AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Maharashtra Belagavi Border Dispute: ರಾತ್ರೋರಾತ್ರಿ ಬೆಳಗಾವಿಗೆ ಭೇಟಿ ನೀಡಿದ ಎನ್‌ಸಿಪಿ ಶಾಸಕ ರೋಹಿತ್​ ಪವಾರ್

ರೋಹಿತ್​ ಪವಾರ್​ ಪುಣೆ ಜಿಲ್ಲೆಯ ಕರ್ಜತ್-ಜಮ್ಕೆಡ್ ವಿಧಾನಸಭೆ ಕ್ಷೇತ್ರದ ಎನ್​ಸಿಪಿ ಶಾಸಕರಾಗಿದ್ದಾರೆ. ರೋಹಿತ್​ ಪವಾರ್ ನಿನ್ನೆ ರಾತ್ರಿ(ಡಿ 12) ಕೊಲ್ಲಾಪುರ- ಕುಗನೊಳ್ಳಿ ಮಾರ್ಗವಾಗಿ ಬೆಳಗಾವಿಗೆ ಆಗಮಿಸಿದರು ಎಂದು ತಿಳಿದುಬಂದಿದೆ.

Maharashtra Belagavi Border Dispute: ರಾತ್ರೋರಾತ್ರಿ ಬೆಳಗಾವಿಗೆ ಭೇಟಿ ನೀಡಿದ ಎನ್‌ಸಿಪಿ ಶಾಸಕ ರೋಹಿತ್​ ಪವಾರ್
ಶಿವಾಜಿ ಪುತ್ಥಳಿಗೆ ಮಾಲಾರ್ಪಣೆ ಮಾಡಿದ ರೋಹಿತ್​ ಪವಾರ್​
TV9 Web
| Updated By: ಆಯೇಷಾ ಬಾನು|

Updated on:Dec 13, 2022 | 12:51 PM

Share

ಬೆಳಗಾವಿ: ಕರ್ನಾಟಕ ಮಹಾರಾಷ್ಟ್ರ ಗಡಿ ವಿವಾದದ(Maharashtra Belagavi Border Dispute) ಮಧ್ಯೆಯೇ ಎನ್‌ಸಿಪಿ ಶಾಸಕ ರೋಹಿತ್​ ಪವಾರ್​(Rohit Pawar) ಕದ್ದುಮುಚ್ಚಿ ರಾತ್ರೋರಾತ್ರಿ ಬೆಳಗಾವಿಗೆ ಭೇಟಿ ನೀಡಿ ವಾಪಾಸ್ ಆಗಿದ್ದಾರೆ. ಮಹಾ ವಿಕಾಸ ಅಘಾಡಿ ನಾಯಕರ ಸೂಚನೆ ಮೇರೆಗೆ ರೋಹಿತ್ ಪವಾರ್ ಬೆಳಗಾವಿ ಭೇಟಿ ನೀಡಿದ್ದಾರೆ ಎನ್ನಲಾಗ್ತಿದೆ.

