AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Leopard capture operation: 25ನೇ ದಿನಕ್ಕೆ ಕಾಲಿಟ್ಟ ಚಿರತೆ ಸೆರೆ ಕಾರ್ಯಾಚರಣೆ‌: ಚಿರತೆ ಸೆರೆಗೆ ಹನಿಟ್ರ್ಯಾಪ್ ಅಸ್ತ್ರ ಪ್ರಯೋಗ

ಪ್ರತಿದಿನ 250 ಎಕರೆ ಪ್ರದೇಶದಲ್ಲಿರುವ ಗಾಲ್ಫ್ ಮೈದಾನವನ್ನು ಸಿಬ್ಬಂದಿ ಶೋಧ ಮಾಡುತ್ತಿದ್ದಾರೆ. ಚಿರತೆ ಸೆರೆಯಾಗದ ಹಿನ್ನೆಲೆ ಎರಡು ದಿನಗಳಿಂದ ಹನಿಟ್ರ್ಯಾಪ್ ಅಸ್ತ್ರ ಪ್ರಯೋಗ ಮಾಡಲಾಗುತ್ತಿದೆ.

Leopard capture operation: 25ನೇ ದಿನಕ್ಕೆ ಕಾಲಿಟ್ಟ ಚಿರತೆ ಸೆರೆ ಕಾರ್ಯಾಚರಣೆ‌: ಚಿರತೆ ಸೆರೆಗೆ ಹನಿಟ್ರ್ಯಾಪ್ ಅಸ್ತ್ರ ಪ್ರಯೋಗ
ಗಾಲ್ಫ್ ಮೈದಾನದಲ್ಲಿ ಚಿರತೆ ಪ್ರತ್ಯಕ್ಷ.
TV9 Web
| Edited By: |

Updated on:Aug 29, 2022 | 9:54 AM

Share

ಬೆಳಗಾವಿ: ಜಿಲ್ಲೆಯ ಗಾಲ್ಫ್ ಮೈದಾನದಲ್ಲಿ ಚಿರತೆ ಪ್ರತ್ಯಕ್ಷ ಹಿನ್ನೆಲೆ, ಚಿರತೆ ಸೆರೆ ಕಾರ್ಯಾಚರಣೆ‌ 25ನೇ ದಿನಕ್ಕೆ ಕಾಲಿಟ್ಟಿದೆ. ಆರು ದಿನ ಆನೆಗಳಿಂದ ಹುಡುಕಿದ್ರೂ ಚಿರತೆ ಸೆರೆಯಾಗಿಲ್ಲ. ಇಂದು ಎಂಬತ್ತು ಜನ ಸಿಬ್ಬಂದಿ, ಜೆಸಿಬಿ, ಆನೆಗಳಿಂದ ಚಿರತೆ ಸೆರೆಗೆ ಪ್ಲ್ಯಾನ್ ಮಾಡಲಾಗಿದೆ. ಪ್ರತಿದಿನ 250 ಎಕರೆ ಪ್ರದೇಶದಲ್ಲಿರುವ ಗಾಲ್ಫ್ ಮೈದಾನವನ್ನು ಸಿಬ್ಬಂದಿ ಶೋಧ ಮಾಡುತ್ತಿದ್ದಾರೆ. ಚಿರತೆ ಸೆರೆಯಾಗದ ಹಿನ್ನೆಲೆ ಎರಡು ದಿನಗಳಿಂದ ಹನಿಟ್ರ್ಯಾಪ್ ಅಸ್ತ್ರ ಪ್ರಯೋಗ ಮಾಡಲಾಗುತ್ತಿದೆ. ಚಿರತೆ ಸೆರೆಗೆ ಇಟ್ಟಿರುವ ಬೋನ್ ನಲ್ಲಿ ಹೆಣ್ಣು ಚಿರತೆ ಮೂತ್ರ ಸಿಂಪಡಣೆ ಮಾಡಲಾಗಿದೆ.

