AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿಯಲ್ಲಿ ಮತ್ತೆ ಎಂಇಎಸ್ ಪುಂಡರ ಅಟ್ಟಹಾಸ: ಗ್ರಾಪಂ ಕಾರ್ಯದರ್ಶಿ ಮೇಲೆ ಹಲ್ಲೆ​

ಬೆಳಗಾವಿಯಲ್ಲಿ ಎಂಇಎಸ್ ಪುಂಡರ ಕುಕೃತ್ಯಗಳು ಮತ್ತೆ ಹೆಚ್ಚಾಗುತ್ತಿವೆ. ಗ್ರಾಮ ಪಂಚಾಯತ್ ಕಾರ್ಯದರ್ಶಿ ನಾಗಪ್ಪ ಅವರ ಮೇಲೆ ಹಲ್ಲೆ ನಡೆದಿದೆ. ತಾವು ಹೇಳಿದ ಕೆಲಸ ಮಾಡಿಲ್ಲ ಎಂಬ ಕಾರಣಕ್ಕೆ ಚೇತನ್ ಪಾಟೀಲ್ ಮತ್ತು ವಿಕ್ರಮ್ ಯಳ್ಳೂರಕರ್ ಎಂಬವರ ಗ್ಯಾಂಗ್ ದಾಳಿ ನಡೆಸಿದೆ. ಇತ್ತೀಚೆಗಷ್ಟೇ ಕೆಎಸ್ಆರ್ಟಿಸಿ ಕಂಡಕ್ಟರ್ ಮೇಲೆ ಹಲ್ಲೆ ನಡೆದಿತ್ತು.

ಬೆಳಗಾವಿಯಲ್ಲಿ ಮತ್ತೆ ಎಂಇಎಸ್ ಪುಂಡರ ಅಟ್ಟಹಾಸ: ಗ್ರಾಪಂ ಕಾರ್ಯದರ್ಶಿ ಮೇಲೆ ಹಲ್ಲೆ​
ಹಲ್ಲೆ ಆರೋಪಿಗಳು
ಸಹದೇವ್​ ಮಾನೆ
| Edited By: |

Updated on: Mar 11, 2025 | 8:50 AM

Share

ಬೆಳಗಾವಿ, ಮಾರ್ಚ್ 11: ಬೆಳಗಾವಿ (Belagavi) ಗಡಿಯಲ್ಲಿ ಕೆಎಸ್ಆರ್ಟಿಸಿ (KSRTC) ಬಸ್ ಕಂಡಕ್ಟರ್ ಮೇಲೆ ಎಂಇಎಸ್ (MES)ಪುಂಡರು ಹಲ್ಲೆ ನಡೆಸಿದ ಪ್ರಕರಣ ರಾಜ್ಯದಾದ್ಯಂತ ವ್ಯಾಪಕ ಚರ್ಚೆಗೆ ಗ್ರಾಸವಾಗಿತ್ತು. ಇದೀಗ ಆ ಘಟನೆಯ ಈ ಕಹಿ ನೆನಪು ಮಾಸುವ ಮುನ್ನವೇ, ಬೆಳಗಾವಿಯಲ್ಲಿ ಎಂಇಎಸ್ ಪುಂಡರ ಅಟ್ಟಹಾಸ ಮತ್ತೆ ಮೇರೆಮೀರಿದೆ. ಅಂಬೇವಾಡಿ ಗ್ರಾಮ ಪಂಚಾಯತ್ ಕಾರ್ಯದರ್ಶಿ ನಾಗಪ್ಪ ಎಂಬವರ ಮೇಲೆ, ತಾವು ಹೇಳಿದ ಕೆಲಸ ಮಾಡಿಲ್ಲ ಎಂಬ ಕಾರಣಕ್ಕೆ ಎಂಇಎಸ್ ಪುಂಡರು ದಾಳಿ ನಡೆಸಿದ್ದಾರೆ.

ಬೆಳಗಾವಿ ತಾಲೂಕಿನ ಗೋಜಗಾ ಸಮೀಪ ಬೈಕ್ ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಲಾಗಿದೆ. ಅಂಬೇವಾಡಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಚೇತನ್ ಪಾಟೀಲ್, ಹಾಲಿ ಅಧ್ಯಕ್ಷರ ಪುತ್ರ ವಿಕ್ರಮ್ ಯಳ್ಳೂರಕರ್ ಅವರ ಗ್ಯಾಂಗ್ ಹಲ್ಲೆ ಮಾಡಿದೆ ಎನ್ನಲಾಗಿದೆ.

