AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿಯಲ್ಲಿ ಎಂಇಎಸ್‌ನಿಂದ ದಿನಕ್ಕೊಂದು ನಾಟಕ; ಭಾಷಾ ರಾಜಕಾರಣದ ಹೆಸರಲ್ಲಿ ವಿಷಬೀಜ ಬಿತ್ತಲು ಪ್ರಯತ್ನ

ಎಂಇಎಸ್ ಅಭ್ಯರ್ಥಿಗಳ ಚುನಾವಣಾ ಪ್ರಚಾರ ನಾಮಫಲಕ ತೆರವುಗೊಳಿಸಿದ್ದಕ್ಕೂ ಕಿಡಿಕಾರಿದ್ದು, ಭಾಷೆಯ ಹೆಸರಿನಲ್ಲಿ ಸಾಮಾಜಿಕ ನೆಮ್ಮದಿ ಹದಗೆಡಿಸುತ್ತಿರುವವರನ್ನು ಲಕ್ಷ್ಮೀ ನಿಪ್ಪಾಣಿಕರ್ ತರಾಟೆಗೆ ತೆಗೆದುಕೊಂಡಿದ್ದಾರೆ.

ಬೆಳಗಾವಿಯಲ್ಲಿ ಎಂಇಎಸ್‌ನಿಂದ ದಿನಕ್ಕೊಂದು ನಾಟಕ; ಭಾಷಾ ರಾಜಕಾರಣದ ಹೆಸರಲ್ಲಿ ವಿಷಬೀಜ ಬಿತ್ತಲು ಪ್ರಯತ್ನ
ಭಾಷಾ ರಾಜಕಾರಣದ ಹೆಸರಲ್ಲಿ ವಿಷಬೀಜ ಬಿತ್ತಲು ಪ್ರಯತ್ನ
TV9 Web
| Updated By: preethi shettigar|

Updated on: Sep 21, 2021 | 12:01 PM

Share

ಬೆಳಗಾವಿ: ಜಿಲ್ಲೆಯಲ್ಲಿ ಎಂಇಎಸ್‌ನಿಂದ (Maharashtra Ekikaran Samiti -MES) ದಿನಕ್ಕೊಂದು ವಿಚಾರದಲ್ಲಿ ಗೊಂದಲ ಸೃಷ್ಟಿಯಾಗುತ್ತಿದೆ. ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಹೀನಾಯವಾಗಿ ಸೋತ ಬಳಿಕವೂ ಪದೇಪದೇ ಸಾಮಾಜದ ಸ್ವಾತ್ಯವನ್ನು ಹಾಳು ಮಾಡುವ ಪ್ರಯತ್ನಗಳು ನಡೆಯುತ್ತಿದೆ ಎಂದು ಆರೋಪಗಳು ಕೇಳಿ ಬಂದಿವೆ.

ಭಾಷಾ ರಾಜಕಾರಣದ ಹೆಸರಲ್ಲಿ ವಿಷಬೀಜ ಬಿತ್ತಲು ಪ್ರಯತ್ನ ಗಣೇಶ ವಿಸರ್ಜನೆ ವೇದಿಕೆ ಮೇಲೆ ಕನ್ನಡ ನಾಮಫಲಕವಷ್ಟೇ ಇದ್ದಿದ್ದಕ್ಕೆ ಎಂಇಎಸ್ ಖ್ಯಾತೆ ತೆಗೆದಿದೆ. ಇಷ್ಟೇ ಅಲ್ಲದೆ ಎಂಇಎಸ್ ಪುಂಡರ ವಿರುದ್ಧ ಕಿಡಿಕಾರಿದ್ದ ಮಹಾನಗರ ಪಾಲಿಕೆ ಅಧಿಕಾರಿಗಳ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಪೊಸ್ಟ್ ಮಾಡಿ ಮರಾಠಿ ಭಾಷಿಕರ ಪ್ರಚೋದನೆಗೆ ಯತ್ನಿಸಲಾಗಿದೆ ಎಂದು ಕನ್ನಡ ಸಂಘಟನೆಗಳ ಪರ ಮುಖಂಡರು ಆರೋಪಿಸಿದ್ದಾರೆ.

