MES ಕರಾಳ ದಿನಾಚರಣೆ: ನಿಷೇಧದ ನಡುವೆಯೂ ಉದ್ಧವ್ ಠಾಕ್ರೆ ಶಿವಸೇನೆ ಬಣದಿಂದ ಬೆಳಗಾವಿ ಚಲೋ ಕರೆ

ನಿಷೇಧದ ನಡುವೆಯೂ ಬುಧವಾರ ಬೆಳಗ್ಗೆ 9 ಗಂಟೆಗೆ ಮರಾಠಾ ಭವನ ಬಳಿ ಎಂಇಎಸ್ ಕಾರ್ಯಕರ್ತರು ಜಮಾವಣೆಗೊಳ್ಳಲಿದ್ದಾರೆ. ಮಹಾರಾಷ್ಟ್ರದ ಮೂರು ಜನ ಸಚಿವರು ಹಾಗೂ ಓರ್ವ ಸಂಸದನಿಗೆ ಬೆಳಗಾವಿ ಪ್ರವೇಶಕ್ಕೆ ನಿಷೇಧ ಹೇರಲಾಗಿದೆ. ಈ ನಾಯಕರು ಬೆಳಗಾವಿ ಪ್ರವೇಶಿಸದಂತೆ ತಡೆಯಲು ಗಡಿ ಭಾಗದಲ್ಲಿ 18 ಚೆಕ್ ಪೋಸ್ಟ್​​ಗಳನ್ನು ನಿರ್ಮಾಣ ಮಾಡಲಾಗಿದೆ.

MES ಕರಾಳ ದಿನಾಚರಣೆ: ನಿಷೇಧದ ನಡುವೆಯೂ ಉದ್ಧವ್ ಠಾಕ್ರೆ ಶಿವಸೇನೆ ಬಣದಿಂದ ಬೆಳಗಾವಿ ಚಲೋ ಕರೆ
ಉದ್ಧವ್ ಠಾಕ್ರೆ
Follow us
TV9 Web
| Updated By: ವಿವೇಕ ಬಿರಾದಾರ

Updated on: Nov 01, 2023 | 8:05 AM

ಚಿಕ್ಕೋಡಿ ನ.01: ಮಹಾರಾಷ್ಟ್ರ ಏಕೀಕರಣ ಸಮಿತಿ (MES) ಪ್ರತಿವರ್ಷ ಕರ್ನಾಟಕ ರಾಜ್ಯೋತ್ಸವ (Karnataka Rajyotsava) ದಿನದಂದು ಗಡಿ ತಗಾದೆಯನ್ನು ತೆಗೆಯುತ್ತದೆ. ಎಮ್​​ಇಎಸ್​ ಪ್ರತಿವರ್ಷ ಕನ್ನಡ ರಾಜ್ಯೋತ್ಸವಕ್ಕೆ ವಿರುದ್ಧವಾಗಿ ಕರಾಳ ದಿನಾಚರಣೆ (Black Day) ಆಚರಿಸುತ್ತ ಬರುತ್ತಿದೆ. ಅದರಂತೆ ಈ ವರ್ಷವೂ ಬೆಳಗಾವಿಯಲ್ಲಿ ನಾಡದ್ರೋಹಿ ಎಮ್​ಇಎಸ್​ ಕರಾಳ ದಿನಾಚರಣೆಗೆ ಸಿದ್ದತೆ ನಡೆಸಿದ್ದು, ಇದಕ್ಕೆ ಶಿವಸೇನೆ ಬೆಂಬಲ ವ್ಯಕ್ತಪಡಿಸಿದೆ. ಜಿಲ್ಲಾಡಳಿತದ ನಿಷೇಧದ ಮಧ್ಯೆಯೂ ಕರಾಳ ದಿನಾಚರಣೆಗೆ ಎಮ್​​ಇಎಸ್​ ತಯಾರಿ ನಡೆಸಿದೆ. ಉದ್ಧವ್ ಠಾಕ್ರೆ ಶಿವಸೇನೆ ಬಣ ಇಂದು (ನ.01) ಬೆಳಗಾವಿ ಚಲೋಗೆ ಕರೆ ನೀಡಿದೆ.

ಬೆಳಗ್ಗೆ 8 ಗಂಟೆಗೆ ಕೊಲ್ಹಾಪುರ ಜಿಲ್ಲೆ ಕಾಗಲ್​ನ ಲಕ್ಷ್ಮೀ ಟೇಕ್ ಬಳಿ ಜಮಾವಣೆಯಾಗುವಂತೆ ಎಮ್​ಇಎಸ್​ ಕಾರ್ಯಕರ್ತರಿಗೆ, ಶಿವಸೇನೆ ಬಣದ ಕೊಲ್ಹಾಪುರ ಜಿಲ್ಲಾಧ್ಯಕ್ಷ ವಿಜಯ್ ದೇವಣೆ, ಉದ್ಧವ್ ಠಾಕ್ರೆ ಕರೆ ನೀಡಿದ್ದಾರೆ. ಕಾಗಲ್​​ನಿಂದ ಭಗವಾ ಧ್ವಜದೊಂದಿಗೆ ಕರ್ನಾಟಕ-ಮಹಾರಾಷ್ಟ್ರ ಗಡಿಯಲ್ಲಿರುವ ನಿಪ್ಪಾಣಿ ಹೊರವಲಯದ ಕೊಗನೊಳ್ಳಿ ಟೋಲ್‌ಗೇಟ್ ಮಾರ್ಗವಾಗಿ ಬೆಳಗಾವಿಗೆ ಆಗಮಿಸಲು ನಿರ್ಧರಿಸಿದ್ದಾರೆ. ಆದರೆ ಕರ್ನಾಟಕ ಪೊಲೀಸರು ಕೊಗನೊಳ್ಳಿ ಟೋಲ್‌ಗೇಟ್ ಬಳಿಯೇ ಎಮ್​ಇಎಸ್​​ ಕಾರ್ಯಕರ್ತರನ್ನು ತಡೆಯಲು ಸಿದ್ದರಾಗಿದ್ದಾರೆ.

