ಬೆಂಗಳೂರಿನಲ್ಲಿ ಶಿವಾಜಿ ಪುತ್ಥಳಿಗೆ ಕಪ್ಪು ಮಸಿ: ಬೆಳಗಾವಿಯಲ್ಲಿ ಪುಂಡರ ಅಟ್ಟಹಾಸ, ತಪ್ಪಿತಸ್ಥರನ್ನು ಯಾವುದೇ ಕಾರಣಕ್ಕೆ ನಮ್ಮ ಸರ್ಕಾರ ಬಿಡಲ್ಲ- ಗೃಹ ಸಚಿವ ಜ್ಞಾನೇಂದ್ರ

| Updated By: ಸಾಧು ಶ್ರೀನಾಥ್​

Updated on: Dec 18, 2021 | 10:36 AM

ಬೆಳಗಾವಿ ನಗರದ ಅನಗೋಳದ ಕನಕದಾಸ ಕಾಲೋನಿಯಲ್ಲಿ ಕಿಡಿಗೇಡಿಗಳು ಸಂಗೊಳ್ಳಿ ರಾಯಣ್ಣ ಪುತ್ಥಳಿ ಬೀಳಿಸಿರುವ ಘಟನೆ ನಡೆದಿದೆ‌. ಮಧ್ಯರಾತ್ರಿ ದುಷ್ಕರ್ಮಿಗಳು ಆಗಮಿಸಿ ಪುತ್ಥಳಿ ಬೀಳಿಸಿ ದುಷ್ಕೃತ್ಯ ಮೆರೆದಿದ್ದಾರೆ. ಸಂಗೊಳ್ಳಿ ರಾಯಣ್ಣ ಪುತ್ಥಳಿ ಹಾನಿಗೊಳಿಸಿ ಖಡ್ಗ, ಗುರಾಣಿ ಬೇರೆ ಬೇರೆ ಕಡೆ ಇಟ್ಟು ವಿಕೃತಿ ಮೆರೆದಿದ್ದಾರೆ. ಸ್ಥಳಕ್ಕೆ ಟೀಳಕವಾಡಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಬೆಂಗಳೂರಿನಲ್ಲಿ ಶಿವಾಜಿ ಪುತ್ಥಳಿಗೆ ಕಪ್ಪು ಮಸಿ: ಬೆಳಗಾವಿಯಲ್ಲಿ ಪುಂಡರ ಅಟ್ಟಹಾಸ, ತಪ್ಪಿತಸ್ಥರನ್ನು ಯಾವುದೇ ಕಾರಣಕ್ಕೆ ನಮ್ಮ ಸರ್ಕಾರ ಬಿಡಲ್ಲ- ಗೃಹ ಸಚಿವ ಜ್ಞಾನೇಂದ್ರ
ಬೆಳಗಾವಿಯಲ್ಲಿ ಪುಂಡರ ಅಟ್ಟಹಾಸ
Follow us on

