Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ: ಬಾಲಕಿಯನ್ನು ಪುಸಲಾಯಿಸಿ ಗರ್ಭಿಣಿ ಮಾಡಿದ 2 ಮಕ್ಕಳ ತಂದೆ ಅರೆಸ್ಟ್

ಬೆಳಗಾವಿಯಲ್ಲಿ ನರ್ಸಿಂಗ್ ವಿದ್ಯಾರ್ಥಿ ಕೇಸ್ ಗೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಫೆ.19ರಂದು ನಾಪತ್ತೆಯಾಗಿದ್ದ ನರ್ಸಿಂಗ್ ವಿದ್ಯಾರ್ಥಿ ತಾಯಿ ಕಿಡ್ನ್ಯಾಪ್ ಕೇಸ್ ನೀಡಿದ್ದರು. ಆದ್ರೆ, ಯುವತಿ ಪ್ರಿಯಕರನೊಂದಿಗೆ ಓಡಿ ಹೋಗಿ ಮುಂಬೈನಲ್ಲಿ ನೆಲೆಸಿರುವುದು ಬೆಳಕಿಗೆ ಬಂದಿದೆ. ಇದರ ಬೆನ್ನಲ್ಲೇ ಬೆಳಗಾವಿಯಲ್ಲಿ ಮತ್ತೊಂದು ಹೀನ ಕೃತ್ಯಯೊಂದು ನಡೆದಿದೆ. ಎರಡು ಮಕ್ಕಳ ವ್ಯಕ್ತಿಯೋರ್ವನೇ ಅಪ್ರಾಪ್ತೆಯನ್ನು ಗರ್ಭಿಣಿ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.

ಬೆಳಗಾವಿ: ಬಾಲಕಿಯನ್ನು ಪುಸಲಾಯಿಸಿ ಗರ್ಭಿಣಿ ಮಾಡಿದ 2 ಮಕ್ಕಳ ತಂದೆ ಅರೆಸ್ಟ್
Basappa
Follow us
Sahadev Mane
| Updated By: ರಮೇಶ್ ಬಿ. ಜವಳಗೇರಾ

Updated on: Mar 11, 2025 | 2:42 PM

ಬೆಳಗಾವಿ, (ಮಾರ್ಚ್​ 11): ಎರಡು ಮಕ್ಕಳಿರುವ ವ್ಯಕ್ತಿಯೋರ್ವ ಅಪ್ರಾಪ್ತೆಯನ್ನು ಲೈಂಗಿಕವಾಗಿ ಬಳಸಿಕೊಂಡು ಗರ್ಭಿಣಿ ಮಾಡಿರುವ ಘಟನೆ ಬೆಳಗಾವಿಯ ಕುಲಗೋಡ (Kulagod) ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಇದು ಇಡೀ ಮಾನವ ಕುಲವೇ ತಲೆ ತಗ್ಗಿಸುವ ಪೈಶಾಚಿಕ ಕೃತ್ಯವಾಗಿದೆ. ಬಾಲಕಿ ಬಾಣಂತಿಯಾದ ವಿಚಾರ ಗೊತ್ತಾಗುತ್ತಿದ್ದಂತೆ ಪೋಷಕರು ದೂರು ನೀಡಿದ್ದು, ಈ ದೂರಿನ ಮೇರೆಗೆ ಪೊಲೀಸರು ಪೋಕ್ಸೋ ಪ್ರಕರಣದಡಿಯಲ್ಲಿ ಆರೋಪಿ ಬಸಪ್ಪ ಅಡಿವೆಪ್ಪ ಹಳ್ಳೂರ್(32) ಎನ್ನುವಾತನನ್ನು ಬಂಧಿಸಿದ್ದಾರೆ.

ಟ್ರ್ಯಾಕ್ಟರ್ ಡ್ರೈವರ್ ಆಗಿರುವ ಬಸಪ್ಪ ಅಡಿವೆಪ್ಪ ಹಳ್ಳೂರ ಎಂಬಾತನಿಗೆ ಈಗಾಗಲೇ ಮದುವೆಯಾಗಿ ಎರಡು ಮಕ್ಕಳು ಸಹ ಇವೆ. ಆದರೂ ಸಹ ಬಸಪ್ಪ ಅಪ್ರಾಪ್ತೆ ಬಾಲಕಿಯನ್ನು ಪುಸಲಾಯಿಸಿ ಆಕೆಯೊಂದಿಗೆ ನಿರಂತರವಾಗಿ ದೈಹಿಕ ಸಂಪರ್ಕ ಬೆಳಸಿದ್ದಾನೆ. ಪರಿಣಾಮ ಬಾಲಕಿ ಇದೀಗ ಗರ್ಭಿಣಿಯಾಗಿರುವುದು ಬೆಳಕಿಗೆ ಬಂದಿದೆ.

ಇದನ್ನೂ ಓದಿ: ಬೆಳಗಾವಿ ನರ್ಸಿಂಗ್ ವಿದ್ಯಾರ್ಥಿನಿ ಅಪಹರಣ ಪ್ರಕರಣಕ್ಕೆ ಟ್ವಿಸ್ಟ್​​, ಸದ್ರುದ್ದಿನ್ ಜೊತೆ ಓಡಿ ಹೋಗಿದ್ದಳು ಯುವತಿ

ಆರೋಗ್ಯ ಮತ್ತು ದೇಹದಲ್ಲಿ ಕೊಂಚ ವ್ಯತ್ಯಾಸ ಕಂಡುಬಂದಿದ್ದರಿಂದ ಕುಟುಂಬಸ್ಯರು ಕೂಡಲೇ ಬಾಲಕಿಯನ್ಉ ವೈದ್ಯರ ಬಳಿ ಕರೆದುಕೊಂಡು ಹೋಗಿ ಪರೀಕ್ಷೆ ಮಾಡಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಬಾಲಕಿ ಗರ್ಭಿಣಿಯಾಗಿರುವ ವಿಚಾರ ಗೊತ್ತಾಗುತ್ತಿದ್ದಂತೆಯೇ ಆಕೆ ಪೋಷಕರು ಶಾಕ್ ಆಗಿದ್ದಾರೆ.  ಬಳಿಕ ಬಾಲಕಿ ಪೋಷಕರು ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾರೆ. ಈ ದೂರಿನ ಮೇರೆಗೆ ಪೊಲೀಸರು ಆರೋಪಿ ಬಸಪ್ಪ ಅಡಿವೆಪ್ಪ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಿಕೊಂಡು ಬಂಧಿಸಿದ್ದಾರೆ.

ಇದನ್ನೂ ಓದಿ
Image
ಬೆಳಗಾವಿ ನರ್ಸಿಂಗ್ ವಿದ್ಯಾರ್ಥಿನಿ ಅಪಹರಣ ಪ್ರಕರಣಕ್ಕೆ ಟ್ವಿಸ್ಟ್
Image
ಬಸ್​ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಕೆಎಸ್​ಆರ್​ಟಿಸಿ ನೌಕರ
Image
ಬೆಳಗಾವಿ: ಮೂವರು ಮಕ್ಕಳೊಂದಿಗೆ ಕೃಷ್ಣಾ ನದಿಗೆ ಹಾರಿ ತಾಯಿ ಆತ್ಮಹತ್ಯೆ
Image
ಪ್ರೇಯಸಿಯ ಕತ್ತು ಸೀಳಿ ಬಳಿಕ ಅದೇ ಚಾಕುವಿನಿಂದ ಕತ್ತು ಕೊಯ್ದುಕೊಂಡ ಪ್ರಿಯಕರ

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