ಬೆಳಗಾವಿ: ಆಹಾರ ಇಲಾಖೆ ಸಚಿವ ಉಮೇಶ್ ಕತ್ತಿ(61) ಹೃದಯಾಘಾತದಿಂದ ಬೆಂಗಳೂರಿನ ಎಂ.ಎಸ್.ರಾಮಯ್ಯ ಆಸ್ಪತ್ರೆಯಲ್ಲಿ(MS Ramaiah Hospital) ಕೊನೆಯುಸಿರೆಳೆದಿದ್ದಾರೆ. ಇಂದು ಉಮೇಶ್ ಕತ್ತಿ ಅವರ ಸ್ವಗ್ರಾಮವಾದ ಜಿಲ್ಲೆಯ ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿ ಹೊರವಲಯದಲ್ಲಿರುವ ವಿಶ್ವರಾಜ್ ಸಕ್ಕರೆ ಕಾರ್ಖಾನೆಯಲ್ಲಿ ಅಂತಿಮ ದರ್ಶನಕ್ಕೆ ಸಕಲ ಸಿದ್ಧತೆ ಮಾಡಿದ್ದು, ಮಧ್ಯಾಹ್ನ 3.30ರವರೆಗೂ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಬೆಳಗ್ಗೆ 8.10 ಗಂಟೆಗೆ ವಿಶೇಷ ವಿಮಾನದಲ್ಲಿ ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಪಾರ್ಥಿವ ಶರೀರ ಆಗಮಿಸಲಿದ್ದು, ಅಲ್ಲಿಂದ ನೇರವಾಗಿ ಬೆಲ್ಲದ ಬಾಗೇವಾಡಿಯಲ್ಲಿರುವ ಕತ್ತಿ ಒಡೆತನದ ಸಕ್ಕರೆ ಕಾರ್ಖಾನೆಗೆ ಮೃತದೇಹ ಶಿಪ್ಟ್ ಮಾಡಲಾಗುತ್ತದೆ. ಅಲ್ಲಿಂದ ಬೆಲ್ಲದ ಬಾಗೇವಾಡಿಯ ಸ್ವಂತ ನಿವಾಸಕ್ಕೆ ಪಾರ್ಥಿವ ಶರೀರ ಸ್ಥಳಾಂತರವಾಗಲಿದ್ದು, ಮನೆಯ ಆವರಣದಲ್ಲಿ ಕುಟುಂಬಸ್ಥರು ಪೂಜೆ ಪುರಸ್ಕಾರ ನೆರವೇರಿಸಲಿದ್ದಾರೆ. ಸಂಜೆ ಐದು ಗಂಟೆಗೆ ಉಮೇಶ್ ಕತ್ತಿ ಅವರ ಜಮೀನಿನಲ್ಲೇ ಅಂತ್ಯಸಂಸ್ಕಾರ ಮಾಡಲು ಕುಟುಂಬಸ್ಥರು ನಿರ್ಧರಿಸಿದ್ದಾರೆ.
ನಿಧನಕ್ಕೂ ಮುನ್ನ ವಾಕ್ಕಿಂಗ್:
ಸಚಿವ ಉಮೇಶ್ ಕತ್ತಿ ನಿಧನಕ್ಕೂ ಮುನ್ನ ನಿನ್ನೆ ಬೆಳಗ್ಗೆ ಡಾಲರ್ಸ್ ಕಾಲೋನಿ ನಿವಾಸದ ಬಳಿ ಎರಡು ರೌಂಡ್ ವಾಕ್ ಮಾಡಿದ್ದರು. ಗಂಗಾಧರ್, ಪ್ರಸಾದ್ ಎಂಬ ಇಬ್ಬರು ಸ್ನೇಹಿತರ ಜೊತೆ ವಾಕಿಂಗ್ ಮಾಡಿದ ಉಮೇಶ್ ಕತ್ತಿ, ಬಳಿಕ ಆಯಾಸಗೊಂಡಿದ್ದಾರೆ. ಬೆಂಗಳೂರಿನಲ್ಲಿ ಇದ್ದಾಗ ಪ್ರತಿ ದಿನ ವಾಕಿಂಗ್ ಮಾಡುತ್ತಿದ್ದರು. ಇನ್ನೂ ಸಿಎಂ ಬಸವರಾಜ ಬೊಮ್ಮಾಯಿ ಬೆಳಗಾವಿಗೆ ತೆರಳಿ ಉಮೇಶ್ ಕತ್ತಿ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲಿದ್ದು, ಬೆಳಗ್ಗೆ 10.30ಕ್ಕೆ ಬೆಳಗಾವಿಗೆ ತೆರಳಲಿದ್ದಾರೆ.
ಇದನ್ನೂ ಓದಿ: ಸಚಿವ ಉಮೇಶ್ ಕತ್ತಿ ವಿಧಿವಶ: ಬುಧವಾರ ಬೆಳಗಾವಿಯ ಶಾಲಾ ಕಾಲೇಜು, ಸರ್ಕಾರಿ ಕಚೇರಿಗಳಿಗೆ ರಜೆ
ಆಹಾರ ಮತ್ತು ನಾಗರೀಕ ಸರಬರಾಜು ಖಾತೆ ಸಚಿವರಾದ ಶ್ರೀ ಉಮೇಶ್ ಕತ್ತಿ ಅವರ ನಿಧನದಿಂದ ನನಗೆ ತೀವ್ರ ಆಘಾತವಾಗಿದೆ.
ಜನತಾ ಪರಿವಾರದ ಹಿರಿಯರಾಗಿದ್ದ ಶ್ರೀ ಕತ್ತಿ ಅವರು ಸ್ನೇಹಜೀವಿ ಆಗಿದ್ದರಲ್ಲದೆ, ತಮ್ಮ ನೇರ ನಡೆ ನುಡಿಯಿಂದ ನಮ್ಮೆಲ್ಲರ ಪ್ರೀತಿ ಗೌರವಕ್ಕೆ ಪಾತ್ರರಾಗಿದ್ದರು.1/2 pic.twitter.com/xXsq7gu43x
— H D Kumaraswamy (@hd_kumaraswamy) September 7, 2022
ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸಂತಾಪ:
ಉಮೇಶ್ ಕತ್ತಿ ಅವರ ನಿಧನದಿಂದ ತೀವ್ರ ಆಘಾತವಾಗಿದೆ. ಜನತಾ ಪರಿವಾರದ ಹಿರಿಯರಾಗಿದ್ದ ಕತ್ತಿ ಸ್ನೇಹಜೀವಿ ಆಗಿದ್ರು. ಅಲ್ಲದೇ ನೇರ ನುಡಿಯಿಂದ ಎಲ್ಲರ ಗೌರವಕ್ಕೆ ಪಾತ್ರರಾಗಿದ್ರು. ಉಮೇಶ್ ಕತ್ತಿ ಅವರ ಆತ್ಮಕ್ಕೆ ದೇವರು ಶಾಂತಿ ನೀಡಲಿ. ಕುಟುಂಬಸ್ಥರಿಗೆ ದುಃಖ ಭರಿಸುವ ಶಕ್ತಿ ದೇವರು ಕರುಣಿಸಲಿ ಎಂದು ಉಮೇಶ್ ಕತ್ತಿ ನಿಧನಕ್ಕೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.