Mahadayi water dispute: ಮಹದಾಯಿ ವಿಚಾರದಲ್ಲಿ ಗೋವಾ ಮತ್ತು ಮಹಾರಾಷ್ಟ್ರ ಒಗ್ಗಟ್ಟಾಗಿ ಹೋರಾಟ – ಏಕನಾಥ್ ಶಿಂಧೆ

ಮಹದಾಯಿ ನದಿ ನೀರು ಹಂಚಿಕ ವಿಚಾರವಾಗಿ ಕರ್ನಾಟಕ ಹಾಗೂ ಗೋವಾ ರಾಜ್ಯಗಳ ನಡುವೆ ದಶಕಗಳಿಂದ ಹೋರಾಟ ನಡೆಯುತ್ತಿದೆ. ಇದೀಗ ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆ ಮಹಾರಾಷ್ಟ್ರ ಹಾಗೂ ಗೋವಾ ಸರ್ಕಾರ ಒಗ್ಗಟ್ಟಾಗಿ "ಮಹದಾಯಿ ವಿಚಾರದಲ್ಲಿ ಹೋರಾಟ" ನಡೆಸಲು ಮುಂದಾಗಿವೆ.

Mahadayi water dispute: ಮಹದಾಯಿ ವಿಚಾರದಲ್ಲಿ ಗೋವಾ ಮತ್ತು ಮಹಾರಾಷ್ಟ್ರ ಒಗ್ಗಟ್ಟಾಗಿ ಹೋರಾಟ - ಏಕನಾಥ್ ಶಿಂಧೆ
ಅಂತಾರಾಜ್ಯ ನಿಯಂತ್ರಣ ಮಂಡಳಿ ಸಭೆಯಲ್ಲಿ ಭಾಗಿಯಾದ ಮಹಾರಾಷ್ಟ್ರ ಹಾಗೂ ಗೋವಾ ಸಿಎಂ
Follow us
ವಿವೇಕ ಬಿರಾದಾರ
|

Updated on:Jun 18, 2023 | 8:15 AM

ಬೆಳಗಾವಿ: ಮಹದಾಯಿ (Mahadayi River) ನದಿ ನೀರು ಹಂಚಿಕ ವಿಚಾರವಾಗಿ ಕರ್ನಾಟಕ (Karnataka) ಹಾಗೂ ಗೋವಾ (Goa) ರಾಜ್ಯಗಳ ನಡುವೆ ದಶಕಗಳಿಂದ ಹೋರಾಟ ನಡೆಯುತ್ತಿದೆ. ಇದೀಗ ಕರ್ನಾಟಕದಲ್ಲಿ ಕಾಂಗ್ರೆಸ್ (Congress) ಅಧಿಕಾರಕ್ಕೆ ಬರುತ್ತಿದ್ದಂತೆ ಮಹಾರಾಷ್ಟ್ರ (Maharashtra) ಹಾಗೂ ಗೋವಾ ಸರ್ಕಾರ ಒಗ್ಗಟ್ಟಾಗಿ “ಮಹದಾಯಿ ವಿಚಾರದಲ್ಲಿ ಹೋರಾಟ” ನಡೆಸಲು ಮುಂದಾಗಿವೆ. ಹೌದು ಒಂದಡೆ ಗಡಿ ಕ್ಯಾತೆ ತೆಗೆಯುತ್ತಿರುವ ಮಹರಾಷ್ಟ್ರ ಇದೀಗ ಮಹದಾಯಿ ವಿಚಾರದಲ್ಲೂ ಮೂಗು ತೂರಿಸಿದೆ. ಗೋವಾ ಮತ್ತು ಮಹಾರಾಷ್ಟ್ರ ಈ ಎರಡೂ ರಾಜ್ಯಗಳು ಸಹೋದರರಿದ್ದಂತೆ. ಮಹದಾಯಿ ನೀರಿನ ಹೋರಾಟ ಮೂರು ರಾಜ್ಯಗಳ ಪ್ರಶ್ನೆಯಾಗಿದ್ದು, ಮಹಾರಾಷ್ಟ್ರ ಮತ್ತು ಗೋವಾ ಈ ಹೋರಾಟವನ್ನು ಒಟ್ಟಾಗಿ ಎದುರಿಸಲಿವೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಹೇಳಿದ್ದಾರೆ.

