ಪ್ರವಾದಿ ಮುಹಮ್ಮದ್ ಪೈಗಂಬರ್ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದ ನೂಪುರ್ ಶರ್ಮಾ ಪ್ರತಿಕೃತಿಯನ್ನು ಗಲ್ಲಿಗೆ ಏರಿಸಿದ ಕಿಡಿಗೇಡಿಗಳು

ಬೆಳಗಾವಿಯ ಪೋರ್ಟ್ ರಸ್ತೆಯ ಮಧ್ಯೆ ತಂತಿಯೊಂದಕ್ಕೆ ನೂಪುರ್ ಶರ್ಮಾ ಪ್ರತಿಕೃತಿ ಗಲ್ಲಿಗೇರಿಸಲಾಗಿದೆ. ನಡು ರಸ್ತೆಯಲ್ಲಿ ಪ್ರತಿಕೃತಿ ಗಲ್ಲಿಗೇರಿಸಿದ್ದಕ್ಕೆ ಜನರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ.

ಪ್ರವಾದಿ ಮುಹಮ್ಮದ್ ಪೈಗಂಬರ್ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದ ನೂಪುರ್ ಶರ್ಮಾ ಪ್ರತಿಕೃತಿಯನ್ನು ಗಲ್ಲಿಗೆ ಏರಿಸಿದ ಕಿಡಿಗೇಡಿಗಳು
ನೂಪುರ್ ಶರ್ಮಾ ಪ್ರತಿಕೃತಿಯನ್ನು ಗಲ್ಲಿಗೆ ಏರಿಸಿದ ಕಿಡಿಗೇಡಿಗಳು
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Jun 10, 2022 | 3:41 PM

ಬೆಳಗಾವಿ: ಪ್ರವಾದಿ ಮುಹಮ್ಮದ್ ಪೈಗಂಬರ್ ಕುರಿತು ವಿವಾದಾತ್ಮಕ ಹೇಳಿಕೆ ವಿಚಾರಕ್ಕೆ ಸಂಬಂಧಿಸಿ ಹೇಳಿಕೆ ನೀಡಿದ್ದ ಬಿಜೆಪಿ ಮಾಜಿ ನಾಯಕಿ ನೂಪುರ್ ಶರ್ಮಾ ಪ್ರತಿಕೃತಿಯನ್ನು ಗಲ್ಲಿಗೆ ಏರಿಸಿ ಕಿಡಿಗೇಡಿಗಳು ಆಕ್ರೋಶ ಹೊರ ಹಾಕಿದ್ದಾರೆ. ಬೆಳಗಾವಿಯ ಪೋರ್ಟ್ ರಸ್ತೆಯ ಮಧ್ಯೆ ತಂತಿಯೊಂದಕ್ಕೆ ಪ್ರತಿಕೃತಿ ಗಲ್ಲಿಗೇರಿಸಲಾಗಿದೆ. ನಡು ರಸ್ತೆಯಲ್ಲಿ ಪ್ರತಿಕೃತಿ ಗಲ್ಲಿಗೇರಿಸಿದ್ದಕ್ಕೆ ಜನರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಪಿಂಪಲ್ ಕಟ್ಟಾ ಮಸೀದಿ ಮುಂಭಾಗದಲ್ಲೇ ಮಧ್ಯರಾತ್ರಿ ಕಿಡಗೇಡಿಗಳು ಕೃತ್ಯ ಮೆರೆದಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪ್ರತಿಕೃತಿ ತೆರವುಗೊಳಿಸಿದ್ದಾರೆ. ಪ್ರತಿಕೃತಿ ಮಧ್ಯರಸ್ತೆ ಜೋತುಬಿಟ್ಟಿದ್ದಕ್ಕೆ ಹಿಂದೂಪರ ಕಾರ್ಯಕರ್ತರು ಆಕ್ರೋಶ‌ ಹೊರ ಹಾಕಿದ್ದಾರೆ.

ಪ್ರವಾದಿ ಮೊಹಮದ್ ಪೈಗಂಬರ್‌ ಅವರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಜೆಪಿಯ ಮಾಜಿ ವಕ್ತಾರೆ ನೂಪುರ್ ಶರ್ಮಾ ವಿರುದ್ಧ ಎಸ್​ಡಿಪಿಐ ಕಾರ್ಯಕರ್ತರು ಧಿಕ್ಕಾರ ಕೂಗಿ ಪ್ರತಿಭಟನೆ ನಡೆಸಿದರು. ನೂಪುರ್ ಶರ್ಮಾರನ್ನು ಶೀಘ್ರ ಬಂಧಿಸಬೇಕು ಎಂದು ಆಗ್ರಹಿಸಿದ ಅವರು, ಶಿಸ್ತುಕ್ರಮ ಜರುಗಿಸುವಂತೆ ಬೆಳಗಾವಿ ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿದರು.

