ಗಣಿ ಅಕ್ರಮಕ್ಕೆ ಕಡಿವಾಣ: ಖನಿಜ ಸಂಪತ್ತು ರಕ್ಷಿಸಿ, ಆದಾಯ ಹೆಚ್ಚಿಸಿಕೊಳ್ಳಲು ಮೊದಲ ಬಾರಿಗೆ ಖನಿಜ ರಕ್ಷಣಾ ಪಡೆ ಅಸ್ತಿತ್ವಕ್ಕೆ : ಸಚಿವ ಹಾಲಪ್ಪ ಆಚಾರ್‌

ಸಿಎಂ ಬೊಮ್ಮಾಯಿ ನೇತೃತ್ವದ ಸಚಿವ ಸಂಪುಟ ಸಭೆ ನಿರ್ಧಾರದಂತೆ ಪ್ರತಿ ಜಿಲ್ಲೆಯಲ್ಲಿ ಒಂದು ಖನಿಜ ರಕ್ಷಣಾ ಪಡೆ ಸ್ಥಾಪಿಸಲು ಅನುಮೋದನೆ ನೀಡಲಾಗಿದೆ. ಹಾಗಾಗಿ ಪ್ರಪ್ರಥಮ ಬಾರಿಗೆ ಇಂದು ಬೆಳಗಾವಿಯಲ್ಲಿ ಗಸ್ತುವಾಹನಗಳಿಗೆ ಸಚಿವ ಹಾಲಪ್ಪ ಆಚಾರ್‌ ಚಾಲನೆ ನೀಡುವ ಮೂಲಕ ಖನಿಜ ರಕ್ಷಣಾ ಪಡೆಗೆ ಚಾಲನೆ ನೀಡಲಾಗಿದೆ.

ಗಣಿ ಅಕ್ರಮಕ್ಕೆ ಕಡಿವಾಣ: ಖನಿಜ ಸಂಪತ್ತು ರಕ್ಷಿಸಿ, ಆದಾಯ ಹೆಚ್ಚಿಸಿಕೊಳ್ಳಲು ಮೊದಲ ಬಾರಿಗೆ ಖನಿಜ ರಕ್ಷಣಾ ಪಡೆ ಅಸ್ತಿತ್ವಕ್ಕೆ : ಸಚಿವ ಹಾಲಪ್ಪ ಆಚಾರ್‌
ಖನಿಜ ರಕ್ಷಣಾ ಪಡೆ ಅಸ್ತಿತ್ವಕ್ಕೆ : ಸಚಿವ ಹಾಲಪ್ಪ ಆಚಾರ್‌
Follow us
TV9 Web
| Updated By: Digi Tech Desk

Updated on:Dec 27, 2022 | 5:40 PM

ಸುವರ್ಣ ವಿಧಾನಸೌಧ (ಬೆಳಗಾವಿ): ರಾಜ್ಯದ ಖನಿಜ ಮತ್ತು ಉಪ ಖನಿಜ ಅನಧಿಕೃತ ಗಣಿಗಾರಿಕೆ (Illegal Mining) ಮತ್ತು ಸಾಗಾಣಿಕೆಯನ್ನು ತಡೆಗಟ್ಟಲು ಹಾಗೂ ರಾಜ್ಯದ ಖನಿಜ ಸಂಪತ್ತನ್ನ ಸಂರಕ್ಷಿಸಿ (Mineral protection) ಆದಾಯವನ್ನು ಹೆಚ್ಚಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರ ದಿಟ್ಟ ಹೆಜ್ಜೆಗಳನ್ನು ಇಟ್ಟಿದೆ. ಪ್ರಪ್ರಥಮ ಬಾರಿಗೆ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧೀನದಲ್ಲಿ ಪ್ರತಿ ಜಿಲ್ಲೆಯಲ್ಲಿ ಖನಿಜ ರಕ್ಷಣಾ ಪಡೆಯನ್ನು ಸ್ಥಾಪಿಸಲಾಗಿದ್ದು, ಇಂದು ಬೆಳಗಾವಿಯ (Belagavi) ಸುವರ್ಣ ವಿಧಾನಸೌಧದಲ್ಲಿ ಗಸ್ತು ವಾಹನಗಳಿಗೆ ಚಾಲನೆ ನೀಡಲಾಗಿದೆ ಎಂದು ಮಾನ್ಯ ಗಣಿ ಮತ್ತು ಭೂ ವಿಜ್ಞಾನ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಹಾಗೂ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಸಚಿವರು  ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಹಾಲಪ್ಪ ಆಚಾರ್‌ ತಿಳಿಸಿದರು.

