AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ ಪಂಚಮಸಾಲಿ ಮೀಸಲಾತಿ ಹೋರಾಟ: ಐವರ ವಿರುದ್ಧ ಎಫ್​​ಐಆರ್​

ಬೆಳಗಾವಿಯಲ್ಲಿ 2ಎ ಮೀಸಲಾತಿ ಆಗ್ರಹಿಸಿ ನಡೆದ ಲಿಂಗಾಯತ ಪಂಚಮಸಾಲಿ ಸಮುದಾಯದ ಪ್ರತಿಭಟನೆ ತೀರ್ವ ಸ್ವರೂಪ ಪಡೆದುಕೊಂಡಿತ್ತು. ಪ್ರತಿಭಟನೆ ವೇಳೆ ನಡೆದ ಕಲ್ಲು ತೂರಾಟದಲ್ಲಿ ಪೊಲೀಸ್ ಇನ್ಸ್‌ಪೆಕ್ಟರ್ ಸೇರಿದಂತೆ 17 ಜನರಿಗೆ ಗಾಯಗಳಾಗಿದ್ದವು. ಸರ್ಕಾರಿ ಮತ್ತು ಪೊಲೀಸ್ ವಾಹನಗಳು ಜಖಂಗೊಂಡಿದ್ದವು. ಕಲ್ಲು ತೂರಿದವರ ಮೇಲೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಬೆಳಗಾವಿ ಪಂಚಮಸಾಲಿ ಮೀಸಲಾತಿ ಹೋರಾಟ: ಐವರ ವಿರುದ್ಧ ಎಫ್​​ಐಆರ್​
ಪಂಚಮಸಾಲಿ ಹೋರಾಟ
Follow us
Sahadev Mane
| Updated By: ವಿವೇಕ ಬಿರಾದಾರ

Updated on:Dec 11, 2024 | 10:27 AM

ಬೆಳಗಾವಿ, ಡಿಸೆಂಬರ್​ 11: 2ಎ ಮೀಸಲಾತಿಗೆ ಆಗ್ರಹಿಸಿ ಲಿಂಗಾಯತ ಪಂಮಸಾಲಿ (Lingayat Panchamasali) ಸಮುದಾಯದವರು ಬೆಳಗಾವಿಯಲ್ಲಿ (Belagavi) ಬುಧವಾರ ನಡೆಸಿದ ಹೋರಾಟ ನಗರವನ್ನು ರಣರಂಗವಾಗಿಸಿತ್ತು. ಪಂಚಮಸಾಲಿ ಸಮುದಾಯದ ಹೋರಾಟದ ವೇಳೆ ನಡೆದ ಕಲ್ಲು ತೂರಾಟದಲ್ಲಿ ಪೊಲೀಸ್ ಇನ್ಸ್‌ಪೆಕ್ಟರ್ ಸೇರಿದಂತೆ 17 ಜನರಿಗೆ ಗಾಯವಾಗಿತ್ತು. ಹಾಗೇ ಏಳು ಸರ್ಕಾರಿ ಬಸ್, ಮೂರು ಪೊಲೀಸ್ ವಾಹನ ಜಖಂಗೊಂಡ ಹಿನ್ನೆಲೆಯಲ್ಲಿ ಹಿರೇಬಾಗೇವಾಡಿ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕಲ್ಲು ಎಸೆದ ನಿಂಗಪ್ಪ ಬಣದ್, ರಾಮಗೌಡ ಫಕೀರಗೌಡ, ಉಮೇಶ್ ಇಂಗಳೆವಾರ್, ಮಂಜುನಾಥ್ ಬೆಂಡಿಗೇರಿ, ಮಂಜುನಾಥ್ ಗುಮ್ಮಗೋಳ ಹಾಗೂ ಇತರರ ಮೇಲೆ ಎಫ್​ಐಆರ್​ ದಾಖಲಾಗಿದೆ. ಆರೋಪಿತರು ಕರ್ತವ್ಯಕ್ಕೆ ಅಡ್ಡಿಪಡಿಸಿ ಹಲ್ಲೆ ಮಾಡಿ ಗಂಭೀರ ಗಾಯಗೊಳಿಸಿದ್ದಾರೆ. ಅಲ್ಲದೇ ಕೊಲೆ ಮಾಡಲು ಯತ್ನಸಿದ್ದಾರೆ. ಹಾಗೂ ಸಾರ್ವಜನಿಕ ಆಸ್ತಿ-ಪಾಸ್ತಿ ಹಾನಿ ಮಾಡಿದ್ದಾರೆ ಎಂದು ಬಿಎನ್‌ಎಸ್ ಕಲಂ 115(2), 109(1), 118(2), 117(2), 352, 351(2), 132, 121, 223, 324,189, 189(3), 191(2), 190 ಅಡಿ ಕೇಸ್ ಪಿಐ ಆರ್.ಆರ್ ಪಾಟೀಲ್ ಅವರು ಕೇಸ್ ದಾಖಲಿಸಿಕೊಂಡಿದ್ದಾರೆ.