ನಾಯಕರು ಗಡಿ ಪ್ರವೇಶಕ್ಕೆ ಯತ್ನಿಸಿದರೇ ಕಾನೂನು ಕ್ರಮ: ನಗರ ಪೊಲೀಸ್ ಆಯುಕ್ತ

ನಿಷೇಧದ ನಡುವೆಯೂ ಬುಧವಾರ ಬೆಳಗ್ಗೆ 9 ಗಂಟೆಗೆ ಮರಾಠಾ ಭವನ ಬಳಿ ಎಂಇಎಸ್ ಕಾರ್ಯಕರ್ತರು ಜಮಾವಣೆಗೊಳ್ಳಲಿದ್ದಾರೆ. ಮಹಾರಾಷ್ಟ್ರದ ಮೂರು ಜನ ಸಚಿವರು ಹಾಗೂ ಓರ್ವ ಸಂಸದನಿಗೆ ಬೆಳಗಾವಿ ಪ್ರವೇಶಕ್ಕೆ ನಿಷೇಧ ಹೇರಲಾಗಿದೆ. ಈ ನಾಯಕರು ಬೆಳಗಾವಿ ಪ್ರವೇಶಿಸದಂತೆ ತಡೆಯಲು ಗಡಿ ಭಾಗದಲ್ಲಿ 18 ಚೆಕ್ ಪೋಸ್ಟ್​​ಗಳನ್ನು ನಿರ್ಮಾಣ ಮಾಡಲಾಗಿದೆ.

ಇದನ್ನೂ ಓದಿ: ರಾಜ್ಯೋತ್ಸವದಂದು MES ಕರಾಳ ದಿನಾಚರಣೆಗೆ ಮಹಾರಾಷ್ಟ್ರ ಸಿಎಂ ಬೆಂಬಲ

ಮಹಾರಾಷ್ಟ್ರದ ನಾಯಕರು ಗಡಿ ಪ್ರವೇಶಕ್ಕೆ ಯತ್ನಿಸಿದರೇ ಕಾನೂನು ಕ್ರಮ ಕೈಗೊಳ್ಳಲಾಗುವುದು. ಕರಾಳ ದಿನ ಆಚರಣೆ ಹೆಸರಲ್ಲಿ ಕಾನೂನು ಉಲ್ಲಂಘಿಸಿದ್ರೆ ಕ್ರಮ ಕೈಗೊಳ್ಳುತ್ತೇವೆ ಎಂದು ಬೆಳಗಾವಿ ನಗರ ಪೊಲೀಸ್ ಆಯುಕ್ತ ಸಿದ್ದರಾಮಪ್ಪ ಎಚ್ಚರಿಕೆ ನೀಡಿದ್ದಾರೆ

ಕರಾಳ‌ ದಿನಾಚರಣೆಗೆ ಅವಕಾಶವಿಲ್ಲ: ನಿತೇಶ್​ ಪಾಟೀಲ್​

ಮಹಾರಾಷ್ಟ್ರ ನಾಯಕರಿಗೆ ಬೆಳಗಾವಿ ಜಿಲ್ಲೆ ಪ್ರವೇಶಕ್ಕೆ ನಿರ್ಬಂಧ ವಿಧಿಸಿದ್ದೇವೆ. ಕರಾಳ‌ ದಿನಾಚರಣೆಗೆ ಅವಕಾಶವಿಲ್ಲ. ಅಧಿವೇಶನ ವೇಳೆಯೂ ಮಹಾಮೇಳಾವಗೆ ಅವಕಾಶ ಕೊಡುವುದಿಲ್ಲ. ಕಳೆದ ವರ್ಷವೂ ಅವಕಾಶ ಕೊಟ್ಟಿಲ್ಲ. ಈ ವರ್ಷವೂ ಯಾವುದೇ ಕಾರಣಕ್ಕೂ ಅವಕಾಶ ಕೊಡುವುದಿಲ್ಲ. ಮಹಾರಾಷ್ಟ್ರ ನಾಯಕರು ಬೆಳಗಾವಿ ಜಿಲ್ಲೆಯ ಪ್ರವೇಶಿಸದಂತೆ ಎಸ್ಪಿ ಮತ್ತು ಪೊಲೀಸ್ ಕಮೀಷನರ್ ಕ್ರಮವಹಿಸುತ್ತಾರೆ‌ ಎಂದು ಜಿಲ್ಲಾಧಿಕಾರಿ ನಿತೇಶ್​ ಪಾಟೀಲ್​ ಮಾಹಿತಿ ನೀಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