ಬೆಳಗಾವಿ: ಬೆಳಗಾವಿ ಜಿಲ್ಲೆಯ ಕಿತ್ತೂರು (Kittur) ಪಟ್ಟಣದಲ್ಲಿರುವ ತಹಶೀಲ್ದಾರ್ ಸೋಮಲಿಂಗ ನಿವಾಸದ ಮೇಲೆ ಲೋಕಾಯುಕ್ತ (Lokayukta) ಅಧಿಕಾರಿಗಳು ದಾಳಿ ಮಾಡಿದ್ದಾರೆ. ಸೋಮಲಿಂಗ ನಿನ್ನೆ (ನ. 25) ನಿವಾಸದಲ್ಲಿ 2 ಲಕ್ಷ ಲಂಚ ಸ್ವೀಕರಿಸುತ್ತಿದ್ದ ವೇಳೆ ರೆಡ್ಹ್ಯಾಂಡ್ ಆಗಿ ಬಲೆಗೆ ಬಿದ್ದಿದ್ದಾನೆ. ಲೋಕಾಯುಕ್ತ ಎಸ್‌ಪಿ ಯಶೋಧಾ ವಂಟಗೋಡೆ ನೇತೃತ್ವದ ಅಧಿಕಾರಿಗಳು ಮನೆಯಲ್ಲಿ ರಾತ್ರಿಯಿಡೀ ಪರಿಶೀಲನೆ ನಡೆಸಿದ್ದಾರೆ. ಅಧಿಕಾರಿಗಳು 10 ಲಕ್ಷಕ್ಕೂ ಹೆಚ್ಚು ನಗದು ಸೇರಿದಂತೆ ದಾಖಲೆ ಪತ್ರಗಳನ್ನು ಜಪ್ತಿ ಮಾಡಿದ್ದಾರೆ.
10 ಎಕರೆ ಜಮೀನಿನ ಖಾತೆ ಬದಲಾವಣೆಗಾಗಿ ಖೋದಾನಾಪುರದ ರಾಜೇಂದ್ರ ಇನಾಮದಾರ್ ಅರ್ಜಿ ಸಲ್ಲಿಸಿದ್ದರು. ಈ ಸಂಬಂಧ ತಹಶೀಲ್ದಾರ್ ಸೋಮಲಿಂಗ ಹಾಲಗಿ, ರಾಜೇಂದ್ರ ಇನಾಮದಾರ್ ಬಳಿ 5 ಲಕ್ಷ ಲಂಚ ಬೇಡಿಕೆ ಇಟ್ಟಿದ್ದನು.
ಹೀಗಾಗಿ ನಿನ್ನೆ ರಾತ್ರಿ ತಹಶೀಲ್ದಾರ್, ಮನೆಯಲ್ಲೇ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ಗುಮಾಸ್ತ ಜಿ. ಪ್ರಸನ್ನ ಮತ್ತು ತಹಶೀಲ್ದಾರ್ ಸೋಮಲಿಂಗ ಹಾಲಗಿಯನ್ನು ಬಂಧಿಸಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 9:30 am, Sat, 26 November 22