ಕರ್ನಾಟಕದ ಗಡಿ ಜಿಲ್ಲೆಗಳಲ್ಲಿ ವಾಸಿಸುವ ಮರಾಠಿಗರಿಗಾಗಿ 2 ಕೋಟಿ ಬಿಡುಗಡೆ ಮಾಡಿದ ಮಹಾರಾಷ್ಟ್ರ

ಕರ್ನಾಟಕದ ಗಡಿ ಜಿಲ್ಲೆಗಳಾದ ಬೀದರ್ ಮತ್ತು ಬೆಳಗಾವಿಯಲ್ಲಿ ವಾಸಿಸುವ ಮರಾಠಿ ಮಾತನಾಡುವ ಜನರಿಗಾಗಿ ಮಹಾರಾಷ್ಟ್ರ ಸರ್ಕಾರವು 2 ಕೋಟಿ ರೂ.  ಬಿಡುಗಡೆ ಮಾಡಿದೆ. ಈ ಬಗ್ಗೆ ಅಲ್ಲಿನ ಜನರಿಂದ ಮಾಹಿತಿ ತಿಳಿದು ಬಂದಿದೆ. ಬೆಳಗಾವಿ ಮತ್ತು ನಿಪ್ಪಾಣಿಯಲ್ಲಿ ತಲಾ ₹ 25 ಲಕ್ಷ ವೆಚ್ಚದಲ್ಲಿ ಮಹಾರಾಷ್ಟ್ರ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಬಳಸಲಾಗುತ್ತಿದೆ. ಅಲ್ಲದೆ ಅನೇಕ ಶಿಕ್ಷಣ, ಆಸ್ಪತ್ರೆ ಉಪಕರಣ ಸೇರಿದಂತೆ ಅನೇಕ ವಿಚಾರಗಳಿಗೆ ಈ ಹಣವನ್ನು ಬಳಸಿಕೊಳ್ಳಲು ನಿರ್ಧರಿಸಲಾಗಿದೆ.

ಕರ್ನಾಟಕದ ಗಡಿ ಜಿಲ್ಲೆಗಳಲ್ಲಿ ವಾಸಿಸುವ ಮರಾಠಿಗರಿಗಾಗಿ 2 ಕೋಟಿ ಬಿಡುಗಡೆ ಮಾಡಿದ ಮಹಾರಾಷ್ಟ್ರ
ಮಹಾರಾಷ್ಟ್ರ ಸರ್ಕಾರ (ಸಾಂದರ್ಭಿಕ ಚಿತ್ರ)
Follow us
ಆಯೇಷಾ ಬಾನು
|

Updated on: Mar 21, 2024 | 8:06 AM

ಬೆಳಗಾವಿ. ಮಾರ್ಚ್​.21: ಈ ಹಿಂದೆ ಆರೋಗ್ಯ ವಿಮಾ ಯೋಜನೆ ವಿಚಾರದಲ್ಲಿ ಕೆಂಗಣ್ಣಿಗೆ ಗುರಿಯಾಗಿದ್ದ ಮಹಾರಾಷ್ಟ್ರ ಸರ್ಕಾರ ಅಂತಹದ್ದೇ ಮತ್ತೊಂದು ವಿವಾದಕ್ಕೆ ಕೈ ಹಾಕಿದೆ. ಕರ್ನಾಟಕದ ಗಡಿ ಜಿಲ್ಲೆಗಳಾದ ಬೀದರ್ ಮತ್ತು ಬೆಳಗಾವಿಯಲ್ಲಿ ಕೆಲವು ಸಾಂಸ್ಕೃತಿಕ ಚಟುವಟಿಕೆಗಳನ್ನು ನಡೆಸಲು ಮಹಾರಾಷ್ಟ್ರ ಸರ್ಕಾರ (Maharashtra Government) 2 ಕೋಟಿ ರೂ.  ಬಿಡುಗಡೆ ಮಾಡಿದೆ ಎಂದು ತಿಳಿದು ಬಂದಿದೆ. ಈ ಹಿಂದೆ, ಮಹಾರಾಷ್ಟ್ರ ಸರ್ಕಾರವು ತನ್ನ ಆರೋಗ್ಯ ವಿಮಾ ಯೋಜನೆಗೆ ನಿರ್ದಿಷ್ಟವಾಗಿ ಮರಾಠಿ ಮಾತನಾಡುವ ಜನಸಂಖ್ಯೆಯನ್ನು ನೋಂದಾಯಿಸಲು ಬೆಳಗಾವಿಯಾದ್ಯಂತ ಸೇವಾ ಕೇಂದ್ರಗಳನ್ನು ತೆರೆದಿತ್ತು. ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಮಹಾರಾಷ್ಟ್ರ ಸರ್ಕಾರವು ಲೋಕಸಭೆ ಚುನಾವಣೆಯ ಘೋಷಣೆಗೆ ಒಂದು ದಿನ ಮೊದಲು (ಮಾರ್ಚ್ 16 ರಂದು) ಹಣವನ್ನು ಬಿಡುಗಡೆ ಮಾಡಿದೆ ಎಂದು ಕೆಲ ಹಿರಿಯರು ಮಾಹಿತಿ ನೀಡಿದ್ದಾರೆ.