ಬೆಳಗಾವಿ: ಬೆಳಗಾವಿಯಲ್ಲಿ ಇಡೀ ಸರ್ಕಾರವೇ ಬೀಡು ಬಿಟ್ಟಿದ್ದು ಒಂದು ಕಡೆಯಾದ್ರೇ ಇದೇ ಸಂದರ್ಭದಲ್ಲಿ ಎಂಇಎಸ್ ಪುಂಡರು ಮತ್ತೆ ಪುಂಡಾಟ ಮೆರೆದಿದ್ದಾರೆ. ಶಿವಾಜಿ ಪುತ್ಥಳಿಗೆ ಕಪ್ಪು ಮಸಿ ಬಳೆದಿದ್ದನ್ನ ಖಂಡಿಸಿ ರಾತ್ರೋ ರಾತ್ರಿ ಬೀದಿಗಿಳಿದ ಎಂಇಎಸ್ ಪುಂಡರು ಕಲ್ಲು ತೂರಾಟ ಮಾಡಿ, ಬೆಂಕಿ ಹಚ್ಚಲು ಕೂಡ ಯತ್ನಿಸಿದ್ದಾರೆ. ಬೆಂಗಳೂರಿನಲ್ಲಿ ಶಿವಾಜಿ ಪುತ್ಥಳಿಗೆ ಕಪ್ಪುಮಸಿ ಸುರಿದ ಪ್ರಕರಣದ ಹಿನ್ನೆಲೆ ಘಟನೆ ಖಂಡಿಸಿ ಹಿಂದೂಪರ ಸಂಘಟನೆಗಳಿಂದ ಪ್ರತಿಭಟನೆ ನಡೆದಿದೆ. ಬೆಳಗಾವಿಯ ಸಂಭಾಜಿ ವೃತ್ತದಲ್ಲಿ ಪುಂಡರು ಅಟ್ಟಹಾಸ ಮೆರೆದಿದ್ದು ಮನೆಗಳ ಮುಂದೆ ನಿಲ್ಲಿಸಿದ್ದ ಕಾರುಗಳ ಮೇಲೆ ಕಲ್ಲುತೂರಾಟ ಮಾಡಿದ್ದಾರೆ. ಅಧಿವೇಶನದ ಡ್ಯೂಟಿಗೆ ಬಂದಿದ್ದ ವಾಹನಗಳ ಮೇಲೂ ಕಲ್ಲೆಸೆತ ಮಾಡಲಾಗಿದೆ. ಲಾಡ್ಜ್ ಬಳಿ ನಿಲ್ಲಿಸಿದ್ದ 6 ಸರ್ಕಾರಿ ಕಾರುಗಳ ಮೇಲೆ ಉದ್ದೇಶಪೂರ್ವಕವಾಗಿ ಕಲ್ಲುತೂರಿ ಪುಂಡರು ಅಟ್ಟಹಾಸ ತೋರಿದ್ದಾರೆ. ರಸ್ತೆ ಸೇರಿದಂತೆ ಎಲ್ಲೆಂದರಲ್ಲಿ ಕಿಡಗೇಡಿಗಳು ಬಿಯರ್ ಬಾಟಲ್ ಒಡೆದು ಕಲ್ಲು ತೂರಿದ್ದಾರೆ. ಕಿಡಗೇಡಿಗಳು ಕರ್ನಾಟಕ ಸರ್ಕಾರ ಅಂತಾ ಇರುವ ಬೋರ್ಡ್ ಗಳನ್ನ ಕಿತ್ತು ತೆಗೆದುಕೊಂಡು ಹೋಗಿದ್ದಾರೆ. ಬೆಳಗಾವಿಯಲ್ಲಿ ಇನ್ನೂ ಪುಂಡರ ಅಟ್ಟಹಾಸ ಮುಂದುವರೆದಿದ್ದು ಯುವಕರು ಗಲ್ಲಿ ಗಲ್ಲಿಗಳಲ್ಲಿ ಗುಂಪು ಗುಂಪಾಗಿ ನಿಂತಿರುವ ದೃಶ್ಯ ಕಂಡುಬಂದಿದೆ.

ನಿಷೇಧಾಜ್ಞೆ ಜಾರಿ, ಬೆಳಗಾವಿ ನಗರದ 3 ಠಾಣೆಗಳಲ್ಲಿ ಸ್ವಯಂಪ್ರೇರಿತ ದೂರು ದಾಖಲು
ಬೆಳಗಾವಿಯಲ್ಲಿ ನಿನ್ನೆ ತಡರಾತ್ರಿ ಕಿಡಿಗೇಡಿಗಳ ಅಟ್ಟಹಾಸ ಸಂಬಂಧ ಬೆಳಗಾವಿ ಪೊಲೀಸರಿಂದ ಈವರೆಗೆ 27 ಆರೋಪಿಗಳನ್ನು ಬಂಧಿಸಲಾಗಿದೆ. ಇಂದು ಬೆಳಗ್ಗೆ 8 ಗಂಟೆಯಿಂದ ನಾಳೆ ಬೆಳಗ್ಗೆ 6 ಗಂಟೆ ವರೆಗೂ ನಗರದಲ್ಲಿ 144 ಸೆಕ್ಷನ್ ಜಾರಿ ಮಾಡಿ ನಿಷೇಧಾಜ್ಞೆ ವಿಧಿಸಲಾಗಿದೆ ಎಂದು ಬೆಳಗಾವಿ ನಗರ ಪೊಲೀಸ್ ಆಯುಕ್ತ ಕೆ.ತ್ಯಾಗರಾಜನ್ ತಿಳಿಸಿದ್ದಾರೆ.

