ಅತಿ ಶೀಘ್ರದಲ್ಲೇ ಗೋಕಾಕ ಪ್ರತ್ಯೇಕ ಜಿಲ್ಲೆ ಮಾಡೋಣ: ರಮೇಶ್ ಜಾರಕಿಹೊಳಿ
ಅತಿ ಶೀಘ್ರದಲ್ಲೇ ಗೋಕಾಕ್ ಪ್ರತ್ಯೇಕ ಜಿಲ್ಲೆ ಮಾಡೋಣ ಎಂದು ಗೋಕಾಕ್‌ನಲ್ಲಿ ಸಚಿವ ರಮೇಶ್ ಜಾರಕಿಹೊಳಿ ಹೇಳಿಕೆ ನೀಡಿದ್ದಾರೆ.

ಬೆಳಗಾವಿ: ಜಿಲ್ಲೆ ವಿಭಜಿಸಿ ಗೋಕಾಕ, ಚಿಕ್ಕೋಡಿ ಪ್ರತ್ಯೇಕ ಜಿಲ್ಲೆ ರಚನೆ ವಿಚಾರಕ್ಕೆ ಸಂಬಂಧಿಸಿ ಅತಿ ಶೀಘ್ರದಲ್ಲೇ ಗೋಕಾಕ್ ಪ್ರತ್ಯೇಕ ಜಿಲ್ಲೆ ಮಾಡೋಣ ಎಂದು ಗೋಕಾಕ್‌ನಲ್ಲಿ ಸಚಿವ ರಮೇಶ್ ಜಾರಕಿಹೊಳಿ ಹೇಳಿಕೆ ನೀಡಿದ್ದಾರೆ.
ಗೋಕಾಕ್ ಪ್ರತ್ಯೇಕ ಜಿಲ್ಲೆ ಮಾಡುವಂತೆ ಗೋಕಾಕ್ನ ಶೂನ್ಯ ಸಂಪಾದನ ಮಠದ ಮುರುಘರಾಜೇಂದ್ರ ಸ್ವಾಮೀಜಿ ನೇತೃತ್ವದಲ್ಲಿ ಸಚಿವ ರಮೇಶ್ ಜಾರಕಿಹೊಳಿ ಗೃಹ ಕಚೇರಿಗೆ ಭೇಟಿಯಾಗಿ ಮನವಿ ಸಲ್ಲಿಸಿದ್ರು. ಈ ವೇಳೆ ಮಾತನಾಡಿದ ಸಚಿವರು, ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಗೋಕಾಕ-ಚಿಕ್ಕೋಡಿ ಜಿಲ್ಲೆ ರಚನೆಗೆ ನಿರ್ಣಯಿಸಲಾಗಿತ್ತು. ಬೈಲಹೊಂಗಲದವರು ನಮಗೂ ಪ್ರತ್ಯೇಕ ಜಿಲ್ಲೆ ಕೊಡಿ ಅಂತ ಕೇಳಿದ್ರು. ಆಗ ಪ್ರತ್ಯೇಕ ಜಿಲ್ಲೆಯ ವಿಚಾರ ಅಷ್ಟಕ್ಕೆ ನಿಂತಿತು. ಸುಳ್ಳು ಹೇಳುವುದಕ್ಕೆ ನನಗೆ ಬರೋದಿಲ್ಲ ಎಂದು ಹೇಳಿದರು.
ಬಳ್ಳಾರಿ ಜಿಲ್ಲೆ ವಿಭಜನೆ ಏಕೆ ಆಯ್ತು ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಬಳ್ಳಾರಿ ಜಿಲ್ಲೆ ವಿಭಜನೆಯಾಗಿದ್ದು ಹೇಗೆ ಅಂತ ಬಹಿರಂಗವಾಗಿ ಹೇಳಲು ಬರಲ್ಲಾ. ಬಜೆಟ್ ಬಳಿಕ ನಿಯೋಗದಿಂದ ಸಿಎಂ ಭೇಟಿ ಮಾಡೋಣ. ಅತಿ ಶೀಘ್ರದಲ್ಲೇ ಗೋಕಾಕ್ ಪ್ರತ್ಯೇಕ ಜಿಲ್ಲೆ ಮಾಡೋಣ ಎಂದು ಹೇಳಿದ್ರು.
ಮುಂದಿನ ಬಾರಿ ಲಕ್ಷ್ಮೀ ಹೆಬ್ಬಾಳ್ಕರ್ಗೆ ಮತ ಹಾಕಿದರೆ ಶಾಸಕಿಗೆ ಮಾಲೆ ಹಾಕೋಣ: ಸಚಿವ ರಮೇಶ್ ಜಾರಕಿಹೊಳಿ