ಸಚಿವ ಸ್ಥಾನ ಕೈತಪ್ಪಿದ ಬೆನ್ನಲ್ಲೇ ಲಕ್ಷ್ಮಣ ಸವದಿ ಮೊದಲ ಪ್ರತಿಕ್ರಿಯೆಯಲ್ಲಿ ಹೇಳಿದ್ದಿಷ್ಟು

ಸಿಎಂ ಸಿದ್ದರಾಮಯ್ಯ ಸಂಪುಟದಲ್ಲಿ ಸ್ಥಾನ ಪಡೆಯವ ಸಂಭಾವ್ಯ ಪಟ್ಟಿಯಲ್ಲಿ ಅಥಣಿ ಸಾಹುಕಾರ ಲಕ್ಷ್ಮಣ ಸವದಿ ಅವರ ಹೆಸರು ಪ್ರಬಲವಾಗಿ ಕೇಳಿಬಂದಿತ್ತು. ಆದರೆ ಇದು ಹುಸಿಯಾಗಿದೆ. ಸಚಿವ ಸ್ಥಾನ ಕೈತಪ್ಪಿದ ಬಳಿಕ ಮೊದಲ ಬಾರಿಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.

ಸಚಿವ ಸ್ಥಾನ ಕೈತಪ್ಪಿದ ಬೆನ್ನಲ್ಲೇ ಲಕ್ಷ್ಮಣ ಸವದಿ ಮೊದಲ ಪ್ರತಿಕ್ರಿಯೆಯಲ್ಲಿ ಹೇಳಿದ್ದಿಷ್ಟು
ಶಾಸಕ ಲಕ್ಷ್ಮಣ ಸವದಿ
Follow us
ವಿವೇಕ ಬಿರಾದಾರ
| Updated By: ರಮೇಶ್ ಬಿ. ಜವಳಗೇರಾ

Updated on:May 29, 2023 | 12:55 PM

ಬೆಂಗಳೂರು: ಅಥಣಿ​ (Athani) ಶಾಸಕ ಲಕ್ಷ್ಮಣ ಸವದಿಗೆ (Laxman Savadi) ಸಚಿವ ಸ್ಥಾನ ಕೈತಪ್ಪಿದ ವಿಚಾರವಾಗಿ ಬಿಜೆಪಿ ನಾಯಕರ ಟೀಕೆಗೆ ಲಕ್ಷ್ಮಣ ಸವದಿ ಅವರು ತಿರುಗೇಟು ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯ (Siddaramaiah) ಸಂಪುಟದಲ್ಲಿ ಸ್ಥಾನ ಪಡೆಯವ ಸಂಭಾವ್ಯ ಪಟ್ಟಿಯಲ್ಲಿ ಅಥಣಿ ಸಾಹುಕಾರ ಲಕ್ಷ್ಮಣ ಸವದಿ ಅವರ ಹೆಸರು ಪ್ರಬಲವಾಗಿ ಕೇಳಿಬಂದಿತ್ತು. ಆದರೆ ಇದು ಹುಸಿಯಾಗಿದೆ. ಸಚಿವ ಸ್ಥಾನ ಕೈತಪ್ಪಿದ ಬಳಿಕ ಮೊದಲ ಬಾರಿಗೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ರಾಜಕಾರಣದಲ್ಲಿ ಮನುಷ್ಯನಿಗೆ ದೂರದೃಷ್ಟಿ, ತಾಳ್ಮೆ ಬಹಳ ಮುಖ್ಯ. ನನಗೆ ನಿರಾಸೆಯಾಗಿಲ್ಲ, ಒಳ್ಳೆಯ ದಿನಗಳು ಬರುತ್ತವೆ ಎಂದಿದ್ದಾರೆ.

ಅಥಣಿ ಪಟ್ಟಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ನಿರೀಕ್ಷೆಗಳು ಯಾರಿಗೆ ಇರಲ್ಲ ಹೇಳಿ, ಎಲ್ಲರಿಗೂ ನಿರೀಕ್ಷೆಗಳಿರುತ್ತೆ. ರಾಜಕಾರಣದಲ್ಲಿ ಯಾರೂ ಸನ್ಯಾಸಿಗಳಲ್ಲ. ಎಲ್ಲರೂ ಸಚಿವರಾಗಬೇಕು, ನಂತರ ಡಿಸಿಎಂ ಆಗಬೇಕು, ತದನಂತರ ಸಿಎಂ ಆಗಬೇಕೆಂದು ಎಲ್ಲರೂ ನಿರೀಕ್ಷೆ ಇಟ್ಟುಕೊಂಡಿರುತ್ತಾರೆ. ಆಸೆಗಳಿಗೆ ಕೊನೆ ಇರುವುದಿಲ್ಲ, ಅದು ಮನುಷ್ಯನ ಸಹಜ ಗುಣ ಎಂದರು.