ಬೆಳಗಾವಿ ನಗರದಲ್ಲಿ ಎಂಇಎಸ್ ಪುಂಡರ ಅಟ್ಟಹಾಸ ಹಿನ್ನೆಲೆ ನಗರದ ಮೂರು ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ ದೂರು ದಾಖಲು ಮಾಡಿಕೊಳ್ಳಲಾಗಿದೆ. ಬೆಳಗಾವಿಯ ಕ್ಯಾಂಪ್ ಪೊಲೀಸ್ ಠಾಣೆ, ಖಡೇಬಜಾರ್ ಪೊಲೀಸ್ ಠಾಣೆ ಮತ್ತು ಮಾರ್ಕೆಟ್ ಠಾಣೆಯಲ್ಲಿ ಮೂರು ಪ್ರತ್ಯೇಕ ದೂರುಗಳು ದಾಖಲಾಗಿವೆ. ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದ್ದು, ಕಾನೂನು ಸುವ್ಯವಸ್ಥೆ ಹಾಳು ಮಾಡುವುದು, ಭಾಷಾ ವೈಷಮ್ಯ ಮೂಡಿಸುವುದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದಾರೆ ಎಂದು ನೂರಾರು ಎಂಇಎಸ್ ಪುಂಡರ ವಿರುದ್ಧ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.

MES Protest Turns Violent At Belagavi | 20ಕ್ಕೂ ಹೆಚ್ಚು ವಾಹನಗಳಿಗೆ ಕಲ್ಲು ತೂರಾಟ

ಬೆಳಗಾವಿ ನಗರದ ಅನಗೋಳದ ಕನಕದಾಸ ಕಾಲೋನಿಯಲ್ಲಿ ಕಿಡಿಗೇಡಿಗಳು ಸಂಗೊಳ್ಳಿ ರಾಯಣ್ಣ ಪುತ್ಥಳಿ ಬೀಳಿಸಿರುವ ಘಟನೆ ನಡೆದಿದೆ‌. ಮಧ್ಯರಾತ್ರಿ ದುಷ್ಕರ್ಮಿಗಳು ಆಗಮಿಸಿ ಪುತ್ಥಳಿ ಬೀಳಿಸಿ ದುಷ್ಕೃತ್ಯ ಮೆರೆದಿದ್ದಾರೆ. ಸಂಗೊಳ್ಳಿ ರಾಯಣ್ಣ ಪುತ್ಥಳಿ ಹಾನಿಗೊಳಿಸಿ ಖಡ್ಗ, ಗುರಾಣಿ ಬೇರೆ ಬೇರೆ ಕಡೆ ಇಟ್ಟು ವಿಕೃತಿ ಮೆರೆದಿದ್ದಾರೆ. ಸ್ಥಳಕ್ಕೆ ಟೀಳಕವಾಡಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಇನ್ನು ಗಲಾಟೆಯಲ್ಲಿ ಕರ್ನಾಟಕ ಸರ್ಕಾರದ ವಾಹನಗಳನ್ನೇ ಟಾರ್ಗೆಟ್ ಮಾಡಿ ಕಲ್ಲು ತೂರಾಟ ನಡೆದಿದ್ದು ಪುಂಡರ ಉದ್ದೇಶ ಸ್ಪಷ್ಟವಾಗಿ ಗೊತ್ತಾಗುತ್ತೆ. ಮೂರು ಕಾಲೋನಿಯಲ್ಲಿ 20ಕ್ಕೂ ಅಧಿಕ ಕಾರುಗಳ ಗ್ಲಾಸು ಪುಡಿ ಪುಡಿಯಾಗಿದ್ದು ಘಟನೆಯಿಂದ ಜನ ಕಂಗಾಲಾಗಿದ್ದಾರೆ. ಮಲಗಿದವರು ಹೊರ ಬಂದು ನೋಡುವಷ್ಟರಲ್ಲಿ ಕಾರಿನ ಚಿತ್ರಣವೇ ಬದಲಾಗಿದ್ದನ್ನ ಕಂಡು ಆಕ್ರೋಶ ಹೊರ ಹಾಕುತ್ತಿದ್ದಾರೆ‌.

