ಎಂಕೆ ಹುಬ್ಬಳ್ಳಿ ಧ್ವಜ ತೆರವು: ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​ ಹಾಕಿದ್ದೇ ಗಲಾಟೆಗೆ ಕಾರಣ ಎಂದ ಬೆಳಗಾವಿ ಎಸ್​ಪಿ

ಕೆರಗೋಡು ಬಳಿಕ ಬೆಳಗಾವಿ ಜಿಲ್ಲೆಯ ಎಂಕೆ ಹುಬ್ಬಳ್ಳಿಯಲ್ಲಿ ಹಾರಿಸಿದ್ದ ಭಗವಾ ಧ್ವಜವನ್ನು ಪೊಲೀಸರು ತೆರವುಗೊಳಿಸಿದ್ದಾರೆ. ಇದರ ವಿರುದ್ಧ ಹಿಂದೂ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿದ್ದು, ಬಿಗಿ ಪೊಲೀಸ್ ಭದ್ರತೆ ನಿಯೋಜಿಸಲಾಗಿದೆ. ತಪ್ಪಿತಸ್ಥರ ವಿರುದ್ಧ ಕ್ರಮ ಆಗಲಿದೆ ಎಂದು ಎಸ್​ಪಿ ಭೀಮಾಶಂಕರ ಗುಳೇದ್ ಹೇಳಿದ್ದಾರೆ. ಸಾರ್ವಜನಿಕ ಸ್ಥಳದಲ್ಲಿ ಈ ಧ್ವಜ ಇರುವುದು‌‌ ಗೊತ್ತಾಗಿರುವ ಹಿನ್ನೆಲೆ ಕ್ರಮ ಕೈಗೊಳ್ಳಲಾಗಿದೆ ಎಂದು ಪಟ್ಟಣ‌ ಪಂಚಾಯಿತಿ ಮುಖ್ಯಾಧಿಕಾರಿ ರವಿ ಬಾಗಲಕೋಟೆ ಹೇಳಿದ್ದಾರೆ.

ಎಂಕೆ ಹುಬ್ಬಳ್ಳಿ ಧ್ವಜ ತೆರವು: ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​ ಹಾಕಿದ್ದೇ ಗಲಾಟೆಗೆ ಕಾರಣ ಎಂದ ಬೆಳಗಾವಿ ಎಸ್​ಪಿ
ಎಂಕೆ ಹುಬ್ಬಳ್ಳಿ ಧ್ವಜ ತೆರವು: ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​ ಹಾಕಿದ್ದೇ ಗಲಾಟೆಗೆ ಕಾರಣ ಎಂದ ಬೆಳಗಾವಿ ಎಸ್​ಪಿ
Follow us
Sahadev Mane
| Updated By: Rakesh Nayak Manchi

Updated on: Feb 04, 2024 | 1:45 PM

ಬೆಳಗಾವಿ, ಫೆ.4: ಸಾರ್ವಜನಿಕ ಸ್ಥಳಗಳಲ್ಲಿ ಧ್ವಜಕ್ಕೆ ಅವಕಾಶ ಇಲ್ಲ ಎಂದು ಬೆಳಗಾವಿ (Belagavi) ಎಸ್​ಪಿ ಭೀಮಾಶಂಕರ ಗುಳೇದ್ ಹೇಳಿದ್ದಾರೆ. ಕಿತ್ತೂರು ತಾಲೂಕಿನ ಎಂ.ಕೆ.ಹುಬ್ಬಳ್ಳಿ ಗ್ರಾಮದಲ್ಲಿ ಹನುಮ ಧ್ವಜ ತೆರವು ವಿವಾದ ಸಂಬಂಧ ಮಾತನಾಡಿದ ಅವರು, ಸರ್ಕಾರ, ಅಧಿಕಾರಿಗಳ ತೀರ್ಮಾನದಂತೆ ನಾವು ನಡೆಯುತ್ತೇವೆ ಎಂದರು.

ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​ ಹಾಕಿದ್ದೇ ಗಲಾಟೆಗೆ ಕಾರಣವಾಗಿರುವ ಹಿನ್ನೆಲೆ ಸಾಮಾಜಿಕ ಜಾಲತಾಣ ಮೇಲೆ ನಿಗಾ ಇಟ್ಟಿದ್ದೇವೆ. ಯಾರೇ ತಪ್ಪು ಮಾಡಿದರೂ ಕಾನೂನು ರೀತಿ ಕ್ರಮ ಕೈಗೊಳ್ಳುತ್ತೇವೆ. ನಮ್ಮ ಗ್ರಾಮದಲ್ಲಿ ಎಲ್ಲರೂ ಒಂದೇ. ಹೊರಗಿನ ಜನರ ಬರೋದು ಬೇಡ ಅಂತಾ ಗ್ರಾಮಸ್ಥರು ಹೇಳಿದ್ದಾಗಿ ತಿಳಿಸಿದರು.