ಪ್ರವಾದಿ ಪೈಗಂಬರ್ ಕುರಿತು ಅವಹೇಳನದ ಹೇಳಿಕೆ ನೀಡಿದ್ದ ಆರೋಪದ ಹಿನ್ನೆಲೆಯಲ್ಲಿ ನೂಪುರ್ ಶರ್ಮಾ ಅವರನ್ನು ಬಿಜೆಪಿಯು ಪಕ್ಷದಿಂದ ಅಮಾನತು ಮಾಡಿತ್ತು. ನೂಪುರ್ ಶರ್ಮಾರ ಪ್ರತಿಕೃತಿಗೆ ನೇಣು ಹಾಕಿದಂತೆ ಇರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಫೋರ್ಟ್ ರಸ್ತೆಯಲ್ಲಿರುವ ಮಸೀದಿಯ ಕೂಗಳತೆ ದೂರದಲ್ಲಿ ತಡರಾತ್ರಿ ಈ ಘಟನೆ ನಡೆದಿದೆ. ಒಂದು ಮಾನವ ಪ್ರತಿಕೃತಿ ತಯಾರಿಸಿರುವ ಕಿಡಿಗೇಡಿಗಳು, ಅದಕ್ಕೆ ಕೇಸರಿ ಸೀರೆ ತೊಡಿಸಿ, ನೂಪುರ್ ಶರ್ಮಾರ ಭಾವಚಿತ್ರವನ್ನು ಮೆತ್ತಿದ್ದಾರೆ. ನಂತರ ರಸ್ತೆಯ ಎರಡು ಬದಿಗಳ ಕಟ್ಟಡಗಳ ಮೇಲೆ ಹಗ್ಗ ಕಟ್ಟಿ, ಮಧ್ಯಕ್ಕೆ ಪ್ರತಿಕೃತಿಯನ್ನು ನೇತು ಬಿಟ್ಟಿದ್ದಾರೆ.

ಘಟನೆ ಹಿನ್ನೆಲೆ ಟಿವಿ ಚರ್ಚೆಯೊಂದರಲ್ಲಿ ನೂಪುರ್ ಶರ್ಮಾ, ಪ್ರವಾದಿ ಬಗ್ಗೆ ಹೇಳಿಕೆ ನೀಡಿದ್ದರು. ಈ ಹೇಳಿಕೆಗೆ ವ್ಯಾಪಕ ಖಂಡನೆ ವ್ಯಕ್ತವಾಗಿತ್ತು. ಮುಸ್ಲಿಂ ರಾಷ್ಟ್ರಗಳಾದ ಇರಾನ್, ಸೌದಿ ಅರೇಬಿಯಾ ಮತ್ತು ಯುಎಇಯಿಂದ ರಾಜತಾಂತ್ರಿಕ ಪ್ರತಿಭಟನೆಯೂ ಎದುರಾಗಿ ನೂಪುರ್ ಶರ್ಮಾ ಅವರನ್ನು ಪಕ್ಷದಿಂದ ಅಮಾನತು ಮಾಡಲಾಗಿದೆ. ಇದೆಲ್ಲ ಆದ ಬಳಿಕ ನೂಪುರ್ ಶರ್ಮಾ ತಮ್ಮ ಹೇಳಿಕೆಯನ್ನು ಹಿಂಪಡೆದು ಕ್ಷಮೆ ಕೇಳಿದ್ದಾರೆ. ಇದನ್ನೂ ಓದಿ: ಸ್ಮೂದಿ ಅಥವಾ ಜ್ಯೂಸ್​ಗಳಲ್ಲಿ ಹಣ್ಣು, ತರಕಾರಿಗಳ ಮಿಶ್ರಣ ಮಾಡಬಹುದೇ?

ನನ್ನ ಮಾತುಗಳು ಯಾವುದೇ ಧರ್ಮದ ಜನರ ಭಾವನೆಗಳಿಗೆ ಧಕ್ಕೆ ತಂದಿದ್ದರೆ, ನಾನು ಆ ಹೇಳಿಕೆಯನ್ನು ವಾಪಸ್ ಪಡೆಯುತ್ತೇನೆ ಎಂದು ಹೇಳಿದ್ದಾರೆ. ನಾನು ಹಲವು ದಿನಗಳಿಂದ ಟಿವಿ ಚರ್ಚೆಯಲ್ಲಿ ಭಾಗವಹಿಸುತ್ತಿದ್ದೇನೆ. ಅಲ್ಲಿ ಪ್ರತಿದಿನ ನನ್ನ ಅಯೋಧ್ಯಾ, ಶಿವನನ್ನು ಅವಮಾನ ಮಾಡಲಾಗುತ್ತಿತ್ತು. ನನ್ನಲ್ಲಿ ಅದು ಶಿವಲಿಂಗ ಅಲ್ಲ ಕಾರಂಜಿ ಎಂದರು. ದಿಲ್ಲಿಯ ಪ್ರತೀ ಫುಟ್ಪಾತ್ ಮೇಲೆ ಹಲವಾರು ಶಿವಲಿಂಗಗಳು ಸಿಗುತ್ತವೆ, ಹೋಗಿ ಅಲ್ಲಿ ಪೂಜೆ ಮಾಡಿ ಎಂದಿದ್ದರು. ನನ್ನ ಮುಂದೆ ಪದೇ ಪದೇ ಈ ರೀತಿ ನಮ್ಮ ಮಹಾದೇವ ಶಿವನ ಅವಮಾನ ಮಾಡಲಾಗುತ್ತಿತ್ತು.ಹೀಗೆ ಹೇಳುವುದನ್ನು ಕೇಳಿ ಸಿಟ್ಟಿನಲ್ಲಿ ಕೆಲವು ಮಾತು ಅಂದುಬಿಟ್ಟೆ. ಒಂದುವೇಳೆ ನನ್ನ ಮಾತುಗಳಿಂದ ಯಾರದ್ದಾದರೂ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಿದ್ದರೆ ನಾನು ಆ ಮಾತನ್ನು ಹಿಂಪಡೆಯುತ್ತೇನೆ. ಯಾರಿಗಾದರೂ ನೋವುಂಟು ಮಾಡಬೇಕು ಎಂಬ ಉದ್ದೇಶ ನನಗಿರಲಿಲ್ಲ ಎಂದು ಹೇಳಿ ಕ್ಷಮೆ ಕೇಳಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 1:19 pm, Fri, 10 June 22

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