ಇಂದು ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಪ್ರಪ್ರಥಮ ಬಾರಿಗೆ “ಖನಿಜ ರಕ್ಷಣಾ ಪಡೆ” ಯ ಗಸ್ತುವಾಹನಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು, ಕರ್ನಾಟಕ ಉಪ ಖನಿಜ ರಿಯಾಯಿತಿ ನಿಯಮಗಳಂತೆ ಪೋಲೀಸ್ ಇಲಾಖೆ, ಕಂದಾಯ ಇಲಾಖೆ, ಅರಣ್ಯ ಇಲಾಖೆ, ಸಾರಿಗೆ ಇಲಾಖೆಯ ಅಧಿಕಾರಿಗಳಿಗೆ ಖನಿಜ ಮತ್ತು ಉಪಖನಿಜಗಳ ಅನಧಿಕೃತ ಗಣಿಗಾರಿಕೆ, ದಾಸ್ತಾನು ಮತ್ತು ಸಾಗಾಣಿಕೆ ವಿರುದ್ದ ಕ್ರಮಕೈಗೊಳ್ಳಲು ಅಧಿಕಾರ ಪ್ರತ್ಯೋಜಿಸಲಾಗಿರುತ್ತದೆ. ಆದಾಗ್ಯೂ ಸದರಿ ಇಲಾಖೆಗಳಿಂದ ಅಕ್ರಮ ಖನಿಜ ಮತ್ತು ಉಪಖನಿಜಗಳ ಗಣಿಗಾರಿಕೆ ಮತ್ತು ಸಾಗಾಣಿಕೆಯನ್ನು ತಡೆಗಟ್ಟುವ ಕ್ರಮಗಳು ಹೆಚ್ಚಿನ ಪರಿಣಾಮಕಾರಿಯಾಗಿರುವುದಿಲ್ಲ.

  1. – ರಾಜ್ಯದಲ್ಲಿ ಅನಧಿಕೃತ ಗಣಿಗಾರಿಕೆ ಮತ್ತು ಸಾಗಾಣಿಕೆ ತಡೆಗಟ್ಟುವ ಖನಿಜ ರಕ್ಷಣಾ ಪಡೆಗೆ ಸಚಿವ ಹಾಲಪ್ಪ ಆಚಾರ್‌ ಚಾಲನೆ – ಬೆಳಗಾವಿಯ ಸುವರ್ಣ ಸೌಧದಲ್ಲಿ ಖನಿಜ ರಕ್ಷಣಾ ಪಡೆಗೆ ಚಾಲನೆ – ಪ್ರಥಮ ಹಂತದಲ್ಲಿ ರಾಜ್ಯದ 8 ಜಿಲ್ಲೆಗಳಲ್ಲಿ ಅನುಷ್ಠಾನ – ನಿವೃತ್ತ ಸೈನಿಕರ ನೇಮಕ – 44 ಹೊಸ ವಾಹನ ಖರೀದಿ – ಖನಿಜ ಸಂಪತ್ತಿನ ರಕ್ಷಣೆ ಹಾಗೂ ಸಂಪತ್ತಿನ ಹೆಚ್ಚಳಕ್ಕೆ ಸರಕಾರದ ದಿಟ್ಟ ನಿರ್ಧಾರ

