Leopard capture operation: 26ನೇ ದಿನಕ್ಕೆ ಕಾಲಿಟ್ಟ ಬೆಳಗಾವಿಯ ಚಿರತೆ ಶೋಧಕಾರ್ಯ: ಸೆರೆ ಸಿಗದ ಚಿರತೆ, 21 ಶಾಲೆಗಳ ರಜೆ ಮುಂದುವರಿಕೆ

ಬೆಳಗಾವಿಯ ಗಾಲ್ಫ್ ಮೈದಾನದಲ್ಲಿ ಚಿರತೆ ಶೋಧಕಾರ್ಯ 26ನೇ ದಿನಕ್ಕೆ ಕಾಲಿಟ್ಟಿದೆ. ಚಾಲಾಕಿ ಅರಣ್ಯ ಇಲಾಖೆ ಸಿಬ್ಬಂದಿ ನಿದ್ದೆಗೆಡಿಸಿದ್ದು, ಸೆರೆಯಾಗದ ಹಿನ್ನೆಲೆ 21 ಶಾಲೆಗಳ ರಜೆ ಮುಂದುವರಿಕೆಯಾಗಿದೆ.

Leopard capture operation: 26ನೇ ದಿನಕ್ಕೆ ಕಾಲಿಟ್ಟ ಬೆಳಗಾವಿಯ ಚಿರತೆ ಶೋಧಕಾರ್ಯ: ಸೆರೆ ಸಿಗದ ಚಿರತೆ, 21 ಶಾಲೆಗಳ ರಜೆ ಮುಂದುವರಿಕೆ
ಗಾಲ್ಫ್ ಮೈದಾನದಲ್ಲಿ ಚಿರತೆ ಪ್ರತ್ಯಕ್ಷ
Follow us
TV9 Web
| Updated By: ವಿವೇಕ ಬಿರಾದಾರ

Updated on:Aug 30, 2022 | 10:49 AM

ಬೆಳಗಾವಿ: ಬೆಳಗಾವಿಯ (Belagavi) ಗಾಲ್ಫ್ ಮೈದಾನದಲ್ಲಿ ಚಿರತೆ (Leopard) ಶೋಧಕಾರ್ಯ 26ನೇ ದಿನಕ್ಕೆ ಕಾಲಿಟ್ಟಿದೆ. ಚಾಲಾಕಿ ಅರಣ್ಯ ಇಲಾಖೆ ಸಿಬ್ಬಂದಿ ನಿದ್ದೆಗೆಡಿಸಿದ್ದು, ಸೆರೆಯಾಗದ ಹಿನ್ನೆಲೆ 21 ಶಾಲೆಗಳ ರಜೆ ಮುಂದುವರಿಕೆಯಾಗಿದೆ. ಚಿರತೆ ಸೆರೆಗಾಗಿ ಶಿಕಾರಿ ನಾಯಿ, ಹಂದಿ ಬಲೆ ಹಿಡಿದು 300ಕ್ಕೂ ಹೆಚ್ಚು ಜನ ಸೇರಿ ಕೋಂಬಿಂಗ್ ಮಾಡಿದ್ದಾಯ್ತು. ಆಪರೇಷನ್ ಗಜಪಡೆ, ಆಪರೇಷನ್ ಹನಿಟ್ರ್ಯಾಪ್‌‌ ಸಹ ಮಾಡಿದರು ಸಹ ಚಿರತೆ ಸೆರೆಯಾಗಿಲ್ಲ. ಚಿರತೆ ಹೆಜ್ಜೆಗುರುತು, ಚಲನವಲನ ಆಧರಿಸಿ 23 ಟ್ರ್ಯಾಪ್ ಕ್ಯಾಮರಾ, 9 ಬೋನುಗಳ ಸ್ಥಳಾಂತರ ಮಾಡಲಾಗಿದೆ.

