865 ಹಳ್ಳಿಗಳು ಮಹಾರಾಷ್ಟ್ರಕ್ಕೆ ಸೇರಬೇಕು, ಕರ್ನಾಟಕದ ಮರಾಠಿ ಭಾಷಿಕರಿಗೆ ತನ್ನ ಆರೋಗ್ಯ ವಿಮೆ ನೀಡಲು ಮುಂದಾದ ಶಿಂಧೆ ಸರ್ಕಾರ: ಧೈರ್ಯಶೀಲ ಮಾನೆ
ಬೆಳಗಾವಿ, ಕಾರವಾರ, ನಿಪ್ಪಾಣಿ, ಬೀದರ್, ಬಾಲ್ಕಿ ಸೇರಿದಂತೆ 865 ಹಳ್ಳಿಗಳು ಮಹಾರಾಷ್ಟ್ರಕ್ಕೆ ಸೇರಬೇಕು. ಗಡಿ ವಿವಾದ ಹೋರಾಟ ಸುಪ್ರೀಂಕೋರ್ಟ್ನಲ್ಲಿದೆ. ನಮ್ಮ ಮುಖ್ಯಮಂತ್ರಿ ಏಕನಾಥ್ ಶಿಂಧೆ ಬರೀ ಹೇಳಿಕೆ ಕೊಡುವ ಸಿಎಂ ಅಲ್ಲ. ಗಡಿ ವಿವಾದದ ಹೋರಾಟದಲ್ಲಿ ಏಕನಾಥ್ ಶಿಂಧೆ ಜೈಲಿಗೆ ಹೋಗಿದ್ದರು. ಹೀಗಾಗಿ ಮಹಾರಾಷ್ಟ್ರ ಏಕೀಕರಣ ಸಮಿತಿ ಹೋರಾಟಕ್ಕೆ ನಮ್ಮ ಬೆಂಬಲವಿದೆ ಎಂದು ಮಹಾರಾಷ್ಟ್ರ ಸಂಸದ ಧೈರ್ಯಶೀಲ ಮಾನೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಬೆಳಗಾವಿ, ಜನವರಿ 05: ಬೆಳಗಾವಿ (Belagavi) ಗಡಿ ವಿವಾದವನ್ನು ಜೀವಂತವಾಗಿ ಇಡಲು ಮಹಾರಾಷ್ಟ್ರ (Maharashtra) ಪ್ರಯತ್ನಿಸುತ್ತಲೇ ಇದೆ. ಇದೀಗ ಮಹಾರಾಷ್ಟ್ರ ಸಂಸದ ಧೈರ್ಯಶೀಲ ಮಾನೆ (Dhairyashil mane) ಬೆಳಗಾವಿಯಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಬೆಳಗಾವಿ, ಕಾರವಾರ, ನಿಪ್ಪಾಣಿ, ಬೀದರ್, ಬಾಲ್ಕಿ ಸೇರಿದಂತೆ 865 ಹಳ್ಳಿಗಳು ಮಹಾರಾಷ್ಟ್ರಕ್ಕೆ ಸೇರಬೇಕು. ಗಡಿ ವಿವಾದ ಹೋರಾಟ ಸುಪ್ರೀಂಕೋರ್ಟ್ನಲ್ಲಿದೆ. ನಮ್ಮ ಮುಖ್ಯಮಂತ್ರಿ ಏಕನಾಥ್ ಶಿಂಧೆ ಬರೀ ಹೇಳಿಕೆ ಕೊಡುವ ಸಿಎಂ ಅಲ್ಲ. ಗಡಿ ವಿವಾದದ ಹೋರಾಟದಲ್ಲಿ ಏಕನಾಥ್ ಶಿಂಧೆ (Eknath Shinde) ಜೈಲಿಗೆ ಹೋಗಿದ್ದರು. ಹೀಗಾಗಿ ಮಹಾರಾಷ್ಟ್ರ ಏಕೀಕರಣ ಸಮಿತಿ ಹೋರಾಟಕ್ಕೆ ನಮ್ಮ ಬೆಂಬಲವಿದೆ ಎಂದು ಹೇಳಿದ್ದಾರೆ.
