ಫ್ಲೈ ಓವರ್ ಇಲ್ಲದ್ದಕ್ಕೆ ವಾಹನ ಡಿಕ್ಕಿಯಾಗಿ ವ್ಯಕ್ತಿ ಸಾವು; ತಹಶೀಲ್ದಾರ್ ಕಚೇರಿ ಮುಂದೆ ಶವವಿಟ್ಟು ಗ್ರಾಮಸ್ಥರ ಪ್ರತಿಭಟನೆ

ಸೇತುವೆ ಇಲ್ಲದಕ್ಕೆ ಸಾಕಷ್ಟು ಅಪಘಾತ ಆಗುತ್ತಿವೆ. ಕೂಡಲೇ ಸೇತುವ ನಿರ್ಮಾಣ ಮಾಡುವಂತೆ ಗ್ರಾಮಸ್ಥರ ಪಟ್ಟು‌ ಹಿಡಿದಿದ್ದಾರೆ. ರಾಮಚಂದ್ರ ಮೃತದೇಹ ತಹಶೀಲ್ದಾರ್​ ಕಚೇರಿಯ ಮುಂದೆ ಇಟ್ಟು ಪ್ರತಿಭಟನೆಗೆ ಮುಂದಾಗಿದ್ದು, ತಹಶೀಲ್ದಾರ್ ಸೇತುವೆ ನಿರ್ಮಾಣದ ಭರವಸೆ ನೀಡಿ ಗ್ರಾಮಸ್ಥರ ಮನವೊಲಿಸಿದ್ದಾರೆ.

ಫ್ಲೈ ಓವರ್ ಇಲ್ಲದ್ದಕ್ಕೆ ವಾಹನ ಡಿಕ್ಕಿಯಾಗಿ ವ್ಯಕ್ತಿ ಸಾವು; ತಹಶೀಲ್ದಾರ್ ಕಚೇರಿ ಮುಂದೆ ಶವವಿಟ್ಟು ಗ್ರಾಮಸ್ಥರ ಪ್ರತಿಭಟನೆ
ಪ್ರಾತಿನಿಧಿಕ ಚಿತ್ರ
Edited By: ಕಿರಣ್ ಹನುಮಂತ್​ ಮಾದಾರ್

Updated on: Sep 21, 2023 | 5:46 PM

ಬೆಳಗಾವಿ, ಸೆ.21: ಫ್ಲೈ ಓವರ್ ಇಲ್ಲದ್ದಕ್ಕೆ ರಸ್ತೆ ದಾಟುವಾಗ ವಾಹನ ಡಿಕ್ಕಿಯಾಗಿ ವ್ಯಕ್ತಿ ಸಾವನ್ನಪ್ಪಿದ್ದು, ಈ ಹಿನ್ನಲೆ ಮೃತನ ಶವ ತಂದು ತಹಶೀಲ್ದಾರ್(Tahasildar)ಕಚೇರಿ ಮುಂದಿಟ್ಟು ಗ್ರಾಮಸ್ಥರು ಪ್ರತಿಭಟನೆ ನಡೆಸಿದ ಘಟನೆ ಬೆಳಗಾವಿ(Belagavi) ಜಿಲ್ಲೆಯ ಕಿತ್ತೂರು ತಹಶೀಲ್ದಾರ್ ಕಚೇರಿ ಮುಂದೆ ನಡೆದಿದೆ. ರಾಮಚಂದ್ರ ಮಣಿಯಾರ(60) ರಸ್ತೆ ದಾಟುವಾಗ ವಾಹನ ಹರಿದು ಮೃತಪಟ್ಟ ರ್ದುದೈವಿ. ಹೌದು, ಗ್ರಾಮಗಳಿಗೆ ತೆರಳಲು ರಾಷ್ಟ್ರೀಯ ಹೆದ್ದಾರಿ ನಾಲ್ಕು ಬೆಂಗಳೂರು-ಪುಣೆ ದಾಟಬೇಕಾದ ಪರಿಸ್ಥಿತಿ ಇದೆ.

