AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Belagavi News: ಚಿರತೆ ಪ್ರತ್ಯಕ್ಷ ಪ್ರಕರಣ: ಇಂದು ಕೂಡ ಬೆಳಗಾವಿಯ 22 ಸರ್ಕಾರಿ, ಖಾಸಗಿ ಶಾಲೆಗೆ ರಜೆ ಘೋಷಣೆ: ಆನ್‌ಲೈನ್ ಕ್ಲಾಸ್​​ ನಡೆಸಲು ಸೂಚನೆ

ಚಿರತೆ ಪ್ರತ್ಯಕ್ಷ ಹಿನ್ನೆಲೆ ಇಂದು ಕೂಡ ಬೆಳಗಾವಿಯ 22 ಸರ್ಕಾರಿ, ಖಾಸಗಿ ಶಾಲೆಗೆ ರಜೆ ಘೋಷಣೆ ಮಾಡಿದ್ದು, ಆನ್‌ಲೈನ್‌ನಲ್ಲಿ ತರಗತಿ ನಡೆಸುವಂತೆ ಶಾಲಾ ಆಡಳಿತ ಮಂಡಳಿಗೆ ಡಿಸಿ ನಿತೇಶ್ ಪಾಟೀಲ್ ಸೂಚನೆ ನೀಡಿದ್ದಾರೆ.

Belagavi News: ಚಿರತೆ ಪ್ರತ್ಯಕ್ಷ ಪ್ರಕರಣ: ಇಂದು ಕೂಡ ಬೆಳಗಾವಿಯ 22 ಸರ್ಕಾರಿ, ಖಾಸಗಿ ಶಾಲೆಗೆ ರಜೆ ಘೋಷಣೆ: ಆನ್‌ಲೈನ್ ಕ್ಲಾಸ್​​ ನಡೆಸಲು ಸೂಚನೆ
ಚಿರತೆ (ಸಂಗ್ರಹ ಚಿತ್ರ)
TV9 Web
| Edited By: |

Updated on:Aug 24, 2022 | 7:51 AM

Share

ಬೆಳಗಾವಿ: ಜಿಲ್ಲೆಯ ಕ್ಯಾಂಪ್ ಪ್ರದೇಶದಲ್ಲಿ ಚಿರತೆ ಪ್ರತ್ಯಕ್ಷ ಹಿನ್ನೆಲೆ ಇಂದು ಕೂಡ ಬೆಳಗಾವಿಯ 22 ಸರ್ಕಾರಿ, ಖಾಸಗಿ ಶಾಲೆಗೆ ರಜೆ ಘೋಷಣೆ ಮಾಡಿದ್ದು, ಆನ್‌ಲೈನ್‌ನಲ್ಲಿ ತರಗತಿ ನಡೆಸುವಂತೆ ಶಾಲಾ ಆಡಳಿತ ಮಂಡಳಿಗೆ ಡಿಸಿ ನಿತೇಶ್ ಪಾಟೀಲ್ ಸೂಚನೆ ನೀಡಿದ್ದಾರೆ. ಇಂದು ಕೂಡ ಚಿರತೆಗಾಗಿ ಹುಡುಕಾಟ ಮುಂದುವರಿಯಲಿದ್ದು, ಅರಣ್ಯ ಇಲಾಖೆ ಸಿಬ್ಬಂದಿ, ಪೊಲೀಸರಿಂದ ಕಾರ್ಯಾಚರಣೆ ನಡೆಯಲಿದೆ. ಮೂರು ದಿನವಾದ್ರೂ ಗಾಲ್ಫ್ ಮೈದಾನದಲ್ಲಿ ಚಿರತೆ ಸಿಗದ ಹಿನ್ನೆಲೆ, ಹನುಮಾನ ನಗರ, ಜಾಧವ್ ನಗರ, ಕ್ಯಾಂಪ್ ಪ್ರದೇಶದ ಜನರು ಭಯದಲ್ಲಿ ಓಡಾಡುವಂತ್ತಾಗಿದೆ.

ಇದನ್ನೂ ಓದಿ: Belagavi News: ಚಿರತೆ ಸೆರೆಗೆ ಮುಂದುವರಿದ ಕಾರ್ಯಾಚರಣೆ, ಶೂಟರ್ಸ್​ಗೆ ಬುಲಾವ್, ವಿಶೇಷ ಡ್ರೋಣ್ ಬಳಕೆ

ಸಕ್ರೆಬೈಲ್​ದಿಂದ ಬೆಳಗಾವಿಗೆ ಎರಡು ಆನೆಗಳು ಆಗಮಿಸಿದ್ದು, ಜಿಲ್ಲೆಯ ಗಾಲ್ಫ್ ಮೈದಾನದಲ್ಲಿ ಆನೆಗಳು ಬಿಡು ಬಿಟ್ಟಿವೆ. ಸಕ್ರೆಬೈಲ್​ನಿಂದ ಆಲೇ, ಅರ್ಜುನ ಎಂಬ ಆನೆಗಳು ಆಗಮಿಸಿದ್ದು, ಮಧ್ಯರಾತ್ರಿ ಎರಡು ಗಂಟೆಗೆ ಆಗಮನ ಹಿನ್ನೆಲೆ ಸದ್ಯ ಆನೆಗಳು ವಿಶ್ರಾಂತಿ ಪಡೆಯುತ್ತಿವೆ. ಬೆಳಗ್ಗೆ ಹತ್ತು ಗಂಟೆಯಿಂದ ಆನೆಗಳಿಂದ ಚಿರತೆ ಶೋಧಕಾರ್ಯ ಆರಂಭವಾಗಲಿದೆ. ಮೂರು ದಿನಗಳಿಂದ ಗಾಲ್ಫ್ ಮೈದಾನದಲ್ಲಿ ಚಿರತೆ ನಾಪತ್ತೆಯಾಗಿದೆ.

