AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ ಅಧಿವೇಶನದ ವೇಳೆ ಎಂಇಎಸ್​ ಪುಂಡಾಟಿಕೆ: ಪೊಲೀಸ್ ಆಯುಕ್ತ ಎತ್ತಂಗಡಿ, ದುಷ್ಕರ್ಮಿಗಳಿಗೆ ಸಿಗಲಿಲ್ಲ ಜಾಮೀನು

ಬೆಳಗಾವಿಯ ಅಧಿವೇಶನದ ಸಂದರ್ಭದಲ್ಲಿ ಎಂಇಎಸ್ ಪುಂಡಾಟ ಮೆರೆದಿದ್ದು, ಕಲ್ಲು ತೂರಾಟ, ರಾಯಣ್ಣ ಮೂರ್ತಿ ಭಗ್ನ ಪ್ರಕರಣ ಸಂಬಂಧಿಸಿದಂತೆ 38 ಜನರನ್ನು ಬಂಧಿಸಲಾಗಿತ್ತು. ಆದರೆ ಈ ಎಲ್ಲಾ ಗಲಾಟೆಗಳಿಗೆ ಪೊಲೀಸ್ ವೈಫಲ್ಯವೇ ಕಾರಣ ಎಂದು ಬಿಜೆಪಿ ಶಾಸಕ ಅಭಯ್ ಪಾಟೀಲ್ ಆರೋಪಿಸಿದ್ದರು.

ಬೆಳಗಾವಿ ಅಧಿವೇಶನದ ವೇಳೆ ಎಂಇಎಸ್​ ಪುಂಡಾಟಿಕೆ: ಪೊಲೀಸ್ ಆಯುಕ್ತ ಎತ್ತಂಗಡಿ, ದುಷ್ಕರ್ಮಿಗಳಿಗೆ ಸಿಗಲಿಲ್ಲ ಜಾಮೀನು
ಬೆಳಗಾವಿ ನಗರ ನೂತನ ಪೊಲೀಸ್ ಆಯುಕ್ತರಾಗಿ ಡಾ. ಎಂ.ಬಿ. ಬೋರಲಿಂಗಯ್ಯ ನೇಮಕ ಮತ್ತು ಎತ್ತಂಗಡಿಯಾದ ಪೊಲೀಸ್ ಆಯುಕ್ತ ಕೆ. ತ್ಯಾಗರಾಜನ್
TV9 Web
| Edited By: |

Updated on:Jan 01, 2022 | 11:18 AM

Share

ಬೆಳಗಾವಿ: ಚಳಿಗಾಲದ ಅಧಿವೇಶನದ ವೇಳೆ ಕಲ್ಲು ತೂರಾಟ, ರಾಯಣ್ಣ ಮೂರ್ತಿ ಭಗ್ನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆಳಗಾವಿ ನಗರ ಪೊಲೀಸ್ ಆಯುಕ್ತರನ್ನು (City Police Commissioner)ಸದ್ಯ ವರ್ಗಾವಣೆ ಮಾಡಲಾಗಿದ್ದು, ನೂತನ ಪೊಲೀಸ್ ಆಯುಕ್ತರಾಗಿ ಆಗಿ ಡಾ.ಬೋರಲಿಂಗಯ್ಯರನ್ನು(Dr MB Boralingaiah) ನೇಮಕ ಮಾಡಲಾಗಿದೆ. ಬೆಳಗಾವಿಯ ಅಧಿವೇಶನದ ಸಂದರ್ಭದಲ್ಲಿ ಎಂಇಎಸ್ (MES) ಪುಂಡಾಟ ಮೆರೆದಿದ್ದು, ಕಲ್ಲು ತೂರಾಟ, ರಾಯಣ್ಣ ಮೂರ್ತಿ ಭಗ್ನ ಪ್ರಕರಣ ಸಂಬಂಧಿಸಿದಂತೆ 38 ಜನರನ್ನು ಬಂಧಿಸಲಾಗಿತ್ತು. ಆದರೆ ಈ ಎಲ್ಲಾ ಗಲಾಟೆಗಳಿಗೆ ಪೊಲೀಸ್ ವೈಫಲ್ಯವೇ ಕಾರಣ ಎಂದು ಬಿಜೆಪಿ ಶಾಸಕ ಅಭಯ್ ಪಾಟೀಲ್ ಆರೋಪಿಸಿದ್ದರು. ಸದ್ಯ ಈ ಪ್ರಕರಣದ ತೀವ್ರತೆ ಅರಿತು ಬೆಳಗಾವಿ ನಗರ ಪೊಲೀಸ್ ಆಯುಕ್ತ ಕೆ.ತ್ಯಾಗರಾಜನ್​ ಅವನ್ನು ವರ್ಗಾವಣೆ ಮಾಡಲಾಗಿದೆ.

