ದೂಧ್​ಗಂಗಾ ನದಿ ನೀರು ಸರಬರಾಜಿಗೆ ವಿರೋಧ; ಕರ್ನಾಟಕಕ್ಕೆ ಸೇರಿಕೊಳ್ಳಲು ಇಚ್ಛಿಸಿದ ಮಹಾರಾಷ್ಟ್ರದ ಮತ್ತಷ್ಟು ಗ್ರಾಮಗಳು

ನಾಗರಿಕ ಸೌಕರ್ಯಗಳು ಮತ್ತು ಜಲಸಂಪನ್ಮೂಲಗಳನ್ನು ಒದಗಿಸುವಲ್ಲಿ ಮಹಾರಾಷ್ಟ್ರ ಸರ್ಕಾರವು ತೋರಿದ ನಿರ್ಲಕ್ಷ್ಯಕ್ಕೆ ಪ್ರತಿಕ್ರಿಯೆಯಾಗಿ ಸಂಕಷ್ಟ ಎದುರಿಸುತ್ತಿರುವ ಮಹಾರಾಷ್ಟ್ರದ ಕೆಲವು ಗ್ರಾಮದವರು ಕರ್ನಾಟಕಕ್ಕೆ ಸೇರಲು ಇಚ್ಛಿಸಿದ್ದಾರೆ.

ದೂಧ್​ಗಂಗಾ ನದಿ ನೀರು ಸರಬರಾಜಿಗೆ ವಿರೋಧ; ಕರ್ನಾಟಕಕ್ಕೆ ಸೇರಿಕೊಳ್ಳಲು ಇಚ್ಛಿಸಿದ ಮಹಾರಾಷ್ಟ್ರದ ಮತ್ತಷ್ಟು ಗ್ರಾಮಗಳು
ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ
Follow us
TV9 Web
| Updated By: ಆಯೇಷಾ ಬಾನು

Updated on: Jul 24, 2023 | 8:17 AM

ಬೆಳಗಾವಿ, ಜುಲೈ 24: ಗಡಿ ವಿಚಾರದಲ್ಲಿ ಕರ್ನಾಟಕ ಮತ್ತು ಮಹಾರಾಷ್ಟ್ರದ ನಡುವೆ ಸದಾ ಕಿರಿಕಿರಿಯಾಗುತ್ತಿರುತ್ತದೆ(Karnataka Maharashtra Border Issue). ಆದ್ರೆ ಮಹಾರಾಷ್ಟ್ರದ ಅದೆಷ್ಟೂ ಗ್ರಾಮಗಳು ಕರ್ನಾಟಕಕ್ಕೇ ಸೇರಲು ತುದಿಗಾಲಿನಲ್ಲಿ ಕಾದು ನಿಂತಿವೆ. ಇದಕ್ಕೆ ಮುಖ್ಯ ಕಾರಣ ನಾಗರಿಕ ಸೌಕರ್ಯಗಳು ಮತ್ತು ಜಲಸಂಪನ್ಮೂಲ ಸೌಲಭ್ಯದಲ್ಲಿ ಮಹಾರಾಷ್ಟ್ರ ಸರ್ಕಾರದ ನಿರ್ಲಕ್ಷ್ಯ(Maharashtra Government). ಮಹಾರಾಷ್ಟ್ರದ ಕೆಲವು ಪ್ರದೇಶಗಳಲ್ಲಿನ ಮರಾಠಿ ಮಾತನಾಡುವ ನಿವಾಸಿಗಳು ಮಹಾರಾಷ್ಟ್ರದ ಕನ್ನಡ ಪ್ರಾಬಲ್ಯವಿರುವ ಪ್ರದೇಶಗಳಲ್ಲಿ ನೆಲೆಸಿರುವ ಕನ್ನಡಿಗರನ್ನು ಅನುಸರಿಸುತ್ತಿದ್ದಾರೆ. ಮತ್ತು ಕರ್ನಾಟಕದೊಂದಿಗೆ ವಿಲೀನಗೊಳ್ಳಲು ಇಚ್ಛೆಯನ್ನು ವ್ಯಕ್ತಪಡಿಸಿದ್ದಾರೆ.