ಶಾಸಕ ಅನಿಲ್​ ಬೆನಕೆ ಭೇಟಿ:

ಗಾಲ್ಫ್ ಮೈದಾನಕ್ಕೆ ಶಾಸಕ ಅನಿಲ್​ ಬೆನಕೆ ಭೇಟಿ ನೀಡಿ ಪರಿಶೀಲಿಸಿದರು. ಈ ವೇಳೆ ಅರಣ್ಯ ಇಲಾಖೆ ಸಿಬ್ಬಂದಿ, ಪೊಲೀಸರೊಂದಿಗೆ ಚರ್ಚಿಸಿ ಅಗತ್ಯ ಮಾಹಿತಿ ಪಡೆದುಕೊಂಡರು. ನಿನ್ನೆಯೂ ಕಾರ್ಯಾಚರಣೆ ಮುಗಿಯುವವರೆಗೂ ಶಾಸಕರು ಸ್ಥಳದಲ್ಲಿಯೇ ಬಿಡುಬಿಟ್ಟಿದ್ದರು. ಕಾರ್ಯಾಚರಣೆ ಸ್ಥಳಕ್ಕೆ ಡಿಸಿಪಿ ರವೀಂದ್ರ ಗಡಾದಿ ಭೇಟಿ ನೀಡಿ ಪರಿಶೀಲಿಸಿದರು. ಚಿರತೆ ಪತ್ತೆಗಾಗಿ ಬೆಂಗಳೂರಿನಿಂದ ವಿಶೇಷ ತಂತ್ರಜ್ಞಾನದ ಡ್ರೋನ್ ತರಲಾಗಿದೆ. ಗಾಲ್ಫ್ ಮೈದಾನದ ಸಿಬ್ಬಂದಿ ಗಸ್ತು ತಿರುಗುತ್ತಿಇದ್ದಅರೆ. ಇಂದು ಚಿರತೆ ಹಿಡಿಯಲು ಪ್ರಯತ್ನ ಮಾಡುತ್ತೇವೆ ಎಂದು ಹೇಳಿದರು.

ಆಲ್ಗೊರಿದಮ್ ಡ್ರೋಣ್ ಬಳಕೆ

ಗಾಲ್ಫ್ ಮೈದಾನದಲ್ಲಿ ಅಡಗಿರುವ ಚಿರತೆಯ ಶೋಧ ಕಾರ್ಯಕ್ಕಾಗಿ ಅಲ್ಗೋರಿದಮ್ ತಂತ್ರಜ್ಞಾನದ ಡ್ರೋಣ್ ಬಳಸಲಾಗುತ್ತಿದೆ. ಬೆಂಗಳೂರಿನಿಂದ ಆಗಮಿಸಿರುವ ವಿಶೇಷ ತಂಡವು ಕಾರ್ಯಾಚರಣೆಗೆ ಮುಂದಾಗಿದೆ. ಈ ಡ್ರೋಣ್ ಗಾಲ್ಫ್ ಮೈದಾನದ 250 ಎಕರೆ ಪ್ರದೇಶವನ್ನು ಇಡಿಯಾಗಿ ಸ್ಕ್ಯಾನ್ ಮಾಡಲಿದೆ. ಪ್ರಾಣಿಗಳ ಎಲುಬುಗಳನ್ನು ಪತ್ತೆಹಚ್ಚುವ ಸಾಮರ್ಥ್ಯ ಈ ಡ್ರೋಣ್​ಗೆ ಇದೆ. ಎಲುಬು ಪತ್ತೆಯಾದ ನಂತರ ಅದರ ಆಧಾರದ ಮೇಲೆ ಚಿರತೆ ಸೆರೆಗೆ ಕಾರ್ಯಾಚರಣೆ ಜರವೀಜ್ ನೇತೃತ್ವದ ತಂಡದಿಂದ ಕಾರ್ಯಾಚರಣೆ ನಡೆಯಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:50 am, Wed, 24 August 22

Follow Us
TV9 Web
TV9 Web

TV9 Kannada

Read More
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ
ಟಾಸ್ಕ್​ ವಿಷಯಕ್ಕೆ ತಮ್ಮ ತಂಡದ ವೈರತ್ವ ಕಟ್ಟಿಕೊಂಡ ಗಾನವಿ; ಸುಸ್ತು?
ಟಾಸ್ಕ್​ ವಿಷಯಕ್ಕೆ ತಮ್ಮ ತಂಡದ ವೈರತ್ವ ಕಟ್ಟಿಕೊಂಡ ಗಾನವಿ; ಸುಸ್ತು?
ಬೆಂಗಳೂರಿನಲ್ಲಿ ಭಾರಿ ಮಳೆ, ಕೆಆರ್ ಮಾರುಕಟ್ಟೆಯಲ್ಲಿ ಭಾರಿ ಅವಾಂತರ
ಬೆಂಗಳೂರಿನಲ್ಲಿ ಭಾರಿ ಮಳೆ, ಕೆಆರ್ ಮಾರುಕಟ್ಟೆಯಲ್ಲಿ ಭಾರಿ ಅವಾಂತರ
ಮಳೆಗೆ ಕೆಸರು ಗದ್ದೆಯಂತಾದ ಶಿಡ್ಲಘಟ್ಟದ ರಸ್ತೆ: ಜನರ ಪರದಾಟ
ಮಳೆಗೆ ಕೆಸರು ಗದ್ದೆಯಂತಾದ ಶಿಡ್ಲಘಟ್ಟದ ರಸ್ತೆ: ಜನರ ಪರದಾಟ