ಈ ಹಿನ್ನೆಲೆಯಲ್ಲಿ ಅಕ್ರಮ ಖನಿಜ ಮತ್ತು ಉಪಖನಿಜಗಳ ಗಣಿಗಾರಿಕೆ ಮತ್ತು ಸಾಗಾಣಿಕೆ ತಡೆಗಟ್ಟಲು, ಸಂಬಂಧಿಸಿದ ಇಲಾಖೆಗಳಲ್ಲಿನ ಕೆಲಸದ ಒತ್ತಡಗಳಿಂದ ಹೆಚ್ಚಿನ ಯಶಸ್ಸು ಸಾಧ್ಯವಾಗಿರುವುದಿಲ್ಲ. ಆದ್ದರಿಂದ, ದಿನಾಂಕ: 30-04-2020 ರಂದು ಜರುಗಿದ ಸಚಿವ ಸಂಪುಟ ಸಭೆಯಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧೀನದಲ್ಲಿ ಪ್ರತಿ ಜಿಲ್ಲೆಯಲ್ಲಿ ಒಂದು ಖನಿಜ ರಕ್ಷಣಾ ಪಡೆಯನ್ನು ಸ್ಥಾಪಿಸಲು ಅನುಮೋದನೆ ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ ಪ್ರಪ್ರಥಮ ಬಾರಿಗೆ ಇಂದು ಬೆಳಗಾವಿಯಲ್ಲಿ ಗಸ್ತುವಾಹನಗಳಿಗೆ ಚಾಲನೆ ನೀಡುವ ಮೂಲಕ ಖನಿಜ ರಕ್ಷಣಾ ಪಡೆಗೆ ಚಾಲನೆ ನೀಡಲಾಗಿದೆ ಎಂದು ಸಚಿವರು ತಿಳಿಸಿದರು.

ಮೊದಲ ಹಂತದಲ್ಲಿ 8 ಜಿಲ್ಲೆಗಳಲ್ಲಿ ಖನಿಜ ರಕ್ಷಣಾ ಪಡೆ ಅನುಷ್ಠಾನ – ನಿವೃತ್ತ ಸೈನಿಕರ ನೇಮಕ:

ಮೊದಲ ಹಂತದಲ್ಲಿ ಖನಿಜ ರಕ್ಷಣಾ ಪಡೆ ಯನ್ನು ಹೆಚ್ಚಿನ ಖನಿಜ/ ಉಪಖನಿಜ ಗಣಿಗಾರಿಕೆ ಇರುವ 08 ಜಿಲ್ಲೆಗಳಾದ ರಾಜ್ಯದ ಕೋಲಾರ, ಚಿಕ್ಕಬಳ್ಳಾಪುರ, ರಾಯಚೂರು, ಹಾವೇರಿ, ಬೆಳಗಾವಿ, ಕಲಬುರಗಿ, ಕೊಪ್ಪಳ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಖನಿಜ ರಕ್ಷಣಾ ಪಡೆ ಸ್ಥಾಪಿಸಲು ಕ್ರಮವಹಿಸಲಾಗಿದೆ. ಖನಿಜ ರಕ್ಷಣಾ ಪಡೆ ಸಮರ್ಥವಾಗಿ ಕಾರ್ಯ ನಿರ್ವಹಿಸಲು ಪ್ರತಿ ಜಿಲ್ಲೆಗೆ ಹವಾಲ್ದಾರ್‌ ದರ್ಜೆಯ 03 ನಿವೃತ್ತ ಸೈನಿಕರನ್ನು (Ex-service man) ನೇಮಕಮಾಡಿಕೊಳ್ಳಲಾಗಿದೆ ಮತ್ತು ಜಿಲ್ಲಾ ಖನಿಜ ಪ್ರತಿಷ್ಠಾನ ನಿಧಿಯಿಂದ 44 ಹೊಸ ವಾಹನವನ್ನು ಖರೀದಿಸಲು ಅನುಮೋದನೆ ನೀಡಲಾಗಿದೆ ಎಂದು ಹೇಳಿದರು.