ತಮ್ಮ ಪ್ರದೇಶಗಳಿಗೆ ಅಗತ್ಯ ನಾಗರಿಕ ಸೌಕರ್ಯಗಳು ಮತ್ತು ಜಲಸಂಪನ್ಮೂಲಗಳನ್ನು ಒದಗಿಸುವಲ್ಲಿ ಮಹಾರಾಷ್ಟ್ರ ಸರ್ಕಾರವು ತೋರಿದ ನಿರ್ಲಕ್ಷ್ಯಕ್ಕೆ ಪ್ರತಿಕ್ರಿಯೆಯಾಗಿ ಸಂಕಷ್ಟ ಎದುರಿಸುತ್ತಿರುವ ಮಹಾರಾಷ್ಟ್ರದ ಕೆಲವು ಗ್ರಾಮದವರು ಕರ್ನಾಟಕಕ್ಕೆ ಸೇರಲು ಇಚ್ಛಿಸಿದ್ದಾರೆ. ಇತ್ತೀಚೆಗೆ, ಕೊಲ್ಲಾಪುರ ಜಿಲ್ಲೆಯ ಕಾಗಲ್ ತಾಲೂಕಿನಲ್ಲಿ ಸುಮಾರು ಹತ್ತು ಗ್ರಾಮ ಪಂಚಾಯತಿಗಳು ಕರ್ನಾಟಕದೊಂದಿಗೆ ವಿಲೀನಗೊಳ್ಳಲು ವಿನಂತಿಸಿ ಸರ್ವಾನುಮತದ ನಿರ್ಣಯವನ್ನು ಕೈಗೊಂಡಿವೆ. ಇವರ ಈ ನಿರ್ಧಾರವು ಸಾಂಗ್ಲಿ ಜಿಲ್ಲೆಯ ಜಾಟ್, ಸೋಲಾಪುರ ಜಿಲ್ಲೆಯ ಅಕ್ಕಲಕೋಟ್ ಮತ್ತು ಲಾತೂರ್ ಜಿಲ್ಲೆಯ ದಿಯೋನಿ ತಾಲೂಕಿನ ಹತ್ತು ಹಳ್ಳಿಗಳಲ್ಲಿ ಕೈಗೊಂಡ ಕ್ರಮಗಳನ್ನು ಅನುಸರಿಸುತ್ತಿವೆ.

ಸುಲಕೋಡ್ ನೀರು ಸರಬರಾಜು ಯೋಜನೆಯಡಿ ಸುಮಾರು 500,000 ಜನಸಂಖ್ಯೆಯನ್ನು ಹೊಂದಿರುವ ಇಚಲಕರಂಜಿ ಪಟ್ಟಣಕ್ಕೆ ದೂಧಗಂಗಾ ನದಿಯಿಂದ ನೀರು ಸರಬರಾಜು ಮಾಡುವ ಮಹಾರಾಷ್ಟ್ರ ಸರ್ಕಾರದ ನಿರ್ಧಾರವು ಈ ನಿರ್ಣಯಕ್ಕೆ ಪ್ರಚೋದಕವಾಗಿದೆ. ಇದಕ್ಕೆ ಪ್ರತಿಯಾಗಿ ಕಾಗಲ್ ತಾಲೂಕಿನ ಗ್ರಾಮ ಪಂಚಾಯಿತಿಗಳನ್ನು ಪ್ರತಿನಿಧಿಸುವ ದೂಧಗಂಗಾ ಬಚಾವೋ ಕೃತಿ ಸಮಿತಿ ಈ ಯೋಜನೆಗೆ ತೀವ್ರ ವಿರೋಧ ವ್ಯಕ್ತಪಡಿಸಿದೆ. ಹತ್ತಕ್ಕೂ ಹೆಚ್ಚು ಗ್ರಾಮ ಪಂಚಾಯಿತಿಗಳನ್ನು ಒಳಗೊಂಡ ಸಮಿತಿಯು ಕರ್ನಾಟಕದೊಂದಿಗೆ ವಿಲೀನಗೊಳ್ಳುವುದರಿಂದ ಗೃಹ ಬಳಕೆ ಮತ್ತು ಕೃಷಿಗೆ ನಿತ್ಯ ನೀರು ಪೂರೈಕೆ ಸೇರಿದಂತೆ ಅಗತ್ಯ ಸೌಲಭ್ಯಗಳು ದೊರೆಯಲಿವೆ ಎಂದು ಹೇಳಿದೆ.

