ಮರಾಠ ಮೀಸಲಾತಿ ಕಿಚ್ಚು: ಕರ್ನಾಟಕ-ಮಹಾರಾಷ್ಟ್ರ ಮಧ್ಯೆ ಬಸ್​ ಸಂಚಾರ 2ನೇ ದಿನವೂ ಸ್ಥಗಿತ

| Updated By: ವಿವೇಕ ಬಿರಾದಾರ

Updated on: Nov 01, 2023 | 1:10 PM

NWKRTC ಚಿಕ್ಕೋಡಿ ವಿಭಾಗದಿಂದ ಮಹಾರಾಷ್ಟ್ರಕ್ಕೆ ತೆರಳುವ 215ಕ್ಕೂ ಹೆಚ್ಚು ಬಸ್‌ಗಳ ಸಂಚಾರ ಸ್ಥಗಿತಗೊಳಿಸಲಾಗಿದೆ. ಬಸ್ ಸಂಚಾರ ಸ್ಥಗಿತವಾದ ಹಿನ್ನೆಲೆಯಲ್ಲಿ ಪ್ರಯಾಣಿಕರು ಪರದಾಡುತ್ತಿದ್ದಾರೆ. ಬಸ್ ಸಂಚಾರ ಸ್ಥಗಿತವನ್ನೇ ಬಂಡವಾಳ ಮಾಡಿಕೊಂಡ ಖಾಸಗಿ ವಾಹನದವರು ಪ್ರಯಾಣಿಕರಿಂದ ಹೆಚ್ಚಿನ ದುಡ್ಡು ಕೇಳುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಮರಾಠ ಮೀಸಲಾತಿ ಕಿಚ್ಚು: ಕರ್ನಾಟಕ-ಮಹಾರಾಷ್ಟ್ರ ಮಧ್ಯೆ ಬಸ್​ ಸಂಚಾರ 2ನೇ ದಿನವೂ ಸ್ಥಗಿತ
ಎನ್​ಡಬ್ಲೂಕೆಆರ್​ಟಿಸಿ
Follow us on

ಚಿಕ್ಕೋಡಿ ನ.01: ಮರಾಠ ಸಮುದಾಯಕ್ಕೆ ಮೀಸಲಾತಿ (Maratha Reservation) ನೀಡುವಂತೆ ಆಗ್ರಹಿಸಿ ನಡೆಯುತ್ತಿರುವ ಹೋರಾಟ ಮಹಾರಾಷ್ಟ್ರದಲ್ಲಿ (Maharashtra) ಹಿಂಸಾಚಾರಕ್ಕೆ ತಿರುಗಿದ್ದು, ಸೋಮವಾರ ನಡೆದ ಗಲಾಟೆಯಲ್ಲಿ ಕರ್ನಾಟಕಕ್ಕೆ (Karnataka) ಸೇರಿದ ಕೆಕೆಆರ್​​​​​ಟಿಸಿ (KKRTC) ಬಸ್​​​​​ಗೆ ಬೆಂಕಿ ಹಚ್ಚಲಾಗಿತ್ತು. ಈ ಹಿನ್ನೆಲೆಯಲ್ಲಿ ನಿನ್ನೆ (ಅ.31) ರಿಂದಲೇ ಕರ್ನಾಟಕ-ಮಹಾರಾಷ್ಟ್ರ ಮಧ್ಯೆ ಬಸ್​ ಸಂಚಾರವನ್ನು ಅಧಿಕಾರಿಗಳು ಸ್ಥಗಿತಗೊಳಿಸಿದ್ದರು. ಎರಡು ರಾಜ್ಯಗಳ ಮಧ್ಯೆದ ಬಸ್ ಸಂಚಾರ ಸ್ಥಗಿತ ಎರಡನೇ ದಿನವೂ ಮುಂದುವರೆದಿದೆ.