Also Read: ಸರಕಾರಿ ಅಧಿಕಾರಿಗಳು ದುಡ್ಡು ಮಾಡೋ ಕಲೆ ಕಲಿಯಬೇಕೆಂದರೆ ಶಿಕ್ಷಣ ಕಾಶಿ ಧಾರವಾಡಕ್ಕೆ ಬನ್ನಿ -ರೈತರ ಅಹವಾಲು

ಖನಿಜ ಮತ್ತು ಉಪಖನಿಜ ಅನಧಿಕೃತ ಗಣಿಗಾರಿಕೆ ಮತ್ತು ಸಾಗಾಣಿಕೆ ತಡೆಗಟ್ಟಲು ಹಾಗೂ ರಾಜ್ಯದ ಖನಿಜ ಸಂಪತ್ತನ್ನು ಸಂರಕ್ಷಿಸಿ ಆದಾಯವನ್ನು ಹೆಚ್ಚಿಸಲು ಖನಿಜ ರಕ್ಷಣಾ ಪಡೆ ಸಮರ್ಥವಾಗಿ ಕಾರ್ಯ ನಿರ್ವಹಿಸಲು ವಿದ್ಯಕ್ತವಾಗಿ ಬೆಳಗಾವಿಯ ಸುವರ್ಣ ಸೌಧದಲ್ಲಿ ಚಾಲನೆ ನೀಡಲಾಗಿದೆ. ಅನಧಿಕೃತ ಗಣಿಗಾರಿಕೆ ಹಾಗೂ ಸಾಗಾಣಿಕೆಯನ್ನು ಪರಿಣಾಮಕಾರಿಯಾಗಿ ತಡೆಗಟ್ಟುವ ನಿಟ್ಟಿನಲ್ಲಿ ನಮ್ಮ ಸರಕಾರ ಎಲ್ಲಾ ಕ್ರಮಗಳನ್ನು ಕೈಗೊಂಡಿದ್ದು, ರಾಜ್ಯದ ಇತಿಹಾಸದಲ್ಲೆ ಪ್ರಪ್ರಥಮ ಬಾರಿಗೆ ಖನಿಜ ರಕ್ಷಣಾ ಪಡೆಯನ್ನು ಪ್ರಾರಂಭಿಸಲಾಗಿದೆ ಎಂದು ಸಚಿವರು ಹೇಳಿದರು.

ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:15 pm, Tue, 27 December 22

ರೈಲಿನಡಿ ಸಿಲುಕುತ್ತಿದ್ದ ವೃದ್ಧರನ್ನು ರಕ್ಷಿಸಿದ ಬಂಗಾಳದ ಕಾನ್‌ಸ್ಟೆಬಲ್
ರೈಲಿನಡಿ ಸಿಲುಕುತ್ತಿದ್ದ ವೃದ್ಧರನ್ನು ರಕ್ಷಿಸಿದ ಬಂಗಾಳದ ಕಾನ್‌ಸ್ಟೆಬಲ್
ಬಾಡಿಗೆ ಮನೆಯಲ್ಲಿದ್ದೇನೆ, ಸಂಭಾವನೆಯಿಂದ ಸಾಲ ತೀರಿಸ್ತೀನಿ: ತ್ರಿವಿಕ್ರಮ್
ಬಾಡಿಗೆ ಮನೆಯಲ್ಲಿದ್ದೇನೆ, ಸಂಭಾವನೆಯಿಂದ ಸಾಲ ತೀರಿಸ್ತೀನಿ: ತ್ರಿವಿಕ್ರಮ್
ಜನಪ್ರತಿನಿಧಿಗಳು ಅಧಿಕಾರಿಗಳ ಮೇಲೆ ರೇಗುವುದು ಯಾಕೆ?
ಜನಪ್ರತಿನಿಧಿಗಳು ಅಧಿಕಾರಿಗಳ ಮೇಲೆ ರೇಗುವುದು ಯಾಕೆ?
ಬಿಜೆಪಿ ರಾಜ್ಯ, ರಾಷ್ಟ್ರಮಟ್ಟದಲ್ಲಿ ಬಹುದೊಡ್ಡ ಪಕ್ಷವಾಗಿ ಬೆಳೆದಿದೆ: ಸಂಸದ
ಬಿಜೆಪಿ ರಾಜ್ಯ, ರಾಷ್ಟ್ರಮಟ್ಟದಲ್ಲಿ ಬಹುದೊಡ್ಡ ಪಕ್ಷವಾಗಿ ಬೆಳೆದಿದೆ: ಸಂಸದ
ಹನುಮಂತುಗೆ ಹೊಡೆದರೂ ಭವ್ಯಾನ ಹೊರಗೆ ಹಾಕಲಿಲ್ಲ ಯಾಕೆ? ಮಂಜು ಹೇಳಿದ್ದೇನು?
ಹನುಮಂತುಗೆ ಹೊಡೆದರೂ ಭವ್ಯಾನ ಹೊರಗೆ ಹಾಕಲಿಲ್ಲ ಯಾಕೆ? ಮಂಜು ಹೇಳಿದ್ದೇನು?
ಜಲಮಂಡಳಿ ನಿರ್ವಹಣೆಗೆ ಹಣ ಹೊಂದಿಸಲಾಗುತ್ತಿಲ್ಲ, ದರಯೇರಿಕೆ ಅನಿವಾರ್ಯ: ಸಚಿವ
ಜಲಮಂಡಳಿ ನಿರ್ವಹಣೆಗೆ ಹಣ ಹೊಂದಿಸಲಾಗುತ್ತಿಲ್ಲ, ದರಯೇರಿಕೆ ಅನಿವಾರ್ಯ: ಸಚಿವ
ವಲಸಿಗರ ವಿಚಾರದಲ್ಲಿ ಭಾರತ ಸೂಕ್ತ ಕ್ರಮ ಕೈಗೊಳ್ಳಲಿದೆ; ಟ್ರಂಪ್ ಹೇಳಿಕೆ
ವಲಸಿಗರ ವಿಚಾರದಲ್ಲಿ ಭಾರತ ಸೂಕ್ತ ಕ್ರಮ ಕೈಗೊಳ್ಳಲಿದೆ; ಟ್ರಂಪ್ ಹೇಳಿಕೆ
ಇಕ್ಬಾಲ್ ಹುಸ್ಸೇನ್ ಹೇಳಿಕೆಗೆ ಕೌಂಟರ್ ನೀಡಿದ ಸಚಿವ ರಾಜಣ್ಣ
ಇಕ್ಬಾಲ್ ಹುಸ್ಸೇನ್ ಹೇಳಿಕೆಗೆ ಕೌಂಟರ್ ನೀಡಿದ ಸಚಿವ ರಾಜಣ್ಣ
ಕಾಂಗ್ರೆಸ್ ಪಕ್ಷ ಒಂದು ಸಿಟಿ ಬಸ್​ನಂತೆ, ಯಾರು ಬೇಕಾದರೂ ಹತ್ತಬಹುದು: ಲಾಡ್
ಕಾಂಗ್ರೆಸ್ ಪಕ್ಷ ಒಂದು ಸಿಟಿ ಬಸ್​ನಂತೆ, ಯಾರು ಬೇಕಾದರೂ ಹತ್ತಬಹುದು: ಲಾಡ್
150 ರೂ.ಗೆ ಕೆಲಸ ಮಾಡಿದ್ದ ಉಗ್ರಂ ಮಂಜು; ಬಿಗ್ ಬಾಸ್​ನಿಂದ ದೊಡ್ಡ ಸಂಭಾವನೆ
150 ರೂ.ಗೆ ಕೆಲಸ ಮಾಡಿದ್ದ ಉಗ್ರಂ ಮಂಜು; ಬಿಗ್ ಬಾಸ್​ನಿಂದ ದೊಡ್ಡ ಸಂಭಾವನೆ