ಇದನ್ನೂ ಓದಿ:  ಕರ್ನಾಟಕಕ್ಕೆ ಸೇರಲು ಮಹಾರಾಷ್ಟ್ರದಲ್ಲಿ ಹೆಚ್ಚಾದ ಹೋರಾಟ; ರಾಜ್ಯದ ಹೊಸ ನಕ್ಷೆ ಎಲ್ಲೆಡೆ ವೈರಲ್

ಕರ್ನಾಟಕದ ಗಡಿಗೆ ಸಮೀಪದಲ್ಲಿರುವ ಕಾಗಲ್ ತಾಲೂಕಿನಲ್ಲಿ 90% ಕ್ಕಿಂತ ಹೆಚ್ಚು ಮರಾಠಿ ಮಾತನಾಡುವ ನಿವಾಸಿಗಳಿದ್ದಾರೆ. ಕಾಗಲ್ ಭೌಗೋಳಿಕವಾಗಿ ಮಹಾರಾಷ್ಟ್ರದೊಳಗೆ ಇದ್ದರೂ, ಈ ಪ್ರದೇಶದ ಜನರು ಹತ್ತಿರದ ನಿಪ್ಪಾಣಿ ಪಟ್ಟಣದಲ್ಲಿ ಶಿಕ್ಷಣ ಸೇರಿದಂತೆ ವಿವಿಧ ಸೇವೆಗಳಿಗೆ ಕರ್ನಾಟಕವನ್ನು ಅವಲಂಬಿಸಿದ್ದಾರೆ.

ದೂಧಗಂಗಾ ನದಿ ನೀರು ಸರಬರಾಜು ಮಾಡಲು ವಿರೋಧ

ಇನ್ನು ಸುಲಕೋಡು, ಕಸಬಾ, ಸಾಗೋಣ, ಮೌಜೆ ಸಾಹೋನ, ರಣದಿಪೇವಾಡಿ ಸೇರಿದಂತೆ ಇತರ ಐದು ಪಂಚಾಯಿತಿಗಳ ಪ್ರತಿನಿಧಿಗಳು ಮತ್ತು ನಿವಾಸಿಗಳು ಜಂಟಿ ಸಭೆ ನಡೆಸಿದ್ದು ಸಭೆಯಲ್ಲಿ ಇಚಲಕರಂಜಿಗೆ ದೂಧಗಂಗಾ ನದಿ ನೀರು ಸರಬರಾಜು ಮಾಡಲು ತೀವ್ರ ವಿರೋಧ ವ್ಯಕ್ತವಾಗಿದೆ.

ಕಾಗಲ್ ತಾಲೂಕು ಮಳೆಗಾಲದಲ್ಲಿಯೂ ನೀರಿನ ಕೊರತೆ ಎದುರಿಸುತ್ತಿದೆ. ದೂಧಗಂಗಾ ನದಿ ನೀರನ್ನು ಇಚಲಕರಂಜಿಗೆ ಪೂರೈಸಿದರೆ ಪರಿಸ್ಥಿತಿ ಹದಗೆಡುತ್ತದೆ. ಆದ್ದರಿಂದ ನಾವು ಸರ್ಕಾರದ ಯೋಜನೆಯನ್ನು ವಿರೋಧಿಸುತ್ತೇವೆ, ಇಲ್ಲದಿದ್ದರೆ ನಮ್ಮನ್ನು ವಿಲೀನಗೊಳಿಸುವಂತೆ ಕರ್ನಾಟಕಕ್ಕೆ ಕೇಳಿ ಎಂದು ಸಭೆಯಲ್ಲಿ ಭಾಗಿಯಾಗಿದ್ದ ಜನರು ಒತ್ತಾಯಿಸಿದ್ದಾರೆ. ಈ ವೇಳೆ ದೂಧಗಂಗಾ ನದಿಗೆ ಬದಲಾಗಿ ಇಂಚಲಕರಂಜಿ ಪಟ್ಟಣದ ಸಮೀಪ ಹರಿಯುತ್ತಿರುವ ಪಂಚಗಂಗಾ ನದಿಯಿಂದ ಸರಕಾರ ಏಕೆ ನೀರು ಹರಿಸಲು ಸಾಧ್ಯವಿಲ್ಲ ಎಂದು ಸಭೆಯಲ್ಲಿ ಪ್ರಶ್ನೆ ಮಾಡಲಾಯಿತು. ವಾರಣಾ ಜಲಾಶಯದಿಂದ ಇಚಲಕರಂಜಿಗೆ ನೀರು ಹರಿಸುವ ಯೋಜನೆಯನ್ನು ಸರ್ಕಾರ ಕೈಬಿಟ್ಟಿದೆ ಎಂದು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಪರುಶರಾಮ ಪಾಟೀಲ್ ತಿಳಿಸಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು