AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಾಜಿ ಪುತ್ಥಳಿಗೆ ಕಪ್ಪು ಮಸಿ ಸುರಿದ ಪ್ರಕರಣ: ಬೆಳಗಾವಿಯಲ್ಲಿ ದಿಢೀರ್ ಪ್ರತಿಭಟನೆ; ಬಿಗುವಿನ ವಾತಾವರಣ ನಿರ್ಮಾಣ

ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಡಿಸಿಪಿ ವಿಕ್ರಂ ಆಮಟೆ ಸ್ಥಳಕ್ಕೆ ಆಗಮಿಸಿದ್ದಾರೆ. ಪ್ರತಿಭಟನಾಕಾರರಿಂದ ಪೊಲೀಸರ ಮೇಲೆ‌ ಕೂಡ ಕಲ್ಲು ತೂರಾಟ ನಡೆದಿದೆ ಎಂದು ಹೇಳಲಾಗುತ್ತಿದೆ. ಡಿಸಿಪಿ ಮುಂದೆಯೇ ಕಿಡಗೇಡಿಗಳು ಕಲ್ಲು ತೂರಿದ್ದಾರೆ.

ಶಿವಾಜಿ ಪುತ್ಥಳಿಗೆ ಕಪ್ಪು ಮಸಿ ಸುರಿದ ಪ್ರಕರಣ: ಬೆಳಗಾವಿಯಲ್ಲಿ ದಿಢೀರ್ ಪ್ರತಿಭಟನೆ; ಬಿಗುವಿನ ವಾತಾವರಣ ನಿರ್ಮಾಣ
ಎಂಇಎಸ್​ ಪುಂಟಾಟಿಕೆ ಖಂಡಿಸಿ ಪ್ರತಿಭಟನೆ
TV9 Web
| Edited By: |

Updated on: Dec 17, 2021 | 11:04 PM

Share

ಬೆಳಗಾವಿ: ಛತ್ರಪತಿ ಶಿವಾಜಿ ಮಹಾರಾಜರ ಪುತ್ಥಳಿಗೆ ಕಪ್ಪು ಮಸಿ ಸುರಿದ ಪ್ರಕರಣಕ್ಕೆ ಸಂಬಂಧಿಸಿ ಹಿಂದೂಪರ ಸಂಘಟನೆಗಳಿಂದ ದಿಢೀರ್ ಪ್ರತಿಭಟನೆ ಕಂಡುಬಂದಿದೆ. ಬೆಂಗಳೂರಿನ ಶಿವಾಜಿ ನಗರದಲ್ಲಿರುವ ಶಿವಾಜಿ ಪುತ್ಥಳಿಗೆ ಕಪ್ಪು ಮಸಿ ಆರೋಪ ಕೇಳಿಬಂದಿತ್ತು. ಈ ಘಟನೆ ಖಂಡಿಸಿ ಹಿಂದೂಪರ ಸಂಘಟನೆಗಳಿಂದ ಇದೀಗ ದಿಢೀರ್ ಪ್ರತಿಭಟನೆ ನಡೆಸಲಾಗಿದೆ. ಬೆಳಗಾವಿಯ ಸಂಭಾಜಿ ವೃತ್ತದಲ್ಲಿ ಭಾರೀ ಪ್ರತಿಭಟನೆ ನಡೆಯುತ್ತಿರುವ ಬಗ್ಗೆ ತಿಳಿದುಬಂದಿದ್ದು ಬಿಗುವಿನ ವಾತಾವರಣ ಸೃಷ್ಟಿಯಾಗಿದೆ.

ಪ್ರತಿಭಟನೆ ನಡುವೆ ಮಣ್ಣಿಕೇರಿ ಗ್ರಾಮಕ್ಕೆ ತೆರಳುತ್ತಿದ್ದ ಸರ್ಕಾರಿ ಬಸ್ ಮೇಲೆ ಕಲ್ಲೂತೂರಾಟ ನಡೆದಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ನೂರಾರು ಸಂಖ್ಯೆಯಲ್ಲಿ ಜಮಾವಣೆಗೊಂಡಿರುವ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ಶುಭಂ ಶಳಕೆ, ಮಾಜಿ ಮೇಯರ್ ಸರಿತಾ ಪಾಟೀಲ ಸೇರಿ ಎಂಇಎಸ್ ಪುಂಡರು ಪ್ರತಿಭಟನೆಗೆ ಸಾಥ್ ನೀಡಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ. ಘಟನಾ ಸ್ಥಳದಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಬಿಗಿ ಪೊಲೀಸ್ ಭದ್ರತೆ ನಿಯೋಜನೆ ಮಾಡಲಾಗಿದೆ.

ಪ್ರತಿಭಟನೆ ನಡೆಯುತ್ತಿರುವಲ್ಲಿ ಎಂಇಎಸ್ ಕಾರ್ಯಕರ್ತರು ವಿಡಿಯೋ ಚಿತ್ರೀಕರಣಕ್ಕೆ ಅವಕಾಶ ನೀಡುತ್ತಿಲ್ಲ ಎಂದೂ ತಿಳಿದುಬಂದಿದೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಡಿಸಿಪಿ ವಿಕ್ರಂ ಆಮಟೆ ಸ್ಥಳಕ್ಕೆ ಆಗಮಿಸಿದ್ದಾರೆ. ಪ್ರತಿಭಟನಾಕಾರರಿಂದ ಪೊಲೀಸರ ಮೇಲೆ‌ ಕೂಡ ಕಲ್ಲು ತೂರಾಟ ನಡೆದಿದೆ ಎಂದು ಹೇಳಲಾಗುತ್ತಿದೆ. ಡಿಸಿಪಿ ಮುಂದೆಯೇ ಕಿಡಗೇಡಿಗಳು ಕಲ್ಲು ತೂರಿದ್ದಾರೆ.

ಇದನ್ನೂ ಓದಿ: ಎಂಇಎಸ್ ಮಹಾಮೇಳ ಆಯೋಜಕರ ವಿರುದ್ಧ ಬೆಳಗಾವಿ ಪಾಲಿಕೆ ಅಧಿಕಾರಿ ದೂರು

ಇದನ್ನೂ ಓದಿ: ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ; ರಾತ್ರೋರಾತ್ರಿ ಮಹಾಮೇಳ ವೇದಿಕೆ ನಿರ್ಮಿಸಿದ ಎಂಇಎಸ್