AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೋಕಸಭಾ ಚುನಾವಣೆ 2024: ಪಕ್ಷದ ಸಾಮಾನ್ಯ ಕಾರ್ಯಕರ್ತನಿಗೆ ಬೆಳಗಾವಿ ಟಿಕೆಟ್; ಸತೀಶ್ ಜಾರಕಿಹೊಳಿ

ನಾವು ಸಾಮಾನ್ಯ ಕಾರ್ಯಕರ್ತನನ್ನು ಕಣಕ್ಕಿಳಿಸಿ ಚುನಾವಣೆ ಎದುರಿಸುತ್ತೇವೆ. ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ನನ್ನನ್ನು ಕಣಕ್ಕಿಳಿಸಲು ಹೈಕಮಾಂಡ್​​ ಮಟ್ಟದಲ್ಲಿ ಚರ್ಚೆಗಳು ನಡೆದಿರುವುದು ನಿಜ. ಆದರೆ ನನಗೆ ಆಸಕ್ತಿಯಿಲ್ಲ. ಬೆಳಗಾವಿ ಮತ್ತು ಚಿಕ್ಕೋಡಿ ಎರಡು ಸ್ಥಾನಗಳಲ್ಲಿ ಹಲವಾರು ಆಕಾಂಕ್ಷಿಗಳಿದ್ದು, ಹೆಚ್ಚು ಜನಪ್ರಿಯತೆ ಗಳಿಸಿರುವ ಇಬ್ಬರು ಉತ್ತಮ ಅಭ್ಯರ್ಥಿಗಳನ್ನು ಪಕ್ಷದ ಸ್ಥಳೀಯ ಘಟಕ ಆಯ್ಕೆ ಮಾಡುತ್ತದೆ ಎಂದು ಸಚಿವ ಸತೀಶ್​ ಜಾರಕಿಹೊಳಿ ಹೇಳಿದರು.

ಲೋಕಸಭಾ ಚುನಾವಣೆ 2024: ಪಕ್ಷದ ಸಾಮಾನ್ಯ ಕಾರ್ಯಕರ್ತನಿಗೆ ಬೆಳಗಾವಿ ಟಿಕೆಟ್; ಸತೀಶ್ ಜಾರಕಿಹೊಳಿ
ಸಚಿವ ಸತೀಶ್​ ಜಾರಕಿಹೊಳಿ
ವಿವೇಕ ಬಿರಾದಾರ
|

Updated on:Feb 24, 2024 | 11:54 AM

Share

ಬೆಳಗಾವಿ, ಫೆಬ್ರವರಿ 24: ಲೋಕಸಭೆ ಚುನಾವಣೆ (Lok Sabha Election) ಹತ್ತಿರವಾಗುತ್ತಿದ್ದು, ಕಣಕ್ಕೆ ಇಳಿಸಲು ಕಾಂಗ್ರೆಸ್ (Congress)​ ಅಭ್ಯರ್ಥಿಗಳ ಹುಡುಕಾಟದಲ್ಲಿದೆ. ಬೆಳಗಾವಿ ಲೋಕಸಭಾ ಕ್ಷೇತ್ರದಿಂದ (Belagavi Lok Sabha Constituency) ನಾನಾಗಲಿ ಅಥವಾ ಚಿಕ್ಕೋಡಿ ಲೋಕಸಭಾ ಕ್ಷೇತ್ರದಿಂದ (Chikkodi Lok Sabha Constituency) ನನ್ನ ಪುತ್ರಿ ಪ್ರಿಯಾಂಕಾ ಜಾರಕಿಹೊಳಿಯಾಗಲಿ ಸ್ಪರ್ಧೆ ಮಾಡುವುದಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ (Satish Jarkiholi) ಸ್ಪಷ್ಟಪಡಿಸಿದ್ದಾರೆ. ಬೆಳಗಾವಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಜಾರಕಿಹೊಳಿ ಕುಟುಂಬದ ಯಾರನ್ನೂ ಕಣಕ್ಕಿಳಿಸುವ ಯೋಚನೆ ಇಲ್ಲ ಎಂದರು.

ನಾವು ಸಾಮಾನ್ಯ ಕಾರ್ಯಕರ್ತನನ್ನು ಕಣಕ್ಕಿಳಿಸಿ ಚುನಾವಣೆ ಎದುರಿಸುತ್ತೇವೆ. ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ನನ್ನನ್ನು ಕಣಕ್ಕಿಳಿಸಲು ಹೈಕಮಾಂಡ್​​ ಮಟ್ಟದಲ್ಲಿ ಚರ್ಚೆಗಳು ನಡೆದಿರುವುದು ನಿಜ. ಆದರೆ ನನಗೆ ಆಸಕ್ತಿಯಿಲ್ಲ. ಬೆಳಗಾವಿ ಮತ್ತು ಚಿಕ್ಕೋಡಿ ಎರಡು ಸ್ಥಾನಗಳಲ್ಲಿ ಹಲವಾರು ಆಕಾಂಕ್ಷಿಗಳಿದ್ದು, ಹೆಚ್ಚು ಜನಪ್ರಿಯತೆ ಗಳಿಸಿರುವ ಇಬ್ಬರು ಉತ್ತಮ ಅಭ್ಯರ್ಥಿಗಳನ್ನು ಪಕ್ಷದ ಸ್ಥಳೀಯ ಘಟಕ ಆಯ್ಕೆ ಮಾಡುತ್ತದೆ ಎಂದು ಹೇಳಿದರು.