ಗ್ರಾಮಸ್ಥರ ಮಾತಿಗೆ ಬೆಲೆ ಕೊಡುತ್ತೇವೆ. ಧ್ವಜದ ಕಟ್ಟೆ ಸಾರ್ವಜನಿಕ ಸ್ಥಳದಲ್ಲಿ ಇದೆ. ಸಾರ್ವಜನಿಕ ಸ್ಥಳಗಳಲ್ಲಿ ಧ್ವಜಕ್ಕೆ ಅವಕಾಶ ಇಲ್ಲ, ಸುಪ್ರೀಂ ಕೋರ್ಟ್ ಆದೇಶ ಇದೆ. ಅಧಿಕಾರಿಗಳ ತೀರ್ಮಾನ, ಸರ್ಕಾರದ ತಿರ್ಮಾನದಂತೆ ನಾವು ನಡೆಯುತ್ತೆವೆ. ಅನುಮತಿ‌ ಕೇಳಿದ್ದಾರೆ, ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದೇ ಇಷ್ಟೆಲ್ಲ ಸಮಸ್ಯೆಗೆ ಕಾರಣ ಎಂದರು.

ಇದನ್ನೂ ಓದಿ: ಕೆರಗೋಡು ಬಳಿಕ ಬೆಳಗಾವಿಯ ಎಂಕೆ ಹುಬ್ಬಳ್ಳಿಯಲ್ಲಿ ಧ್ವಜ ತೆರವು; ಭಗವಾ ಧ್ವಜ ಹಾರಿಸಲು ಕರೆ

ಜವಾಬ್ದಾರಿ ಇದ್ದವರು ಯುವಕರು ಇದನ್ನ ಸರಿಯಾಗಿ ಮಾಡಿಕೊಂಡರೆ ಏನೂ ಆಗಲ್ಲ. 10 ದಿನದಿಂದ ಇದು ನಡೆಯುತ್ತಿದೆ. ಪೊಲೀಸರು ಇಲ್ಲಿ ಇದ್ದಾರೆ, ಸಾಮಾಜಿಕ ಜಾಲತಾಣದ ನಿಗಾ ಇಟ್ಟಿದ್ದೇವೆ. ದ್ವೇಷಮಯ ಪೊಸ್ಟ್ ಹಾಕಿದ್ದಕ್ಕೆ ನಾವು ಎಚ್ಚರಿಕೆ ಕೊಡಲಾಗಿದೆ, ಅದಕ್ಕೆ ಕ್ರಮ ಆಗಲಿದೆ ಎಂದರು.

ಧ್ವಜ ಹಾರಿಸಲು ಮನವಿ ಮಾಡಿದ್ದ ಗ್ರಾಮಸ್ಥರು

ನಮಗೆ ಧ್ವಜ ಹಾರಿಸಲು ಗ್ರಾಮಸ್ಥರು ಮನವಿ‌ ಮಾಡಿದ್ದರು. ಆದರೆ ಸಾರ್ವಜನಿಕ ಸ್ಥಳದಲ್ಲಿ ಈ ಧ್ವಜ ಇರುವುದು‌‌ ಗೊತ್ತಾಗಿದೆ ಎಂದು ಎಂಕೆ ಹುಬ್ಬಳ್ಳಿ ಪಟ್ಟಣ‌ ಪಂಚಾಯಿತಿ ಮುಖ್ಯಾಧಿಕಾರಿ ರವಿ ಬಾಗಲಕೋಟೆ ಹೇಳಿದ್ದಾರೆ. ಹಿರಿಯ ಅಧಿಕಾರಿಗಳ ಗಮನಕ್ಕೆ ತಂದು ಕ್ರಮ ಕೈಗೊಳ್ಳುತ್ತೇವೆ. ಈ ಹಿಂದೆ ಇಲ್ಲಿ ಧ್ವಜ ಇರುವುದು ನನ್ನ ಗಮನಕ್ಕೆ ಬಂದಿಲ್ಲ. ಕಾನೂನು ರೀತಿ ಮೇಲಧಿಕಾರಿ ಗಮನಕ್ಕೆ ತಂದು ತೀರ್ಮಾನ ಮಾಡಲಾಗುವುದು ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್