Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮರಾಠಾ ಮೀಸಲಾತಿ ಕಿಚ್ಚು: ಸಾಂಗ್ಲಿಯಲ್ಲಿ ಟಯರ್​ಗೆ ಬೆಂಕಿ ಹಚ್ಚಿ ಆಕ್ರೋಶ, ಕೆಎಸ್​ಆರ್​ಟಿಸಿ ಬಸ್​​ ಸಂಚಾರ ಸ್ಥಗಿತ

ಉದ್ಯೋಗ ಮತ್ತು ಶಿಕ್ಷಣದಲ್ಲಿ ಮರಾಠಾ ಸಮುದಾಯಕ್ಕೆ ಮೀಸಲಾತಿ ನೀಡುವಂತೆ ಒತ್ತಾಯಿಸಿ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯಲ್ಲಿ ಬಂದ್‌ ಆಚರಿಸಲಾಗುತ್ತಿದೆ. ಟಯರ್​ಗಳಿಗೆ ಬೆಂಕಿ ಹಚ್ಚಿ, ಘೋಷಣೆಗಳನ್ನು ಕೂಗಿ ಆಕ್ರೋಶ ಹೊರ ಹಾಕಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸಾಂಗ್ಲಿ ಜಿಲ್ಲೆಗೆ ತೆರಳುವ ಕೆಎಸ್‌ಆರ್‌ಟಿಸಿ ಬಸ್‌ಗಳ ಸಂಚಾರ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

ಮರಾಠಾ ಮೀಸಲಾತಿ ಕಿಚ್ಚು: ಸಾಂಗ್ಲಿಯಲ್ಲಿ ಟಯರ್​ಗೆ ಬೆಂಕಿ ಹಚ್ಚಿ ಆಕ್ರೋಶ, ಕೆಎಸ್​ಆರ್​ಟಿಸಿ ಬಸ್​​ ಸಂಚಾರ ಸ್ಥಗಿತ
ಮರಾಠಾ ಮೀಸಲಾತಿ ಪ್ರತಿಭಟನೆ
Follow us
ಮಹಾಂತೇಶ ಕುರಬೇಟ, ಟಿವಿ9 ಚಿಕ್ಕೋಡಿ
| Updated By: ಆಯೇಷಾ ಬಾನು

Updated on: Sep 07, 2023 | 12:46 PM

ಚಿಕ್ಕೋಡಿ, ಸೆ.07: ಮಹಾರಾಷ್ಟ್ರದಲ್ಲಿ ದಿನೇ ದಿನೇ ಮರಾಠಾ ಮೀಸಲಾತಿ ಕಿಚ್ಚು(Maratha Reservation) ತೀವ್ರಗೊಳ್ಳುತ್ತಿದೆ. ಮಹಾರಾಷ್ಟ್ರದ ಜಾಲ್ನಾದಲ್ಲಿ ಮರಾಠಾ ಮೀಸಲಾತಿ ಹೋರಾಟದ ವೇಳೆ ನಡೆದ ಲಾಠಿಚಾರ್ಜ್‌ ಖಂಡಿಸಿ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆ ಬಂದ್‌ಗೆ ಮರಾಠಾ ಸಮುದಾಯ ಕರೆ ನೀಡಿದೆ. ಕೊಲ್ಹಾಪುರ ಬಳಿಕ ಇಂದು ಸಾಂಗ್ಲಿ ಜಿಲ್ಲೆ ಬಂದ್ ಮಾಡಲಾಗಿದೆ(Sangli Bandh). ಸಾಂಗ್ಲಿ ನಗರದಲ್ಲಿ ಟಯರ್‌ಗೆ ಬೆಂಕಿ ಹಚ್ಚಿ ಪ್ರತಿಭಟನೆ(Protest) ನಡೆಸಲಾಗುತ್ತಿದೆ. ಏಕ್ ಮರಾಠಾ ಲಾಕ್ ಮರಾಠಾ ಎಂದು ಘೋಷಣೆ ಕೂಗಿ ಆಕ್ರೋಶ ಹೊರ ಹಾಕಲಾಗುತ್ತಿದೆ. ಇನ್ನು ಸಾಂಗ್ಲಿ ಜಿಲ್ಲೆಗೆ ತೆರಳುವ ಕೆಎಸ್​ಆರ್​ಟಿಸಿ ಬಸ್​​ಗಳ ಸಂಚಾರ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

