AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನ್ಯಕೋಮಿನ ಯುವತಿ ಪ್ರೀತಿಸಿದ್ದಕ್ಕೆ ಯುವಕನ ಕೊಲೆ ಪ್ರಕರಣ; ಆರೋಪಿಗಳ ಬಂಧನಕ್ಕೆ ಶಾಸಕಿ ಅಂಜಲಿ ನಿಂಬಾಳ್ಕರ್ ಒತ್ತಾಯ

ಖಾನಾಪುರ ಕಾಂಗ್ರೆಸ್ ಶಾಸಕಿ ಅಂಜಲಿ ನಿಂಬಾಳ್ಕರ್, ಅರ್ಬಾಜ್ ಮುಲ್ಲಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಖಂಡನೆ ವ್ಯಕ್ತಪಡಿಸಿದ್ದು, ಈ ವಿಚಾರವಾಗಿ ಸೂಕ್ತ ತನಿಖೆ ನಡೆಸಬೇಕು. ಶೀಘ್ರವೇ ನಿಷ್ಪಕ್ಷಪಾತ ತನಿಖೆ ನಡೆಸಿ ನ್ಯಾಯ ದೊರಕಿಸಿಕೊಡಲು ಆಗ್ರಹಿಸಿದ್ದಾರೆ.

ಅನ್ಯಕೋಮಿನ ಯುವತಿ ಪ್ರೀತಿಸಿದ್ದಕ್ಕೆ ಯುವಕನ ಕೊಲೆ ಪ್ರಕರಣ; ಆರೋಪಿಗಳ ಬಂಧನಕ್ಕೆ ಶಾಸಕಿ ಅಂಜಲಿ ನಿಂಬಾಳ್ಕರ್ ಒತ್ತಾಯ
ಅರ್ಬಾಜ್ ಮುಲ್ಲಾ
TV9 Web
| Updated By: preethi shettigar|

Updated on:Oct 04, 2021 | 8:38 AM

Share

ಬೆಳಗಾವಿ: ಅನ್ಯಕೋಮಿನ ಯುವತಿ ಪ್ರೀತಿಸಿದ್ದಕ್ಕೆ ಯುವಕನ ಕೊಲೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಜಸ್ಟೀಸ್ ಫಾರ್ ಅರ್ಬಾಜ್ ಅಭಿಯಾನ ಶುರುವಾಗಿದೆ. ಬೆಳಗಾವಿ ಜಿಲ್ಲೆ ಖಾನಾಪುರದಲ್ಲಿ ಅರ್ಬಾಜ್ ಮುಲ್ಲಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯದಲ್ಲಿ ಆಕ್ರೋಶ ವ್ಯಕ್ತವಾಗಿದೆ. ಸದ್ಯ  ಈ ವಿಚಾರವಾಗಿ ಖಾನಾಪುರ ಕಾಂಗ್ರೆಸ್ ಶಾಸಕಿ ಅಂಜಲಿ ನಿಂಬಾಳ್ಕರ್ ಟ್ವೀಟ್ ಮಾಡಿದ್ದು, ಆರೋಪಿಗಳ ಬಂಧನಕ್ಕೆ ಒತ್ತಾಯಿಸಿದ್ದಾರೆ.

ಖಾನಾಪುರ ಕಾಂಗ್ರೆಸ್ ಶಾಸಕಿ ಅಂಜಲಿ ನಿಂಬಾಳ್ಕರ್, ಅರ್ಬಾಜ್ ಮುಲ್ಲಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಖಂಡನೆ ವ್ಯಕ್ತಪಡಿಸಿದ್ದು, ಈ ವಿಚಾರವಾಗಿ ಸೂಕ್ತ ತನಿಖೆ ನಡೆಸಬೇಕು. ಶೀಘ್ರವೇ ನಿಷ್ಪಕ್ಷಪಾತ ತನಿಖೆ ನಡೆಸಿ ನ್ಯಾಯ ದೊರಕಿಸಿಕೊಡಲು ಆಗ್ರಹಿಸಿದ್ದಾರೆ. ತಮ್ಮ ಈ ಟ್ವೀಟ್​ನಲ್ಲಿ ಮುಖ್ಯಮಮತ್ರಿ ಬಸವರಾಜ ಬೊಮ್ಮಾಯಿ, ಗೃಹ ಸಚಿವ ಆರಗ ಜ್ಞಾನೇಂದ್ರ, ಡಿಜಿಪಿ ಖಾತೆಯನ್ನು ಟ್ಯಾಗ್ ಮಾಡಿದ್ದಾರೆ.

