AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ಫಡ್ನವಿಸ್ ಜೊತೆ ರಮೇಶ್ ಜಾರಕಿಹೊಳಿ ಚರ್ಚೆ; ಸಚಿವ ಸ್ಥಾನಕ್ಕೆ ಆಗ್ರಹ

ಬಣ ರಾಜಕೀಯದ ಕುರಿತು ಫಡ್ನವಿಸ್​ಗೆ ಜೊತೆ ಮಾತನಾಡಿದ ರಮೇಶ್, ಸಚಿವ ಸ್ಥಾನ ಕೊಡಿಸುವಂತೆ ಫಡ್ನವಿಸ್ಗೆ ಮನವಿ ಮಾಡಿದರು. ನನಗೆ ಸಚಿವ ಸ್ಥಾನ ನೀಡಿದರೆ ಪಕ್ಷಕ್ಕಾಗಿ ಶ್ರಮಿಸುತ್ತೇನೆ. ಉತ್ತರ ಕರ್ನಾಟಕದಲ್ಲಿ ಬಿಜೆಪಿಯನ್ನು ಹೆಚ್ಚು ಸ್ಥಾನಗಳಲ್ಲಿ ಗೆಲ್ಲಿಸುವೆ.

ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ಫಡ್ನವಿಸ್ ಜೊತೆ ರಮೇಶ್ ಜಾರಕಿಹೊಳಿ ಚರ್ಚೆ; ಸಚಿವ ಸ್ಥಾನಕ್ಕೆ ಆಗ್ರಹ
ಫಡ್ನವಿಸ್ ಜೊತೆ ರಮೇಶ್ ಜಾರಕಿಹೊಳಿ
TV9 Web
| Edited By: |

Updated on:Feb 03, 2022 | 2:36 PM

Share

ಬೆಳಗಾವಿ: ಗೋವಾದ ಪಣಜಿಯ ಖಾಸಗಿ ಹೋಟೆಲ್ನಲ್ಲಿ ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ಫಡ್ನವಿಸ್ (Devendra Fadnavis) ಜೊತೆ ಶಾಸಕ ರಮೇಶ್ ಜಾರಕಿಹೊಳಿ (Ramesh Jarkiholi) ಅರ್ಧ ಗಂಟೆ ಚರ್ಚೆ ನಡೆಸಿದ್ದಾರೆ. ರಾಜಕೀಯವಾಗಿ ತಮ್ಮನ್ನ ಟಾರ್ಗೆಟ್ ಮಾಡುತ್ತಿದ್ದಾರೆ. ಸುಖಾಸುಮ್ಮನೆ ನನ್ನ ವಿರುದ್ಧ ಆರೋಪ ಮಾಡುತ್ತಿದ್ದಾರೆ. ಬಿಜೆಪಿಯ ಕೆಲ ನಾಯಕರ ನಡವಳಿಕೆ ಬೇಸರ ಮೂಡಿಸುತ್ತಿದೆ. ಪಕ್ಷಕ್ಕಾಗಿ ನಾನು ಮಾಡಿದ ತ್ಯಾಗವನ್ನು ಪರಿಗಣಿಸುತ್ತಿಲ್ಲ. ನಮ್ಮ ಬಗ್ಗೆ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ ಅಂತ ರಮೇಶ್ ಜಾರಕಿಹೊಳಿ ಫಡ್ನವಿಸ್ ಜೊತೆ ಮಾತುಕತೆ ನಡೆಸಿದ್ದಾರೆ.

ಎಮ್ಎಲ್​ಸಿ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಸೋಲಿನ ಬಗ್ಗೆಯೂ ರಮೇಶ್ ಮಾಹಿತಿ ನೀಡಿದ್ದಾರೆ. ಕಾಂಗ್ರೆಸ್ ಜತೆ ಕೆಲ ನಾಯಕರು ಒಪ್ಪಂದ ಮಾಡಿಕೊಂಡಿದ್ದರು. ಈ ಒಳ ಒಪ್ಪಂದದಿಂದ ಬಿಜೆಪಿ ಅಭ್ಯರ್ಥಿಗೆ ಸೋಲಾಗಿದೆ. ಇದನ್ನು ನಮ್ಮ ತಲೆಗೆ ಕಟ್ಟುವಂತಹ ಕೆಲಸ ಮಾಡುತ್ತಿದ್ದಾರೆ ಅಂತ ರಮೇಶ್ ಜಾರಕಿಹೊಳಿ ಫಡ್ನವಿಸ್​ಗೆ ಮಾಹಿತಿ ನೀಡಿದ್ದಾರೆ.

