ಬೆಳಗಾವಿ: ಖಾನಾಪುರ ಶಾಸಕಿ ಅಂಜಳಿ ನಿಂಬಾಳ್ಕರ್ ದಾಂಡಿಯಾ ಡ್ಯಾನ್ಸ್ ಮಾಡಿದ್ದಾರೆ. ದುರ್ಗಾದೇವಿ ವಿಸರ್ಜನೆ ಮೆರವಣಿಗೆ ವೇಳೆ ಶಾಸಕಿ ಅಂಜಲಿ ನಿಂಬಾಳ್ಕರ್ ಸಖತ್ ಸ್ಟೆಪ್ಸ್ ಹಾಕಿ ಎಂಜಾನ್ ಮಾಡಿದ್ದಾರೆ. ಬೆಳಗಾವಿ ಜಿಲ್ಲೆ ಖಾನಾಪುರ ತಾಲೂಕಿನ ಜಳಗಾ ಗ್ರಾಮದಲ್ಲಿ ದುರ್ಗಾದೇವಿ ವಿಸರ್ಜನೆ ಕಾರ್ಯಕ್ರಮದಲ್ಲಿ ಭರ್ಜರಿ ಸ್ಟೆಪ್ಸ್ ಹಾಕಿದ್ದಾರೆ.
ದಸರಾ ಹಿನ್ನೆಲೆ ಜಳಗಾ ಗ್ರಾಮದಲ್ಲಿ ದುರ್ಗಾದೇವಿ ಮೂರ್ತಿ ಪ್ರತಿಷ್ಠಾಪಿಸಲಾಗಿತ್ತು. ನವರಾತ್ರಿಯ ಕೊನೆಯ ದಿನವಾದ ಇಂದು ದುರ್ಗಾದೇವಿ ವಿಸರ್ಜನೆ ಮೆರವಣಿಗೆ ಕಾರ್ಯಕ್ರಮ ಏರ್ಪಡಿಸಲಾಗಿದ್ದು ಬೆಳಗಾವಿ ಜಿಲ್ಲೆ ಖಾನಾಪುರ ಕಾಂಗ್ರೆಸ್ ಶಾಸಕಿ ಅಂಜಳಿ ನಿಂಬಾಳ್ಕರ್ ಮಹಿಳೆಯರ ಜೊತೆ ದಾಂಡಿಯಾ ಸ್ಟೆಪ್ಸ್ ಹಾಕಿದ್ದಾರೆ.
ಡಾ.ಕೆ.ಸುಧಾಕರ್ ಹೇಳಿಕೆಗೆ ಶಾಸಕಿ ಅಂಜಲಿ ನಿಂಬಾಳ್ಕರ್ ಆಕ್ರೋಶ
ಆಧುನಿಕ ಮಹಿಳೆಯರು ಒಬ್ಬರೇ ಜೀವನ ನಡೆಸಲು ಬಯಸುತ್ತಾರೆ ಎಂಬ ಆರೋಗ್ಯ ಸಚಿವ ಡಾ.ಕೆ.ಸುಧಾಕರ್(Dr. K.Sudhakar) ಹೇಳಿಕೆಗೆ ಶಾಸಕಿ ಅಂಜಲಿ ನಿಂಬಾಳ್ಕರ್(Anjali Nimbalkar) ಆಕ್ರೋಶ ಹೊರ ಹಾಕಿದ್ದಾರೆ.
ಈ ವಿಚಾರದ ಬಗ್ಗೆ ಟ್ವೀಟ್ ಮಾಡಿರುವ ಶಾಸಕಿ ಅಂಜಲಿ ನಿಂಬಾಳ್ಕರ್, ಡಾ.ಸುಧಾಕರ್ಗೆ ಕೌನ್ಸೆಲಿಂಗ್ ಅಗತ್ಯವಿದೆ. ಇಂತಹ ವ್ಯಕ್ತಿಗಳಿಗೆ ವಿಶ್ವ ಮಾನಸಿಕ ಆರೋಗ್ಯ ದಿನದಂದು ಆಪ್ತ ಸಮಾಲೋಚನೆಯ ಅವಶ್ಯಕತೆ ಇದೆ. ಆಧುನಿಕ ಮಹಿಳೆ ತನಗೆ ಇಷ್ಟ ಬಂದಂತೆ ಜೀವಿಸಲಿ. ಇದನ್ನ ಬೇರೆಯವರು ನಿರ್ಧರಿಸೋದಲ್ಲ ಆಕೆಯೇ ನಿರ್ಧರಿಸಬೇಕು. ಮದುವೆಯಾದ ಬಳಿಕ ಏಕಾಂಗಿಯಾಗಿ ಜೀವಿಸುವ ಅವರ ನಾಯಕ ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಏನಾದರೂ ಪ್ರತಿಕ್ರಿಯೆ ಇದೆಯಾ? ಎಂದು ಟ್ವೀಟ್ ಮಾಡುವ ಮೂಲಕ ಶಾಸಕಿ ಅಂಜಲಿ ನಿಂಬಾಳ್ಕರ್ ಪ್ರಶ್ನೆ ಮಾಡಿದ್ದಾರೆ. ಇಷ್ಟೇ ಅಲ್ಲದೆ ಸಾಮಾಜಿಕ ಜಾಲತಾಣಗಳಲ್ಲಿಯೂ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.
ಇದನ್ನೂ ಓದಿ: ಅನ್ಯಕೋಮಿನ ಯುವತಿ ಪ್ರೀತಿಸಿದ್ದಕ್ಕೆ ಯುವಕನ ಕೊಲೆ ಪ್ರಕರಣ; ಆರೋಪಿಗಳ ಬಂಧನಕ್ಕೆ ಶಾಸಕಿ ಅಂಜಲಿ ನಿಂಬಾಳ್ಕರ್ ಒತ್ತಾಯ