ಖಂಡಿತವಾಗಿಯೂ ಅಭ್ಯರ್ಥಿಗಳ ನಾಮನಿರ್ದೇಶನವು ಜಾತಿ ಲೆಕ್ಕಾಚಾರಗಳನ್ನು ಆಧರಿಸಿರುತ್ತದೆ. ಆದರೆ ಆಯ್ಕೆಯಾದ ಅಭ್ಯರ್ಥಿಗಳು ತಮ್ಮ ಸಮುದಾಯದಲ್ಲಿ ಮಾತ್ರವಲ್ಲದೆ ಇತರ ಸಮುದಾಯಗಳಲ್ಲಿಯೂ ಜನಪ್ರಿಯರಾಗಬೇಕು ಎಂದರು.

ಇದನ್ನೂ ಓದಿ: ಲೋಕಸಭೆ ಚುನಾವಣೆ ಸ್ಪರ್ಧೆ ಬಗ್ಗೆ ಅಚ್ಚರಿಯ ಹೇಳಿಕೆ ನೀಡಿದ ಜಗದೀಶ್ ಶೆಟ್ಟರ್!

ಸತೀಶ್​ಗೆ ಟಿಕೆಟ್​ ಕೊಡುವುದು ಬಹುತೇಕ ಪಕ್ಕಾ ಆಗಿತ್ತು

ಪ್ರಭಾವಿ ನಾಯಕ ಸತೀಶ್ ಜಾರಕಿಹೊಳಿ‌ ಸ್ಪರ್ಧೆಯಿಂದ ಬಿಜೆಪಿ ಭದ್ರ ಕೋಟೆ ಛಿದ್ರ ಮಾಡಬಹುದು ಎನ್ನುವ ಲೆಕ್ಕಾಚಾರ ಕಾಂಗ್ರೆಸ್​ ಹೈಕಮಾಂಡ್​​ದಾಗಿತ್ತು. ಕಳೆದ ಬಾರಿ ಲೋಕಸಭಾ ಉಪ ಚುನಾವಣೆಯಲ್ಲಿ ಐದು ಸಾವಿರ ಮತಗಳ ಅಂತರದಿಂದ ಸತೀಶ್ ಸೋತಿದ್ದರು. ಈ ಬಾರಿ ರಾಜ್ಯದಲ್ಲಿ ಅತೀ ಹೆಚ್ಚು ಸ್ಥಾನ ಗೆಲ್ಲುಲು ಸತೀಶ್ ಅವರಿಗೆ ಟಿಕೆಟ್ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿತ್ತು. ಆದರೆ ಸತೀಶ್​ ಜಾರಕಿಹೊಳಿ ಸ್ಪರ್ಧೆ ಮಾಡುವುದಿಲ್ಲವೆಂದು ಎಲ್ಲದಕ್ಕೂ ಫುಲ್​ಸ್ಟಾಪ್​​ ಇಟ್ಟಿದ್ದಾರೆ.

ಸುರೇಶ್ ಅಂಗಡಿ ಫ್ಯಾಮಿಲಿ vs ಪ್ರಿಯಾಂಕಾ ಜಾರಕಿಹೊಳಿ

ಚಿಕ್ಕೋಡಿ ಲೋಕಸಭಾ ಕ್ಷೇತ್ರದಿಂದ ಅಂಗಡಿ ಕುಟುಂಬದಿಂದ ಮಂಗಲಾ ಅಂಗಡಿ ಅಥವಾ ಇವರ ಪುತ್ರಿಗೆ ಬಿಜೆಪಿ ಟಿಕೆಟ್ ಕೊಟ್ಟರೆ ಇತ್ತ ಪ್ರಿಯಾಂಕಾ ಜಾರಕಿಹೊಳಿಗೆ ಟಿಕೆಟ್ ನೀಡುವ ಸಾಧ್ಯತೆ ಇತ್ತು. ಪ್ರಿಯಾಂಕಾ ಅವರಿಗೆ ಟಿಕೆಟ್ ಕೊಟ್ಟರೆ ಸತೀಶ್ ಜಾರಕಿಹೊಳಿ‌ ವರ್ಚಸ್ಸಿನ ಮೇಲೆ ಸುಲಭವಾಗಿ ಗೆಲ್ಲಬಹುದು ಎಂಬ ಲೆಕ್ಕಾಚಾರವಿತ್ತು. ಇನ್ನೊಂದೆಡೆ, ಪ್ರಿಯಾಂಕಾ ಸ್ಪರ್ಧೆ ಮಾಡಿದರೆ ಪಕ್ಷಾತೀತವಾಗಿ ಜಾರಕಿಹೊಳಿ‌ ಸಹೋದರರು ಬೆಂಬಲಿಸಿ ಗೆಲ್ಲಿಸುತ್ತಾರೆ ಎನ್ನುವ ಲೆಕ್ಕಾಚಾರವೂ ಇತ್ತು. ಆದರೆ ಇದೀಗ ಎಲ್ಲ ಲೆಕ್ಕಾಚಾರ ತಲೆಕೆಳಗಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:31 am, Sat, 24 February 24

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