ಇಂದು ಕೊಲ್ಹಾಪುರ ಬಂದ್​​: ರಾಜ್ಯದಿಂದ ಮಹಾರಾಷ್ಟ್ರಕ್ಕೆ ಕೆಎಸ್​ಆರ್​ಟಿಸಿ ಬಸ್​ ಸಂಚಾರ ಸ್ಥಗಿತ

ಮರಾಠ ಮೀಸಲಾತಿ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದನ್ನು ಖಂಡಿಸಿ ಖಂಡಿಸಿ ಇಂದು (ಸೆ.05) ಮರಾಠಾ ಸಮುದಾಯದಿಂದ ಕೊಲ್ಹಾಪುರ ನಗರ ಬಂದ್‌ಗೆ ಕರೆ ನೀಡಲಾಗಿದೆ. ಕೊಲ್ಹಾಪುರ ನಗರದಲ್ಲಿ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ಬಂದ್​ ಮಾಡಲಾಗಿದೆ.

ಇಂದು ಕೊಲ್ಹಾಪುರ ಬಂದ್​​: ರಾಜ್ಯದಿಂದ ಮಹಾರಾಷ್ಟ್ರಕ್ಕೆ ಕೆಎಸ್​ಆರ್​ಟಿಸಿ ಬಸ್​ ಸಂಚಾರ ಸ್ಥಗಿತ
ಕೊಲ್ಹಾಪುರ ಬಂದ್​
Follow us
| Updated By: ವಿವೇಕ ಬಿರಾದಾರ

Updated on: Sep 05, 2023 | 11:35 AM

ಚಿಕ್ಕೋಡಿ, ಸೆ.05: ಮಹಾರಾಷ್ಟ್ರದಲ್ಲಿ (Maharashtra) ಜಲ್ನಾ ಜಿಲ್ಲೆಯಲ್ಲಿ ಮರಾಠ ಮೀಸಲಾತಿ ಪ್ರತಿಭಟನಾಕಾರರ ಮೇಲೆ (Maratha protest) ಪೊಲೀಸರು ಲಾಠಿ ಚಾರ್ಜ್ ಮಾಡಿದ್ದರು. ಅಲ್ಲದೇ ಪ್ರತಿಭಟನಾಕಾರರು ನಿರ್ಮಿಸಿದ್ದ ಟೆಂಟ್‌ಗೆ ಪೊಲೀಸರು ನುಗ್ಗಿ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದರು. ಈ ಲಾಠಿಚಾರ್ಜ್​ ಅನ್ನು ಖಂಡಿಸಿ ಇಂದು (ಸೆ.05) ಮರಾಠಾ ಸಮುದಾಯದಿಂದ ಕೊಲ್ಹಾಪುರ ನಗರ ಬಂದ್‌ಗೆ ಕರೆ ನೀಡಲಾಗಿದೆ. ಕೊಲ್ಹಾಪುರ ನಗರದಲ್ಲಿ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ಬಂದ್​ ಮಾಡಲಾಗಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಕೊಲ್ಹಾಪುರ ನಗರಕ್ಕೆ ಸಂಚರಿಸುವ ಕರ್ನಾಟಕದ ಕೆಎಸ್​ಆರ್​​​ಟಿಸಿ ಬಸ್​​ಗಳ ಸಂಚಾರ ಸ್ಥಗಿತಗೊಳಿಸಲಾಗಿದೆ.

ಇನ್ನು ಮಹಾರಾಷ್ಟ್ರದಲ್ಲಿ ಪ್ರತಿಭಟನೆ ತೀರ್ವ ಸ್ವರೂಪ ಪಡೆದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಏಕನಾಥ ಶಿಂಧೆ ಅವರು ನಿನ್ನೆ (ಸೆ.04) ರಂದು ಉನ್ನತ ಮಟ್ಟದ ಸಭೆ ನಡೆಸಿದ್ದರು. ಸಭೆ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ನಾವು ಮರಾಠ ಮೀಸಲಾತಿ ಕುರಿತು ಉನ್ನತ ಮಟ್ಟದ ಸಭೆ ನಡೆಸಿದ್ದೇವೆ. ನಾನು ಈಗಾಗಲೇ ಪ್ರತಿಭಟನಾಕಾರರೊಂದಿಗೆ ಮಾತನಾಡಿದ್ದೇನೆ. ನಾವು ಈ ಸಮಸ್ಯೆಯನ್ನು ವ್ಯವಸ್ಥಿತವಾಗಿ ಪರಿಹರಿಸುತ್ತೇವೆ. ಮರಾಠಾ ಮೀಸಲಾತಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ನಮ್ಮ ಸರ್ಕಾರ ಗಂಭೀರ ಕಾರ್ಯನಿರ್ವಹಿಸುತ್ತಿದೆ’ ಎಂದು ಹೇಳಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್