ಮೊನ್ನೆ ರಾತ್ರಿ ಬೆಳಗಾವಿಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆ ಕಾರ್ಯಕ್ರಮ ನಡೆದಿತ್ತು. ಈ ವೇಳೆ ಕಾರ್ಯಕ್ರಮ ನಡೆಯುತ್ತಿದ್ದ ವೇದಿಕೆ ಮೇಲೆ ಕನ್ನಡದ ಬೋರ್ಡ್ ಮಾತ್ರ ಇದ್ದಿದ್ದಕ್ಕೆ ಆವಾಜ್ ಹಾಕಿದ್ದ ಎಂಇಎಸ್ ಪುಂಡರು, ಮಹಾನಗರ ಪಾಲಿಕೆ ಉಪ ಆಯುಕ್ತೆ ಲಕ್ಷ್ಮೀ ನಿಪ್ಪಾಣಿಕರ್‌ಗೆ ಗದರಿದ್ದಾರೆ. ಅಷ್ಟೇ ಅಲ್ಲದೆ ಮರಾಠಿ ಭಾಷಿಕರ ಮೇಲೆ ಮಹಾನಗರ ಪಾಲಿಕೆ ಅಧಿಕಾರಿಗಳು ಧಮ್ಕಿ ಹಾಕಿದ್ದಾರೆಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.

ಎಂಇಎಸ್ ಪುಂಡರನ್ನು ತರಾಟೆಗೆ ತಗೆದುಕೊಂಡಿದ್ದ ಲಕ್ಷ್ಮೀ ನಿಪ್ಪಾಣಿಕರ್ ಎಂಇಎಸ್ ಅಭ್ಯರ್ಥಿಗಳ ಚುನಾವಣಾ ಪ್ರಚಾರ ನಾಮಫಲಕ ತೆರವುಗೊಳಿಸಿದ್ದಕ್ಕೂ ಕಿಡಿಕಾರಿದ್ದು, ಭಾಷೆಯ ಹೆಸರಿನಲ್ಲಿ ಸಾಮಾಜಿಕ ನೆಮ್ಮದಿ ಹದಗೆಡಿಸುತ್ತಿರುವವರನ್ನು ಲಕ್ಷ್ಮೀ ನಿಪ್ಪಾಣಿಕರ್ ತರಾಟೆಗೆ ತೆಗೆದುಕೊಂಡಿದ್ದಾರೆ.

ವಾರ್ಡ್ ನಂಬರ್ 15ರ ಎಂಇಎಸ್ ಅಭ್ಯರ್ಥಿ ಚುನಾವಣಾ ಪ್ರಚಾರದ ನಾಮಫಲಕ ತೆರವು ವಿಚಾರಕ್ಕೆ ಸಂಬಂಧಪಟ್ಟಂತೆಯೂ ಎಂಇಎಸ್ ಯುವ ಸಮಿತಿ ಫೇಸ್‌ಬುಕ್‌ ಪೇಜ್​ನಲ್ಲಿ ಪೋಸ್ಟ್ ಹಾಕಿದ್ದು, ಅಂದು ಮರಾಠಿ ಬೋರ್ಡ್ ಇಂದು ಮರಾಠಿ ಬೋರ್ಡ್ ತೆರವು ಎಂದು ಹೇಳಿದ್ದಾರೆ. ಹೀಗಾಗಿ ಪದೇಪದೇ ಭಾಷಾ ರಾಜಕಾರಣ ವಿಷಬೀಜ ಬಿತ್ತಿ ಮರಾಠಿಗರನ್ನು ಒಕ್ಕಲೆಬ್ಬಿಸುವ ಎಂಇಎಸ್ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಕನ್ನಡ ಸಂಘಟನೆಗಳ ಮುಖಂಡರು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಬೆಳಗಾವಿ ಪಾಲಿಕೆ ಚುನಾವಣೆ: ಕಾಂಗ್ರೆಸ್​ಗೆ ಬಿಜೆಪಿಗಿಂತ ಹೆಚ್ಚು ಮತ, ಆದರೆ ಗೆದ್ದ ಅಭ್ಯರ್ಥಿಗಳಲ್ಲಿ ಅವರ ಸಂಖ್ಯೆ ಹೆಚ್ಚು: ಡಿಕೆ ಶಿವಕುಮಾರ್

ಬೆಳಗಾವಿಯಲ್ಲಿ ಐತಿಹಾಸಿಕ ಸೋಲುಂಡ ಬಳಿಕ ನಡುರಾತ್ರಿ ಕ್ಯಾತೆ ತೆಗೆದ ಎಂಇಎಸ್‌! ಪಾಲಿಕೆ ಮರು ಚುನಾವಣೆ ನಡೆಸಬೇಕಂತೆ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