ಸುರ್ವಣಸೌಧಕ್ಕೆ ಮುತ್ತಿಗೆಗೆ ಯತ್ನ

2ಎ ಮೀಸಲಾತಿ ಆಗ್ರಹಿಸಿ ಕೂಡಲಸಂಗಮದ ಬಸವಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಸುಮಾರು ವರ್ಷಗಳಿಂದ ಪ್ರತಿಭಟನೆ ನಡೆಯುತ್ತಿದೆ. ಸೋಮವಾರದಿಂದ ಬೆಳಗಾವಿಯಲ್ಲಿ ವಿಧಾನಮಂಡಲ ಅಧಿವೇಶನ ಆರಂಭವಾಗಿದ್ದು, ಮೀಸಲಾತಿ ಆಗ್ರಹಿಸಿ ಸ್ವಾಮೀಜಿ ನೇತೃತ್ವದಲ್ಲಿ ಪಂಚಮಸಾಲಿ ಹೋರಾಟಗಾರರು ಸೌಧದ ಎದುರು ಪ್ರತಿಭಟನೆ ನಡೆಸಿದರು.

ಈ ಪ್ರತಿಭಟನೆಯಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್​, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಭಾಗವಹಿಸಿದ್ದರು. ಹೋರಾಟಗಾರರು ಮಂಗಳವಾರ ಟ್ರ್ಯಾಕ್ಟರ್​ ಮೂಲಕ ಸುವರ್ಣಸೌಧ ಮುತ್ತಿಗೆ ಹಾಕಲು ನಿರ್ಧರಿಸಿದ್ದರು. ಆದರೆ, ಜಿಲ್ಲಾಧಿಕಾರಿಯವ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಟ್ರ್ಯಾಕ್ಟರ್ ​ರ್ಯಾಲಿ ಕೈಬಿಡಲಾಯಿತು.

ಇದನ್ನೂ ಓದಿ: ಪಂಚಮಸಾಲಿ ಹೋರಾಟಗಾರರ ಮೇಲೆ ಲಾಠಿಚಾರ್ಜ್​: ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ

ಆದರೆ, ಮಂಗಳವಾರ ಪಂಚಮಸಾಲಿ ಹೋರಾಟಗಾರರು ನಾವು ಮುಖ್ಯಮಂತ್ರಿಗಳಿಗೆ ಮನವಿ ಪತ್ರ ನೀಡುತ್ತೇವೆ ಎಂದು ಸುವರ್ಣಸೌಧದತ್ತ ನಡೆದರು. ಆದರೆ, ಸುವರ್ಣಸೌಧದ ಹತ್ತಿರ ಪ್ರತಿಭಟನಾಕಾರರು ಬರದಂತೆ ಪೊಲೀಸರು ಬ್ಯಾರಿಗೇಟ್​ ಹಾಕಿದ್ದರು. ಆದರೆ, ಹೋರಾಟಗಾರರು ಬ್ಯಾರಿಗೇಟ್​ ದಾಟಿ ಒಳ ನುಗ್ಗಲು ಯತ್ನಿಸಿದರು. ಪರಿಸ್ಥಿತಿ ಕೈಮೀರಿತು. ಆಗ, ಪೊಲೀಸರು ಲಾಠಿ ಚಾರ್ಜ್​ ಮಾಡಿದರು. ಈ ವೇಳೆ ಹೋರಾಟಗಾರರು ಕಲ್ಲು ತೂರಿದರು.

ಇದರಿಂದ ಪೊಲೀಸರಿಗೆ ಗಾಯವಾಯ್ತು. ಮತ್ತು ಸಾರ್ವಜನಿಕ ಬಸ್​ ಮತ್ತು ಪೊಲೀಸ್​ ವಾಹನಗಳು ಜಖಂಗೊಂಡವು. ಈ ಹಿನ್ನೆಲೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:14 am, Wed, 11 December 24

