ಬರಗಾಲ ಬರಲಿ ಎಂದು ರೈತರಿಗೆ ಆಸೆ; ಸಚಿವ ಶಿವಾನಂದ ಪಾಟೀಲ್ ಹೇಳಿಕೆಗೆ ರೈತ ಮುಖಂಡರ ಆಕ್ರೋಶ

ದೇವರು ಕೊಟ್ಟ ಕೃಷ್ಣ ನದಿ ಪುಕ್ಕಟ್ಟೆ ಎಂದು ಹೇಳುತ್ತೀರಾ, ಮಹಾರಾಷ್ಟ್ರದಿಂದ ನೀರು ಬಿಡುಗಡೆ ಮಾಡಿಸಿಕೊಂಡು ಬರುವ ತಾಕತ್ ನಿಮಗೆ ಇಲ್ಲ. ಇಂತಹ ಉಡಾಫೆ ಹೇಳಿಕೆ ಕೊಟ್ಟರೆ ತಕ್ಕ ಪಾಠ ಕಲಿಸುತ್ತೇವೆ. ನಮ್ಮಿಂದ ನೀವು, ನಿಮ್ಮಿಂದ ನಾವಲ್ಲ ಎಂದು

ಬರಗಾಲ ಬರಲಿ ಎಂದು ರೈತರಿಗೆ ಆಸೆ; ಸಚಿವ ಶಿವಾನಂದ ಪಾಟೀಲ್ ಹೇಳಿಕೆಗೆ ರೈತ ಮುಖಂಡರ ಆಕ್ರೋಶ
ಸಕ್ಕರೆ ಸಚಿವ ಶಿವನಾಂದ್​ ಪಾಟೀಲ್​
Follow us
ಮಹಾಂತೇಶ ಕುರಬೇಟ, ಟಿವಿ9 ಚಿಕ್ಕೋಡಿ
| Updated By: ಕಿರಣ್ ಹನುಮಂತ್​ ಮಾದಾರ್

Updated on: Dec 25, 2023 | 3:42 PM

ಬೆಳಗಾವಿ, ಡಿ.25: ಬರಗಾಲ ಬರಲಿ ಎಂದು ರೈತರಿಗೆ ಆಸೆ ಎಂಬ ಸಕ್ಕರೆ ಸಚಿವ ಶಿವಾನಂದ ಪಾಟೀಲ್(Shivanand Patil) ಹೇಳಿಕೆಗೆ ‘ರೈತ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.  ವಿಡಿಯೋ ಹೇಳಿಕೆ ಬಿಡುಗಡೆ ಮಾಡಿ ರೈತ ಮುಖಂಡ ಮಹಾದೇವ ಮಡಿವಾಳ ಹಾಗೂ ಮಂಜುನಾಥ ಪರಗೌಡ  ಮಾತನಾಡಿ ‘ನೀವು ರೈತನ ಮಕ್ಕಳು ಎಂದು ಚುನಾವಣೆ ಸಂದರ್ಭದಲ್ಲಿ ಹೇಳುತ್ತೀರಿ, ನೀವು ರೈತರ ಮಕ್ಕಳಲ್ಲ, ಬರಗಾಲ ಬರಲಿ ಎಂದು ನಿಮ್ಮ ತಂದೆ ಬಯಸಿದ್ರಾ ಎಂದು ಕೇಳಿಕೊಳ್ಳಿ ಎಂದು ಕಿಡಿಕಾರಿದ್ದಾರೆ.

ಉಡಾಫೆ ಹೇಳಿಕೆ ಕೊಟ್ರೆ ತಕ್ಕ ಪಾಠ ಕಲಿಸುತ್ತೇವೆ ಎಂದ ಮುಖಂಡರು

ದೇವರು ಕೊಟ್ಟ ಕೃಷ್ಣ ನದಿ ಪುಕ್ಕಟ್ಟೆ ಎಂದು ಹೇಳುತ್ತೀರಾ, ಮಹಾರಾಷ್ಟ್ರದಿಂದ ನೀರು ಬಿಡುಗಡೆ ಮಾಡಿಸಿಕೊಂಡು ಬರುವ ತಾಕತ್ ನಿಮಗೆ ಇಲ್ಲ. ಇಂತಹ ಉಡಾಫೆ ಹೇಳಿಕೆ ಕೊಟ್ಟರೆ ತಕ್ಕ ಪಾಠ ಕಲಿಸುತ್ತೇವೆ. ನೀವು ಎಂಎಲ್‌ಎ ಎಲೆಕ್ಷನ್‌ಗೆ ನಿಲ್ಲು ಎಂದು ಯಾರಾದರೂ ಹೇಳ್ತಾರಾ?, ನಮ್ಮಿಂದ ನೀವು, ನಿಮ್ಮಿಂದ ನಾವಲ್ಲ. ಹೇಳಿಕೆ ಹಿಂದೆ ತಗೆದುಕೊಳ್ಳದಿದ್ರೆ ಉಗ್ರ ಹೋರಾಟ ಮಾಡ್ತೀವಿ ಎಂದು ರೈತ ಮುಖಂಡ ಮಹಾದೇವ ಮಡಿವಾಳ ವಾರ್ನ್​ ಕೊಟ್ಟಿದ್ದಾರೆ.

ಇದನ್ನೂ ಓದಿ:ಸಾಲಮನ್ನ ಆಸೆಗೆ ಬರಗಾಲ ಬರಲಿ ಎನ್ನುತ್ತಾರೆ ರೈತರು: ಶಿವಾನಂದ ಪಾಟೀಲ್​ ಹೇಳಿಕೆಗೆ ಬಿಜೆಪಿ ನಾಯಕರ ಆಕ್ರೋಶ

ರಾಜ್ಯದಲ್ಲಿ ಬರ ತಾಂಡವವಾಡಿ ರೈತರ ಸ್ಥಿತಿ ಚಿಂತಾಜನಕ ಆಗಿದೆ. ಸಕ್ಕರೆ ಸಚಿವ ಶಿವಾನಂದ ಪಾಟೀಲ್ ರೈತರನ್ನು ಕಡೆಗಣಿಸುವ ಮಾತು ಆಡಿದ್ದಾರೆ. ಈ ಹಿಂದೆ ರೈತರ ಆತ್ಮಹತ್ಯೆ ಬಗ್ಗೆ ವ್ಯಂಗ್ಯವಾಗಿ ಮಾತನಾಡಿದ್ರು, ಸಚಿವರು ಜನ, ರೈತರ ಪರ ಕೆಲಸ ಮಾಡಬೇಕು. ರೈತರ ಕಷ್ಟ ಆಲಿಸಬೇಕು, ನಿಮಗೆ ನಾವೆಲ್ಲರೂ ಸೇರಿ ದುಡ್ಡು ಕೊಡ್ತೀವಿ ಆತ್ಮಹತ್ಯೆ ಮಾಡಿಕೊಳ್ಳುತ್ತೀರಾ ಎಂದು ಪ್ರಶ್ನಿಸಿದ್ದು, ಸ್ವಲ್ಪ ಆದರೂ ನಾಚಿಕೆ ಎನ್ನುವುದು ಇರಬೇಕು ನಿಮಗೆ ಎಂದು ರೈತ ಮುಖಂಡ ಮಂಜುನಾಥ ಪರಗೌಡ ಕಿಡಿಕಾರಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