ಬಣ ರಾಜಕೀಯದ ಕುರಿತು ಫಡ್ನವಿಸ್​ಗೆ ಜೊತೆ ಮಾತನಾಡಿದ ರಮೇಶ್, ಸಚಿವ ಸ್ಥಾನ ಕೊಡಿಸುವಂತೆ ಫಡ್ನವಿಸ್​ಗೆ ಮನವಿ ಮಾಡಿದರು. ನನಗೆ ಸಚಿವ ಸ್ಥಾನ ನೀಡಿದರೆ ಪಕ್ಷಕ್ಕಾಗಿ ಶ್ರಮಿಸುತ್ತೇನೆ. ಉತ್ತರ ಕರ್ನಾಟಕದಲ್ಲಿ ಬಿಜೆಪಿಯನ್ನು ಹೆಚ್ಚು ಸ್ಥಾನಗಳಲ್ಲಿ ಗೆಲ್ಲಿಸುವೆ. ಪಕ್ಷವನ್ನು ಅಧಿಕಾರಕ್ಕೆ ತರಲು ಹಗಲಿರುಳು ಶ್ರಮಿಸುತ್ತೇನೆ. ಈ ಬಗ್ಗೆ ಹೈಕಮಾಂಡ್​ಗೆ ನೀವು ಮನವರಿಕೆ ಮಾಡಿಕೊಡಿ ಎಂದು ಮನವಿ ಮಾಡಿದರು. ಇದಕ್ಕೆ ಪಂಚರಾಜ್ಯ ಚುನಾವಣೆ ನಂತರ ಎಲ್ಲವನ್ನೂ ಸರಿಪಡಿಸುವುದಾಗಿ ಫಡ್ನವಿಸ್ ಭರವಸೆ ನೀಡಿದ್ದಾರೆ.

ಅಂತಿಮ ತನಿಖಾ ವರದಿ ಸಲ್ಲಿಸಲು ಹೈಕೋರ್ಟ್: ಶಾಸಕ ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗ ಪ್ರಕರಣಕ್ಕೆ ಸಂಬಂಧಿಸಿ, ಅಂತಿಮ ತನಿಖಾ ವರದಿ ಸಲ್ಲಿಸಲು ಹೈಕೋರ್ಟ್ ಇಂದು ಅನುಮತಿ ನೀಡಿದೆ. ಸಕ್ಷಮ ಮ್ಯಾಜಿಸ್ಟ್ರೇಟ್ ಮುಂದೆ ತನಿಖಾ ವರದಿ ಸಲ್ಲಿಸಲು ಸಲ್ಲಿಸಲು ಹೈಕೋರ್ಟ್ ವಿಭಾಗೀಯ ಪೀಠದಿಂದ ಅನುಮತಿ ನೀಡಿದ್ದು, ಅರ್ಜಿದಾರರು ಎತ್ತಿರುವ ಪ್ರಶ್ನೆಗಳನ್ನು ಮುಕ್ತವಾಗಿರಿಸಲಾಗಿದೆ.

ಇದನ್ನೂ ಓದಿ

ಆ ಟೀಕೆಗಳನ್ನು ಅನುಮೋದಿಸುವುದಿಲ್ಲ: ರಾಹುಲ್ ಗಾಂಧಿ ಆರೋಪ ಬಗ್ಗೆ ಯುಎಸ್ ವಕ್ತಾರರ ಪ್ರತಿಕ್ರಿಯೆ 

Axar Patel Covid Positive: ಅಕ್ಷರ್ ಪಟೇಲ್​ಗೆ ಕೊರೊನಾ ದೃಢ: ಟೀಮ್ ಇಂಡಿಯಾದಲ್ಲಿ ಹೆಚ್ಚಿದ ಆತಂಕ

Published On - 2:23 pm, Thu, 3 February 22

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್