NWKRTC ಚಿಕ್ಕೋಡಿ ವಿಭಾಗದಿಂದ ಮಹಾರಾಷ್ಟ್ರಕ್ಕೆ ತೆರಳುವ 215ಕ್ಕೂ ಹೆಚ್ಚು ಬಸ್‌ಗಳ ಸಂಚಾರ ಸ್ಥಗಿತಗೊಳಿಸಲಾಗಿದೆ. ಬಸ್ ಸಂಚಾರ ಸ್ಥಗಿತವಾದ ಹಿನ್ನೆಲೆಯಲ್ಲಿ ಪ್ರಯಾಣಿಕರು ಪರದಾಡುತ್ತಿದ್ದಾರೆ. ಬಸ್ ಸಂಚಾರ ಸ್ಥಗಿತವನ್ನೇ ಬಂಡವಾಳ ಮಾಡಿಕೊಂಡ ಖಾಸಗಿ ವಾಹನದವರು ಪ್ರಯಾಣಿಕರಿಂದ ಹೆಚ್ಚಿನ ದುಡ್ಡು ಕೇಳುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಇನ್ನು ಮಹಾರಾಷ್ಟ್ರದ ಕೊಲ್ಹಾಪುರ ಮಾರ್ಗಕ್ಕೆ ತೆರಳುವ ಕೆಎಸ್‌ಆರ್‌ಟಿಸಿ ಬಸ್‌ಗಳು ನಿಪ್ಪಾಣಿವರೆಗೆ ಮಾತ್ರ ಸಂಚರಿಸುತ್ತಿವೆ. ಮೀರಜ್​ಗೆ ತೆರಳುವ ಬಸ್‌ಗಳು ಕಾಗವಾಡವರೆಗೆ ಮಾತ್ರ ಸಂಚರಿಸುತ್ತಿವೆ. ಇಚಲಕರಂಜಿಗೆ ತೆರಳುವ ಬಸ್‌ಗಳು ಬೋರಗಾಂವವರೆಗೆ ಮಾತ್ರ ಪ್ರಯಾಣ ಮಾಡುತ್ತಿವೆ.

ಇದನ್ನೂ ಓದಿ: ಕರ್ನಾಟಕ-ಮಹಾರಾಷ್ಟ್ರ ಮಧ್ಯೆ‌ ಬಸ್ ಸಂಚಾರ ತಾತ್ಕಾಲಿಕ ಸ್ಥಗಿತ

ಪ್ರಯಾಣಿಕರು ನಿಪ್ಪಾಣಿಯಿಂದ ಕೊಲ್ಹಾಪುರದತ್ತ ತೆರಳಲು ಖಾಸಗಿ ವಾಹನಗಳ ಮೊರೆ ಹೋಗಿದ್ದಾರೆ. ಖಾಸಗಿ ವಾಹನ ಚಾಲಕರು ಪ್ರಯಾಣಿಕರಿಂದ ಒನ್ ಟು ಡಬಲ್ ಹಣ ವಸೂಲಿ ಮಾಡುತ್ತಿದ್ದಾರೆ. ನಿಪ್ಪಾಣಿಯಿಂದ ಕೊಲ್ಹಾಪುರಕ್ಕೆ 69 ರೂ. ದರ ಇದ್ದರೇ 150 ರೂಪಾಯಿ ಪಡೆಯುತ್ತಿದ್ದಾರೆ.

ಮಹಾರಾಷ್ಟ್ರದಲ್ಲಿರುವ ಐತಿಹಾಸಿಕ ಕೊಲ್ಹಾಪುರ ಮಹಾಲಕ್ಷ್ಮಿ ದೇವಲಾಯಕ್ಕೆ ಕರ್ನಾಟಕದಿಂದ ನಿತ್ಯ ಸಾವಿರಾರು ಭಕ್ತರು ತೆರಳುತ್ತಾರೆ. ಮತ್ತೊಂದೆಡೆ ರೋಗಿಗಳು ಮೀರಜ್‌ನ ಆಸ್ಪತ್ರೆಗೆ ತೆರಳುತ್ತಾರೆ. ಇದೀಗ ಬಸ್​ ಸಂಚಾರ ಸ್ಥಗಿತವಾಗಿದ್ದರಿಂದ ಭಕ್ತಾದಿಗಳು ಮತ್ತು ರೋಗಿಗಳು ನರಕಯಾತನೆ ಅನುಭವಿಸುತ್ತಿದ್ದಾರೆ. ಪ್ರತಿಭಟನೆ ಮಾಡಿ ಮನವಿ ನೀಡಿ ಆದರೆ ಬಸ್‌ಗಳಿಗೆ ಬೆಂಕಿ ಹಚ್ಚಬೇಡಿ ಎಂದು ಪ್ರಯಾಣಿಕರ ಮನವಿ ಮಾಡಿಕೊಂಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