ಮಹಾರಾಷ್ಟ್ರದ ತಿಲಾರಿ ಅಣೆಕಟ್ಟು ಯೋಜನೆ ಸಂ‌ಬಂಧ ಸಭೆ ‌ನಿನ್ನೆ (ಜೂ.17) ರಂದು ಮುಂಬೈನಲ್ಲಿ ನಡೆದಿದ್ದ ಅಂತಾರಾಜ್ಯ ನಿಯಂತ್ರಣ ಮಂಡಳಿ ಸಭೆ ನಡೆಯಿತು. ಸಭೆಯಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ, ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್, ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಮತ್ತು ಗೋವಾ ಜಲಸಂಪನ್ಮೂಲ ಸಚಿವ ಸುಭಾಷ್ ಶಿರೋಡ್ಕರ್ ಭಾಗಿಯಾಗಿದ್ದರು.

ಇದನ್ನೂ ಓದಿ: ಹೊಸ ಸರಕಾರ ಅಧಿಕಾರಕ್ಕೆ ಬರುತ್ತಿದ್ದಂತೆಯೇ ಮಹದಾಯಿ ನದಿ ತಿರುವು ಯೋಜನೆಗೆ ಹೊಸ ಪ್ರಸ್ತಾವನೆ 

ದಶಕದ ಬಳಿಕ ನಡೆದ ಅಂತಾರಾಜ್ಯ ನಿಯಂತ್ರಣ ಮಂಡಳಿ ಸಭೆಯಲ್ಲಿ ತಿಲಾರಿ ಅಣೆಕಟ್ಟು ಯೋಜನೆ ನೆಪದಲ್ಲಿ ಮಹದಾಯಿ ವಿವಾದದ ಬಗ್ಗೆ ಸಭೆಯಲ್ಲಿ ಸುದೀರ್ಘ ಚರ್ಚೆ ನಡೆಸಲಾಗಿದೆ. ಕರ್ನಾಟಕದ ಗಡಿಗೆ ಹೊಂದಿಕೊಂಡಿರುವ ಕೊಲ್ಲಾಪುರ ಜಿಲ್ಲೆಯ ತಿಲಾರಿ ಅಣೆಕಟ್ಟು ಬಗ್ಗೆ ಚರ್ಚಿಸಲು ಸಭೆ ಸೇರಲಾಗಿತ್ತು.

ಸಭೆಯಲ್ಲಿ ಮಹದಾಯಿ ನೀರಿಗಾಗಿ ಗೋವಾ ಮತ್ತು ಮಹಾರಾಷ್ಟ್ರ ಒಟ್ಟಾಗಿ ಕರ್ನಾಟಕದ ವಿರುದ್ಧ ಹೋರಾಟ ಮಾಡುತ್ತೇವೆ ಎಂದು ಶಿಂಧೆ ಹೇಳಿದ್ದಾರೆ. ಇದರಿಂದಾಗಿ ಮಹದಾಯಿ ಹೋರಾಟ ಇನ್ನಷ್ಟು ತೀವ್ರಗೊಳ್ಳುವ ಸಾಧ್ಯತೆಯಿದೆ ಎಂದೇ ಹೇಳಲಾಗುತ್ತಿದೆ.

ಮಹಾದಾಯಿ ನೀರು ಹಂಚಿಕೆಯಲ್ಲಿ ಮಹಾರಾಷ್ಟ್ರ ಪಾಲು ತೀರಾ ಕಡಿಮೆ ಇದೆ. 2018 ರಲ್ಲಿ ನ್ಯಾಯಮಂಡಳಿಯು ಮಹದಾಯಿ ನದಿ ಜಲಾನಯನ ಪ್ರದೇಶದಿಂದ ಕರ್ನಾಟಕಕ್ಕೆ 13.42 ಟಿಎಂಸಿ, ಮಹಾರಾಷ್ಟ್ರಕ್ಕೆ 1.33 ಟಿಎಂಸಿ ಮತ್ತು ಗೋವಾಕ್ಕೆ 24 ಟಿಎಂಸಿ ನೀರನ್ನು ನೀಡಿತು. ಕರ್ನಾಟದಕದ ಪಾಲಿಗೆ ದೊರೆತ ನೀರು 5.5 ಟಿಎಂಸಿಕುಡಿಯುವ ನೀರಿನ ಪೂರೈಕೆ ಹಾಗೂ 8.02 ಟಿಎಂಸಿ ನೀರು ಜಲವಿದ್ಯುತ್ ಉತ್ಪಾದನೆಗೆ ಎಂದು ಹಂಚಿಕೆಯಾಗಿತ್ತು.ಹೀಗಿದ್ದರೂ ‌ಕರ್ನಾಟಕ ವಿರುದ್ಧ ಹಗೆ ಸಾಧಿಸಲು ಗೋವಾ ಜೊತೆಗೆ ಮಹಾರಾಷ್ಟ್ರ ಸರ್ಕಾರ ಕೈ ಜೋಡಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:03 am, Sun, 18 June 23

ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?