ಖಾನಾಪುರ ತಹಶಿಲ್ದಾರ್ ಕಚೇರಿ ಎದುರು ವಿವಿಧ ಸಂಘಟನೆಗಳ ಧರಣಿ ಅನ್ಯಕೋಮಿನ ಯುವತಿ ಪ್ರೀತಿಸಿದ್ದಕ್ಕೆ ಯುವಕನ ಕೊಲೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು (ಅಕ್ಟೋಬರ್ 4) ಬೆಳಗಾವಿ ಜಿಲ್ಲೆ ಖಾನಾಪುರ ಪಟ್ಟಣದಲ್ಲಿ ಪ್ರತಿಭಟನೆಗೆ ನಿರ್ಧಾರಿಸಲಾಗಿದೆ. ಅರ್ಬಾಜ್ ಮುಲ್ಲಾ ಕೊಲೆ ನಡೆದು ಐದು ದಿನಗಳಾದರೂ ಆರೋಪಿಗಳನ್ನು ಬಂಧಿಸದ ಹಿನ್ನೆಲೆಯಲ್ಲಿ ಇಂದು ಖಾನಾಪುರ ತಹಶಿಲ್ದಾರ್ ಕಚೇರಿ ಎದುರು ವಿವಿಧ ಸಂಘಟನೆಗಳು ಧರಣಿ ನಡೆಸುತ್ತಿವೆ.

ಸೆಪ್ಟೆಂಬರ್ 28ರಂದು ಅರ್ಬಾಜ್ ಮುಲ್ಲಾ ಮೃತದೇಹ ಪತ್ತೆಯಾಗಿತ್ತು. ಖಾನಾಪುರ ಹೊರವಲಯದಲ್ಲಿ ರೇಲ್ವೆ ಹಳಿ ಮೇಲೆ ಮೃತದೇಹ ಪತ್ತೆಯಾಗಿತ್ತು. ಎರಡು ವರ್ಷಗಳಿಂದ ಅನ್ಯಕೋಮಿನ ಯುವತಿ ಪ್ರೀತಿಸುತ್ತಿದ್ದ ಅರ್ಬಾಜ್ ಅನ್ನು ಪ್ರೀತಿ ಕಾರಣಕ್ಕೆ ಕೊಲೆ ಮಾಡಲಾಗಿದೆ ಎಂಬ ಆರೋಪಗಳಿವೆ. ಹೀಗಾಗಿ ಬೆಳಗಾವಿ ರೇಲ್ವೆ ಪೊಲೀಸ್ ಠಾಣೆಗೆ ಅರ್ಬಾಜ್ ತಾಯಿ ನಜೀಮಾ ದೂರು ನೀಡಿದ್ದಾರೆ. ಅರ್ಬಾಜ್ ತಾಯಿ ದೂರಿನ ಮೇರೆಗೆ ಯುವತಿಯ ತಂದೆ ಸೇರಿ ಮೂವರ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ಇದನ್ನೂ ಓದಿ: ಅನ್ಯಕೋಮಿನ ಯುವತಿ ಪ್ರೀತಿಸಿದ್ದಕ್ಕೆ ಬೆಳಗಾವಿಯಲ್ಲಿ ಬಿತ್ತಾ ಹೆಣ? ಮುಂದುವರಿದ ತನಿಖೆ

ರಾಯಚೂರಿನಲ್ಲಿ ಒಂದೇ ಕುಟುಂಬದ ಮೂವರ ಕೊಲೆ! ಅಳಿಯನೇ ಹತ್ಯೆ ಮಾಡಿರುವ ಶಂಕೆ

Published On - 8:28 am, Mon, 4 October 21