ಕರ್ನಾಟಕದ ಗಡಿಯಲ್ಲಿ ಇರುವ ಮರಾಠಿ ಭಾಷಿಕರಿಗೆ ಮಹಾರಾಷ್ಟ್ರ ಸರ್ಕಾರ ಆರೋಗ್ಯ ವಿಮೆ ಜಾರಿ ಮಾಡಿದೆ. 865 ಹಳ್ಳಿಗಳಲ್ಲಿರುವ ಮರಾಠಿ ಭಾಷಿಕರಿಗೆ ಈ ಯೋಜನೆ ತಲುಪಿಸಬೇಕು. ಇದೇ ಕಾರಣಕ್ಕೆ ಮಹಾರಾಷ್ಟ್ರ ಸರ್ಕಾರ ಎಂಇಎಸ್‌ಗೆ ಪೂರ್ಣ ಅಧಿಕಾರ ನೀಡಿದೆ. ಎಂಇಎಸ್ನ ಶಿಫಾರಸ್ಸು ಮೇರೆಗೆ ಆರೋಗ್ಯ ವಿಮೆ ಲಾಭ ಮರಾಠಿ ಭಾಷಿಕರಿಗೆ ಸಿಗಲಿದೆ. ಎಷ್ಟೇ ಕೋಟಿ ಖರ್ಚಾದರೂ ಪರವಾಗಿಲ್ಲ, ಮಹಾರಾಷ್ಟ್ರ ಸೇರಬಯಸುವ 865 ಹಳ್ಳಿಗಳ ಜನರ ಮನೆ ಮನೆಗೂ ಎಂಇಎಸ್ ಮುಖಂಡರು ಯೋಜನೆ ತಲುಪಿಸಬೇಕು ಎಂದು ಕರೆ ಕೊಟ್ಟರು.
ಈ ಆರೋಗ್ಯ ವಿಮೆ ಯೋಜನೆ ಗಡಿ ಹೋರಾಟಕ್ಕೆ ಬಲ ತಂದು ಕೊಡಲಿದೆ. ಈ ವಿಮೆ ಮೂಲಕ ಕರ್ನಾಟಕ, ಮಹಾರಾಷ್ಟ್ರದಲ್ಲಿ ಇರುವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಬಹುದು. ಗಡಿ ಭಾಗದ ಮರಾಠಿ ಭಾಷಿಕರ ಪರವಾಗಿ ಮಹಾರಾಷ್ಟ್ರ ಸರ್ಕಾರವಿದೆ ಎಂದರು.
ಇದನ್ನೂ ಓದಿ: ಕರ್ನಾಟಕ, ಮಹಾರಾಷ್ಟ್ರ ಗಡಿ ವಿವಾದ: ಬದರಿನಾಥದಲ್ಲಿ ಉದ್ಧವ್ ಠಾಕ್ರೆ ಕುಟುಂಬದವರ ಎದುರು ಘೋಷಣೆ ಕೂಗಿದ ಬೆಳಗಾವಿ ನಿವಾಸಿಗಳು
ಮಹಾರಾಷ್ಟ್ರ ಸರ್ಕಾರದಿಂದ ಒಕ್ಕೂಟ ವ್ಯವಸ್ಥೆಗೆ ಧಕ್ಕೆ
ಆರೋಗ್ಯ ವಿಮೆ ಹೆಸರಿನಲ್ಲಿ ಮಹಾರಾಷ್ಟ್ರ ಸರ್ಕಾರ ಒಕ್ಕೂಟ ವ್ಯವಸ್ಥೆಗೆ ಧಕ್ಕೆ ತರುತ್ತಿದೆ. ಮಹಾರಾಷ್ಟ ಸರ್ಕಾರ ಸಿಮೋಲಂಘನೆ ಮಾಡಿ ಉದ್ಧಟನ ಪ್ರದರ್ಶನ ಮಾಡಿದೆ. ಗಡಿಯಲ್ಲಿರುವ 856 ಹಳ್ಳಿಗಳಲ್ಲಿ ತನ್ನ ಸರ್ಕಾರದ “ಮಹಾತ್ಮ ಪುಲೆ ಆರೋಗ್ಯ ವಿಮೆ” ಜಾರಿ ಮಾಡಲು ಮುಂದಾಗಿದೆ. ಈ ಮೂಲಕ ಸುಪ್ರೀಂ ಕೋರ್ಟ್ನಲ್ಲಿರುವ ಕೇಸ್ಗೆ ಅನಕೂಲ ಆಗುವ ಸಾಕ್ಷಿಗಳನ್ನು ಸಂಗ್ರಹಿಸಲು ತಯಾರಾಗಿದೆ.
ಈ ಸಂಬಂಧ ಸದ ಧೈರ್ಯಶೀಲ್ ಮಾನೆ ನೇತೃತ್ವದಲ್ಲಿ ಬೆಳಗಾವಿಯಲ್ಲಿ ಸಭೆ ನಡೆದಿದೆ. ಕರ್ನಾಟಕ ಮಹಾರಾಷ್ಟ್ರ ಗಡಿ ವಿವಾದದ ಮಹಾರಾಷ್ಟ್ರ ಉನ್ನಾಧಿಕಾರಿ ಸಮಿತಿ ಅಧ್ಯಕ್ಷ ಧೈರ್ಯಶೀಲ್ ಮಾನೆ, ಬೆಳಗಾವಿ ನಗರದ ಮರಾಠ ಮಂದಿರದಲ್ಲಿ ಎಂಇಎಸ್ ಪುಂಡರೊಂದಿಗೆ ಸಭೆ ನಡೆಸಿದರು. ಈ ಸಭೆಯಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿಗಳ ವಿಶೇಷಾಧಿಕಾರಿ ಮಂಗೇಶ ಚಿವಟೆ ಸಹ ಭಾಗಿಯಾಗಿದ್ದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