ಇನ್ನು ಸೇತುವೆ ಇಲ್ಲದಕ್ಕೆ ಸಾಕಷ್ಟು ಅಪಘಾತ ಆಗುತ್ತಿವೆ. ಕೂಡಲೇ ಸೇತುವ ನಿರ್ಮಾಣ ಮಾಡುವಂತೆ ಗ್ರಾಮಸ್ಥರ ಪಟ್ಟು‌ ಹಿಡಿದಿದ್ದಾರೆ. ರಾಮಚಂದ್ರ ಮೃತದೇಹ ತಹಶೀಲ್ದಾರ್​ ಕಚೇರಿಯ ಮುಂದೆ ಇಟ್ಟು ಪ್ರತಿಭಟನೆಗೆ ಮುಂದಾಗಿದ್ದು, ತಹಶೀಲ್ದಾರ್ ಸೇತುವೆ ನಿರ್ಮಾಣದ ಭರವಸೆ ನೀಡಿ ಗ್ರಾಮಸ್ಥರ ಮನವೊಲಿಸಿದ್ದಾರೆ. ಈ ಕುರಿತು ಕಿತ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ:ದಕ್ಷಿಣ ಕನ್ನಡ: ಕಾರು, ಬೈಕ್​ ನಡುವೆ ಡಿಕ್ಕಿ; ಓರ್ವ ಯುವತಿ ಸಾವು; ಅಪಘಾತ ದೃಶ್ಯ ಸಿಸಿಕ್ಯಾಮರಾದಲ್ಲಿ ಸೆರೆ

ಪೊಲೀಸ್​ ಜೀಪ್​ಗೆ ಗುದ್ದಿದ ಮರಳು ತುಂಬಿದ ಲಾರಿ

ಕೋಲಾರ: ಮುಳಬಾಗಿಲು ತಾಲೂಕಿನ ಹನುಮನಹಳ್ಳಿ ಟೋಲ್​ನಲ್ಲಿ ಪೊಲೀಸ್​ ಜೀಪ್​ಗೆ ಹಿಂದಿನಿಂದ ಮರಳು ತುಂಬಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಪೊಲೀಸ್ ಜೀಪ್​ನಲ್ಲಿದ್ದ ಡಿವೈಎಸ್​ಪಿ ಗೋಪಾಲ ನಾಯ್ಕ್ ಅವರಿಗೆ ಯಾವುದೇ ಪ್ರಾಣಾಪಾಯ ಆಗಿಲ್ಲ. ಇನ್ನು ಅಪಘಾತದ ಬಳಿಕ ಚಾಲಕ ಲಾರಿ ಬಿಟ್ಟು ಪರಾರಿಯಾಗಿದ್ದಾನೆ. ಸ್ಥಳಕ್ಕೆ‌ ಮುಳಬಾಗಿಲು ಗ್ರಾಮಾಂತರ ಠಾಣೆ ಪೊಲೀಸರ ಭೇಟಿ‌ ನೀಡಿ ಪರಿಶೀಲನೆ ನಡೆಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:43 pm, Thu, 21 September 23

ಸಹದೇವ್​ ಮಾನೆ

ಸಹದೇವ ಯಲ್ಲಪ್ಪ ಮಾನೆ. ಹುಟ್ಟಿದ್ದು ಧಾರವಾಡ ತಾಲೂಕಿನ ಗುಳೇದಕೊಪ್ಪ ಗ್ರಾಮ. ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ಕಳೆದ 12 ವರ್ಷದಿಂದ ಟಿವಿ ಮಾಧ್ಯಮದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. 2014ರಲ್ಲಿ ಬೀದರ್ ಜಿಲ್ಲೆಯಿಂದ ವೃತ್ತಿ ಜೀವನ ಪ್ರಾರಂಭ ಮಾಡಿ ಕಲಬುರಗಿ, ಹುಬ್ಬಳ್ಳಿಯಲ್ಲಿ ಕೆಲಸ ಮಾಡಿ ಸದ್ಯ ‘ಟಿವಿ9’ ಕನ್ನಡ ಸುದ್ದಿ ವಾಹಿನಿಯಲ್ಲಿ 9ವರ್ಷಗಳಿಂದ ಬೆಳಗಾವಿ ಜಿಲ್ಲೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ಜಿಲ್ಲೆಯಲ್ಲಿ ಅತ್ಯುತ್ತಮ ಜಿಲ್ಲಾ ವರದಿಗಾರ ಪ್ರಶಸ್ತಿ ಪಡೆದಿದ್ದು, ಗಡಿ ಜಿಲ್ಲೆ ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಕೂಡ ದೊರೆತಿದೆ. ರೈತರ ಸಮಸ್ಯೆಗಳತ್ತ ಬೆಳಕು ಚೆಲ್ಲುವ ವರದಿ ಸೇರಿ ಗಡಿ ಸಮಸ್ಯೆ, ಕ್ರೈಮ್, ಪ್ರವಾಹ ಪರಿಸ್ಥಿತಿ, ನೆರೆಯ ಮಹಾರಾಷ್ಟ್ರ, ಗೋವಾದಲ್ಲಿನ ಬೆಳವಣಿಗೆ ಕುರಿತು ವರದಿ ಮಾಡುತ್ತಿರುವುದು ವಿಶೇಷ.

Read More
Loading...
Unable to load recommendations.
Follow Us