ಬೆಳಗಾವಿಯಲ್ಲಿ ಗಡಿ ಆಯೋಗದ ಅಧ್ಯಕ್ಷರ ನೇತೃತ್ವದಲ್ಲಿ ಸಭೆ; ಎಂಇಎಸ್ ಮತ್ತು ಶಿವಸೇನೆ ಪುಂಡಾಟಿಕೆ ಕುರಿತು ಚರ್ಚೆ

ಇಂದು(ಮಾ.13) ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಗಡಿ ಆಯೋಗದ ಅಧ್ಯಕ್ಷ ಶಿವರಾಜ್ ಪಾಟೀಲ್ (Shivaraj Patil) ನೇತೃತ್ವದಲ್ಲಿ ಸಭೆ ನಡೆಸಲಾಗಿದೆ. ಗಡಿ ಸಮಸ್ಯೆ ಕುರಿತು ಕನ್ನಡ ಪರ ಸಂಘಟನೆಗಳಿಂದ ಸಮಸ್ಯೆಯನ್ನ ಆಹ್ವಾಲಿಸಲಾಗಿದೆ. ಗಡಿ ವಿವಾದವನ್ನ ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ಎಂಇಎಸ್, ಶಿವಸೇನೆ ಸಂಘಟನೆಯನ್ನ ರಾಜ್ಯದಲ್ಲಿ ನಿಷೇಧ ಮಾಡುವಂತೆ ಕನ್ನಡಪರ ಹೋರಾಟಗಾರರು ಒತ್ತಾಯಿಸಿದ್ದಾರೆ.

ಬೆಳಗಾವಿಯಲ್ಲಿ ಗಡಿ ಆಯೋಗದ ಅಧ್ಯಕ್ಷರ ನೇತೃತ್ವದಲ್ಲಿ ಸಭೆ; ಎಂಇಎಸ್ ಮತ್ತು ಶಿವಸೇನೆ ಪುಂಡಾಟಿಕೆ ಕುರಿತು ಚರ್ಚೆ
ಬೆಳಗಾವಿಯಲ್ಲಿ ಗಡಿ ಆಯೋಗದ ಅಧ್ಯಕ್ಷ ಶಿವರಾಜ್ ಪಾಟೀಲ್ ನೇತೃತ್ವದಲ್ಲಿ ಸಭೆ
Follow us
Sahadev Mane
| Updated By: ಕಿರಣ್ ಹನುಮಂತ್​ ಮಾದಾರ್

Updated on: Mar 13, 2024 | 3:35 PM

ಬೆಳಗಾವಿ, ಮಾ.13: ಬೆಳಗಾವಿ(Belagavi)ಯಲ್ಲಿ ಆಗಾಗ ನಾಡದ್ರೋಹಿ ಚಟುವಟಿಕೆಗಳು ಆಗುತ್ತಿರುತ್ತದೆ. ಈ ಹಿನ್ನಲೆ ಇಂದು(ಮಾ.13) ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಗಡಿ ಆಯೋಗದ ಅಧ್ಯಕ್ಷ ಶಿವರಾಜ್ ಪಾಟೀಲ್ (Shivaraj Patil) ನೇತೃತ್ವದಲ್ಲಿ ಸಭೆ ನಡೆಸಲಾಗಿದೆ. ಗಡಿ ಸಮಸ್ಯೆ ಕುರಿತು ಕನ್ನಡ ಪರ ಸಂಘಟನೆಗಳಿಂದ ಸಮಸ್ಯೆಯನ್ನ ಆಹ್ವಾಲಿಸಲಾಗಿದೆ. ಈ ವೇಳೆ ಗಡಿ ಸಂರಕ್ಷಣಾ ಪ್ರಾದೇಶಿಕಾ ಕಚೇರಿ ಬೆಳಗಾವಿಗೆ ಸ್ಥಳಾಂತರ ಆಗಬೇಕು. ಕಡ್ಡಾಯ ಕನ್ನಡ ಬಳಕೆ, ಗಡಿ ವಿಚಾರ, ಕನ್ನಡ ರಾಜ್ಯೋತ್ಸವ ಆಚರಣೆ, ಎಂಇಎಸ್ ಮತ್ತು ಶಿವಸೇನೆ ಪುಂಡಾಟಿಕೆ ಕುರಿತು ಚರ್ಚೆ ನಡೆಸಲಾಗಿದೆ.

