ಚಿಕ್ಕೋಡಿ: ಮದುವೆ ಊಟ ತಿಂದ 100ಕ್ಕೂ ಹೆಚ್ಚು ಜನರಿಗೆ ವಾಂತಿ-ಭೇದಿ; ಗ್ರಾಮದಲ್ಲೇ ಬೀಡುಬಿಟ್ಟ ಆರೋಗ್ಯ ಇಲಾಖೆ ಸಿಬ್ಬಂದಿ
ಹಿರೇಕೋಡಿ ಹೊರವಲಯದಲ್ಲಿ ನಿನ್ನೆ ನಡೆದ ಪಟೇಲ್ ಕುಟುಂಬದ ಮದುವೆ ಸಮಾರಂಭದಲ್ಲಿ ಸಸ್ಯಾಹಾರ ಹಾಗೂ ಮಾಂಸಾಹಾರ ಊಟದ ವ್ಯವಸ್ಥೆ ಮಾಡಲಾಗಿತ್ತು. ಮಾಂಸಾಹಾರ ಸೇವಿಸಿದ 100ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡಿದ್ದಾರೆ. ಇನ್ನು ಮದುವೆ ಸಮಾರಂಭಕ್ಕೆ ಮಹಾರಾಷ್ಟ್ರದ ಮಿರಜ್‌ನಿಂದಲೂ ಸಂಬಂಧಿಕರು ಆಗಮಿಸಿದ್ದರು. ಮಿರಜ್‌ನಿಂದ ಆಗಮಿಸಿದವರಿಗೂ ವಾಂತಿ ಬೇಧಿ ಕಾಣಿಸಿಕೊಂಡ ಬಗ್ಗೆ ಮಾಹಿತಿ ಸಿಕ್ಕಿದೆ.
ಚಿಕ್ಕೋಡಿ, ಆ.29: ಮದುವೆ ಸಮಾರಂಭದಲ್ಲಿ ಊಟ ಸೇವಿಸಿದ್ದ 100ಕ್ಕೂ ಹೆಚ್ಚು ಜನರಿಗೆ ವಾಂತಿ ಭೇದಿಯಾಗಿದೆ(Food Poison). ಹಿರೇಕೋಡಿ ಹೊರವಲಯದಲ್ಲಿ ನಿನ್ನೆ(ಆ.28) ನಡೆದಿದ್ದ ಮದುವೆ ಸಮಾರಂಭದಲ್ಲಿ ಊಟ ಮಾಡಿ ಮನೆಗೆ ವಾಪಾಸ್ ಆಗುತ್ತಿದ್ದಂತೆ ಕೆಲ ಜನರಿಗೆ ವಾಂತಿ-ಭೇದಿಯಾಗಿದೆ. ತಡರಾತ್ರಿ ಆರೋಗ್ಯದಲ್ಲಿ ಸಮಸ್ಯೆ ಕಂಡು ಬಂದಿದ್ದು ಅನೇಕರು ರಾತ್ರಿಯೇ ತಮ್ಮ ಗ್ರಾಮದ ಸುತ್ತಮುತ್ತಲಿನ ಆಸ್ಪತ್ರೆಗಳಿಗೆ ತೆರಳಿ ಚಿಕಿತ್ಸೆ ಪಡೆದಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆ ಹಿರೇಕೋಡಿ ಗ್ರಾಮಕ್ಕೆ ಆರೋಗ್ಯ ಇಲಾಖೆ ಸಿಬ್ಬಂದಿ ದೌಡಾಯಿಸಿದ್ದು ಸರ್ಕಾರಿ ಶಾಲೆಯಲ್ಲಿ ಬೀಡುಬಿಟ್ಟು ತಪಾಸಣೆ ನಡೆಸುತ್ತಿದ್ದಾರೆ. ಇನ್ನು ಮನೆ ಮನೆಗೆ ತೆರಳಿ ಜನರ ಆರೋಗ್ಯ ತಪಾಸಣೆಗೆ ನಿರ್ಧರಿಸಿದ್ದಾರೆ. ಹಾಗೂ ತೀವ್ರ ಅಸ್ವಸ್ಥಗೊಂಡವರನ್ನು ಚಿಕ್ಕೋಡಿ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗುತ್ತಿದೆ.