ಘಟನೆ ಹಿನ್ನೆಲೆ

26 ದಿನಗಳಿಂದ ಕಾಡುತ್ತಿದ್ದ ಚಿರತೆ ಹಿಡಿಯಲು ಆಪರೇಷನ್ ಗಜಪಡೆ

ಬೆಳಗಾವಿ ಹಿಂಡಲಗಾ ಗ್ರಾಮದ ಕ್ಯಾಂಪ್ ಪ್ರದೇಶದ ರಸ್ತೆಯಲ್ಲಿ ಚಿರತೆ ಕಾಣಿಸಿಕೊಂಡಿತ್ತು. ಇದನ್ನ ನೋಡಿದ್ದ ಖಾಸಗಿ ಬಸ್ ಚಾಲಕ ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದರು. ಮಾಹಿತಿ ತಿಳಿಯುತ್ತಿದ್ದಂತೆ ಡಿಸಿ ನಿತೇಶ್ ಪಾಟೀಲ್ ನಗರ ಹಾಗೂ ಗ್ರಾಮೀಣ ಭಾಗದ 22 ಸರ್ಕಾರಿ, ಖಾಸಗಿ ಶಾಲೆಗಳಿಗೆ ರಜೆ ಘೋಷಿಸಿದ್ದರು. ಇತ್ತ ಚಿರತೆ ಹಿಡ್ಯೋಕೆ ಅರಣ್ಯ ಇಲಾಖೆಯ 20 ಸಿಬ್ಬಂದಿ ಫೀಲ್ಡಿಗಿಳದಿದ್ದಾರೆ. ಆದರೆ ಸರಿಯಾದ ಪ್ಲ್ಯಾನ್ ಮಾಡದ ಕಾರಣ ಅಧಿಕಾರಿಗಳ ಕಣ್ಮುಂದೆಯೇ ಗಾಲ್ಫ್ ಮೈದಾನದತ್ತ ಎಸ್ಕೇಪ್ ಆಗಿತ್ತು. ಸ್ಥಳಕ್ಕೆ ಬಂದ ಶಾಸಕ ಅನಿಲ್ ಬೆನಕೆ ಸಿಬ್ಬಂದಿ ಬೇಜವಾಬ್ದಾರಿಗೆ ಅಸಮಧಾನ ಹೊರ ಹಾಕಿದ್ದರು.

ಪೊಲೀಸರು ಹಾಗೂ ಅರಣ್ಯಾಧಿಕಾರಿಗಳು 2 ಗಂಟೆಗಳು ಹುಡುಕಾಡಿದ್ರೂ 200 ಎಕರೆ ಅರಣ್ಯ ಪ್ರದೇಶದಲ್ಲಿ ಚಿರತೆ ಪತ್ತೆಯಾಗಿಲ್ಲ. ಕೊನೆಗೆ ಹುಕ್ಕೇರಿಯಿಂದ ಹಂದಿ ಹಿಡಿಯುವ ಕೆಲ ಯುವಕರ ಜತೆಗೆ 20 ನಾಯಿಗಳನ್ನ ಕರೆಸಿ ಮತ್ತೆ ಆಪರೇಷನ್ ಶುರು ಮಾಡಿದ್ದರು. ಡ್ರೋನ್ ಹಾರಿಸಿದರೂ ಚಿರತೆಯ ಸುಳಿವೇ ಸಿಗ್ಲಿಲ್ಲ.

ಬೆಳಗಾವಿಯಲ್ಲಿ ಚಿರತೆ ಸೆರೆಗೆ ಆಪರೇಷನ್ ಗಜಪಡೆ

ಚಿರತೆ ಸೆರೆಗೆ ನಡೆದ ಆಪರೇಷನ್ ಗಜಪಡೆ ​ ಮುಕ್ತಾಯಗೊಂಡಿದೆ. 250 ಎಕರೆ ಪ್ರದೇಶದಲ್ಲಿ 2 ಆನೆ ಬಳಸಿ  ಗಜಪಡೆ ಶೋಧ ಕಾರ್ಯ ನಡೆಸಿತ್ತು. ಆನೆ ಬಳಸಿ 7 ಕಿ.ಮೀ. ವ್ಯಾಪ್ತಿಯಲ್ಲಿ ಕೂಂಬಿಂಗ್ ನಡೆಸಲಾಗಿತ್ತು. ಈ ವೇಳೆ ಹಂದಿ ಬೇಟೆಯಾಡಿ ಅರ್ಧ ಮಾಂಸ ತಿಂದಿರುವುದು ಪತ್ತೆಯಾಗಿದೆ.