ಪುಂಡಾಟ ಮೆರೆದಿದ್ದ 38 ಆರೋಪಿಗಳ ಜಾಮೀನು ಅರ್ಜಿ ವಜಾ ಬೆಳಗಾವಿ ನಗರದಲ್ಲಿ ಪುಂಡಾಟ ಮೆರೆದಿದ್ದ ಶ್ರೀರಾಮಸೇನೆ ಹಿಂದೂಸ್ತಾನ್ ಸಂಘಟನೆ ಅಧ್ಯಕ್ಷ ರಮಾಕಾಂತ್, ಎಂಇಎಸ್​ನ ಮುಖಂಡ ಶುಭಂ ಶೆಳ್ಕೆ ಸೇರಿ 38 ಆರೋಪಿಗಳ ಜಾಮೀನು ಅರ್ಜಿ ವಜಾ ಮಾಡಲಾಗಿದೆ. ಬೆಳಗಾವಿಯ 8ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಿಂದ ಪುಂಡಾಟ ಮೆರೆದಿದ್ದ 38 ಆರೋಪಿಗಳ ಜಾಮೀನು ಅರ್ಜಿ ವಜಾ ಮಾಡಿದೆ.

ಆರೋಪಿಗಳು ಸಾಮಾಜಿಕ ಸ್ವಾಸ್ಥ್ಯ ಕೆಡಿಸುವ ಉದ್ದೇಶದಿಂದ ದೊಂಬಿ, ಗಲಾಟೆ ಮಾಡಿದ್ದಾರೆ. ಸಮಾಜಘಾತುಕ ಕೃತ್ಯವೆಸಗಿದ್ದು ಜಾಮೀನಿಗೆ ಅರ್ಹರಲ್ಲ. ಸರ್ಕಾರಿ ವಾಹನಗಳ ಮೇಲೆ ಕಲ್ಲು ತೂರಾಟ ಮಾಡಿ, ಸರ್ಕಾರಿ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೊಲೆ ಯತ್ನದ ಗಂಭೀರ ಆರೋಪ ಇದೆ ಎಂದು ವಾದ ಮಾಡಲಾಗಿದೆ. ಕರ್ನಾಟಕ ಸರ್ಕಾರ ಪರ ಸರ್ಕಾರಿ ಅಭಿಯೋಜಕ ಕಿರಣ್ ಪಾಟೀಲ್ ಈ ವಾದ ಮಂಡಿಸಿದ್ದರು. ಹೀಗಾಗಿ ಸದ್ಯ ನ್ಯಾಯಾಧೀಶ ಹೇಮಂತ ಕುಮಾರ್‌ರಿಂದ ಎಂಇಎಸ್ ಪುಂಡರ ಜಾಮೀನು ಅರ್ಜಿ ತಿರಸ್ಕಾರವಾಗಿದೆ.

ಡಿ‌.17ರಂದು ಬೆಳಗಾವಿಯ ಸಂಭಾಜಿ ವೃತ್ತದಲ್ಲಿ ಎಂಇಎಸ್ ಪುಂಡಾಟಿಕೆ ಬೆಂಗಳೂರಲ್ಲಿ ಶಿವಾಜಿ ಪ್ರತಿಮೆಗೆ ಅಪಮಾನ ಮಾಡಿದ್ದನ್ನು ಖಂಡಿಸಿ, ಡಿ‌.17ರಂದು ಬೆಳಗಾವಿಯ ಸಂಭಾಜಿ ವೃತ್ತದಲ್ಲಿ ಎಂಇಎಸ್, ಶ್ರೀರಾಮಸೇನೆ ಹಿಂದೂಸ್ತಾನ್ ಸಂಘಟನೆ ಪ್ರತಿಭಟನೆ ನಡೆಸಿತ್ತು. ಆದರೆ ಪ್ರತಿಭಟನೆ ವೇಳೆ ಸರ್ಕಾರಿ ವಾಹನಗಳನ್ನೇ ಗುರಿಯಾಗಿಸಿ ಕಲ್ಲು ತೂರಾಟ ನಡೆಸಿದ್ದ ಕೆಲ ಕಿಡಿಗೇಡಿಗಳು, ನಂತರ ಪರಾರಿಯಾಗಿದ್ದರು. ಪ್ರಕರಣ ಸಂಬಂಧ ಈವರೆಗೂ 38 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನು 22 ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಅದರಲ್ಲಿ ಎಂಇಎಸ್ ಮಾಜಿ ಮೇಯರ್ ಸರಿತಾ ಪಾಟೀಲ್ ಸೇರಿ 11 ಆರೋಪಿಗಳು ತಲೆಮರಿಸಿಕೊಂಡು ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಆದರೆ 11 ಆರೋಪಿಗಳ ನಿರೀಕ್ಷಣಾ ಜಾಮೀನು ಅರ್ಜಿ ಕೂಡ ತಿರಸ್ಕಾರ ಮಾಡಲಾಗಿದೆ.

ಇದನ್ನೂ ಓದಿ: ಎಂಇಎಸ್​ ರಾಜಕೀಯ ಪಕ್ಷ, ಕಾನೂನಾತ್ಮಕವಾಗಿ ಅದನ್ನು ನಿಷೇಧಿಸುವ ಬಗ್ಗೆ ಪರಿಶೀಲನೆ ಮಾಡಬೇಕಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ಎಂಇಎಸ್​ ಪುಂಡಾಟಿಕೆ: ಸುವರ್ಣ ಸೌಧದಲ್ಲಿ ಮುಟ್ಠಾಳರು ಕುಳಿತಿದ್ದಾರೆ ಎಂದ ಕರವೇ ಅಧ್ಯಕ್ಷ ನಾರಾಯಣಗೌಡ ಬೆಳಗಾವಿ ಪೊಲೀಸರ ವಶಕ್ಕೆ

Published On - 10:58 am, Sat, 1 January 22

ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್