧಾನ ಪರಿಷತ್​ನಲ್ಲಿ ಅಂಗಿಕಾರಗೊಂಡಿದೆ.

Belagavi Session: ಎರಡು ಮನೆಗಳಲ್ಲೂ ಭೂಕಂದಾಯ 2ನೇ ತಿದ್ದುಪಡಿ ವಿಧೇಯಕ ಅಂಗಿಕಾರ: ಕಾಯ್ದೆಯಾಗಲು ಇನ್ನೊಂದೆಜ್ಜೆ ಬಾಕಿ
ಬೆಳಗಾವಿ ಸುವರ್ಣ ಸೌಧ
TV9 Web
| Edited By: ವಿವೇಕ ಬಿರಾದಾರ|

Updated on: Dec 26, 2022 | 8:30 PM

Share

ಬೆಳಗಾವಿ: ಕರ್ನಾಟಕ ಭೂಕಂದಾಯ ಕಾಯ್ದೆಯ ಸೆಕ್ಷನ್ 95 ಮತ್ತು 96ಕ್ಕೆ ತಿದ್ದುಪಡಿ ಮಾಡುವ ಮೂಲಕ ಕೃಷಿಯೇತರ ಉದ್ದೇಶಗಳಿಗಾಗಿ ಭೂಪರಿವರ್ತನೆ ಪ್ರಕ್ರಿಯೆ ಸರಳೀಕರಣಗೊಳಿಸುವ ಭೂಕಂದಾಯ 2ನೇ ತಿದ್ದುಪಡಿ ವಿಧೇಯಕ (Land Revenue Second Amendment Bill 2022) ಇಂದು (ಡಿ. 26) ಮೇಲ್ಮನೆ ವಿಧಾನ ಪರಿಷತ್​ನಲ್ಲಿ ಅಂಗಿಕಾರಗೊಂಡಿದೆ. ಈ ವಿಧೇಯಕ (ಡಿ.22) ರಂದು ಕೆಳಮನೆ ವಿಧಾನಸಭೆಯಲ್ಲಿ ಅಂಗಿಕಾರಗೊಂಡಿತ್ತು. ಸದ್ಯ ವಿಧೇಯಕ ಕಾಯ್ದೆಯಾಗಿ ಜಾರಿಯಾಗುವುದಕ್ಕೆ ಒಂದು ಹೆಜ್ಜೆ ಮಾತ್ರ ಬಾಕಿ ಇದೆ. ಹೌದು ವಿಧೇಯಕಕ್ಕೆ ರಾಜ್ಯಪಾಲರು ಅಂಕಿತ ಹಾಕಿದರೆ ಕಾಯ್ದೆಯಾಗುತ್ತದೆ.

ಈ ತಿದ್ದುಪಡಿಯನ್ನು ತರುವುದು ಕೃಷಿ ಭೂಮಿಯನ್ನು ಕೈಗಾರಿಕಾ ಉದ್ದೇಶಗಳಿಗಾಗಿ ಪರಿವರ್ತಿಸಲು ಸಹಾಯ ಮಾಡುತ್ತದೆ. ಕೃಷಿಭೂಮಿಯ ನಿವಾಸಿಗಳು ಅದನ್ನು ಸಂಪೂರ್ಣವಾಗಿ ಅಥವಾ ಅದರ ಭಾಗವನ್ನು ಬೇರೆ ಯಾವುದೇ ಉದ್ದೇಶಕ್ಕಾಗಿ ಬೇರೆಡೆಗೆ ವರ್ಗಾವಣೆಗೆ ಬಯಸಿದರೆ, ಅವರು ಅರ್ಜಿಯೊಂದಿಗೆ ಜಿಲ್ಲಾಧಿಕಾರಿಗಳಿಗೆ ಅಫಿಡವಿಟ್ ನ್ನು ಸಲ್ಲಿಸಬಹುದು. ಬಳಿಕ ಅರ್ಜಿ ಸ್ವೀಕರಿಸಿದ 7 ದಿನಗಳಲ್ಲಿ ಜಿಲ್ಲಾಧಿಕಾರಿ ಅನುಮೋದನೆ ನೀಡುತ್ತಾರೆ.

ಅರ್ಜಿ ಸ್ವೀಕರಿಸಿದ 7 ದಿನಗಳಲ್ಲಿ ಡಿಸಿ (ಜಿಲ್ಲಾಧಿಕಾರಿ) ಅನುಮೋದನೆ ನೀಡಬೇಕು. ಮಾಸ್ಟರ್ ಪ್ಲಾನ್ ಪ್ರಕಟಿಸದಿದ್ದಲ್ಲಿ ಮತ್ತು ಜಮೀನು ಯೋಜನಾ ಪ್ರದೇಶದ ಹೊರಗೆ ಬಿದ್ದರೆ, ಅಧಿಕಾರಿಗಳು ಅರ್ಜಿಯನ್ನು ಸ್ವೀಕರಿಸಿದ ದಿನಾಂಕದಿಂದ 15 ದಿನಗಳಲ್ಲಿ ತಮ್ಮ ಅಭಿಪ್ರಾಯವನ್ನು ಒದಗಿಸಬೇಕು.

ಯಾವುದೇ ಅಭಿಪ್ರಾಯವನ್ನು ನೀಡದಿದ್ದಲ್ಲಿ, ಭೂಮಿಯನ್ನು ಬೇರೆಡೆಗೆ ತಿರುಗಿಸಲು ಅಧಿಕಾರಿಗಳ ಅಭ್ಯಂತರವಿಲ್ಲ ಎಂದು ಪರಿಗಣನೆ, ನಂತರ ಡಿಸಿ ಅನುಮೋದನೆ ನೀಡಬೇಕು. ಅರ್ಜಿಯನ್ನು ಸ್ವೀಕರಿಸಿದ ದಿನಾಂಕದಿಂದ 30 ದಿನಗಳಲ್ಲಿ ಡಿಸಿ ನಿರ್ಧರಿಸಲು ಮತ್ತು ಆದೇಶವನ್ನು ನೀಡಲು ವಿಫಲವಾದರೆ ಅನುಮೋದನೆಯನ್ನು ನೀಡಲಾಗಿದೆ ಎಂದು ಪರಿಗಣನೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
TV9 Web
TV9 Web

TV9 Kannada

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್