ಇದನ್ನೂ ಓದಿ: ಖಾತೆ ಹಂಚಿಕೆ ಬೆನ್ನಲ್ಲೇ ಮುನಿಸಿಕೊಂಡಿದ್ದ ನೂತನ ಸಚಿವ ರಾಮಲಿಂಗಾರೆಡ್ಡಿ ಮೊದಲ ಪ್ರತಿಕ್ರಿಯೆ

ಇನ್ನು ಎರಡುವರೆ ವರ್ಷ ಮಾತ್ರ ಸಿಎಂ ಆಗಿ ಸಿದ್ದರಾಮಯ್ಯ ಇರುತ್ತಾರೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು ಅದನ್ನ ಸಿದ್ದರಾಮಯ್ಯ ಅವರನ್ನೇ ಕೇಳಬೇಕು ಹೈಕಮಾಂಡ್​ದಲ್ಲಿ ಯಾವ ರೀತಿ ಚರ್ಚೆ ಆಗಿದೆ ಗೊತ್ತಿಲ್ಲ. ಅವು ನಾಲ್ಕು ಗೋಡೆಗಳ ಮಧ್ಯೆ ನಡೆದಿರುವಂತದ್ದು. ಸಿದ್ದರಾಮಯ್ಯ ಮತ್ತು ಪಕ್ಷದ ವರಿಷ್ಠರ ನಡುವೆ ನಡೆದ ಚರ್ಚೆಯನ್ನು ಬಹಿರಂಗ ಪಡಿಸಿಲ್ಲ. ಹೊರಗಡೆ ಕೇವಲ ಊಹಾಪೂಹಗಳು ಮಾತ್ರ ಇವೆ. ಅವುಗಳಿಗೆ ರೆಕ್ಕೆಪುಕ್ಕ ಕಟ್ಟಿ ಕಾಗೆ ಹಾರಿಸುವ ಕೆಲಸ ಕೆಲ ಜನ ಮಾಡುತ್ತಿದ್ದಾರೆ.

ಗ್ಯಾರಂಟಿ ಯೋಜನೆಗಳ ಕುರಿತು ಬಿಜೆಪಿ ಗೊಂದಲ ಸೃಷ್ಟಿಸುತ್ತಿರುವ ವಿಚಾರವಾಗಿ ಮಾತನಾಡಿದ ಅವರು ಮೊದಲು ಸರ್ವ ಕಾರ್ಯ ಮುಗಿಯಲಿ ಸರ್ವೆ ಆದ ಮೇಲೆ ಗೈಡ್ ಲೈನ್ಸ್ ಬರುತ್ತೆ. ಅದರ ಮೇಲೆ ಎಲ್ಲವೂ ನಿರ್ಧಾರ ಆಗುತ್ತೆ ಎಂದು ತಿಳಿಸಿದರು.

ಬಿಜೆಪಿ ತೊರೆದು ಕಾಂಗ್ರೆಸ್​ ಸೇರಿದ್ದ ಲಕ್ಷ್ಮಣ ಸವದಿಯವರಿಗೆ ಸಿಎಂ ಸಿದ್ದರಾಮಯ್ಯ ಒಂದು ಟಾಸ್ಕ್​​ ನೀಡಿದ್ದರು. ತಾವು ಗೆಲ್ಲವುದು ಮಾತ್ರವಲ್ಲದೇ ಅಕ್ಕಪಕ್ಕದ ಕ್ಷೇತ್ರಗಳಾದ ಕಾಗವಾಡ ಮತ್ತು ಕುಡುಚಿ ಕ್ಷೇತ್ರಗಳನ್ನು ಗೆದ್ದುಕೊಂಡು ಬರಬೇಕು ಎಂದಿದ್ದರು. ಈ ಮಾತಿನಂತೆ ಲಕ್ಷ್ಮಣ ಸವದಿ ಕಾಗವಾಡದಲ್ಲಿ ರಾಜು ಕಾಗೆ ಹಾಗೂ ಕುಡಚಿಯಲ್ಲಿ ಮಹೇಂದ್ರ ತಮ್ಮಣ್ಣವರ್ ಅವರನ್ನ ಗೆಲ್ಲಿಸಿ ತಾವು ಚುನಾವಣೆಯಲ್ಲಿ ಸಿದ್ದರಾಮಯ್ಯಗೆ ಕೊಟ್ಟ ಮಾತನ್ನ ಉಳಿಸಿಕೊಂಡಿದ್ದಾರೆ.

ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:44 pm, Mon, 29 May 23

ಭದ್ರಾವತಿ ಉಕ್ಕು ಕಾರ್ಖಾನೆಗೆ ಪುನಶ್ಚೇತನ: ಕುಮಾರಸ್ವಾಮಿ ಗುಡ್ ನ್ಯೂಸ್
ಭದ್ರಾವತಿ ಉಕ್ಕು ಕಾರ್ಖಾನೆಗೆ ಪುನಶ್ಚೇತನ: ಕುಮಾರಸ್ವಾಮಿ ಗುಡ್ ನ್ಯೂಸ್
ಕೊಹ್ಲಿ, ರೋಹಿತ್ ತಂಡಗಳನ್ನು ಸೋಲಿಸಿ 25 ಸಾವಿರ ರೂ. ಗೆದ್ದ ಯುವ ಆಟಗಾರ
ಕೊಹ್ಲಿ, ರೋಹಿತ್ ತಂಡಗಳನ್ನು ಸೋಲಿಸಿ 25 ಸಾವಿರ ರೂ. ಗೆದ್ದ ಯುವ ಆಟಗಾರ
ನೆಲಮಂಗಲ: ಬೆಳ್ಳಂ ಬೆಳಗ್ಗೆ ಬಾರ್ ತೆರದು ಅಕ್ರಮವಾಗಿ ಮದ್ಯ ಮಾರಾಟ
ನೆಲಮಂಗಲ: ಬೆಳ್ಳಂ ಬೆಳಗ್ಗೆ ಬಾರ್ ತೆರದು ಅಕ್ರಮವಾಗಿ ಮದ್ಯ ಮಾರಾಟ
ನಿಜಕ್ಕೂ ಎಲಿಮಿನೇಟ್ ಆದ್ರಾ ತ್ರಿವಿಕ್ರಂ?; ಅಭಿಮಾನಿಗಳಿಗೆ ಬಿಗ್ ಶಾಕ್
ನಿಜಕ್ಕೂ ಎಲಿಮಿನೇಟ್ ಆದ್ರಾ ತ್ರಿವಿಕ್ರಂ?; ಅಭಿಮಾನಿಗಳಿಗೆ ಬಿಗ್ ಶಾಕ್
ಅಯ್ಯಪ್ಪ ಮಾಲೆ ಧರಿಸಿದ ಬಳಿಕ ಈ ತಪ್ಪುಗಳನ್ನು ಮಾಡಲೇಬಾರದು
ಅಯ್ಯಪ್ಪ ಮಾಲೆ ಧರಿಸಿದ ಬಳಿಕ ಈ ತಪ್ಪುಗಳನ್ನು ಮಾಡಲೇಬಾರದು
Daily horoscope: ಸೋಮವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಸೋಮವಾರದ ದಿನ ಭವಿಷ್ಯ ತಿಳಿಯಿರಿ
ನೆಲಮಂಗಲ ಅಪಘಾತ: ದುರಂತಕ್ಕೂ ಮುನ್ನ ಚಂದ್ರಮ್ ಕೊನೆಯ ದೃಶ್ಯ ಇಲ್ಲಿದೆ ನೋಡಿ
ನೆಲಮಂಗಲ ಅಪಘಾತ: ದುರಂತಕ್ಕೂ ಮುನ್ನ ಚಂದ್ರಮ್ ಕೊನೆಯ ದೃಶ್ಯ ಇಲ್ಲಿದೆ ನೋಡಿ
ತಮ್ಮ ರಾಜಕೀಯ ವೈರಿ ಚಲುವರಾಯಸ್ವಾಮಿ ಕೆಲಸವನ್ನು ಶ್ಲಾಘಿಸಿದ ಕುಮಾರಣ್ಣ..!
ತಮ್ಮ ರಾಜಕೀಯ ವೈರಿ ಚಲುವರಾಯಸ್ವಾಮಿ ಕೆಲಸವನ್ನು ಶ್ಲಾಘಿಸಿದ ಕುಮಾರಣ್ಣ..!
ಚಿತ್ರದುರ್ಗದಲ್ಲಿ ಮ್ಯಾಕ್ಸ್ ಟ್ರೇಲರ್ ರಿಲೀಸ್​ ಕಾರ್ಯಕ್ರಮ; ಇಲ್ಲಿದೆ ಲೈವ್
ಚಿತ್ರದುರ್ಗದಲ್ಲಿ ಮ್ಯಾಕ್ಸ್ ಟ್ರೇಲರ್ ರಿಲೀಸ್​ ಕಾರ್ಯಕ್ರಮ; ಇಲ್ಲಿದೆ ಲೈವ್
ಬಾಡೇ ನಮ್ಮ ಮನೆ ಗಾಡು:ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾನುವಾರದ ಬಾಡೂಟ ಜೋರು
ಬಾಡೇ ನಮ್ಮ ಮನೆ ಗಾಡು:ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾನುವಾರದ ಬಾಡೂಟ ಜೋರು