ಇನ್ನು ಗಡಿ ವಿಚಾರದ ಬಗ್ಗೆ ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ಎಂಇಎಸ್, ಶಿವಸೇನೆ ಸಂಘಟನೆಯನ್ನ ರಾಜ್ಯದಲ್ಲಿ ನಿಷೇಧ ಮಾಡುವಂತೆ ಕನ್ನಡಪರ ಹೋರಾಟಗಾರರು ಒತ್ತಾಯಿಸಿದ್ದಾರೆ. ಈ ವೇಳೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್, ಎಸ್ಪಿ ಭೀಮಾಶಂಕರ್ ಗುಳೇದ್, ಜಿಪಂ ಸಿಇಒ ರಾಹುಲ್ ಶಿಂಧೆ, ಕನ್ನಡಪರ ಹೋರಾಟಗಾರರು ಭಾಗಿಯಾಗಿದ್ದರು.

ಇದನ್ನೂ ಓದಿ:ಕರ್ನಾಟಕ, ಮಹಾರಾಷ್ಟ್ರ ಗಡಿ ವಿವಾದ: ಬದರಿನಾಥದಲ್ಲಿ ಉದ್ಧವ್ ಠಾಕ್ರೆ ಕುಟುಂಬದವರ ಎದುರು ಘೋಷಣೆ ಕೂಗಿದ ಬೆಳಗಾವಿ ನಿವಾಸಿಗಳು

ಈ ಕುರಿತು ಮಾತನಾಡಿದ ಗಡಿ ಆಯೋಗದ ಅಧ್ಯಕ್ಷ ಶಿವರಾಜ್ ಪಾಟೀಲ್, ‘ ಬೆಳಗಾವಿಯಲ್ಲಿ ಪ್ರಾದೇಶಿಕ ಕಚೇರಿ ಸ್ಥಾಪನೆ ಮಾಡಲು ಸರ್ಕಾರ ನಿರ್ಧಾರ ಮಾಡಬೇಕು. ರಿಜಿನಲ್ ಆಫೀಸ್ ಸುವರ್ಣ ವಿಧಾನಸೌಧದಲ್ಲಿ ಮಾಡಿ ಗಡಿ ಆಯೋಗದ ಹೊಸ ಮೇಂಬರ್​ಗಳನ್ನ ಮಾಡಬೇಕಾಗುತ್ತದೆ. ಜೊತೆಗೆ ಪ್ರಾದೇಶಿಕ ಕಚೇರಿ ಆದ ಮೇಲೆ ತಾತ್ಕಾಲಿಕವಾಗಿ ಬೆಳಗಾವಿಯ ಒಬ್ಬರನ್ನ ಆಯೋಗದ ಸದಸ್ಯರನ್ನಾಗಿ ಮಾಡುತ್ತೇವೆ. ನದಿ ಮತ್ತು ಗಡಿಗಳ ಬಗ್ಗೆ ಹಿತ ಕಾಯುವ ದೃಷ್ಟಿಯಿಂದ ಈ ಆಯೋಗ ಕೆಲಸ ಮಾಡುತ್ತದೆ.

ಬೆಳಗಾವಿ ಗಡಿ ಭಾಗದ ಬಗ್ಗೆ ಸಂಪೂರ್ಣ ಮಾಹಿತಿ ಇರುವವರು ಈ ಆಯೋಗದಲ್ಲಿ ಸದಸ್ಯರಾಗಿರುತ್ತಾರೆ. ಈ ಸದಸ್ಯರು ಕನ್ನಡಪರ ಹೋರಾಟಗಾರರ ಜೊತೆ ಸಂಪರ್ಕದಲ್ಲಿ ಇದ್ದು, ಸಲಹೆ ತೆಗದುಕ್ಕೊಳ್ಳುವ ಕೆಲಸ ಮಾಡುತ್ತಾರೆ. ಜೊತೆಗೆ ನೇರವಾಗಿ ಹೋರಾಟಗಾರರೆ ಸದಸ್ಯರಿಗೆ ಸಲಹೆ ಕೊಡುವ ಕೆಲಸ ಮಾಡಬಹುದು. ಇನ್ನು ಸುವರ್ಣ ವಿಧಾನಸೌಧದಲ್ಲಿ ಸಂಪರ್ಕ ಕಚೇರಿ ತೆರೆದು ಜನಸಂಪರ್ಕ ಮಾಡಲು ಅವಕಾಶ ಮಾಡುತ್ತೇವೆ. ಇದೇ ವೇಳೆ ಬೆಳಗಾವಿಯಲ್ಲಿ ಅಂಗಡಿ ಮುಂಗಟ್ಟುಗಳ ಮೇಲೆ ಕನ್ನಡ ನಾಮಫಲಕ ಅಳವಡಿಸುವ ವಿಚಾರ, ‘ನಾಮಫಲಕ ಅಳವಡಿಸುವ ಕುರಿತು ರಾಜ್ಯ ಸರ್ಕಾರದಿಂದ ಆದೇಶ ಆಗಿದೆ. ಕನ್ನಡ ನಾಮಫಲಕ ಕುರಿತು ನಮ್ಮ ಆಯೋಗದ ವ್ಯಾಪ್ತಿಗೆ ಬರೋದಿಲ್ಲ ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