ಮೂರು ಮಕ್ಕಳ ತಾಯಿ ಜತೆ ಲವ್ವಿಡವ್ವಿ: ರಾತ್ರಿ ಭೇಟಿಗೆ ಹೋಗಿದ್ದಾಗ ನಡೀತು ಮಾರಣಾಂತಿಕ ಹಲ್ಲೆ

ವಿವಾಹಿತ ಮಹಿಳೆ ಜತೆ ಅಕ್ರಮ ಸಂಬಂಧ ಹೊಂದಿದ್ದ ಯುವಕನೊಬ್ಬ ಆಕೆಯ ಗಂಡ ಹಾಗೂ ಸಹೋದರ ಮಾಡಿದ ಮಾರಣಾಂತಿಕವಾಗಿ ಹಲ್ಲೆಯಿಂದ ಆಸ್ಪತ್ರೆ ಸೇರುವಂತಾಗಿದೆ. ರಾತ್ರಿ ವೇಳೆ ಮಹಿಳೆಯ ಬಳಿಗೆ ಹೋಗಿದ್ದಾಗ ಯವಕನ ಮೇಲೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕರೋಶಿ ಗ್ರಾಮದ ಹೊರವಲಯದಲ್ಲಿ ಹಲ್ಲೆ ನಡೆದಿದೆ.

ಮೂರು ಮಕ್ಕಳ ತಾಯಿ ಜತೆ ಲವ್ವಿಡವ್ವಿ: ರಾತ್ರಿ ಭೇಟಿಗೆ ಹೋಗಿದ್ದಾಗ ನಡೀತು ಮಾರಣಾಂತಿಕ ಹಲ್ಲೆ
ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಕ್ಷಯ್
Edited By:

Updated on: Jan 02, 2026 | 2:22 PM

ಬೆಳಗಾವಿ, ಜನವರಿ 2: ಮೂರು ಮಕ್ಕಳ ತಾಯಿ ಜತೆ ನಾಲ್ಕು ವರ್ಷಗಳಿಂದ ಅಕ್ರಮ ಸಂಬಂಧ ಹೊಂದಿದ್ದ ಯುವಕನ ಮೇಲೆ ಮಹಿಳೆಯ ಪತಿ ಹಾಗೂ ಆತನ ಸಹೋರ ಮಾರಣಾಂತಿಕ ಹಲ್ಲೆ ಮಾಡಿದ ಘಟನೆ ಬೆಳಗಾವಿ (Belagavi) ಜಿಲ್ಲೆಯ ಚಿಕ್ಕೋಡಿ ತಾಲೂಕಿನಲ್ಲಿ ನಡೆದಿದೆ. ಕರೋಶಿ ಗ್ರಾಮದ ಹೊರವಲಯದಲ್ಲಿ ಈ ಘಟನೆ ನಡೆದಿದ್ದು, ಹಲ್ಲೆಗೊಳಗಾದ ವ್ಯಕ್ತಿಯನ್ನು ಚಿಕ್ಕೋಡಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಯಕ್ಸಂಬಾ ಪಟ್ಟಣದ ಅಕ್ಷಯ ಕಲ್ಲಟಗಿ ಎಂಬ ಯುವಕ ನಾಲ್ಕು ವರ್ಷಗಳಿಂದ ವಿವಾಹಿತ ಮಹಿಳೆಯೊಂದಿಗೆ ಸಂಪರ್ಕದಲ್ಲಿದ್ದ ಎನ್ನಲಾಗಿದೆ. ಆ ಮಹಿಳೆಯೊಂದಿಗೆ ಅಕ್ರಮ ಸಂಬಂಧ ಹೊಂದುತ್ತಿದ್ದ ಆರೋಪ ಅಕ್ಷಯ ಮೇಲೆ ಇದೆ.

ರಾತ್ರಿ ಬಾ ಎಂದು ಕರೆದಿದ್ದ ಮಹಿಳೆ: ನಂಬಿ ಹೋದವನಿಗೆ ಬಿತ್ತು ಗೂಸಾ

ರಾತ್ರಿ ಭೇಟಿಯಾಗಲು ಬಾ ಎಂದು ಅಕ್ಷಯ್​ಗೆ ಮಹಿಳೆಯೇ ಕರೆ ಮಾಡಿ ಹೇಳಿದ್ದಳು ಎಂಬ ಮಾಹಿತಿ ಲಭ್ಯವಾಗಿದೆ. ಅದರಂತೆ ಅಕ್ಷಯ್ ಆಕೆಯ ಭೇಟಿಯಾಗಲು ತೆರಳಿದ್ದಾರೆ. ಈ ವೇಳೆ, ಅಕ್ಷಯನನ್ನು ದಾರಿ ಮಧ್ಯೆ ತಡೆದ ಮಹಿಳೆಯ ಗಂಡ ಹಾಗೂ ಆಕೆಯ ಸಹೋದರ ಮರಕ್ಕೆ ಕಟ್ಟಿ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಹಿಗ್ಗಾಮುಗ್ಗಾ ಹಲ್ಲೆ ನಡೆದಿದ್ದರಿಂದ ಅಕ್ಷಯ್ ಗಂಭೀರವಾಗಿ ಗಾಯಗೊಂಡಿದ್ದಾನೆ.

ಇದನ್ನೂ ಓದಿ: ಹಿಂಡಲಗಾ ಜೈಲಿನ ಒಳಗೆ ಮೊಬೈಲ್, ಡ್ರಗ್ಸ್! ಸಿಬ್ಬಂದಿಯೇ ಅಕ್ರಮದಲ್ಲಿ ಶಾಮೀಲು?

ತೀವ್ರವಾಗಿ ಗಾಯಗೊಂಡ ಅಕ್ಷಯನನ್ನು ತಕ್ಷಣ ಚಿಕ್ಕೋಡಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಆತನಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಚಿಕ್ಕೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸಹದೇವ್​ ಮಾನೆ

ಸಹದೇವ ಯಲ್ಲಪ್ಪ ಮಾನೆ. ಹುಟ್ಟಿದ್ದು ಧಾರವಾಡ ತಾಲೂಕಿನ ಗುಳೇದಕೊಪ್ಪ ಗ್ರಾಮ. ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ಕಳೆದ 12 ವರ್ಷದಿಂದ ಟಿವಿ ಮಾಧ್ಯಮದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. 2014ರಲ್ಲಿ ಬೀದರ್ ಜಿಲ್ಲೆಯಿಂದ ವೃತ್ತಿ ಜೀವನ ಪ್ರಾರಂಭ ಮಾಡಿ ಕಲಬುರಗಿ, ಹುಬ್ಬಳ್ಳಿಯಲ್ಲಿ ಕೆಲಸ ಮಾಡಿ ಸದ್ಯ ‘ಟಿವಿ9’ ಕನ್ನಡ ಸುದ್ದಿ ವಾಹಿನಿಯಲ್ಲಿ 9ವರ್ಷಗಳಿಂದ ಬೆಳಗಾವಿ ಜಿಲ್ಲೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ಜಿಲ್ಲೆಯಲ್ಲಿ ಅತ್ಯುತ್ತಮ ಜಿಲ್ಲಾ ವರದಿಗಾರ ಪ್ರಶಸ್ತಿ ಪಡೆದಿದ್ದು, ಗಡಿ ಜಿಲ್ಲೆ ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಕೂಡ ದೊರೆತಿದೆ. ರೈತರ ಸಮಸ್ಯೆಗಳತ್ತ ಬೆಳಕು ಚೆಲ್ಲುವ ವರದಿ ಸೇರಿ ಗಡಿ ಸಮಸ್ಯೆ, ಕ್ರೈಮ್, ಪ್ರವಾಹ ಪರಿಸ್ಥಿತಿ, ನೆರೆಯ ಮಹಾರಾಷ್ಟ್ರ, ಗೋವಾದಲ್ಲಿನ ಬೆಳವಣಿಗೆ ಕುರಿತು ವರದಿ ಮಾಡುತ್ತಿರುವುದು ವಿಶೇಷ.

Read More
Loading...
Unable to load recommendations.
Follow Us