ವಿವಾದಾತ್ಮಕ ಹೇಳಿಕೆ; ಕಾಂಗ್ರೆಸ್ ಶಾಸಕ ರಾಜು ಕಾಗೆಗೆ ನೋಟಿಸ್ ನೀಡಿದ ಚುನಾವಣಾ ಅಧಿಕಾರಿಗಳು

| Updated By: ಕಿರಣ್ ಹನುಮಂತ್​ ಮಾದಾರ್

Updated on: May 01, 2024 | 10:05 PM

ಲೋಕಸಭಾ ಚುನಾವಣಾ ಕಾವು ಜೋರಾಗಿದ್ದು, ಈಗಾಗಲೇ ರಾಜ್ಯದಲ್ಲಿ ಮೊದಲ ಹಂತದ ಮತದಾನ ಮುಗಿದಿದೆ. ಇನ್ನುಳಿದಂತೆ ಮೇ.07 ರಂದು ಎರಡನೇ ಹಂತದ ಮತದಾನ ನಡೆಯಲಿದೆ. ಉಭಯ ಪಕ್ಷಗಳು ಅಬ್ಬರದ ಪ್ರಚಾರ ನಡೆಸುತ್ತಿದ್ದು, ಈ ವೇಳೆ ಆರೋಪ-ಪ್ರತ್ಯಾರೋಪಗಳ ಸುರಿಮಳೆಗೈಯುತ್ತಿದ್ದಾರೆ. ಅದರಂತೆ ವಿವಾದಾತ್ಮಕ ಹೇಳಿಕೆ ಹಿನ್ನಲೆ ಕಾಗವಾಡ ಕಾಂಗ್ರೆಸ್ ಶಾಸಕ ರಾಜು ಕಾಗೆಗೆ ಚುನಾವಣಾ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ.

ವಿವಾದಾತ್ಮಕ ಹೇಳಿಕೆ; ಕಾಂಗ್ರೆಸ್ ಶಾಸಕ ರಾಜು ಕಾಗೆಗೆ ನೋಟಿಸ್ ನೀಡಿದ ಚುನಾವಣಾ ಅಧಿಕಾರಿಗಳು
ರಾಜು ಕಾಗೆ
Follow us on

ಬೆಳಗಾವಿ, ಮೇ.01: ವಿವಾದಾತ್ಮಕ ಹೇಳಿಕೆ ಹಿನ್ನಲೆ ಕಾಗವಾಡ ಕಾಂಗ್ರೆಸ್ ಶಾಸಕ ರಾಜು ಕಾಗೆ(Raju Kage)ಗೆ ಚುನಾವಣಾ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ. ನಿನ್ನೆ(ಏ.30) ಪ್ರಿಯಾಂಕಾ ಜಾರಕಿಹೊಳಿ‌ ಪರ ಮತಯಾಚನೆ ವೇಳೆ ಭಾಷಣ ಮಾಡಿದ್ದ ರಾಜು ಕಾಗೆ. ಜುಗುಳ ಮತ್ತು ಮಂಗಾವತಿ ಗ್ರಾಮಗಳಲ್ಲಿ ಕಡಿಮೆ ಲೀಡ್ ಕೊಟ್ಟಲ್ಲಿ ಕರೆಂಟ ಕಟ್ ಎಂದು ಹೇಳಿದ್ದರು. ಈ ಹಿನ್ನಲೆ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಗೆ ಸಂಬಂಧಿಸಿದಂತೆ ಕಾಗವಾಡ ವಿಧಾನಸಭಾ ಮತಕ್ಷೇತ್ರದ ಸಹಾಯಕ ಚುನಾವಣಾಧಿಕಾರಿಗಳು ನೋಟಿಸ್ ನೀಡಿದ್ದು, 24 ಗಂಟೆಯೊಳಗಾಗಿ ವಿವರಣೆ ನೀಡುವಂತೆ ಸೂಚಿಸಲಾಗಿದೆ. ಈ ಕುರಿತು ಚಿಕ್ಕೋಡಿ ಲೋಕಸಭಾ ಮತಕ್ಷೇತ್ರದ ಚುನಾವಣಾಧಿಕಾರಿ ರಾಹುಲ್ ಶಿಂಧೆ ತಿಳಿಸಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ ವಿವಾದಾತ್ಮಕ ಹೇಳಿಕೆ

ಇನ್ನು ಇಂದು(ಮೇ.01) ಛತ್ತೀಸ್​ಗಢದಲ್ಲಿ ಚುನಾವಣಾ ಪ್ರಚಾರ ಕಾರ್ಯದಲ್ಲಿ ತೊಡಗಿದ್ದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ತಮ್ಮ ಹೇಳಿಕೆಯಿಂದ ವಿವಾದವನ್ನು ಹುಟ್ಟುಹಾಕಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಶಿವಕುಮಾರ್ ದಹರಿಯಾ ಅವರನ್ನು ಬೆಂಬಲಿಸಿ ಸಭೆಯನ್ನು ಉದ್ದೇಶಿಸಿ ಮಾತನಾಡುವಾಗ ಅವರ ಹೆಸರನ್ನೇ ಮರೆತ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಶಿವಕುಮಾರ್ ತಮ್ಮ ಹೆಸರನ್ನು ಎರಡೆರಡು ಬಾರಿ ನೆನಪಿಸಿದರು. ಈ ವೇಳೆ ಶಿವಕುಮಾರ್ ದಹರಿಯಾ ಅವರನ್ನು ಶಿವನಿಗೆ ಹೋಲಿಸಿದ ಖರ್ಗೆ, ಶಿವನು ರಾಮನ ಸಮಾನವಾಗಿ ಸ್ಪರ್ಧಿಸಬಹುದು, ಅವರಿಗೆ ಕಠಿಣ ಸ್ಪರ್ಧೆಯೊಡ್ಡಬಹುದು ಎಂದರು.

ಇದನ್ನೂ ಓದಿ:Mallikarjun Kharge: ಶಿವ ವರ್ಸಸ್ ರಾಮ; ಚುನಾವಣೆ ಪ್ರಚಾರದಲ್ಲಿ ಮಲ್ಲಿಕಾರ್ಜುನ ಖರ್ಗೆ ವಿವಾದಾತ್ಮಕ ಹೇಳಿಕೆ 

ನನ್ನ ಹೆಸರು ಮಲ್ಲಿಕಾರ್ಜುನ ಎಂದರೂ ಶಿವ ಎಂದೇ ಅರ್ಥ. ಆಂಧ್ರಪ್ರದೇಶದ ಶ್ರೀಶೈಲದಲ್ಲಿ ಮಲ್ಲಿಕಾರ್ಜುನ ಎಂಬ ಜ್ಯೋತಿರ್ಲಿಂಗವೂ ಇದೆ. ಶಿವನು ರಾಮ (ಬಿಜೆಪಿ)ನ ಸಮಾನವಾಗಿ ಸ್ಪರ್ಧೆ ಮಾಡಬಹುದು ಎನ್ನುವ ಮೂಲಕ ರಾಮ ಹಾಗೂ ಶಿವನ ನಡುವೆ ಸಂಬಂಧ ಸೃಷ್ಟಿಸಿ ಮಲ್ಲಿಕಾರ್ಜುನ ಖರ್ಗೆ ವಿವಾದವೊಂದನ್ನ ಮೇಲೆ ಎರೆದುಕೊಂಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:53 pm, Wed, 1 May 24