ಬೆಳಗಾವಿಯ ಕ್ಯಾಂಪ್ ಪ್ರದೇಶದಲ್ಲಿ ಚಿರತೆ ಪ್ರತ್ಯಕ್ಷ: ನಗರದ 22 ಸರ್ಕಾರಿ, ಖಾಸಗಿ ಶಾಲೆಗಳಿಗೆ ಇಂದು ರಜೆ ಘೋಷಣೆ

| Updated By: ಗಂಗಾಧರ​ ಬ. ಸಾಬೋಜಿ

Updated on: Aug 22, 2022 | 9:36 AM

ಚಿರತೆ ಪ್ರತ್ಯಕ್ಷ ಹಿನ್ನೆಲೆ ಬೆಳಗಾವಿ ನಗರ ಮತ್ತು ಗ್ರಾಮೀಣ ವಲಯ ವ್ಯಾಪ್ತಿಯಲ್ಲಿನ 22 ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಿ, ಶಿಕ್ಷಣ ಇಲಾಖೆಯ ಉಪನಿರ್ದೇಶಕ ಬಸವರಾಜ ನಾಲತವಾಡ ಆದೇಶ ಹೊರಡಿಸಿದ್ದಾರೆ.

ಬೆಳಗಾವಿಯ ಕ್ಯಾಂಪ್ ಪ್ರದೇಶದಲ್ಲಿ ಚಿರತೆ ಪ್ರತ್ಯಕ್ಷ: ನಗರದ 22 ಸರ್ಕಾರಿ, ಖಾಸಗಿ ಶಾಲೆಗಳಿಗೆ ಇಂದು ರಜೆ ಘೋಷಣೆ
ಬೆಳಗಾವಿಯ ಕ್ಯಾಂಪ್ ಪ್ರದೇಶದಲ್ಲಿ ಚಿರತೆ ಪ್ರತ್ಯಕ್ಷ
Follow us on

ಬೆಳಗಾವಿ: ಜಿಲ್ಲೆಯ ಕ್ಯಾಂಪ್ ಪ್ರದೇಶದಲ್ಲಿ ಚಿರತೆ (Leopard) ಪ್ರತ್ಯಕ್ಷ ಹಿನ್ನೆಲೆ ಬೆಳಗಾವಿ ನಗರ ಮತ್ತು ಗ್ರಾಮೀಣ ವಲಯ ವ್ಯಾಪ್ತಿಯಲ್ಲಿನ 22 ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಿ, ಶಿಕ್ಷಣ ಇಲಾಖೆಯ ಉಪನಿರ್ದೇಶಕ ಬಸವರಾಜ ನಾಲತವಾಡ ಆದೇಶ ಹೊರಡಿಸಿದ್ದಾರೆ. ಇಂದು ಹಿಂಡಲಗಾ ರಸ್ತೆಯ ಖಾಸಗಿ ಶಾಲೆಯ ಪಕ್ಕದಲ್ಲೇ ಚಿರತೆ ಕಣ್ಮರೆಯಾಗಿದೆ. ನಗರದ ಗಾಲ್ಫ್ ಮೈದಾನದ ಪಕ್ಕದಲ್ಲೇ ಇರುವ ಹಿಂಡಲಗಾ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷವಾಗಿದ್ದು, ಖಾಸಗಿ ಬಸ್ ಚಾಲಕರೊಬ್ಬರ ಮೊಬೈಲ್‌ನಲ್ಲಿ ಚಿರತೆ ಚಲನವಲನ ಸೆರೆಯಾಗಿದ್ದು, ಸದ್ಯ ವಿಡಿಯೋ ವೈರಲ್ ಆಗಿದೆ. ಖಾಸಗಿ ಶಾಲೆಯ ಕೂಗಳತೆ ದೂರದಲ್ಲೇ ಮತ್ತೆ ಚಿರತೆ ಪ್ರತ್ಯಕ್ಷವಾಗಿದ್ದು, ಚಿರತೆ ಪ್ರತ್ಯಕ್ಷ ಹಿನ್ನೆಲೆ ವಿದ್ಯಾರ್ಥಿಗಳು, ಸ್ಥಳೀಯರಲ್ಲಿ ಆತಂಕ ಉಂಟಾಗಿದೆ.

ಇದನ್ನೂ ಓದಿ: Chamarajpet Ganeshotsav: ಯಾರಿಗೆ ಸಿಗುತ್ತೆ ವಿನಾಯಕ ಪ್ರತಿಷ್ಠಾಪನೆಗೆ ಅವಕಾಶ, ಒಕ್ಕೂಟ-ಸಮಿತಿ ನಡುವೆ ಹಗ್ಗಜಗ್ಗಾಟ

ವೈರಲ್ ಆದ ವಿಡಿಯೋವನ್ನು ಅರಣ್ಯ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ದೌಡಾಯಿಸಿದ್ದಾರೆ. ಆಗಸ್ಟ್ 5ರಂದು ಜಾಧವ್ ನಗರದಲ್ಲಿ ಕಟ್ಟಡ ಕಾರ್ಮಿಕನ ಮೇಲೆ ಚಿರತೆ ದಾಳಿ ಮಾಡಿತ್ತು. ಆಗಸ್ಟ್ 7, 8ರಂದು ಗಾಲ್ಫ್ ಮೈದಾನದ ಟ್ರ್ಯಾಪ್ ಕ್ಯಾಮರಾದಲ್ಲಿ ಸೆರೆಯಾಗಿತ್ತು. ಕಳೆದ 18 ದಿನಗಳಿಂದ ಚಿರತೆ ಸೆರೆಗೆ ಶೋಧಕಾರ್ಯ ಮುಂದುವರೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 9:11 am, Mon, 22 August 22