ನಾವು ಯಾವುದೇ ಸಂಘರ್ಷ ಮಾಡಲು ಬೆಳಗಾವಿಗೆ ಬರುತ್ತಿಲ್ಲ, ಡಿಸೆಂಬರ್​ 6ರಂದು ಹೋಗಿಯೇ ತೀರುತ್ತೇವೆ -ಗಡಿ ಸಚಿವ ಚಂದ್ರಕಾಂತ ಪಾಟೀಲ್

ಮುಂಬೈನಲ್ಲಿ ಮಾತನಾಡಿದ ಸಚಿವ ಚಂದ್ರಕಾಂತ ಪಾಟೀಲ್, ನನಗೆ ಯಾವುದೇ ಫ್ಯಾಕ್ಸ್ ಆಗಲಿ, ಬೊಮ್ಮಾಯಿ ಪತ್ರವಾಗಲಿ ತಲುಪಿಲ್ಲ. ಡಿಸೆಂಬರ್​ 6ರಂದು ನಾವು ಬೆಳಗಾವಿಗೆ ಹೋಗಿಯೇ ತೀರುತ್ತೇವೆ ಎಂದರು.

ನಾವು ಯಾವುದೇ ಸಂಘರ್ಷ ಮಾಡಲು ಬೆಳಗಾವಿಗೆ ಬರುತ್ತಿಲ್ಲ, ಡಿಸೆಂಬರ್​ 6ರಂದು ಹೋಗಿಯೇ ತೀರುತ್ತೇವೆ -ಗಡಿ ಸಚಿವ ಚಂದ್ರಕಾಂತ ಪಾಟೀಲ್
ಚಂದ್ರಕಾಂತ ಪಾಟೀಲ್
Follow us
TV9 Web
| Updated By: ಆಯೇಷಾ ಬಾನು

Updated on:Dec 03, 2022 | 10:31 AM

ಬೆಳಗಾವಿ: ಡಿ.6ರಂದು ಬೆಳಗಾವಿಗೆ ಮಹಾರಾಷ್ಟ್ರದ ಸಚಿವದ್ವಯರ ಭೇಟಿ ವಿಚಾರಕ್ಕೆ ಸಂಬಂಧಿಸಿ ಡಿಸೆಂಬರ್​ 6ರಂದು ನಾವು ಬೆಳಗಾವಿಗೆ ಹೋಗಿಯೇ ತೀರುತ್ತೇವೆ ಎಂದು ಮಹಾರಾಷ್ಟ್ರದ ಗಡಿ ಸಮನ್ವಯ ಸಚಿವ ಚಂದ್ರಕಾಂತ ಪಾಟೀಲ್ ತಿಳಿಸಿದ್ದಾರೆ. ಕರ್ನಾಟಕಕ್ಕೆ ಭೇಟಿ ನೀಡದಂತೆ ಸಂದೇಶ ರವಾನಿಸಿದ್ದೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ಈ ಹಿಂದೆ ತಿಳಿಸಿದ್ದರು. ಆದ್ರೆ ಸಿಎಂ ಪತ್ರಕ್ಕೂ ಕ್ಯಾರೆ ಎನ್ನದೆ ಸಚಿವ ಚಂದ್ರಕಾಂತ ಪಾಟೀಲ್ ಮೊಂಡುತನ ಮುಂದುವರೆಸಿದ್ದಾರೆ.