‘ನಾವು ಹೇಳಿದ ಹಾಗೆ ನೀವು ಕೆಲಸ ಮಾಡಬೇಕು. ಇಲ್ಲದಿದ್ದರೆ ಲಂಚ ಪಡೆದಿದ್ದೀಯಾ ಎಂಬುದಾಗಿ ಕೇಸ್ ಹಾಕುತ್ತೇವೆ’ ಎಂದು ಹಲ್ಲೆಕೋರರು ಧಮ್ಕಿ ಹಾಕಿದ್ದಾರೆ. ಚೇತನ್ ಪಾಟೀಲ್, ವಿಕ್ರಮ್ ಯಳ್ಳೂರಕರ್ ಅವರ ಗ್ಯಾಂಗ್ ಮತ್ತು ಎಂಇಎಸ್​ ಪುಂಡರು ಜತೆಯಾಗಿ ಹಲ್ಲೆ ಮಾಡಿದ್ದಾರೆ. ಚೇತನ್ ಪಾಟೀಲ್ ಎಂಇಎಸ್ ಜಿಲ್ಲಾ ಸಂಚಾಲಕರೂ ಆಗಿದ್ದಾರೆ.

ಇದನ್ನೂ ಓದಿ
Image
ಕೊಪ್ಪಳ ರೇಪ್​ ಕೇಸ್​: ಹೋಂ ಸ್ಟೇ, ರೆಸಾರ್ಟ್​ಗಳ ಮೇಲೆ ಪೊಲೀಸರ ದಾಳಿ
Image
ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿನ ನೀರಿನ ಸಮಸ್ಯೆಗೆ ಬಿತ್ತು ಬ್ರೇಕ್​
Image
ಮದರಸಾದಲ್ಲಿ ಬಾಲಕಿ ಮೇಲೆ ಹಲ್ಲೆ: ದೂರು ಕೊಟ್ಟ ಪೋಷಕರಿಗೆ ಕೊಲೆ ಬೆದರಿಕೆ
Image
‘ಕೈ’ ಶಾಸಕಾಂಗ ಸಭೆಯಲ್ಲೇ ಅಸಮಾಧಾನದ ಹೊಗೆ: ಸತೀಶ್ ವಿರುದ್ಧ ಗಣಿಗ ಆಕ್ಷೇಪ

ಕೆಲವು ದಿನಗಳ ಹಿಂದಷ್ಟೇ ಕಂಡಕ್ಟರ್ ಮೇಲೆ ಹಲ್ಲೆ ನಡೆದಿತ್ತು. ಈಗ, ತಾವು ಹೇಳಿದಂತೆ ಅಕ್ರಮ ಕೆಲಸ ಮಾಡಿಲ್ಲ ಎಂದು ದಾಳಿ ನಡೆಸಲಾಗಿದೆ ಗಾಯಾಳು ನಾಗಪ್ಪ ಅವರನ್ನು ಸದ್ಯ ಬೆಳಗಾವಿ ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಇದನ್ನೂ ಓದಿ: ಕನ್ನಡಿಗ ಕಂಡಕ್ಟರ್ ಮೇಲೆ ಹಲ್ಲೆ ಪ್ರಕರಣ: ಬೆಳಗಾವಿ ಗಡಿಯಲ್ಲಿ ನಿಜಕ್ಕೂ ನಡೆದಿದ್ದೇನು? ಇಲ್ಲಿದೆ ಸಂಪೂರ್ಣ ವಿವರ

ಬಸ್ ಕಂಡಕ್ಟರ್ ಮೇಲಿನ ಹಲ್ಲೆ ಪ್ರಕರಣ ರಾಜ್ಯಾದ್ಯಂತ ತೀವ್ರ ವಿರೋಧ ಮತ್ತು ಆಕ್ರೋಶಕ್ಕೆ ಗುರಿಯಾಗಿತ್ತು. ಬಸ್ ಕಂಡಕ್ಟರ್ ಮೇಲೆ ಹಲ್ಲೆ ನಡೆಸಿದ್ದು ಮಾತ್ರವಲ್ಲದೆ, ಲೈಂಗಿಕ ದೌರ್ಜನ್ಯ ದೂರು ನೀಡಲಾಗಿತ್ತು. ಇದನ್ನು ಪರಿಗಣಿಸಿದ್ದ ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣದ ದಾಖಲಿಸಿದ್ದರು. ಆದರೆ ನಂತರ, ಪ್ರಕರಣ ಗಂಭೀರ ಸ್ವರೂಪ ಪಡೆಯುತ್ತಿದ್ದಂತೆಯೇ ಸಂತ್ರಸ್ತೆಯ ತಾಯಿ ದೂರನ್ನು ವಾಪಸ್ ಪಡೆದಿದ್ದರು. ಮರಾಠಿ ಪುಂಡರ ಬಲವಂತದ ಮೇರೆಗೆ ಕಂಡಕ್ಟರ್ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು ಎಂಬ ಆರೋಪ ಕೂಡ ಕೇಳಿಬಂದಿತ್ತು. ಬಳಿಕ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿತ್ತು. ಅದಾದ ಕೆಲವೇ ದಿನಗಳಲ್ಲಿ ಇದೀಗ ಗ್ರಾಮ ಪಂಚಾಯತಿ ಕಾರ್ಯದರ್ಶಿ ಮೇಲೆ ಹಲ್ಲೆ ನಡೆದಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸಹದೇವ್​ ಮಾನೆ
ಸಹದೇವ್​ ಮಾನೆ

