ಮೂರು ಮಕ್ಕಳ ತಾಯಿ ಜತೆ ಲವ್ವಿಡವ್ವಿ: ರಾತ್ರಿ ಭೇಟಿಗೆ ಹೋಗಿದ್ದಾಗ ನಡೀತು ಮಾರಣಾಂತಿಕ ಹಲ್ಲೆ
ವಿವಾಹಿತ ಮಹಿಳೆ ಜತೆ ಅಕ್ರಮ ಸಂಬಂಧ ಹೊಂದಿದ್ದ ಯುವಕನೊಬ್ಬ ಆಕೆಯ ಗಂಡ ಹಾಗೂ ಸಹೋದರ ಮಾಡಿದ ಮಾರಣಾಂತಿಕವಾಗಿ ಹಲ್ಲೆಯಿಂದ ಆಸ್ಪತ್ರೆ ಸೇರುವಂತಾಗಿದೆ. ರಾತ್ರಿ ವೇಳೆ ಮಹಿಳೆಯ ಬಳಿಗೆ ಹೋಗಿದ್ದಾಗ ಯವಕನ ಮೇಲೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕರೋಶಿ ಗ್ರಾಮದ ಹೊರವಲಯದಲ್ಲಿ ಹಲ್ಲೆ ನಡೆದಿದೆ.

ಬೆಳಗಾವಿ, ಜನವರಿ 2: ಮೂರು ಮಕ್ಕಳ ತಾಯಿ ಜತೆ ನಾಲ್ಕು ವರ್ಷಗಳಿಂದ ಅಕ್ರಮ ಸಂಬಂಧ ಹೊಂದಿದ್ದ ಯುವಕನ ಮೇಲೆ ಮಹಿಳೆಯ ಪತಿ ಹಾಗೂ ಆತನ ಸಹೋರ ಮಾರಣಾಂತಿಕ ಹಲ್ಲೆ ಮಾಡಿದ ಘಟನೆ ಬೆಳಗಾವಿ (Belagavi) ಜಿಲ್ಲೆಯ ಚಿಕ್ಕೋಡಿ ತಾಲೂಕಿನಲ್ಲಿ ನಡೆದಿದೆ. ಕರೋಶಿ ಗ್ರಾಮದ ಹೊರವಲಯದಲ್ಲಿ ಈ ಘಟನೆ ನಡೆದಿದ್ದು, ಹಲ್ಲೆಗೊಳಗಾದ ವ್ಯಕ್ತಿಯನ್ನು ಚಿಕ್ಕೋಡಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಯಕ್ಸಂಬಾ ಪಟ್ಟಣದ ಅಕ್ಷಯ ಕಲ್ಲಟಗಿ ಎಂಬ ಯುವಕ ನಾಲ್ಕು ವರ್ಷಗಳಿಂದ ವಿವಾಹಿತ ಮಹಿಳೆಯೊಂದಿಗೆ ಸಂಪರ್ಕದಲ್ಲಿದ್ದ ಎನ್ನಲಾಗಿದೆ. ಆ ಮಹಿಳೆಯೊಂದಿಗೆ ಅಕ್ರಮ ಸಂಬಂಧ ಹೊಂದುತ್ತಿದ್ದ ಆರೋಪ ಅಕ್ಷಯ ಮೇಲೆ ಇದೆ.
ರಾತ್ರಿ ಬಾ ಎಂದು ಕರೆದಿದ್ದ ಮಹಿಳೆ: ನಂಬಿ ಹೋದವನಿಗೆ ಬಿತ್ತು ಗೂಸಾ
ರಾತ್ರಿ ಭೇಟಿಯಾಗಲು ಬಾ ಎಂದು ಅಕ್ಷಯ್ಗೆ ಮಹಿಳೆಯೇ ಕರೆ ಮಾಡಿ ಹೇಳಿದ್ದಳು ಎಂಬ ಮಾಹಿತಿ ಲಭ್ಯವಾಗಿದೆ. ಅದರಂತೆ ಅಕ್ಷಯ್ ಆಕೆಯ ಭೇಟಿಯಾಗಲು ತೆರಳಿದ್ದಾರೆ. ಈ ವೇಳೆ, ಅಕ್ಷಯನನ್ನು ದಾರಿ ಮಧ್ಯೆ ತಡೆದ ಮಹಿಳೆಯ ಗಂಡ ಹಾಗೂ ಆಕೆಯ ಸಹೋದರ ಮರಕ್ಕೆ ಕಟ್ಟಿ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಹಿಗ್ಗಾಮುಗ್ಗಾ ಹಲ್ಲೆ ನಡೆದಿದ್ದರಿಂದ ಅಕ್ಷಯ್ ಗಂಭೀರವಾಗಿ ಗಾಯಗೊಂಡಿದ್ದಾನೆ.
ಇದನ್ನೂ ಓದಿ: ಹಿಂಡಲಗಾ ಜೈಲಿನ ಒಳಗೆ ಮೊಬೈಲ್, ಡ್ರಗ್ಸ್! ಸಿಬ್ಬಂದಿಯೇ ಅಕ್ರಮದಲ್ಲಿ ಶಾಮೀಲು?
ತೀವ್ರವಾಗಿ ಗಾಯಗೊಂಡ ಅಕ್ಷಯನನ್ನು ತಕ್ಷಣ ಚಿಕ್ಕೋಡಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಆತನಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಚಿಕ್ಕೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.



