ಬೆಳಗಾವಿ: ತನ್ನ ಪತ್ನಿ ಮೇಲೆ ಕಣ್ಣು ಹಾಕಿದ ಸ್ನೇಹಿತನಿಗೆ ಚಾಕು ಇರಿದ ಗೆಳೆಯ, ಚಿಕಿತ್ಸೆ ಫಲಿಸದೆ ಸಾವು

ವ್ಯಕ್ತಿಯೊಬ್ಬ ತನ್ನ ಪತ್ನಿ ಮೇಲೆ ಕಣ್ಣು ಹಾಕಿದ ಸ್ನೇಹಿತನನ್ನೇ ಕೊಲೆ ಮಾಡಿದ ಘಟನೆ ಬೆಳಗಾವಿ ತಾಲೂಕಿನ ಹುಲಿಯಾಳ ಗ್ರಾಮದಲ್ಲಿ ನಡೆದಿದೆ. ಆಗಸ್ಟ್ 9 ರಂದು ರಾತ್ರಿ ಚಾಕು ಇರಿಯಲಾಗಿತ್ತು. ಬಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಾಯಾಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ.

ಬೆಳಗಾವಿ: ತನ್ನ ಪತ್ನಿ ಮೇಲೆ ಕಣ್ಣು ಹಾಕಿದ ಸ್ನೇಹಿತನಿಗೆ ಚಾಕು ಇರಿದ ಗೆಳೆಯ, ಚಿಕಿತ್ಸೆ ಫಲಿಸದೆ ಸಾವು
ಕೊಲೆ ಆರೋಪಿ ಹುಲ್ಲೆಪ್ಪಾ ಕರೀಕಟ್ಟಿ ಮತ್ತು ಕೊಲೆಯಾದ ಅಭಿಷೇಕ್ ಬುಡ್ರಿ
Edited By: Rakesh Nayak Manchi

Updated on: Aug 14, 2023 | 4:10 PM

ಬೆಳಗಾವಿ, ಆಗಸ್ಟ್ 14: ತನ್ನ ಸ್ನೇಹಿತನ ಪತ್ನಿ ಮೇಲೆ ಕಣ್ಣು ಹಾಕಿ ಚಾಕು ಇರಿತಕ್ಕೊಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ. ಬೆಳಗಾವಿ ತಾಲೂಕಿನ ಹುಲಿಯಾಳ ಗ್ರಾಮದಲ್ಲಿ ಆಗಸ್ಟ್ 9 ರಂದು ನಡೆದಿದ್ದ ಚಾಕು ಇರಿತ ಪ್ರಕರಣ ಇದಾಗಿದ್ದು, ಅಭಿಷೇಕ್ ಬುಡ್ರಿ (19) ಕೊಲೆಯಾದ (Muder) ಯುವಕನಾಗಿದ್ದಾನೆ.

ಹುಲ್ಲೆಪ್ಪಾ ಕರೀಕಟ್ಟಿ ಎಂಬವನ ಪತ್ನಿ ಮೇಲೆ ಅಭಿಷೇಕ್ ಬುಡ್ರಿ ಕಣ್ಣು ಹಾಕಿದ್ದನು. ಈ ಬಗ್ಗೆ ವಿಚಾರ ತಿಳಿದ ಹುಲ್ಲೆಪ್ಪಾ, ಆಗಸ್ಟ್ 9 ರಂದು ರಾತ್ರಿ ಬರ್ತ್​ಡೇ ಪಾರ್ಟಿ ಇದೆ ಅಂತಾ ಅಭಿಷೇಕ್​ನನ್ನು ಕರೆದುಕೊಂಡು ಹೋಗಿ ಚಾಕುವಿನಿಂದ ಇರಿದು ಪರಾರಿಯಾಗಿದ್ದನು.

ಇದನ್ನೂ ಓದಿ: ಬೆಳಗಾವಿಯ ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣ ಮತ್ತೆ ರೀ ಓಪನ್ ಮಾಡುತ್ತಾ ಸರ್ಕಾರ..?

ಚಾಕುವಿನಿಂದ ಇರಿತಕ್ಕೊಳಗಾಗಿ ಗಂಭೀರವಾಗಿ ಗಾಯಗೊಂಡಿದ್ದ ಅಭಿಷೇಕ್​ನನ್ನು ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕೆಲವು ದಿನಗಳ ಕಾಲ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಅಭಿಷೇಕ್ ಇದೀಗ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ. ಘಟನೆ ಸಂಬಂಧ ಮಾರಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಹುಲ್ಲೆಪ್ಪಾನನ್ನು ಪೊಲೀಸರು ಬಂಧಿಸಿದ್ದಾರೆ.

ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:52 pm, Mon, 14 August 23

ಸಹದೇವ್​ ಮಾನೆ

ಸಹದೇವ ಯಲ್ಲಪ್ಪ ಮಾನೆ. ಹುಟ್ಟಿದ್ದು ಧಾರವಾಡ ತಾಲೂಕಿನ ಗುಳೇದಕೊಪ್ಪ ಗ್ರಾಮ. ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ಕಳೆದ 12 ವರ್ಷದಿಂದ ಟಿವಿ ಮಾಧ್ಯಮದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. 2014ರಲ್ಲಿ ಬೀದರ್ ಜಿಲ್ಲೆಯಿಂದ ವೃತ್ತಿ ಜೀವನ ಪ್ರಾರಂಭ ಮಾಡಿ ಕಲಬುರಗಿ, ಹುಬ್ಬಳ್ಳಿಯಲ್ಲಿ ಕೆಲಸ ಮಾಡಿ ಸದ್ಯ ‘ಟಿವಿ9’ ಕನ್ನಡ ಸುದ್ದಿ ವಾಹಿನಿಯಲ್ಲಿ 9ವರ್ಷಗಳಿಂದ ಬೆಳಗಾವಿ ಜಿಲ್ಲೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ಜಿಲ್ಲೆಯಲ್ಲಿ ಅತ್ಯುತ್ತಮ ಜಿಲ್ಲಾ ವರದಿಗಾರ ಪ್ರಶಸ್ತಿ ಪಡೆದಿದ್ದು, ಗಡಿ ಜಿಲ್ಲೆ ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಕೂಡ ದೊರೆತಿದೆ. ರೈತರ ಸಮಸ್ಯೆಗಳತ್ತ ಬೆಳಕು ಚೆಲ್ಲುವ ವರದಿ ಸೇರಿ ಗಡಿ ಸಮಸ್ಯೆ, ಕ್ರೈಮ್, ಪ್ರವಾಹ ಪರಿಸ್ಥಿತಿ, ನೆರೆಯ ಮಹಾರಾಷ್ಟ್ರ, ಗೋವಾದಲ್ಲಿನ ಬೆಳವಣಿಗೆ ಕುರಿತು ವರದಿ ಮಾಡುತ್ತಿರುವುದು ವಿಶೇಷ.

Read More
Loading...
Unable to load recommendations.
Follow Us