ಹಿರೇಕೋಡಿ ಹೊರವಲಯದಲ್ಲಿ ನಿನ್ನೆ ನಡೆದ ಪಟೇಲ್ ಕುಟುಂಬದ ಮದುವೆ ಸಮಾರಂಭದಲ್ಲಿ ಸಸ್ಯಾಹಾರ ಹಾಗೂ ಮಾಂಸಾಹಾರ ಊಟದ ವ್ಯವಸ್ಥೆ ಮಾಡಲಾಗಿತ್ತು. ಮಾಂಸಾಹಾರ ಸೇವಿಸಿದ 100ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡಿದ್ದಾರೆ. ಇನ್ನು ಮದುವೆ ಸಮಾರಂಭಕ್ಕೆ ಮಹಾರಾಷ್ಟ್ರದ ಮಿರಜ್‌ನಿಂದಲೂ ಸಂಬಂಧಿಕರು ಆಗಮಿಸಿದ್ದರು. ಮಿರಜ್‌ನಿಂದ ಆಗಮಿಸಿದವರಿಗೂ ವಾಂತಿ ಬೇಧಿ ಕಾಣಿಸಿಕೊಂಡ ಬಗ್ಗೆ ಮಾಹಿತಿ ಸಿಕ್ಕಿದೆ. ಇನ್ನು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಫಾತಿಮಾ ಎಂಬ ಮಹಿಳೆ ಟಿವಿ9 ಕ್ಯಾಮರಾ ಮುಂದೆ ಕಣ್ಣೀರು ಹಾಕಿದರು. ಹಿರೇಕೋಡಿ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ಆಗಮಿಸಿದ್ದ ಫಾತೀಮಾ ಕಣ್ಣೀರು ಹಾಕಿದ್ದಾರೆ.
ಹಿರೇಕೋಡಿಯಲ್ಲಿ ನಿನ್ನೆ ನಡೆದಿದ್ದ ಮದುವೆ ಸಮಾರಂಭದಲ್ಲಿ ಊಟ ಸೇವಿಸಿ ಮನೆಗೆ ವಾಪಸ್ ಆದ ಬಳಿಕ ವಾಂತಿ ಬೇಧಿಯಾಗಿದ್ದು 50ಕ್ಕೂ ಹೆಚ್ಚು ಜನ ವಾಂತಿ ಬೇಧಿಯಿಂದ ಬಳಲುತ್ತಿದ್ದಾರೆ.
ಇದನ್ನೂ ಓದಿ: ಯಾದಗಿರಿ: ಚಿಕ್ಕನಹಳ್ಳಿಯಲ್ಲಿ ಕಳೆದ 3 ದಿನಗಳಲ್ಲಿ 36 ಜನರಿಗೆ ವಾಂತಿ ಭೇದಿ
ಇನ್ನು ಈ ಘಟನೆ ಸಂಬಂಧ ಹಿರೇಕೋಡಿಯಲ್ಲಿ ಟಿಹೆಚ್‌ಒ ಡಾ.ಸುಕುಮಾರ್ ಭಾಗಾಯಿ ಪ್ರತಿಕ್ರಿಯೆ ನೀಡಿದರು. ಐವರು ವೈದ್ಯರು, 15 ವೈದ್ಯಕೀಯ ಸಿಬ್ಬಂದಿ ನಿಯೋಜನೆ ಮಾಡಿ ಆರೋಗ್ಯ ತಪಾಸಣೆ ಮಾಡಲಾಗುತ್ತಿದೆ. ಮದುವೆಯಲ್ಲಿ ಊಟ ಮಾಡಿದ ಬಳಿಕ ಸಂಜೆ ವಾಂತಿ-ಬೇಧಿ ಕಾಣಿಸಿಕೊಂಡಿದೆ. ಮದುವೆ ಸಮಾರಂಭದಲ್ಲಿ ನೀಡಿದ ಆಹಾರದ ಸ್ಯಾಂಪಲ್ ಪಡೆದು ಪರೀಕ್ಷೆ ಮಾಡುತ್ತೇವೆ. ಯಾವುದೇ ರೋಗಿಗಳಿಗೆ ಸಮಸ್ಯೆ ಆಗದಂತೆ ಕ್ರಮ ಕೈಗೊಳ್ಳುತ್ತೇವೆ. ಖಾಸಗಿ ಆಸ್ಪತ್ರೆಗಳಲ್ಲಿ ಯಾರಾದರೂ ದಾಖಲಾಗಿದಾರಾ ಎಂದು ಪರಿಶೀಲಿಸುತ್ತಿದ್ದೇವೆ. ಊರಲ್ಲಿ ಮೆಡಿಕಲ್ ಕ್ಯಾಂಪ್ ಮಾಡಿ ಆರೋಗ್ಯ ತಪಾಸಣೆ ಮಾಡುತ್ತಿದ್ದೇವೆ. ಹೆಚ್ಚಿನ ಸಮಸ್ಯೆ ಇದ್ದಂತವರನ್ನು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸುತ್ತಿದ್ದೇವೆ ಎಂದು ತಿಳಿಸಿದರು.
ಬೆಳಗಾವಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ
Published On - 11:10 am, Tue, 29 August 23