ಕ್ಯಾಬಿನೆಟ್​ಗೆ ಕಮ್ಯೂನಲ್ ವೈರಸ್ ಮೆತ್ತಿಕೊಂಡಿದೆ, ಚಿಕಿತ್ಸೆ ಬೇಕು: ರವಿ
ಕ್ಯಾಬಿನೆಟ್​ಗೆ ಕಮ್ಯೂನಲ್ ವೈರಸ್ ಮೆತ್ತಿಕೊಂಡಿದೆ, ಚಿಕಿತ್ಸೆ ಬೇಕು: ರವಿ
ಕರ್ನಾಟಕದಲ್ಲಿ ಇನ್ನೂ 3 ದಿನ ಭಾರೀ ಮಳೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​
ಕರ್ನಾಟಕದಲ್ಲಿ ಇನ್ನೂ 3 ದಿನ ಭಾರೀ ಮಳೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​
ನಾಳೆಯೇ ಚುನಾವಣೆ ಘೋಷಿಸಿ; ಮೋದಿಗೆ ಮಮತಾ ಬ್ಯಾನರ್ಜಿ ಬಹಿರಂಗ ಸವಾಲು
ನಾಳೆಯೇ ಚುನಾವಣೆ ಘೋಷಿಸಿ; ಮೋದಿಗೆ ಮಮತಾ ಬ್ಯಾನರ್ಜಿ ಬಹಿರಂಗ ಸವಾಲು
ಕಮಲ್ ಹಾಸನ್ ಕ್ಷಮೆ ಕೇಳಿದ್ರೆ ಮಾತ್ರ ಸಿನಿಮಾ ಬಿಡುಗಡೆ: ಸಾ.ರಾ. ಗೋವಿಂದು
ಕಮಲ್ ಹಾಸನ್ ಕ್ಷಮೆ ಕೇಳಿದ್ರೆ ಮಾತ್ರ ಸಿನಿಮಾ ಬಿಡುಗಡೆ: ಸಾ.ರಾ. ಗೋವಿಂದು
ಬಂಟ್ವಾಳ್ ರಹಿಮಾನ್ ಹತ್ಯೆ: ರಣಾಂಗಣವಾದ ಮುಸ್ಲಿಂ ಮುಖಂಡರ ಸಭೆ
ಬಂಟ್ವಾಳ್ ರಹಿಮಾನ್ ಹತ್ಯೆ: ರಣಾಂಗಣವಾದ ಮುಸ್ಲಿಂ ಮುಖಂಡರ ಸಭೆ
ದಲಿತರ ಮಾರಣವಾಗುತ್ತಿದ್ದರೂ ದಲಿತ ನಾಯಕರು ಸುಮ್ಮನಿದ್ದಾರೆ: ಚಲವಾದಿ
ದಲಿತರ ಮಾರಣವಾಗುತ್ತಿದ್ದರೂ ದಲಿತ ನಾಯಕರು ಸುಮ್ಮನಿದ್ದಾರೆ: ಚಲವಾದಿ
ತಳಿರು ತೋರಣ ಮತ್ತು ರಂಗೋಲಿಯಿಂದ ಅಲಂಕೃತಗೊಂಡ ಶಾಲೆ ನೋಡಿ ಮಕ್ಕಳು ಖುಷ್
ತಳಿರು ತೋರಣ ಮತ್ತು ರಂಗೋಲಿಯಿಂದ ಅಲಂಕೃತಗೊಂಡ ಶಾಲೆ ನೋಡಿ ಮಕ್ಕಳು ಖುಷ್
ಪಾಕಿಸ್ತಾನಕ್ಕೆ ಇನ್ನೂ ಹೆಚ್ಚಿನದನ್ನೇ ಮಾಡುವ ತಾಕತ್ತು ನಮಗಿತ್ತು
ಪಾಕಿಸ್ತಾನಕ್ಕೆ ಇನ್ನೂ ಹೆಚ್ಚಿನದನ್ನೇ ಮಾಡುವ ತಾಕತ್ತು ನಮಗಿತ್ತು
ಹೆಸರು ಬದಲಾವಣೆಯಿಂದ ಜನಕ್ಕೆ ಅನುಕೂಲವಾಗೋದಾದರೆ ಸಂತೋಷ: ಯೋಗೇಶ್ವರ್
ಹೆಸರು ಬದಲಾವಣೆಯಿಂದ ಜನಕ್ಕೆ ಅನುಕೂಲವಾಗೋದಾದರೆ ಸಂತೋಷ: ಯೋಗೇಶ್ವರ್
ಕರಾಚಿ ಏರ್​​ಪೋರ್ಟ್​ನಲ್ಲಿ ತೊಳ್ಕೊಳೋಕೂ ನೀರಿಲ್ವಂತೆ, ನಟಿ ಹೇಳಿದ್ದೇನು?
ಕರಾಚಿ ಏರ್​​ಪೋರ್ಟ್​ನಲ್ಲಿ ತೊಳ್ಕೊಳೋಕೂ ನೀರಿಲ್ವಂತೆ, ನಟಿ ಹೇಳಿದ್ದೇನು?