ಮುಂಬೈನಲ್ಲಿ ಮಾತನಾಡಿದ ಸಚಿವ ಚಂದ್ರಕಾಂತ ಪಾಟೀಲ್, ನನಗೆ ಯಾವುದೇ ಫ್ಯಾಕ್ಸ್ ಆಗಲಿ, ಬೊಮ್ಮಾಯಿ ಪತ್ರವಾಗಲಿ ತಲುಪಿಲ್ಲ. ನಾನು ಡಿ.3ರಂದು ಬೆಳಗಾವಿಗೆ ಹೋಗಬೇಕಿತ್ತು. ಆದ್ರೆ ಡಿಸೆಂಬರ್​ 6ರಂದು ಡಾ.ಬಿ.ಆರ್​.ಅಂಬೇಡ್ಕರ್​ ಪರಿನಿರ್ವಾಣ ದಿನ ಇದೆ. ಅಂದು ಬೆಳಗಾವಿಯಲ್ಲಿ ಹಲವು ಕಾರ್ಯಕ್ರಮಗಳು ಇರುತ್ತವೆ. ಎಲ್ಲರೂ ಸಹ ನನಗೆ ಡಿ.6ರಂದು ಆಗಮಿಸುವಂತೆ ವಿನಂತಿಸಿದ್ದಾರೆ. ನಾನು ಡಿ.6ರಂದೇ ಬೆಳಗಾವಿಗೆ ಭೇಟಿ ನೀಡುತ್ತೇನೆ. ಗಡಿ ಭಾಗದ ಜನ, ಗಡಿ ಹೋರಾಟದಲ್ಲಿ ಮೃತಪಟ್ಟ ಹುತಾತ್ಮರ ನಿವಾಸಕ್ಕೆ ಭೇಟಿ ನೀಡುತ್ತೇನೆ. ಈ ಪೈಕಿ ಅಂಬೇಡ್ಕರ್ ಉದ್ಯಾನವನದಲ್ಲಿರುವ ಬೃಹತ್ ಅಂಬೇಡ್ಕರ್ ಪ್ರತಿಮೆಗೆ ಹಾಗೂ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಗೆ ಮಾಲಾರ್ಪಣೆ ಮಾಡಲಿದ್ದೇನೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಗಡಿ ವಿಚಾರದಲ್ಲಿ ಎಂಇಎಸ್ ಮತ್ತೆ ಕ್ಯಾತೆ: ಬೆಳಗಾವಿಗೆ ಬರುವಂತೆ ಮಹಾರಾಷ್ಟ್ರ ಗಡಿ ಸಮನ್ವಯ ಸಚಿವರಿಗೆ ಪತ್ರ

ಕರ್ನಾಟಕ ಸರ್ಕಾರಕ್ಕೆ ನಾನು ಹೇಳಬಯಸುವುದೇನೆಂದರೆ, ನಾವು ಯಾವುದೇ ಸಂಘರ್ಷ ಮಾಡಲು ಬರುತ್ತಿಲ್ಲ. 865 ಮರಾಠಿ ಭಾಷಿಕ ಹಳ್ಳಿಗಳಿಗೆ ಮಹಾರಾಷ್ಟ್ರ ಸರ್ಕಾರ ಏನು ಸೌಲಭ್ಯ ನೀಡಬಹುದು ಎಂಬ ಬಗ್ಗೆ ಚರ್ಚಿಸಲು ತೆರಳುತ್ತಿದ್ದೇನೆ. 865 ಹಳ್ಳಿಗಳು ಸಮಾಧಾನದಿಂದ ಇದ್ದಾರಂದ್ರೆ ಅದರ ಲಾಭ ನಿಮಗೆ ಇದೆ. ಕರ್ನಾಟಕ ಸರ್ಕಾರದ ನಾಗರಿಕರಿಗೆ ನೀವು ಅವರಿಗೆ ಸೌಲಭ್ಯ ನೀಡಲೇಬೇಕಾಗುತ್ತೆ. ಆದ್ರೆ 865 ಮರಾಠಿ ಭಾಷಿಕ ಜನರನ್ನು ಮಹಾರಾಷ್ಟ್ರದ ನಾಗರಿಕರೆಂದು ನಾವು ಸೌಲಭ್ಯ ನೀಡ್ತೇವೆ. ಯಾವುದೇ ನಿಷೇಧ ಹೇರಿದರೂ ನಾನು ನಿಲ್ಲುವ ಮನುಷ್ಯನಲ್ಲ. ನನಗೆ ನೀವು ಧಮ್ಕಿ ನೀಡಬೇಡಿ. ನಾವು ಸಮನ್ವಯದಿಂದ ಜನರ ಮನಸ್ಥಿತಿ ತಿಳಿದು ಅವರಿಗೆ ಮಹಾರಾಷ್ಟ್ರ ಸರ್ಕಾರದ ನಿಲುವು ತಿಳಿಸಲು ತೆರಳುತ್ತಿದ್ದೇವೆ ಎಂದು ಗಡಿ ಸಮನ್ವಯ ಸಚಿವ ಚಂದ್ರಕಾಂತ ಪಾಟೀಲ್ ಹೇಳಿದರು.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 10:31 am, Sat, 3 December 22