ಈ ಮೂಲಕ ಚಿರತೆ‌ಯನ್ನ ಲೈಂಗಿಕವಾಗಿ ಆಕರ್ಷಣೆ ಮಾಡಿ ಖೆಡ್ಡಾಗಿ ಬೀಳಿಸುವ ಪ್ಲ್ಯಾನ್ ಮಾಡಲಾಗಿದೆ. ಆದರು ಅರಣ್ಯ ಇಲಾಖೆ ಸಿಬ್ಬಂದಿಗೆ ಚಳ್ಳೆ ಹಣ್ಣು ತಿನ್ನಿಸಿ ಚಾಲಾಕಿ ಚಿರತೆ ಓಡಾಡುತ್ತಿದೆ. ಸೆರೆಯಾಗದ ಚಿರತೆಯಿಂದಾಗಿ ಬೆಳಗಾವಿ ನಗರ ಜನರಲ್ಲಿ ಆತಂಕ ದೂರವಾಗುತ್ತಿಲ್ಲ. ಅರಣ್ಯ ಇಲಾಖೆ ಸಿಬ್ಬಂದಿಗಳು ಚಿರತೆ ಸೆರೆಹಿಡಿಯುವ ನಿರತಂತರ ಪ್ರಯತ್ನದಲ್ಲಿ ತೊಡಗಿದ್ದಾರೆ.

ಇದನ್ನೂ ಓದಿ: Leopard: 24ನೇ ದಿನಕ್ಕೆ ಕಾಲಿಟ್ಟ ಚಿರತೆ ಸೆರೆ ಕಾರ್ಯಾಚರಣೆ: ದೂರವಾಗದ ಬೆಳಗಾವಿ ಜನರ ಆತಂಕ

ಚಿರತೆ ಸೆರೆಗೆ ಮಾಸ್ಟರ್ ಪ್ಲಾನ್:

ಚಿರತೆಯನ್ನು ಸೆರೆಹಿಡಿಯಲು ಹರಸಾಹಸ ಪಡುತ್ತಿರುವ ಅರಣ್ಯ ಇಲಾಖೆ ಸಿಬ್ಬಂದಿಗಳು ಚಿರತೆ ಸೆರೆಹಿಡಿಯುವ ನಿರತಂತರ ಪ್ರಯತ್ನದಲ್ಲಿ ತೊಡಗಿದ್ದಾರೆ. ಇದರ ಮುಂದುವರಿದ ಭಾಗವಾಗಿ ಅರಣ್ಯ ಇಲಾಖೆಯು ಚಿರತೆಯನ್ನು ಸೆರೆಹಿಡಿಯಲು ಮಾಸ್ಟರ್ ಪ್ಲಾನ್ ಒಂದನ್ನು ಸಿದ್ಧಪಡಿಸಿದ್ದು, ಈ ಯೋಜನೆಯಂತೆ ಸಿಬ್ಬಂದಿಗಳು ಚಿರತೆಯನ್ನು ಸೆರೆ ಹಿಡಿಯುವ ಪ್ರಯತ್ನವನ್ನು ನಡೆಸಲಿದ್ದಾರೆ.

ನಿರಂತರ ಕಾರ್ಯಾಚರಣೆ ಕೈಗೊಳ್ಳುತ್ತಿರುವ ಸಿಬ್ಬಂದಿಗಳು ಇದೀಗ ಮಾಸ್ಟರ್ ಪ್ಲಾನ್​ನೊಂದಿಗೆ ಸೆರೆ ಹಿಡಿಯುವ ಪ್ರಯತ್ನವನ್ನು ನಡೆಸಲಿದ್ದಾರೆ. ಸಿದ್ಧಪಡಿಸಿದ ಮಾಸ್ಟರ್ ಪ್ಲಾನ್​ನಂತೆ ಇಂದು 350 ಅರಣ್ಯ ಇಲಾಖೆ ಸಿಬ್ಬಂದಿಗಳು ಏಕಕಾಲದಲ್ಲಿ ಕಾರ್ಯಾಚರಣೆಗೆ ಇಳಿಯಲಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 9:48 am, Mon, 29 August 22

300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