ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ; ರಾತ್ರೋರಾತ್ರಿ ಮಹಾಮೇಳ ವೇದಿಕೆ ನಿರ್ಮಿಸಿದ ಎಂಇಎಸ್

ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ; ರಾತ್ರೋರಾತ್ರಿ ಮಹಾಮೇಳ ವೇದಿಕೆ ನಿರ್ಮಿಸಿದ ಎಂಇಎಸ್
ಮಹಾಮೇಳ ವೇದಿಕೆ ನಿರ್ಮಿಸಿದ ಎಂಇಎಸ್

3 ವರ್ಷಗಳ ಬಳಿಕ ಇಂದಿನಿಂದ ಸುವರ್ಣಸೌಧದಲ್ಲಿ ಅಧಿವೇಶನ ಆರಂಭವಾಗಿದೆ. ಅಧಿವೇಶನದಲ್ಲಿ ಭಾಗಿಯಾಗಲು 2 ಡೋಸ್ ಕೊವಿಡ್ ಲಸಿಕೆ, ಕೊವಿಡ್ ನೆಗೆಟಿವ್ ವರದಿಯನ್ನು ಸರ್ಕಾರ ಕಡ್ಡಾಯ ಮಾಡಿದೆ.

TV9kannada Web Team

| Edited By: sandhya thejappa

Dec 13, 2021 | 10:25 AM

ಬೆಳಗಾವಿ: ಸುವರ್ಣಸೌಧದಲ್ಲಿ ಇಂದಿನಿಂದ ಚಳಿಗಾಲದ ಅಧಿವೇಶನ ಆರಂಭವಾಗಿದೆ. ಈ ಹಿನ್ನೆಲೆ ಬೆಳಗಾವಿಯಲ್ಲಿ ನಾಡದ್ರೋಹಿ ಎಂಇಎಸ್ ಪುಂಡಾಟ ಮೆರೆದಿದೆ. ಎಂಇಎಸ್ ರಾತ್ರೋರಾತ್ರಿ ಮಹಾಮೇಳ ವೇದಿಕೆ ನಿರ್ಮಿಸಿದೆ. ಅನುಮತಿ ಇಲ್ಲದಿದ್ದರೂ ಪುಂಡರು ವೇದಿಕೆಯನ್ನು ನಿರ್ಮಿಸಿದ್ದಾರೆ. ವ್ಯಾಕ್ಸಿನ್ ಡಿಪೋ ಮೈದಾನದ ಬಳಿಯ ರಸ್ತೆಯಲ್ಲಿ ವೇದಿಕೆ ನಿರ್ಮಾಣ ಮಾಡಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗದಂತೆ 150ಕ್ಕೂ ಅಧಿಕ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.

3 ವರ್ಷಗಳ ಬಳಿಕ ಇಂದಿನಿಂದ ಸುವರ್ಣಸೌಧದಲ್ಲಿ ಅಧಿವೇಶನ ಆರಂಭವಾಗಿದೆ. ಅಧಿವೇಶನದಲ್ಲಿ ಭಾಗಿಯಾಗಲು 2 ಡೋಸ್ ಕೊವಿಡ್ ಲಸಿಕೆ, ಕೊವಿಡ್ ನೆಗೆಟಿವ್ ವರದಿಯನ್ನು ಸರ್ಕಾರ ಕಡ್ಡಾಯ ಮಾಡಿದೆ. ಈಗಾಗಲೇ ಅಧಿವೇಶನದಲ್ಲಿ ಭಾಗಿಯಾಗಲು ನಾಯಕರು, ಸ್ಪೀಕರ್ ಕಾಗೇರಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಸಚಿವರು, ಶಾಸಕರು, ಅಧಿಕಾರಿಗಳ ದಂಡು ಬೆಳಗಾವಿಗೆ ಆಗಮಿಸಿದೆ.

ಲವ್ ಜಿಹಾದ್ ಕಾಯ್ದೆ ಲವ್ ಜಿಹಾದ್ ಕಾಯ್ದೆ ತರುವುದಾಗಿ ಸಚಿವ ಸುನಿಲ್ ಕುಮಾರ್ ಹೇಳಿಕೆ ನೀಡಿದ್ದಾರೆ. ಲವ್ ಜಿಹಾದ್ ವಿರುದ್ಧ ಕಾಯ್ದೆ ತರುತ್ತೇವೆ. ಗೋಹತ್ಯೆ ನಿಷೇಧ ಕಾಯ್ದೆ ತರುವುದಾಗಿ ಹೇಳಿದ್ದೆವು, ತಂದಿದ್ದೇವೆ. ಅದೇ ರೀತಿ ಮತಾಂತರ ನಿಷೇಧ ಕಾಯ್ದೆಯನ್ನೂ ತರುತ್ತೇವೆ. ಈ ಅಧಿವೇಶನದಲ್ಲಿ ಮತಾಂತರ ನಿಷೇಧ ಕಾಯ್ದೆ ತರುತ್ತೇವೆ. ಮತಾಂತರ ನಿಷೇಧ ಕಾಯ್ದೆಗೆ ಕಾನೂನಿನ ಸ್ವರೂಪ ತರುತ್ತಿದ್ದೇವೆ. ಕಾಂಗ್ರೆಸ್ ಯಾಕೆ ವಿರೋಧ ಮಾಡುತ್ತಿದೆ ಎಂಬುದನ್ನ ಹೇಳಲಿ ಅಂತ ಬೆಳಗಾವಿ ಸುವರ್ಣಸೌಧದಲ್ಲಿ ಸಚಿವರು ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ

ಕಿರಿಕ್​ ಕೀರ್ತಿ ಮೇಲೆ ಹಲ್ಲೆ ಮಾಡಿದ್ದ ಐವರು ಆರೋಪಿಗಳು ಅರೆಸ್ಟ್; ಗಲಾಟೆಗೆ ಕಾರಣ ಬಹಿರಂಗ​

ದೈತ್ಯಾಕಾರದ ಹೆಬ್ಬಾವಿನ ಮೇಲೆ ಮಲಗಿ ಆಟವಾಡಿದ ಪುಟ್ಟ ಬಾಲಕಿ; ವಿಡಿಯೋ ವೈರಲ್

Follow us on

Related Stories

Most Read Stories

Click on your DTH Provider to Add TV9 Kannada