ಚಿಕ್ಕೋಡಿ, ಸೆ.05: ಮಹಾರಾಷ್ಟ್ರದಲ್ಲಿ (Maharashtra) ಜಲ್ನಾ ಜಿಲ್ಲೆಯಲ್ಲಿ ಮರಾಠ ಮೀಸಲಾತಿ ಪ್ರತಿಭಟನಾಕಾರರ ಮೇಲೆ (Maratha protest) ಪೊಲೀಸರು ಲಾಠಿ ಚಾರ್ಜ್ ಮಾಡಿದ್ದರು. ಅಲ್ಲದೇ ಪ್ರತಿಭಟನಾಕಾರರು ನಿರ್ಮಿಸಿದ್ದ ಟೆಂಟ್‌ಗೆ ಪೊಲೀಸರು ನುಗ್ಗಿ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದರು. ಈ ಲಾಠಿಚಾರ್ಜ್ ಅನ್ನು ಖಂಡಿಸಿ ಇಂದು (ಸೆ.05) ಮರಾಠಾ ಸಮುದಾಯದಿಂದ ಕೊಲ್ಹಾಪುರ ನಗರ ಬಂದ್‌ಗೆ ಕರೆ ನೀಡಲಾಗಿದೆ. ಕೊಲ್ಹಾಪುರ ನಗರದಲ್ಲಿ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಲಾಗಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಕೊಲ್ಹಾಪುರ ನಗರಕ್ಕೆ ಸಂಚರಿಸುವ ಕರ್ನಾಟಕದ ಕೆಎಸ್ಆರ್ಟಿಸಿ ಬಸ್ಗಳ ಸಂಚಾರ ಸ್ಥಗಿತಗೊಳಿಸಲಾಗಿದೆ.
ಇನ್ನು ಮಹಾರಾಷ್ಟ್ರದಲ್ಲಿ ಪ್ರತಿಭಟನೆ ತೀರ್ವ ಸ್ವರೂಪ ಪಡೆದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಏಕನಾಥ ಶಿಂಧೆ ಅವರು ನಿನ್ನೆ (ಸೆ.04) ರಂದು ಉನ್ನತ ಮಟ್ಟದ ಸಭೆ ನಡೆಸಿದ್ದರು. ಸಭೆ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ನಾವು ಮರಾಠ ಮೀಸಲಾತಿ ಕುರಿತು ಉನ್ನತ ಮಟ್ಟದ ಸಭೆ ನಡೆಸಿದ್ದೇವೆ. ನಾನು ಈಗಾಗಲೇ ಪ್ರತಿಭಟನಾಕಾರರೊಂದಿಗೆ ಮಾತನಾಡಿದ್ದೇನೆ. ನಾವು ಈ ಸಮಸ್ಯೆಯನ್ನು ವ್ಯವಸ್ಥಿತವಾಗಿ ಪರಿಹರಿಸುತ್ತೇವೆ. ಮರಾಠಾ ಮೀಸಲಾತಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ನಮ್ಮ ಸರ್ಕಾರ ಗಂಭೀರ ಕಾರ್ಯನಿರ್ವಹಿಸುತ್ತಿದೆ’ ಎಂದು ಹೇಳಿದ್ದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