ಪೊಲೀಸರು ತೆಗೆದುಕೊಳ್ಳುವ ಕ್ರಮಗಳನ್ನು ಕಾದು ನೋಡಿ: ಎಚ್ಚರಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರ
ಬೆಳಗಾವಿಯ ಪುಂಡರ ಗಲಾಟೆ ಬಗ್ಗೆ ನನ್ನ ಗಮನಕ್ಕೆ ಬಂದಿದೆ. ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಟಿವಿ9 ಗೆ ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. ತಪ್ಪಿತಸ್ಥರನ್ನು ಯಾವುದೇ ಕಾರಣಕ್ಕೆ ನಮ್ಮ ಸರ್ಕಾರ ಬಿಡಲ್ಲ. ಇದು ಬೆರಳೆಣಿಕೆಯಷ್ಟು ಜನರು ಮಾಡುತ್ತಿರುವ ಕೃತ್ಯವಾಗಿದೆ. ಇಂತಹ ಘಟನೆ ಮರುಕಳಿಸದಂತೆ ಕ್ರಮ ತೆಗೆದುಕೊಳ್ಳುತ್ತೇವೆ. ಇಂತಹ ಪುಂಡಾಟಗಳನ್ನು ಹತ್ತಿಕ್ಕುತ್ತೇವೆ. ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಪೊಲೀಸರಿಗೆ ಸೂಚಿಸಿದ್ದೇವೆ. ತಪ್ಪಿತಸ್ಥರಿಗೆ ಈ ಬಾರಿ ಭಯ ಹುಟ್ಟಿಸುತ್ತೇವೆ. ಪೊಲೀಸರು ತೆಗೆದುಕೊಳ್ಳುವ ಕ್ರಮಗಳನ್ನು ಕಾದು ನೋಡಿ ಎಂದು ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಇನ್ನು ಮಹಾರಾಷ್ಟ್ರದ ಕೊಲ್ಲಾಪುರದಲ್ಲಿಯೂ ಶಿವಸೇನೆ ಕಾರ್ಯಕರ್ತರು ಕಿರಿಕ್ ಮಾಡಿದ್ದಾರೆ. ಪುಂಡರು ನಿನ್ನೆ ರಾತ್ರಿ ಕನ್ನಡಿಗರಿಗೆ ಸೇರಿದ ಹೊಟೆಲ್, ಅಂಗಡಿಳನ್ನ ಬಂದ್ ಮಾಡಿಸಿದ್ದಾರೆ. ಒತ್ತಾಯಪೂರ್ವಕವಾಗಿ ಅಂಗಡಿ ಬಂದ್ ಮಾಡಿಸಿ ಇಂದಿನಿಂದ ಅಂಗಡಿಗಳನ್ನ ಓಪನ್ ಮಾಡದಂತೆ ವಾರ್ನಿಂಗ್ ಕೊಟ್ಟಿದ್ದಾರೆ.