ಯಾರಪ್ಪಂದೇನ್ ಐತಿ ಬೆಳಗಾವಿ ನಂದೈತಿ, ಸಾಮಾಜಿಕ ಜಾಲತಾಣದಲ್ಲಿ ಚಿರತೆ ಫೋಟೋ ಹಾಕಿ ವ್ಯಂಗ್ಯ

ಚಿರತೆ ಸಿಗದ  ಕುರಿತು ವಿಭಿನ್ನ ರೀತಿಯಲ್ಲಿ ಪೋಸ್ಟ್‌ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ವ್ಯಂಗ್ಯ ಮಾಡಲಾಗುತ್ತಿದೆ. ಚಿರತೆ ಪೋಟೊ ಹಾಕಿ ಚಿರತೆ ಹೆಸರಲ್ಲಿ ಆಧಾರ ಕಾರ್ಡ್ ರೆಡಿ ಮಾಡಿ ತಮಾಷೆ ಮಾಡಲಾಗಿದೆ. ಬಿಬತ್ಯಾ ಬೇಲ್ಗಾಂವ್‌ಕರ್ ಅಂತಾ ಚಿರತೆಗೆ ಹೆಸರು ಹಾಕಿ ಆಧಾರ್ ಕಾರ್ಡ್ ವೈರಲ್ ಮಾಡಲಾಗಿದೆ. ಎಷ್ಟು ಬೇಕಾದಷ್ಟು ಪ್ರಯತ್ನ ಮಾಡಿ ನಾನು ಗಣಪತಿ ಹಬ್ಬ ಮುಗಿಸಿಕೊಂಡು ಹೋಗುತ್ತೇನೆ. ಯಾರಪ್ಪಂದೇನ್ ಐತಿ ಬೆಳಗಾವಿ ನಂದೈತಿ ಬೆಳಗಾವಿ ಬಿಟ್ಟು ಹೋಗಲ್ಲ. ನಾನೇ ಆತಂಕವಾದಿನಾ ನನ್ನ ಹಿಡಿಯಲು ಆನೆ, ನಾಯಿ, ಪೊಲೀಸರು ಬಂದಿದ್ದೀರಿ, ಹೀಗೆ ಹಲವು ರೀತಿಯಲ್ಲಿ ಚಿರತೆ ಪೋಟೊ ಹಾಕಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ವೈರಲ್ ಮಾಡಲಾಗುತ್ತಿದೆ.

ಪ್ರತಿದಿನವು ಸುಮಾರು 3ಲಕ್ಷ ರೂ. ಖರ್ಚು:

ಕಳೆದ 22 ದಿನಗಳಿಂದ ಆಪರೇಷನ್ ಚಿರತೆ ಕಾರ್ಯಾಚರಣೆ ನಡೆಯುತ್ತಿದ್ದು, ಐದು ದಿನಗಳಿಂದ 160 ಸಿಬ್ಬಂದಿ, ಆನೆ, ಜೆಸಿಬಿಗಳಿಂದ ಕಾರ್ಯಾಚರಣೆ ಮಾಡಲಾಗುತ್ತಿದೆ. ಕಳೆದ 5 ದಿನಗಳಿಂದ ಪ್ರತಿದಿನವು ಸುಮಾರು 3ಲಕ್ಷದವರೆಗೂ ಖರ್ಚು ಮಾಡಲಾಗುತ್ತಿದ್ದು, ಅರಣ್ಯ ಇಲಾಖೆ ಈವರೆಗೂ ಸುಮಾರು 30 ರಿಂದ 40 ಲಕ್ಷ ಹಣ ಖರ್ಚು ಮಾಡಿದೆ. ನಿತ್ಯವೂ ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಹಣ ಖರ್ಚಾಗುತ್ತಿದ್ದರು ಚಿರತೆ ಸಿಗುತ್ತಿಲ್ಲ. ಸಿಬ್ಬಂದಿಗೆ ಊಟದ ವ್ಯವಸ್ಥೆ, ಆನೆಗೆ ಆಹಾರದ ವ್ಯವಸ್ಥೆ ಮಾಡಲು ಕೂಡ ಇಲಾಖೆ ಖರ್ಚು ಭರಿಸುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 10:37 am, Tue, 30 August 22

ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