ತಿರುಮಲದಲ್ಲಿ 8 ಅಡಿಯ ದೈತ ನಾಗರಹಾವು ಪತ್ತೆ: ವೈರಲ್ ವಿಡಿಯೋ
ತಿರುಮಲದಲ್ಲಿ 8 ಅಡಿಯ ದೈತ ನಾಗರಹಾವು ಪತ್ತೆ: ವೈರಲ್ ವಿಡಿಯೋ
ನಿನ್ನದು ನರಿ ಕಣ್ಣೀರು: ಮಹಾರಾಣಿ ಮೋಕ್ಷಿತಾ ಮೇಲೆ ಉರಿದು ಬಿದ್ದ ಮಂಜು
ನಿನ್ನದು ನರಿ ಕಣ್ಣೀರು: ಮಹಾರಾಣಿ ಮೋಕ್ಷಿತಾ ಮೇಲೆ ಉರಿದು ಬಿದ್ದ ಮಂಜು
ಅಭಿನಂದನಾ ಕಾರ್ಯಕ್ರಮಕ್ಕೆ ಸಿಎಂರ ಡೇಟ್ ಕೇಳಲು ಬಂದಿದ್ದು ಎಂದ ಯೋಗೇಶ್ವರ್
ಅಭಿನಂದನಾ ಕಾರ್ಯಕ್ರಮಕ್ಕೆ ಸಿಎಂರ ಡೇಟ್ ಕೇಳಲು ಬಂದಿದ್ದು ಎಂದ ಯೋಗೇಶ್ವರ್
ನವೆಂಬರ್ 29ರಿಂದ ರೇಣುಕಾಚಾರ್ಯ ತಂಡದಿಂದಲೂ ಒಂದು ಅಭಿಯಾನ!
ನವೆಂಬರ್ 29ರಿಂದ ರೇಣುಕಾಚಾರ್ಯ ತಂಡದಿಂದಲೂ ಒಂದು ಅಭಿಯಾನ!
ಬಂಡೀಪುರದಲ್ಲಿ ಆನೆ ಮರಿಗೆ ಹೊಂಚು ಹಾಕಿದ್ದ ಹುಲಿಯನ್ನು ಓಡಿಸಿದ ತಾಯಾನೆ
ಬಂಡೀಪುರದಲ್ಲಿ ಆನೆ ಮರಿಗೆ ಹೊಂಚು ಹಾಕಿದ್ದ ಹುಲಿಯನ್ನು ಓಡಿಸಿದ ತಾಯಾನೆ
ಎರಡು ಕಡೆ ಫ್ರ್ಯಾಕ್ಚರ್ ಆಗಿರುವ ಕಾರಣ ಪ್ರಚಾರಕ್ಕೆ ಹೋಗಲಿಲ್ಲ: ರೇವಣ್ಣ
ಎರಡು ಕಡೆ ಫ್ರ್ಯಾಕ್ಚರ್ ಆಗಿರುವ ಕಾರಣ ಪ್ರಚಾರಕ್ಕೆ ಹೋಗಲಿಲ್ಲ: ರೇವಣ್ಣ
ಇಬ್ರಾಹಿಂ ಮತ್ತು ದೇವೇಗೌಡರ ನಡುವೆ ನಡೆದ ಚರ್ಚೆಯೇನು ಅಂತ ಗೊತ್ತಿಲ್ಲ: ಹರೀಶ್
ಇಬ್ರಾಹಿಂ ಮತ್ತು ದೇವೇಗೌಡರ ನಡುವೆ ನಡೆದ ಚರ್ಚೆಯೇನು ಅಂತ ಗೊತ್ತಿಲ್ಲ: ಹರೀಶ್
ದೇವೇಗೌಡ ಮತ್ತು ಕುಮಾರಸ್ವಾಮಿ ಯಾವತ್ತಿಗೂ ನನ್ನ ನಾಯಕರು: ರೇವಣ್ಣ
ದೇವೇಗೌಡ ಮತ್ತು ಕುಮಾರಸ್ವಾಮಿ ಯಾವತ್ತಿಗೂ ನನ್ನ ನಾಯಕರು: ರೇವಣ್ಣ
ಹಿಂದೆ ಯೋಗೇಶ್ವರ್ ಕಾಂಗ್ರೆಸ್ ಶಾಸಕರನ್ನು ಖರೀದಿಸುವ ಮಾತಾಡಿದ್ದರು: ಸುರೇಶ್
ಹಿಂದೆ ಯೋಗೇಶ್ವರ್ ಕಾಂಗ್ರೆಸ್ ಶಾಸಕರನ್ನು ಖರೀದಿಸುವ ಮಾತಾಡಿದ್ದರು: ಸುರೇಶ್
ಯಾದಗಿರಿ ತಲುಪಿ ರೈತರ ಸಂಕಷ್ಟ ಆಲಿಸುತ್ತಿರುವ ಬಸನಗೌಡ ಯತ್ನಾಳ್ ತಂಡ
ಯಾದಗಿರಿ ತಲುಪಿ ರೈತರ ಸಂಕಷ್ಟ ಆಲಿಸುತ್ತಿರುವ ಬಸನಗೌಡ ಯತ್ನಾಳ್ ತಂಡ