ಬೆಳಗಾವಿಯಲ್ಲಿ ತಡರಾತ್ರಿ ಶಿವಸೇನೆ ಮತ್ತು ಎಂಇಎಸ್‌ ಪುಂಡರಿಂದ ಪ್ರತಿಭಟನೆಗಳು ನಡೆಯುತ್ತಿದ್ದು ಪರಿಸ್ಥಿತಿ ಕೈಮೀರುವ ಹಿನ್ನೆಲೆ ಕರ್ನಾಟಕ ಪೊಲೀಸರು ಅಲರ್ಟ್ ಆಗಿದ್ದಾರೆ. ಸ್ಥಳದಲ್ಲಿ 400ಕ್ಕೂ ಹೆಚ್ಚು ಪೊಲೀಸರ ನಿಯೋಜನೆ ಮಾಡಲಾಗಿದೆ. ಪೊಲೀಸರು ಕೂಡಲೇ ಧರಣಿನಿರತರನ್ನು ವಾಪಸ್ ಕಳಿಸಿದ್ದರು. ಆದರೆ ವಾಪಸ್ ಹೋದವರಂತೆ ಹೋಗಿ ಕೆಲವರು ವಾಪಸಾಗಿ ಪುಂಡಾಟ ಮೆರೆದಿದ್ದಾರೆ.

ಬೆಳಗಾವಿಯ ರಾಮಲಿಂಗಖಿಂಡ ಗಲ್ಲಿ ಬಳಿ ಕಲ್ಲು ತೂರಾಟದಲ್ಲಿ 20ಕ್ಕೂ ಹೆಚ್ಚು ಕಾರುಗಳು ಜಖಂಗೊಂಡಿವೆ. 6 ಸರ್ಕಾರಿ ಕಾರುಗಳು ಹಾಗೂ 6 ಪೊಲೀಸ್ ಇಲಾಖೆ ಜೀಪ್ ಗಳು, ಸಿನಿಮಾ ನೋಡಲು ಬಂದಿದ್ದವರ ಎರಡು ಕಾರುಗಳಿಗೆ ಹಾನಿಯಾಗಿವೆ. ಮನೆಗಳ ಮುಂದೆ ನಿಲ್ಲಿಸಿದ್ದ ಕಾರುಗಳ ಮೇಲೂ ಕಲ್ಲು ತೂರಾಟವಾಗಿದೆ. ಪುಂಡರು ಕಲ್ಲು ತುರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಕೈಯಲ್ಲಿ ಕಲ್ಲು ಹಿಡಿದು ಏಕಾಏಕಿ ಲಾಡ್ಜ್ ಬಳಿ ಬಂದ ಎಂಇಎಸ್ ಪುಂಡರು ಗ್ಯಾಂಗ್ ಸೆಕ್ಯೂರಿಟಿ ಗಾರ್ಡ್ ಇದ್ರೂ ಕೇರ್ ಮಾಡದೆ ಕಲ್ಲು ತೂರಿ ಪರಾರಿಯಾಗಿದ್ದಾರೆ. ಹಾನಿಯಾದ ಕಾರುಗಳನ್ನ ಪೊಲೀಸ್​ ಸಿಬ್ಬಂದಿ ಆರ್‌ಟಿಓ ವೃತ್ತದ ಬಳಿ ಪೊಲೀಸ್ ಕ್ವಾಟರ್ಸ್ ಗೆ ತಂದು ನಿಲ್ಲಿಸಿದ್ದಾರೆ.

ಬೆಳಗಾವಿಯಲ್ಲಿ ಪುಂಡರಿಂದ ವಾಹನಗಳ ಮೇಲೆ ದಾಳಿ ವಿಚಾರ, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಟ್ವೀಟ್

ಇದನ್ನೂ ಓದಿ:

ಶಿವಾಜಿ ಪುತ್ಥಳಿಗೆ ಕಪ್ಪು ಮಸಿ ಸುರಿದ ಪ್ರಕರಣ: ಬೆಳಗಾವಿಯಲ್ಲಿ ದಿಢೀರ್ ಪ್ರತಿಭಟನೆ; ಬಿಗುವಿನ ವಾತಾವರಣ ನಿರ್ಮಾಣ

ಮಹಿಳೆಯರ ವಿವಾಹ ವಯೋಮಿತಿ ಹೆಚ್ಚಿಸುವ ಕೇಂದ್ರದ ಕ್ರಮಕ್ಕೆ ಕೇರಳ ಮುಸ್ಲಿಂ ಸಂಘಟನೆಗಳ ವಿರೋಧ

Published On - 8:38 am, Sat, 18 December 21