ಉದ್ಯೋಗ ಮತ್ತು ಶಿಕ್ಷಣದಲ್ಲಿ ಮರಾಠಾ ಸಮುದಾಯಕ್ಕೆ ಮೀಸಲಾತಿ ನೀಡುವಂತೆ ಒತ್ತಾಯಿಸಿ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯಲ್ಲಿ ಬಂದ್‌ ಆಚರಿಸಲಾಗುತ್ತಿದೆ. ಟಯರ್​ಗಳಿಗೆ ಬೆಂಕಿ ಹಚ್ಚಿ, ಘೋಷಣೆಗಳನ್ನು ಕೂಗಿ ಆಕ್ರೋಶ ಹೊರ ಹಾಕಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸಾಂಗ್ಲಿ ಜಿಲ್ಲೆಗೆ ತೆರಳುವ ಕೆಎಸ್‌ಆರ್‌ಟಿಸಿ ಬಸ್‌ಗಳ ಸಂಚಾರ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಬೆಳಗಾವಿ ಜಿಲ್ಲೆ ಕಾಗವಾಡ ಮಾರ್ಗವಾಗಿ ಸಾಂಗ್ಲಿ ಜಿಲ್ಲೆಗೆ ತೆರಳುವ ಬಸ್‌ಗಳ ಸಂಚಾರ ಸ್ಥಗಿತಗೊಂಡಿದೆ. ಮಹಾರಾಷ್ಟ್ರದ ಗಡಿಭಾಗದವರೆಗೆ ಮಾತ್ರ ರಾಜ್ಯ ಸಾರಿಗೆ ಬಸ್‌ಗಳು ಸಂಚರಿಸುತ್ತಿವೆ.

ಇದನ್ನೂ ಓದಿ: ಮಹಾರಾಷ್ಟ್ರ: ಜಾಲನಾದಲ್ಲಿ ಹಿಂಸಾರೂಪ ಪಡೆದ ಮರಾಠಾ ಮೀಸಲಾತಿ ಹೋರಾಟ, 300ಕ್ಕೂ ಹೆಚ್ಚು ಮಂದಿ ವಿರುದ್ಧ ಕೇಸು

ಕರ್ನಾಟಕ ಬಸ್‌ಗೆ ಬೆಂಕಿ

ಶಿಕ್ಷಣ ಮತ್ತು ಉದ್ಯೋಗದಲ್ಲಿ ಮರಾಠಾ ಸಮುದಾಯಕ್ಕೆ ಮೀಸಲಾತಿ ನೀಡುವಂತೆ ಆಗ್ರಹಿಸಿ ಕಳೆದ ಕೆಲವು ದಿನಗಳಿಂದ ಪ್ರತಿಭಟನೆಗಳು ನಡೆಯುತ್ತಿವೆ. ಇತ್ತೀಚೆಗೆ ಮರಾಠಾ ಮೀಸಲಾತಿ ಉದ್ರಿಕ್ತ ಹೋರಾಟಗಾರು ಕರ್ನಾಟಕ ಸಾರಿಗೆ ಬಸ್‌ಗೆ ಬೆಂಕಿ ಇಟ್ಟಿದ್ದರು. ಮಹಾರಾಷ್ಟ್ರದ ವಡಿಗೋದ್ರಿ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಔರಂಗಾಬಾದ್-ಹುಬ್ಬಳ್ಳಿ ಮಾರ್ಗದ ಬಸ್‌ಗೆ ಬೆಂಕಿ ಹಚ್ಚಿದ್ದರು. ಅದೃಷ್ಟವಶಾತ್ ಚಾಲಕ, ನಿರ್ವಾಹಕ ಹಾಗೂ ಪ್ರಯಾಣಿಕರಿಗೆ ಯಾವುದೇ ಜೀವ ಹಾನಿ ಸಂಭವಿಸಿರಲಿಲ್ಲ.

ಜಾಲ್ನಾ ಜಿಲ್ಲೆಯ ಶಹಾಗಡ್‌ನಲ್ಲಿ ಪ್ರತಿಭಟನೆ ವೇಳೆ ಸ್ಥಳಕ್ಕೆ ಪೊಲೀಸರು ಬಂದಾಗ ಉದ್ರಿಕ್ತರಿಂದ ಕಲ್ಲು ತೂರಾಟ ನಡೆದಿತ್ತು. ಆಗ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದರು. ಲಾಠಿ ಚಾರ್ಜ್ ಬಳಿಕ ಜಾಲ್ನಾ ಜಿಲ್ಲೆಯ ವಡಿಗೋದ್ರಿ ಬಳಿ ವಾಹನಗಳ ಮೇಲೆ ಹೋರಾಟಗಾರರು ಕಲ್ಲು ತೂರಾಟ ನಡೆಸಿದ್ದರು. ಈ ವೇಳೆ ಕೆಎಸ್ಆರ್‌ಟಿಸಿ ಹಾಗೂ ಮಹಾರಾಷ್ಟ್ರ ಸಾರಿಗೆ ಬಸ್ ಸೇರಿದಂತೆ ಆರಕ್ಕೂ ಹೆಚ್ಚು ವಾಹನಗಳಿಗೆ ಬೆಂಕಿ ಹಚ್ಚಲಾಗಿತ್ತು.ಇಂದು ಕೂಡ ಪ್ರತಿಭಟನೆಯ ಕಿಚ್ಚು ಜೋರಾಗಿದೆ.

ಬೆಳಗಾವಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಯಡಿಯೂರಪ್ಪ ಜೊತೆ ಬಸ್ಸಲ್ಲಿ ಹೋಗಲು ಬಿಜೆಪಿ ನಾಯಕರಲ್ಲಿ ಪೈಪೋಟಿ
ಯಡಿಯೂರಪ್ಪ ಜೊತೆ ಬಸ್ಸಲ್ಲಿ ಹೋಗಲು ಬಿಜೆಪಿ ನಾಯಕರಲ್ಲಿ ಪೈಪೋಟಿ
ಬ್ಯಾಂಕಾಕ್​ನಲ್ಲಿ ಥಾಯ್ ರಾಮಾಯಣ ವೀಕ್ಷಿಸಿದ ಪ್ರಧಾನಿ ಮೋದಿ
ಬ್ಯಾಂಕಾಕ್​ನಲ್ಲಿ ಥಾಯ್ ರಾಮಾಯಣ ವೀಕ್ಷಿಸಿದ ಪ್ರಧಾನಿ ಮೋದಿ
RCB vs GT: ನಾನು ಮ್ಯಾಚ್ ವಿನ್ನರ್ ಸಿರಾಜ್ ಅನ್ನು ಮಾತ್ರ ನಂಬುತ್ತೇನೆ..!
RCB vs GT: ನಾನು ಮ್ಯಾಚ್ ವಿನ್ನರ್ ಸಿರಾಜ್ ಅನ್ನು ಮಾತ್ರ ನಂಬುತ್ತೇನೆ..!
ಇಳಿವಯಸ್ಸಿನಲ್ಲೂ ಯಡಿಯೂರಪ್ಪ ಪಕ್ಷದ ಅತ್ಯಂತ ಪ್ರಭಾವಿ ನಾಯಕ
ಇಳಿವಯಸ್ಸಿನಲ್ಲೂ ಯಡಿಯೂರಪ್ಪ ಪಕ್ಷದ ಅತ್ಯಂತ ಪ್ರಭಾವಿ ನಾಯಕ
ಸಿದ್ದಗಂಗಾ ಮಠದ ಜೊತೆ ನನ್ನ ಕುಟಂಬಕ್ಕೆ ಅವಿನಾಭಾವ ಸಂಬಂಧ: ಪರಮೇಶ್ವರ್
ಸಿದ್ದಗಂಗಾ ಮಠದ ಜೊತೆ ನನ್ನ ಕುಟಂಬಕ್ಕೆ ಅವಿನಾಭಾವ ಸಂಬಂಧ: ಪರಮೇಶ್ವರ್
ಗುಜರಾತ್​ನಲ್ಲಿ ಐಎಎಫ್​ನ ಜಾಗ್ವಾರ್ ಯುದ್ಧ ವಿಮಾನ ಪತನ, ಪೈಲಟ್ ಸಾವು
ಗುಜರಾತ್​ನಲ್ಲಿ ಐಎಎಫ್​ನ ಜಾಗ್ವಾರ್ ಯುದ್ಧ ವಿಮಾನ ಪತನ, ಪೈಲಟ್ ಸಾವು
ಸೈಟು ಹಿಂತಿರುಗಿಸಿದ್ದು ಆದ ಪ್ರಮಾದವನ್ನು ಸಿಎಂ ಅಂಗೀಕರಿಸಿದಂತೆ: ವಿಜಯೇಂದ್ರ
ಸೈಟು ಹಿಂತಿರುಗಿಸಿದ್ದು ಆದ ಪ್ರಮಾದವನ್ನು ಸಿಎಂ ಅಂಗೀಕರಿಸಿದಂತೆ: ವಿಜಯೇಂದ್ರ
ಮೋದಿ, ಮೋದಿ ಎಂದು ಜೈಕಾರ ಹಾಕಿ ಮೋದಿಯನ್ನು ಸ್ವಾಗತಿಸಿದ ಬ್ಯಾಂಕಾಕ್ ಜನ
ಮೋದಿ, ಮೋದಿ ಎಂದು ಜೈಕಾರ ಹಾಕಿ ಮೋದಿಯನ್ನು ಸ್ವಾಗತಿಸಿದ ಬ್ಯಾಂಕಾಕ್ ಜನ
ಅರಣ್ಯಪ್ರದೇಶದಲ್ಲಿ ಬತ್ತಿವೆ ಕೆರೆಕುಂಟೆ, ಪ್ರಾಣಿಗಳಿಗೆ ಸಿಗುತ್ತಿಲ್ಲ ನೀರು
ಅರಣ್ಯಪ್ರದೇಶದಲ್ಲಿ ಬತ್ತಿವೆ ಕೆರೆಕುಂಟೆ, ಪ್ರಾಣಿಗಳಿಗೆ ಸಿಗುತ್ತಿಲ್ಲ ನೀರು
6 ತಿಂಗಳ ಮಗುವನ್ನೆತ್ತಿಕೊಂಡು ಕೆಂಡ ಹಾಯಲು ಹೋಗಿ ಮುಗ್ಗರಿಸಿ ಬಿದ್ದ ವ್ಯಕ್ತ
6 ತಿಂಗಳ ಮಗುವನ್ನೆತ್ತಿಕೊಂಡು ಕೆಂಡ ಹಾಯಲು ಹೋಗಿ ಮುಗ್ಗರಿಸಿ ಬಿದ್ದ ವ್ಯಕ್ತ