ಗಡಿ ಉಸ್ತುವಾರಿ ಸಚಿವರ ಬೆಳಗಾವಿ ಭೇಟಿ ರದ್ದು ಖಂಡಿಸಿ ಮಹಾ ವಿಕಾಸ ಅಘಾಡಿ ಪ್ರತಿಭಟನೆ ನಡೆಸಿತ್ತು. ಇದಾದ ಬಳಿಕ ರೋಹಿತ್​ ಪವಾರ್​ ಅವರಿಗೆ ಬೆಳಗಾವಿಗೆ ಬರುವಂತೆ ಮನವಿ ಮಾಡಿದ್ದು ರಾತ್ರೋರಾತ್ರಿ ರೋಹಿತ್ ಪವಾರ್ ಬೆಳಗಾವಿಗೆ ಭೇಟಿ ನೀಡಿ ವಾಪಾಸ್ ಆಗಿದ್ದಾರೆ. ರೋಹಿತ್​ ಪವಾರ್​ ಪುಣೆ ಜಿಲ್ಲೆಯ ಕರ್ಜತ್-ಜಮ್ಕೆಡ್ ವಿಧಾನಸಭೆ ಕ್ಷೇತ್ರದ ಎನ್​ಸಿಪಿ ಶಾಸಕರಾಗಿದ್ದಾರೆ. ರೋಹಿತ್​ ಪವಾರ್ ನಿನ್ನೆ ರಾತ್ರಿ(ಡಿ 12) ಕೊಲ್ಲಾಪುರ- ಕುಗನೊಳ್ಳಿ ಮಾರ್ಗವಾಗಿ ಬೆಳಗಾವಿಗೆ ಆಗಮಿಸಿದರು ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಕರ್ನಾಟಕಕ್ಕೆ ಸೇರುತ್ತೇವೆ ಎಂದಿದ್ದ ಉಡುಗಿ ಗ್ರಾಮದ 17 ಕನ್ನಡಿಗರಿಗೆ ನೋಟಿಸ್ ನೀಡಿದ ಮಹಾರಾಷ್ಟ್ರ ಸರ್ಕಾರ! ಬೆಳಗಾವಿ ಗಡಿಯಲ್ಲಿ ಅಲರ್ಟ್

ncp mla rohit pawar

ಮಂಗಳವಾರ ಬೆಳಗ್ಗೆ ಬೆಳಗಾವಿ ತಾಲೂಕಿನ ವಿವಿಧ ಭಾಗಗಳಿಗೆ ಭೇಟಿ ನೀಡಿದ್ದಾರೆ. ಅಷ್ಟೇ ಅಲ್ಲದೇ ಅನಾರೋಗ್ಯಕ್ಕೆ ತುತ್ತಾಗಿರುವ ಎಂಇಎಸ್ ಬೆಳಗಾವಿ ನಗರ ಅಧ್ಯಕ್ಷ ದೀಪಕ್ ದಳವಿ ಮನೆಗೆ ಭೇಟಿ ನೀಡಿ, ಅವರ ಆರೋಗ್ಯ ವಿಚಾರಿಸಿದ್ದಾರೆ. ಗಡಿ ಹೋರಾಟದಲ್ಲಿ ಗಲಭೆ ಸೃಷ್ಟಿಸಿ ಗೋಲಿಬಾರ್‌ಗೆ ತುತ್ತಾದ 11 ಎಂಇಎಸ್ ಕಾರ್ಯಕರ್ತರ ಹೆಸರಿನಲ್ಲಿ ನಿರ್ಮಿಸಲಾದ ಹುತಾತ್ಮ ಸ್ಮಾರಕಕ್ಕೆ ಭೇಟಿ ನೀಡಿದ್ದಾರೆ. ಬಳಿಕ ಶಿವಾಜಿ ಪುತ್ಥಳಿಗೆ ಮಾಲಾರ್ಪಣೆ ಸಲ್ಲಿಸಿದ್ದಾರೆ. ನಂತರ ಯಳ್ಳೂರ ಗ್ರಾಮದಲ್ಲಿರುವ ಮರಾಠಿ ಹೈಸ್ಕೂಲ್‌ಗೆ ಭೇಟಿ ನೀಡಿದ್ದಾರೆ. ಎನ್‌ಸಿಪಿ ಶಾಸಕ ರೋಹಿತ್ ಪವಾರ್‌ಗೆ ಸ್ಥಳೀಯ ಎಂಇಎಸ್ ಕಾರ್ಯಕರ್ತರು ಸಾಥ್ ನೀಡಿದ್ದಾರೆ. ಎನ್‌ಸಿಪಿ ವರಿಷ್ಠ ಶರದ್ ಪವಾರ್ ಸಹೋದರನ ಪುತ್ರ ರೋಹಿತ್ ಪವಾರ್ ಬೆಳಗಾವಿಗೆ ಗಪ್‌ಚುಪ್ ಭೇಟಿ ನೀಡಿ ಗೋವಾಕ್ಕೆ ತೆರಳಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 12:47 pm, Tue, 13 December 22