ಈ ಹಣವನ್ನು ಬೆಳಗಾವಿ ಮತ್ತು ನಿಪ್ಪಾಣಿಯಲ್ಲಿ ತಲಾ ₹ 25 ಲಕ್ಷ ವೆಚ್ಚದಲ್ಲಿ ಮಹಾರಾಷ್ಟ್ರ ಸಾಂಸ್ಕೃತಿಕ ಭವನ (ಮಹಾರಾಷ್ಟ್ರ ಸಾಂಸ್ಕೃತಿಕ ಸಭಾಂಗಣ) ನಿರ್ಮಾಣಕ್ಕೆ ಬಳಸಲಾಗುವುದು ಎಂದು ಜನರು ತಿಳಿಸಿದ್ದಾರೆ.

ಬೀದರ್‌ನಲ್ಲಿ ಮರಾಠಿ ಮಾಧ್ಯಮದಲ್ಲಿ ಶಿಕ್ಷಣ ನೀಡುತ್ತಿರುವ ರಘುನಾಥ ಮಹಾರಾಜ ಶಿಕ್ಷಣ ಸಂಸ್ಥೆಯು ಶೈಕ್ಷಣಿಕ ಚಟುವಟಿಕೆಗಳನ್ನು ಮುಂದುವರಿಸಲು ₹ 25 ಲಕ್ಷ ಮಂಜೂರು ಮಾಡಲಾಗಿದೆ ಎಂದು ಜನರು ಹೇಳಿದರು. ಅದೇ ಜಿಲ್ಲೆಯ ಸತ್ಯಂ ಶಿವಂ ಸುಂದರಂ ಅಭಿವೃದ್ಧಿ ಸಂಘಕ್ಕೆ ಮರಾಠಿಗರಲ್ಲಿ ತನ್ನ ಸಾಮಾಜಿಕ ಕಾರ್ಯವನ್ನು ಮುಂದುವರಿಸಲು ₹ 25 ಲಕ್ಷವನ್ನು ಬಿಡುಗಡೆ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಬೀದರ್ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ವಾಸಿಸುವ ಮರಾಠಿಗರಿಗೆ ಶಿಕ್ಷಣ ಸಂಬಂಧಿತ ಸ್ಟೇಷನರಿ ವಸ್ತುಗಳು, ಪಠ್ಯಪುಸ್ತಕಗಳು ಮತ್ತು ಆಂಬ್ಯುಲೆನ್ಸ್‌ನಂತಹ ಆಸ್ಪತ್ರೆಗಳಿಗೆ ಸಂಬಂಧಿಸಿದ ಉಪಕರಣಗಳನ್ನು ಖರೀದಿಸಲು ಈ ಹಣವನ್ನು ಬಳಸಿಕೊಳ್ಳಲು ಸಂಘಕ್ಕೆ ಸೂಚನೆ ನೀಡಲಾಗಿದೆ.

ಇದನ್ನೂ ಓದಿ: ಕರ್ನಾಟಕದಲ್ಲಿ ಬಂಡಾಯದ ಬೇಗುದಿ; ಬಿಜೆಪಿಗೆ ಮಾತ್ರವಲ್ಲ, ಕಾಂಗ್ರೆಸ್ ಪಕ್ಷಕ್ಕೂ ತಟ್ಟಿದ ಬಂಡಾಯದ ಬಿಸಿ ತುಪ್ಪ

ಈ ಬೆಳವಣಿಗೆಗೆ ಪ್ರತಿಕ್ರಿಯಿಸಿದ ಬೆಳಗಾವಿಯ ಮಹಾರಾಷ್ಟ್ರ ಪರ ಸಂಘಟನೆ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಸರ್ಕಾರದ ಕ್ರಮವನ್ನು ಸ್ವಾಗತಿಸಿದೆ, ಬಿಡುಗಡೆ ಮಾಡಿದ ಮೊತ್ತವು “ಕರ್ನಾಟಕದ ಗಡಿ ಪ್ರದೇಶಗಳಲ್ಲಿ ರಾಜ್ಯದ ಸಂಸ್ಕೃತಿಯನ್ನು ಜೀವಂತವಾಗಿಡಲು ಸಹಾಯ ಮಾಡುತ್ತದೆ” ಎಂದು ಎಂಇಎಸ್ ಸದಸ್ಯರು ಸಂತಸ ವ್ಯಕ್ತಪಡಿಸಿದರು.

ಎಂಇಎಸ್ ವಕ್ತಾರ ವಿಕಾಸ ಕಲಘಟಗಿ ಮಾತನಾಡಿ, ‘ಸರ್ಕಾರದಿಂದ ಬಿಡುಗಡೆಯಾಗುವ ಮೊತ್ತವನ್ನು ರಾಜ್ಯದ ಗಡಿ ಗ್ರಾಮಗಳಲ್ಲಿ ಮಹಾರಾಷ್ಟ್ರದ ಸಂಸ್ಕೃತಿಯನ್ನು ಜೀವಂತವಾಗಿಡಲು ಮತ್ತು ಮರಾಠಿ ಭಾಷೆಯಲ್ಲಿ ಶಿಕ್ಷಣ ಪಡೆಯಲು ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಲು ಬಳಸಲಾಗುತ್ತದೆ ಎಂದರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