ಸಹದೇವ ಯಲ್ಲಪ್ಪ ಮಾನೆ. ಹುಟ್ಟಿದ್ದು ಧಾರವಾಡ ತಾಲೂಕಿನ ಗುಳೇದಕೊಪ್ಪ ಗ್ರಾಮ. ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ಕಳೆದ 12 ವರ್ಷದಿಂದ ಟಿವಿ ಮಾಧ್ಯಮದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. 2014ರಲ್ಲಿ ಬೀದರ್ ಜಿಲ್ಲೆಯಿಂದ ವೃತ್ತಿ ಜೀವನ ಪ್ರಾರಂಭ ಮಾಡಿ ಕಲಬುರಗಿ, ಹುಬ್ಬಳ್ಳಿಯಲ್ಲಿ ಕೆಲಸ ಮಾಡಿ ಸದ್ಯ ‘ಟಿವಿ9’ ಕನ್ನಡ ಸುದ್ದಿ ವಾಹಿನಿಯಲ್ಲಿ 9ವರ್ಷಗಳಿಂದ ಬೆಳಗಾವಿ ಜಿಲ್ಲೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ಜಿಲ್ಲೆಯಲ್ಲಿ ಅತ್ಯುತ್ತಮ ಜಿಲ್ಲಾ ವರದಿಗಾರ ಪ್ರಶಸ್ತಿ ಪಡೆದಿದ್ದು, ಗಡಿ ಜಿಲ್ಲೆ ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಕೂಡ ದೊರೆತಿದೆ. ರೈತರ ಸಮಸ್ಯೆಗಳತ್ತ ಬೆಳಕು ಚೆಲ್ಲುವ ವರದಿ ಸೇರಿ ಗಡಿ ಸಮಸ್ಯೆ, ಕ್ರೈಮ್, ಪ್ರವಾಹ ಪರಿಸ್ಥಿತಿ, ನೆರೆಯ ಮಹಾರಾಷ್ಟ್ರ, ಗೋವಾದಲ್ಲಿನ ಬೆಳವಣಿಗೆ ಕುರಿತು ವರದಿ ಮಾಡುತ್ತಿರುವುದು ವಿಶೇಷ.

Read More
ಇಂಡಸ್ಟ್ರಿಗೆ ಅಪ್ಪ ಆಗಿ ಬಿಟ್ಟಿದ್ದಾರಂಂತೆ ರಂಗಾಯಣ ರಘು: ವಿಡಿಯೋ ನೋಡಿ
ಇಂಡಸ್ಟ್ರಿಗೆ ಅಪ್ಪ ಆಗಿ ಬಿಟ್ಟಿದ್ದಾರಂಂತೆ ರಂಗಾಯಣ ರಘು: ವಿಡಿಯೋ ನೋಡಿ
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ
ಹಾಸನದವರಿಗೆ ವಿಶೇಷ ಶಕ್ತಿ ಎಂದ ನಟ ರಂಗಾಯಣ ರಘು: ವಿಡಿಯೋ ನೋಡಿ
ಹಾಸನದವರಿಗೆ ವಿಶೇಷ ಶಕ್ತಿ ಎಂದ ನಟ ರಂಗಾಯಣ ರಘು: ವಿಡಿಯೋ ನೋಡಿ
ರಚಿತಾರಾಮ್ ಹುಟ್ಟುಹಬ್ಬ: ಕೊರಗಜ್ಜನ ಹರಕೆ ಬಗ್ಗೆ ರಚಿತಾರಾಮ್ ಏನಂದ್ರು ನೋಡಿ
ರಚಿತಾರಾಮ್ ಹುಟ್ಟುಹಬ್ಬ: ಕೊರಗಜ್ಜನ ಹರಕೆ ಬಗ್ಗೆ ರಚಿತಾರಾಮ್ ಏನಂದ್ರು ನೋಡಿ
ಬಿಗ್​​ಬಾಸ್: ಸ್ಪರ್ಧಿಗಳ ವರ್ತನೆಗೆ ಬೇಸತ್ತು ಸ್ಟೇಜ್ ಬಿಟ್ಟು ತೆರಳಿದ ಕಿಚ್ಚ
ಬಿಗ್​​ಬಾಸ್: ಸ್ಪರ್ಧಿಗಳ ವರ್ತನೆಗೆ ಬೇಸತ್ತು ಸ್ಟೇಜ್ ಬಿಟ್ಟು ತೆರಳಿದ ಕಿಚ್ಚ